ಧಾರವಾಡದ ಯಾದವಾಡದಲ್ಲಿ ಸಂಭ್ರಮದ ಹೊನ್ನಾಟ….21 ವರ್ಷದ ನಂತರ ಗ್ರಾಮ ದೇವಿಯರ ಜಾತ್ರೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ 21 ವರ್ಷಗಳ ನಂತರ ಗ್ರಾಮ ದೇವಿಯರ ಜಾತ್ರೆ ಅದ್ಧೂರಿಯಿಂದ ನೆರವೇರುತ್ತಿದ್ದು, ಗ್ರಾಮಸ್ಥರೆಲ್ಲರೂ ಗ್ರಾಮ ದೇವತೆಯರ ಜಾತ್ರೆಯಲ್ಲಿ ಭಾಗಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಳ್ಳುವುದರ ಜತೆಗೆ ದೇವರ ಕೃಪೆಗೆ ಪಾತ್ರರಾದರು. ಗ್ರಾಮದೇವಿಯರಾದ ದ್ಯಾಮವ್ವ ಹಾಗೂ ದುರ್ಗಾದೇವಿಯರ ಮೂರ್ತಿಗಳು ಪುರಪ್ರವೇಶ ಮಾಡಿದ್ದು, ಶನಿವಾರ ಗ್ರಾಮದ ತುಂಬೆಲ್ಲ ಸಂಭ್ರಮದ ಹೊನ್ನಾಟ ನಡೆಯುತ್ತಿದೆ. ಶನಿವಾರ ಯಾದವಾಡ …
Read More »Yearly Archives: 2025
ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ
ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಬೂದಿಹಾಳ ಗ್ರಾಮದ ಶ್ರೀ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಗಂಗಾವತಿ: ತಾಯಿಯ ಅಗಲಿಕೆ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿ ಫಸ್ಟ್ ಕ್ಲಾಸ್ನಲ್ಲಿ ಪಾಸ್
ಗಂಗಾವತಿ: ಹೆತ್ತವ್ವನ ಅಗಲಿಕೆಯ ನೋವಿನ ಸುದ್ದಿಯ ಮಧ್ಯೆಯೂ ಎದೆಗುಂದದೆ ಹತ್ತನೇ ತರಗತಿ ಪರೀಕ್ಷೆ ಬರೆದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದ್ದ ತಾಲೂಕಿನ ಕೇಸರಹಟ್ಟಿಯ ವಿದ್ಯಾರ್ಥಿ ಇದೀಗ ಪರೀಕ್ಷೆಯಲ್ಲಿ 370 ಅಂಕ ಗಳಿಸಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗಿದ್ದಾನೆ. ಕೇಸರಹಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಶಾಲೆಯ ಅಡಿವಯ್ಯ ಸ್ವಾಮಿ ಹಿರೇಮಠ 370 ಅಂಕ ಪಡೆದ ವಿದ್ಯಾರ್ಥಿ. ಮಾ. 20ರಿಂದ ಆರಂಭವಾಗಲಿದ್ದ ಹತ್ತನೇ ತರಗತಿ ಪರೀಕ್ಷೆಗಾಗಿ ಎಲ್ಲ ಸಿದ್ಧತೆಯನ್ನೂ ಅಡಿವಯ್ಯ ಮಾಡಿಕೊಂಡಿದ್ದ. ಇನ್ನೇನು ಮೊದಲ …
Read More »ಎಸ್ಎಸ್ಎಲ್ಸಿ ಫಲಿತಾಂಶ ಬಾಲಕಿಯರದ್ದೇ ಮೇಲುಗೈ
ಬೆಳಗಾವಿ: ಬೆಳಗಾವಿ ಶೈಕ್ಷಣಿಕ ಜಿಲ್ಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 25ನೇ ಸ್ಥಾನ ಗಳಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅಲ್ಲದೇ ರಾಜ್ಯಕ್ಕೆ ಓರ್ವ ವಿದ್ಯಾರ್ಥಿನಿ ಪ್ರಥಮ ಸ್ಥಾನ ಗಳಿಸಿದರೆ, ಮೂವರು ವಿದ್ಯಾರ್ಥಿಗಳು ಎರಡನೇ ಸ್ಥಾನ ಗಳಿಸಿದರೆ, ನಾಲ್ವರು ಮೂರನೇ ಸ್ಥಾನ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆ ಶೇ.62.16ರಷ್ಟು ಫಲಿತಾಂಶ ದಾಖಲಿಸಿದ್ದು, ಈ ಮೂಲಕ ರಾಜ್ಯಕ್ಕೆ 25ನೇ ಸ್ಥಾನ ಗಳಿಸಿದೆ. ಕಳೆದ ಬಾರಿ 29ನೇ ಸ್ಥಾನ ಸಿಕ್ಕಿತ್ತು. …
Read More »ಪೊಲೀಸರ ಮೇಲೆ ಹಲ್ಲೆಗೈದ ಆರೋಪಿ ಕಾಲಿಗೆ ಗುಂಡೇಟು
