Breaking News

Yearly Archives: 2025

ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು, ಮೇ 05: ರಾಜ್ಯದಲ್ಲಿ ಮತ್ತೆ ಐಎಂಎಲ್ (IML) ಮೇಲಿನ ದರ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ …

Read More »

63ನೇ ವಯಸ್ಸಿನಲ್ಲಿ SSLC ಪರೀಕ್ಷೆ ಪಾಸ್ ಮಾಡಿದ ಶಿವಮೊಗ್ಗದ ಮಹಿಳೆ

ಶಿವಮೊಗ್ಗ: ತೀರ್ಥಹಳ್ಳಿಯ ಪ್ರಮೀಳಾ ನಾಯಕ್ ಎಂಬವರು ತಮ್ಮ‌ 63ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಪಾಸ್ ಮಾಡಿದ್ದಾರೆ. ಪ್ರಮೀಳಾ ಇಲ್ಲಿನ ಎ.ಕೆ.ರಸ್ತೆ ನಿವಾಸಿ ಪ್ರಶಾಂತ್ ನಾಯಕ್ ಅವರ ಪತ್ನಿ. 2024-25ನೇ ಸಾಲಿನಲ್ಲಿ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು, ಪ್ರಥಮ ಪ್ರಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಇವರಿಗೆ ಓರ್ವ ಪುತ್ರ ಇದ್ದು, ಸಿಂಗಾಪುರದಲ್ಲಿ ಖಾಸಗಿ‌ ಕಂಪನಿಯ ಉದ್ಯೋಗಿಯಾಗಿದ್ದಾರೆ. ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳಿದ್ದಾರೆ. ಪ್ರಮೀಳಾ ನಾಯಕ್ ಅವರು ತಮ್ಮ ಭಾವನ ಮೊಮ್ಮಗನ ಉಪನಯನ ಕಾರ್ಯಕ್ರಮದಲ್ಲಿ, “ನಾನು …

Read More »

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ: ಈ ಸೌಲಭ್ಯ ಪಡೆಯುವುದು ಹೇಗೆ?

ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ರಾಜ್ಯದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆ ಇದೆ. 2018 ರ ಮಾರ್ಚ್ ನಿಂದ ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಾ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿತ್ತು. ನಂತರ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಎರಡೂ ಯೋಜನೆಗಳ ಉದ್ದೇಶ ಮತ್ತು …

Read More »

ಹೊಸ ಬೈಕ್ ಖರೀದಿಸಿ ಊರಿಗೆ ಹೋಗುವಾಗ ಅಪಘಾತ

ಹಾವೇರಿ: ಹೊಸ ಬೈಕ್ ಖರೀದಿಸಿ ಸಂಭ್ರಮದಿಂದ ಮನೆಗೆ ಹೋಗುತ್ತಿದ್ದ ಯುವಕರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ‌ ಹೃದಯವಿದ್ರಾವಕ ಘಟನೆ ಹಾವೇರಿ ಸಮೀಪದ ಗೌರಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಜಿಲ್ಲೆ ಹಾನಗಲ್ ತಾಲೂಕಿನ ವರ್ದಿ ಗ್ರಾಮದ 25 ವರ್ಷದ ನಾಗರಾಜ್ ಪವಾಡಿ ಮತ್ತು ಶಂಕರಿಕೊಪ್ಪ ಗ್ರಾಮದ 25 ವರ್ಷದ ಮಲ್ಲೇಶಪ್ಪ ದೇವಿಹೊಸೂರು ಮೃತ ಯುವಕರು. ಹೊಸ ಬೈಕ್ ತೆಗೆದುಕೊಂಡು ಊರಿಗೆ ಹೊರಟಿದ್ದ ನಾಗರಾಜ್ ಅವರ ಬೈಕ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಈ …

Read More »

ಸ್ಟೈಪಂಡ್ ಹಗರಣ: ಕಲಬುರಗಿಯ 7 ಕಡೆಗಳಲ್ಲಿ ಇ.ಡಿ ದಾಳಿ

ಕಲಬುರಗಿ: ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್‌ಗುಂದಿ ಅವರ ಮನೆ ಸೇರಿದಂತೆ ಏಳು‌ ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ. ಭೀಮಾಶಂಕರ ಬಿಲಗುಂದಿ, ಎಂಆರ್‌ಎಂಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ. ಪಟೇಲ್ ಮತ್ತು ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಅವರ ಸಂಬಂಧಿತ ಸ್ಥಳಗಳು ಸೇರಿದಂತೆ ಕಲಬುರಗಿಯ ಜಿಲ್ಲೆಯ …

