Breaking News

Yearly Archives: 2025

6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ

ವಿಜಯಪುರ :6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ  ಕಬ್ಬು ಬೆಳೆಗಳ ಮಧ್ಯೆ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 15 ಕೆಜಿ 100 ಗ್ರಾಂ ಹಸಿ ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಿಕೋಟಾ ತಾಲ್ಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ ಶಿವಪ್ಪ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿ, ಅಂದಾಜು 6.ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ …

Read More »

ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಂದ್ರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೈಸೂರು: ದರೋಡೆ ನೆಪದಲ್ಲಿ ಪತ್ನಿಯೇ ತನ್ನ ಪತಿಯ ಕೊಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾದ ಪ್ರಕರಣದಲ್ಲಿ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಪತಿ ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ. ಡ್ರ್ಯಾಗರ್ ಹಾಗೂ ಲಾಂಗ್​ನಿಂದ ಹಲ್ಲೆಗೊಳಗಾದ ರಾಜೇಂದ್ರ ಎಂಬವರು ಇಪ್ಪತ್ತು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತಿಯ ಕೊಲೆಗೆ ಪತ್ನಿಯೇ ದರೋಡೆ ತಂತ್ರ ರೂಪಿಸಿದ್ದಳು ಎಂದು ಮೃತ ವ್ಯಕ್ತಿಯ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ …

Read More »

ಬೆಂಗಳೂರಿನ ಮಹಿಳೆಗೆ ಡಿಜಿಟಲ್ ಅರೆಸ್ಟ್: 31.83 ಕೋಟಿ ರೂ ಕಳೆದುಕೊಂಡ ಟೆಕ್ಕಿ

ಬೆಂಗಳೂರು: ಐಟಿ ಕ್ಷೇತ್ರದ ಹಿರಿಯ ಮಹಿಳಾ ಉದ್ಯೋಗಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿದ ಬರೋಬ್ಬರಿ 31.83 ಕೋಟಿ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠದ ಮೊತ್ತದ ಹಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರಿಗೆ 2024ರ ಸೆಪ್ಟೆಂಬರ್ 15ರಂದು ಡಿಹೆಚ್​ಎಲ್​ ಕೊರಿಯರ್ ಕಂಪನಿಯ …

Read More »

ಕಟೀಲು ಕ್ಷೇತ್ರದ ಯಕ್ಷಗಾನಕ್ಕೆ ಹೆಚ್ಚಿದ ಬೇಡಿಕೆ: ಏಳನೇ ಮೇಳ ಆರಂಭ

ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯ ಪ್ರಸಿದ್ಧ ಜನಪದೀಯ ಕಲೆ ಯಕ್ಷಗಾನ ಮನೋರಂಜನೆ ಮಾತ್ರವಲ್ಲದೆ ಧಾರ್ಮಿಕ ನಂಬುಗೆಯ ಆಚರಣೆಯೂ ಹೌದು. ಅದರಲ್ಲೂ ಶ್ರೀ ಕ್ಷೇತ್ರ ಕಟೀಲು ಯಕ್ಷಗಾನಕ್ಕೆ ವಿಶೇಷ ಧಾರ್ಮಿಕ ಮಹತ್ವವಿದ್ದು, ಕ್ಷೇತ್ರದ ಯಕ್ಷಗಾನಕ್ಕಿರುವ ವಿಪರೀತ ಬೇಡಿಕೆಯಿಂದಾಗಿ ಇದೀಗ ಏಳನೇ ಮೇಳವನ್ನು ಆರಂಭಿಸಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಡುವ ಪುರಾತನ ಯಕ್ಷಗಾನ ಮೇಳಗಳು ಕರ್ನಾಟಕದ ಸಾಂಸ್ಕೃತಿಕ ಮತ್ತು ಧಾರ್ಮಿಕ ಜಗತ್ತಿನಲ್ಲಿ ಅಪೂರ್ವ ಸ್ಥಾನ ಪಡೆದಿವೆ. ಈ ಮೇಳಗಳು ಕೇವಲ ಕಲಾ ಪ್ರದರ್ಶನಕ್ಕೆ ಸೀಮಿತವಲ್ಲ, …

Read More »

ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ

ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ ಬೆಳಗಾವಿ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ‘ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ರಾಜೇಂದ್ರ ಬಡೇಸಗೋಳ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ. ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ …

Read More »

