Breaking News

Yearly Archives: 2025

ಇಂದಿನಿಂದ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಆರಂಭ

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಇಂದಿನಿಂದ (ಸೋಮವಾರ) ಆರಂಭವಾಗಲಿದೆ.‌ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಸರ್ಕಾರಿ ಶಾಲಾ ಶಿಕ್ಷಕರು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 58,960 ಗಣತಿದಾರರು (Enumerators) ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಸುಮಾರು 6,000 ಸೂಪರ್ ವೈಸರ್ಸ್ ಗಳನ್ನು ನಿಯೋಜಿಸಲಾಗಿದೆ. ಇವರು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದಾರೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಆದಿ ಕರ್ನಾಟಕ, ಆದಿ …

Read More »

ಗೋವಾಕ್ಕೆ ಹೆದರಿ ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ

ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಲ್ಹಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು. ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸ್ತಿಲ್ಲಾ..? ಗೋವಾಕ್ಕೆ …

Read More »

ಕಲುಷಿತ ನೀರು ಪೂರೈಸುವ ಸ್ಥಳೀಯ ಸಂಸ್ಥೆಗೆ ನೋಟಿಸ್ – ಖಂಡ್ರೆ

ದಾವಣಗೆರೆ : ಪ್ರಸಕ್ತ ವರ್ಷದ ಮುಂಗಾರಿನಲ್ಲಿ ಅರಣ್ಯ ಇಲಾಖೆ ನಡೆಸುವ ವನಮಹೋತ್ಸವದಲ್ಲಿ ರಸ್ತೆಯ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಡಲು ಆದ್ಯತೆ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾವಣಗೆರೆಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಸಚಿವರು, ಎತ್ತರದ ಸಸಿಗಳನ್ನು ನೆಟ್ಟರೆ, ಅವು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಇದು ಹಸಿರು ವಲಯ ಹೆಚ್ಚಳಕ್ಕೆ …

Read More »

ಸಚಿವ ಶರಣಪ್ರಕಾಶ್​​ ಪಾಟೀಲ್, ಕಾಂಗ್ರೆಸ್​​​​ ಮುಖಂಡನ ನಡುವೆ ಮಾತಿನ ಚಕಮಕಿ

ರಾಯಚೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್​​ ಪಾಟೀಲ್​​ ಹಾಗೂ ಕಾಂಗ್ರೆಸ್​​​​ ಮುಖಂಡನ ನಡುವೆ ಲಿಂಗಸುಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತೀವ್ರ ವಾಗ್ವಾದ ನಡೆದಿದೆ. ಮಾನವಿ ತಾಲೂಕಿನ ಉಟಕನೂರು ಗ್ರಾಮದಲ್ಲಿನ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ಲಿಂಗಸುಗೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಕೆಲ ಮುಖಂಡರೊಂದಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್​ ತಂಗಿದ್ದರು. ಈ ವೇಳೆ ಕಾಂಗ್ರೆಸ್​ ಮುಖಂಡ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ನಾಮನಿರ್ದೇಶನ ಸದಸ್ಯ ಗದ್ದೆನಗೌಡ ಪಾಟೀಲ್​​ ನಡುವೆ ಮಾತಿನ …

Read More »

ಹುಬ್ಬಳ್ಳಿಯ ಬಾಲಕಿ ಅತ್ಯಾಚಾರ ಪ್ರಕರಣ: ಎನ್‌ಕೌಂಟರ್‌ಗೆ ಬಲಿಯಾದ ಆರೋಪಿಯ ಅಂತ್ಯಸಂಸ್ಕಾರ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಕ್ಕೆ ಮುಂದಾಗಿ ಬಳಿಕ ಹತ್ಯೆಗೈದು ಪೊಲೀಸ್‌ ಎನ್‌ಕೌಂಟರ್‌ಗೆ ಬಲಿಯಾದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್‌ ಅಂತ್ಯಸಂಸ್ಕಾರ ಇಂದು ನಡೆಯಿತು. ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ಬಿಡನಾಳ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆದಿದ್ದು, ಸಿಐಡಿ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು. ಏ. 13ರಂದು ರಿತೇಶ್​ ಕುಮಾರ್​ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ …

Read More »