Read More »

ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ಎರಡು ಕಾರುಗಳ ಮಧ್ಯೆ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ದಾರುಣ ಘಟನೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಹಿರೇಬಾಗೇವಾಡಿ ಗ್ರಾಮದ ಅನಿಸ್‌ ಮುಸ್ತಾಕ್ ಸೈಯದ್‌ (ಕಾರ್‌ ಚಾಲಕ– 30), ಇವರ ಪತ್ನಿ ಅಯಿಮಾನ್ ಅನಿಸ್‌ ಸೈಯದ್‌(24), ಪುತ್ರ ಅಹ್ಮದ್‌ ಅನಿಸ್‌ ಸೈಯದ್‌ (1.5) ಮೃತರು. ಅನಿಸ್‌ ಅವರ ಸಹೋದರಿ ಆಯಿಷಾ ಅನ್ವರ್ ಸೈಯದ್‌ ತೀವ್ರ …

Read More »

ಸ್ಕೇಟಿಂಗ್ ಮೂಲಕ ರಾಜಹಂಸಗಢ ಏರುವ ಸ್ಪರ್ಧೆ… ಬೆಳಗಾವಿಯ ಸ್ಕೇಟರ್ಸ್’ಗಳಿಂದ ಉತ್ತಮ ಪ್ರತಿಕ್ರಿಯೆ

ಸ್ಕೇಟಿಂಗ್ ಮೂಲಕ ರಾಜಹಂಸಗಢ ಏರುವ ಸ್ಪರ್ಧೆ… ಬೆಳಗಾವಿಯ ಸ್ಕೇಟರ್ಸ್’ಗಳಿಂದ ಉತ್ತಮ ಪ್ರತಿಕ್ರಿಯೆ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನಿಂದ ರಾಜಹಂಸಗಡ ಕೋಟೆಯಲ್ಲಿ ಸ್ಕೇಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಫಿಟ್ ಇಂಡಿಯಾ ಸ್ಟ್ರಾಂಗ್ ಇಂಡಿಯಾ ಅಭಿಯಾನದಡಿಯಲ್ಲಿ, ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನಿಂದ ರಾಜಹಂಸಗಡ ಕೋಟೆಯಲ್ಲಿ 2 ಕಿಲೋಮೀಟರ್ ಸ್ಕೇಟಿಂಗ್ ಮತ್ತು ಕೋಟೆಯನ್ನು ಏರುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲೆಯ 150 ಕ್ಕೂ ಹೆಚ್ಚು ಉನ್ನತ ಸ್ಕೇಟರ್‌ಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯನ್ನು …

Read More »

೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಚಂಡಿಕಾ ಯಾಗ, ರುದ್ರಾಯಾಗ ಹೋಮ ಹವನ ಕಾರ್ಯಕ್ರಮದಲ್ಲಿ ದಂಪತಿಗಳಾದ ಶೀ ಸಂತೋಷ್ ಜಾರಕಿಹೊಳಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಗೋಕಾಕ್ – ೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆಗೊಂಡಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು ಭಾನುವಾರ ರಾತ್ರಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರುಗಿದ ನಾಗತನುತರ್ಪಣ …

Read More »

ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

“ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಚಿಕ್ಕಬಾಗೇವಾಡಿ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆಭೀಕರ ಆಫಘಾತ ಸಂಭವಿ‌ಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರೇಬಾಗೇವಾಡಿ ಗ್ರಾಮದ ನಿವಾಸಿ ಅನಿಸ್‌ ಮುಸ್ತಾಕ ಸೈಯದ್‌ (ಕಾರ್‌ ಚಾಲಕ– 30), ಇವರ ಪತ್ನಿ ಅಯಿಮಾನ ಅನಿಸ್‌ ಸೈಯದ್‌ (24) ಇವರಿಬ್ಬರ ಮಗು ಅಹ್ಮದ್‌ ಅನಿಸ್‌ ಸೈಯದ್‌ (1.5) ಮೃತಪಟ್ಟವರು. ಅನಿಸ್‌ ಅವರ ಹಸೋದರಿ ಆಯಿಷಾ ಅನ್ವರ ಸೈಯದ್‌ …

Read More »

ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ

ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಧ್ಯಮಗೋಷ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿಯನ್ನು …

Read More »