ಬೀದರ್: ನಗರದ ಓಲ್ಡ್ ಆದರ್ಶ ಕಾಲೋನಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಹಲ್ಲೆ ನಡೆಸಿದ ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರಳಿಯ ಕರ್ತಾರ್‍ಸಿಂಗ್, ಆತನ ಸಹೋದರನಾದ ಬೀದರ್ ನಿವಾಸಿ ಜಗಜೀತ್‍ಸಿಂಗ್ ಹಾಗೂ ಪುಣೆಯ ಅಕ್ಷಯ ಬಂಧಿತರು. ಇಲ್ಲಿನ ಓಲ್ಡ್ ಆದರ್ಶ ಬಡಾವಣೆಯಲ್ಲಿ ಏಪ್ರಿಲ್ 26ರಂದು ಬೆಳಗ್ಗಿನಜಾವ ಮನೆ ಕಳ್ಳತನ …
Read More »ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಿ.ಟಿ ರವಿಗೆ ಹೈಕೋರ್ಟ್ನಲ್ಲಿ ಹಿನ್ನಡೆ
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಆದೇಶದಿಂದಾಗಿ ಸಿ.ಟಿ. ರವಿ ಅವರಿಗೆ ಹಿನ್ನಡೆಯಾಗಿದ್ದು, ಇದೀಗ ಪ್ರಕರಣದ ವಿಚಾರಣೆ ಎದುರಿಸುವ ಅನಿವಾರ್ಯತೆ ಉಂಟಾಗಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ …
Read More »ಲವ್ವರ್ ಜೊತೆ ಸಿಕ್ಕಿಬಿದ್ದ ಪತ್ನಿ – ಸಿಟ್ಟಿಗೆದ್ದ ಪತಿಯಿಂದ ಡಬಲ್ ಮರ್ಡರ್
ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯು ಪರ ಪುರುಷನೊಂದಿಗೆ ಒಟ್ಟಿಗೆ ಇದ್ದುದನ್ನು ಕಣ್ಣಾರೆ ಕಂಡ ಪತಿ ಮಾರಕಾಸ್ತ್ರಗಳಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆ ಕಲಬುರಗಿಯ (Kalaburagi) ಆಳಂದ ತಾಲೂಕಿನ ಮಾದನಹಿಪ್ಪರಗಾ (Madanahipparaga) ಗ್ರಾಮದಲ್ಲಿ ನಡೆದಿದೆ.ಸೃಷ್ಟಿ(22), ಖಾಜಪ್ಪ(23) ಮೃತರು. ಆರೋಪಿ ಶ್ರೀಮಂತ ಕೊಲೆ ಮಾಡಿ, ಮಾದನಹಿಪ್ಪರಗಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. 2 ವರ್ಷಗಳ ಹಿಂದೆ ಸೃಷ್ಟಿಯು ಶ್ರೀಮಂತನನ್ನು ಮದುವೆಯಾಗಿದ್ದಳು. ಗುರುವಾರ ಊರಿಗೆ ತೆರಳಿದ್ದ ಶ್ರೀಮಂತ, ರಾತ್ರಿ …
Read More »114 ಹಳ್ಳಿ, 140 ಮಂದಿರ ಜೀರ್ಣೋದ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ 114 ಹಳ್ಳಿಗಳಿದ್ದು ಇವುಗಳಲ್ಲಿ 140 ಮಂದಿರಗಳನ್ನು ಕಳೆದ 7 ವರ್ಷದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ತುರಮುರಿ ಗ್ರಾಮದಲ್ಲಿ ಶುಕ್ರವಾರ ನೂತನ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ, ಮೂರ್ತಿ ಪ್ರತಿಷ್ಟಾಪನೆ ಮತ್ತು ಕಳಸಾರೋಹಣ ಸೋಹಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಜಾತಿ, ಭಾಷೆ, ಧರ್ಮ …
Read More »ಕಾಂಗ್ರೆಸ್‍ನವರು ಪಾಕಿಸ್ತಾನದಲ್ಲಿ ಹೀರೋಗಳಾಗಿದ್ದಾರೆ:ಜೋಶಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ತಾನದಲ್ಲಿ ಸಂಭ್ರಮಿಸಿದ್ದಾರೆ. ದೇಶದ ಭದ್ರತೆಯ ವಿಚಾರದಲ್ಲಿ ಹೇಳಿಕೆ ನೀಡಿದ ಕಾಂಗ್ರೆಸ್‍ನವರೆಲ್ಲ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸ್ವಲ್ಪವಾದರೂ ಮರ್ಯಾದೆ ಬೇಡವೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎನ್ನಲು ನೂರಾರು ಕಾರಣ ಎಂದು ರಾಜ್ಯದ ಸಚಿವರು ಹೇಳುತ್ತಾರೆ. ಇದು ದೇಶದ್ರೋಹ ಅಲ್ಲವೇ? ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ಅವರು ಪ್ರಶ್ನಿಸಿದರು. ಕರ್ನಾಟಕದಲ್ಲಿ ಹಾಲಿನಿಂದ ಆಲ್ಕೋಹಾಲ್ವರೆಗೆ …
Read More »