ಕೊಪ್ಪರಿಗೆ ಏರುವುದರೊಂದಿಗೆ ಕುಕ್ಕೆ ಚಂಪಾಷಷ್ಠಿ ವಾರ್ಷಿಕ ಜಾತ್ರೆ ಆರಂಭ: ನ.26ರಂದು ಮಹಾರಥೋತ್ಸವ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನವಾದ ಇಂದು (ನ.16) ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನ ಸುಮಹೂರ್ತದಲ್ಲಿ ಕೊಪ್ಪರಿಗೆ ಏರುವ ಆಚರಣೆಯೊಂದಿಗೆ ಆರಂಭವಾಗಿದೆ. ನವೆಂಬರ್ 26ರಂದು ಬೆಳಗಿನಜಾವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಪ್ರಸಿದ್ಧ ಚಂಪಾಷಷ್ಠಿ ಮಹಾರಥೋತ್ಸವ ಜರುಗಲಿದೆ. ಪ್ರತಿ ವರ್ಷವೂ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾಗುವುದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವೈಶಿಷ್ಟ್ಯ. ಸಾಮಾನ್ಯವಾಗಿ ಅನೇಕ ದೇವಸ್ಥಾನಗಳಲ್ಲಿ …

Read More »

ಸರಣಿ ಅಪಘಾತ: ಬೈಕ್ ಸವಾರ ಸಾವು; ಬಸ್ ಪಲ್ಟಿ, ಕಾರು ನಜ್ಜುಗುಜ್ಜು

ಹಾಸನ/ಶಿವಮೊಗ್ಗ: ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದೆ. ಮಸಕನಳ್ಳಿ ಗ್ರಾಮದ ಎಂ.ಸಿ‌.ದೇವರಾಜ್ (54) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಸನ ಕಡೆಯಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಖಾಸಗಿ ಬಸ್ ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಸರ್ವಿಸ್ ರಸ್ತೆ ಕಡೆಗೆ ನುಗ್ಗಿ ಸ್ಕೂಟರ್​ಗೆ ಗುದ್ದಿ ಬಳಿಕ …

Read More »

ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಎಎಸ್ಐ ಚಂದ್ರಕಾಂತ ಹುಟಗಿ

ಹುಬ್ಬಳ್ಳಿ(ಧಾರವಾಡ): ಹೃದಯಾಘಾತವಾಗಿ ಸಾವನ್ನಪ್ಪಿದ ಎಎಸ್​ಐಯೋರ್ವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಲಘಟಗಿ ಪೊಲೀಸ್​​ ಠಾಣೆಯಲ್ಲಿ ಎಎಸ್​ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ (58) ಅವರು ಭಾನುವಾರ(ನ.16) ಬೆಳಗ್ಗೆ ಹೃದಯಾಘಾತದಿಂದ ಹುಬ್ಬಳ್ಳಿ ಸುಚರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾದರು. ತಮ್ಮವರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಕೂಡ ಅವರ ಕುಟುಂಬ ಚಂದ್ರಕಾಂತ ಅವರ 2 ಕಣ್ಣುಗಳನ್ನು ದಾನ ಮಾಡಿದ್ದಾರೆ.ಚಂದ್ರಕಾಂತ ಹುಟಗಿ ಪರಿಚಯ: ಅಕ್ಟೋಬರ್ 24, 1993ರಲ್ಲಿ ಪೊಲೀಸ್ ಇಲಾಖೆ …

Read More »

ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ; ಗೃಹ ಸಚಿವ ಜಿ. ಪರಮೇಶ್ವರ

ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ; ಗೃಹ ಸಚಿವ ಜಿ. ಪರಮೇಶ್ವರ ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ. ಇಂದು ಬೆಂಗಳೂರಿನಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಂಪುಟ ಪುನಾರಚನೆಗೆ ಅನುಮತಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಆದರೇ, ಪುನಾರಚನೆಯಾದ್ರೇ, ನಾಯಕತ್ವದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಆಗಲ್ಲ ಎಂದರು. ಇನ್ನು ಹಲವರು ಸಚಿವರಾಗುವ ಅಪೇಕ್ಷೆ ಪಡುತ್ತಿದ್ದಾರೆ.

Read More »

ಹಿರಿಯ ಸಾಧಕರನ್ನು ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ. ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ

ಹಿರಿಯ ಸಾಧಕರನ್ನು ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ. ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪಂಚ ಸಹಸ್ರ ದೀಪೋತ್ಸವ ಸಾರ್ವಜನಿಕ ಸೇವೆಗಾಗಿ ಜೀವಮಾನವನ್ನೇ ಮುಡುಪಾಗಿಟ್ಟು, ಜೀವವನ್ನು ತೇಯ್ದ ಹಿರಿಯ ಸಾಧಕ ಜೀವಿಗಳನ್ನು ಗುರುತಿಸಿ ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ ಎಂದು ಬೆಳಗಾವಿ ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು. ಅವರು ಶನಿವಾರ ಬೆಳಗಾವಿ ರಾಮತೀರ್ಥನಗರದ ಶ್ರೀ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ …

Read More »