ಭಾನುವಾರ ನೀಟ್ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 65 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಂಗಳೂರು: ವೈದ್ಯಕೀಯ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್​-ಯುಜಿ) ಭಾನುವಾರ ನಡೆಯಲಿದ್ದು, ಈ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಿ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು 65 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ದೋಷರಹಿತ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್​ಎಸ್) ಕಲಂ 163ರಡಿ ಪರೀಕ್ಷಾ ಕೇಂದ್ರಗಳ …

Read More »

ಕೆಎಸ್​ಆರ್​ಟಿಸಿ ಬಸ್​ -ಆಟೋ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ನೆಲಮಂಗಲ (ಬೆಂಗಳೂರು ಗ್ರಾಮಾಂತರ) : ಕೆಎಸ್‌ಆರ್​ಟಿಸಿ ಬಸ್ ಮತ್ತು ಆಟೋ ನಡುವಿನ ಭೀಕರ ಅಪಘಾತದಿಂದ ಆಟೋದಲ್ಲಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನೆಲಮಂಗದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಕುಣಿಗಲ್ ರಸ್ತೆಯ ನೆಲಮಂಗಲದ ಮಲ್ಲರಬಾಣವಾಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ತಾಲ್ಲೂಕಿನ ಶಾಂತಿನಗರ ನಿವಾಸಿ ಹಾಗೂ ಆಟೋ ಚಾಲಕ ಶ್ರೀನಿವಾಸ್‌ (45), ಪುಟ್ಟಮ್ಮ (55), 13 ವರ್ಷದ ಬಾಲಕಿ ಮೃತರು. …

Read More »

ಆರ್​ಸಿಬಿ – ಸಿಎಸ್​ಕೆ ಪಂದ್ಯ: 1200 ರೂ. ಮುಖಬೆಲೆಯ ಟಿಕೆಟ್​ ₹12 ಸಾವಿರಕ್ಕೆ ಮಾರಾಟ, ನಾಲ್ವರ ಬಂಧನ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂದಿನ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಜಿದ್ದಾಜಿದ್ದಿನ ಪಂದ್ಯಕ್ಕೆ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚರಣ್ ರಾಜ್, ಹರ್ಷವರ್ಧನ್, ವಿನಯ್ ಹಾಗೂ ವೆಂಕಟಸ್ವಾಮಿ ಎಂಬುವರನ್ನು ಬಂಧಿಸಿ 38,400 ಮೌಲ್ಯದ 32 ಐಪಿಎಲ್ ಟಿಕೆಟ್​ಗಳು ಹಾಗೂ ನಾಲ್ಕು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಯಶವಂತಪುರದಲ್ಲಿ ಚರಣ್ ರಾಜ್ ಹಾಗೂ ಇನ್ನಿತರ ಆರೋಪಿಗಳು ಮಿಲ್ಲರ್ ರಸ್ತೆಯಲ್ಲಿ ಟಿಕೆಟ್​ಗಳನ್ನು ಮಾರಾಟ …

Read More »

ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ: ಆದರೆ, ತೆರಿಗೆ ಸಂಗ್ರಹ ಗುರಿ ಮುಟ್ಟಲೇಬೇಕು – ಸಿಎಂ

ಬೆಂಗಳೂರು: ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡುತ್ತೇವೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಶನಿವಾರ ಬ್ಯಾಂಕ್ವೆಂಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಅವರು, ವೇತನ‌ ಆಯೋಗ ಶಿಫಾರಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೇ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ …

Read More »

ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ

ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ * ನಿತ್ಯ ಹೆಸರಿನ ಹೆಣ್ಣು ಹುಲಿ-ಬೃಂಗಾ ಹೆಸರಿನ ಹೆಣ್ಣು ಸಿಂಹಿಣಿಯನ್ನು ಪ್ರಾಣಿ ಸಂಗ್ರಹಾಲಯಕ್ಕೆ ಬಿಡುಗಡೆ ಮಾಡಿದ ಸಂಸದೆ ಬೆಳಗಾವಿ: ಭುತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿರುವ ನಿತ್ಯ ಹೆಸರಿನ ಹೆಣ್ಣು ಹುಲಿ ಮತ್ತು ಬೃಂಗಾ ಹೆಸರಿನ ಹೆಣ್ಣು ಸಿಂಹಿಣಿಯನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಪ್ರಾಣಿ ಸಂಗ್ರಹಾಲಯಕ್ಕೆ ಬಿಡುಗಡೆ ಮಾಡಿದರು. ಇತ್ತೀಚಿಗೆ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ …

Read More »