ಬೆಂಗಳೂರು: ಪತ್ನಿ ಶಾಪಿಂಗ್ಗೆ ಹೋಗಿ ಬಂದಿದ್ದಕ್ಕೆ ತಗಾದೆ ತೆಗೆದು ಕತ್ತು ಹಿಸುಕಿ ಹತ್ಯೆಗೈದಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು. ಜುಲೈ 6ರಂದು ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮರುದಿನ ಆಸ್ಪತ್ರೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು. ಪದ್ಮಜಾ ಅವರು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ಸ್ ವಿಭಾಗದಲ್ಲಿ ಬಿಇ …
Read More »Yearly Archives: 2025
ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಹಣ ಸುಲಿಗೆ ಆರೋಪ: ಮೂವರು ಆರೋಪಿಗಳ ಬಂಧನ
ಬೆಂಗಳೂರು: ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿ ಬಳಿಕ ಹಣ ಸುಲಿಗೆ ಮಾಡಿದ್ದಲ್ಲದೆ ಮನೆಯಲ್ಲಿದ್ದ ಪಿಠೋಪಕರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ಧಾರೆ. 35 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೆಬ್ಬಗೋಡಿ ಸುತ್ತಮುತ್ತಲಿನ …
Read More »ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿ: ಹೈಕೋರ್ಟ್
ಬೆಂಗಳೂರು: ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿತು. ಸುಪ್ರೀಂ ಕೋರ್ಟ್ ಆದೇಶಗಳ ಪ್ರಕಾರ ಮೊದಲಿಗೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಬೇಕು. ಈ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ಮುಂದಿನ 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಅತ್ಯಾಚಾರ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಎರಡನೇ ಬಾರಿಗೆ ಜಾಮೀನು …
Read More »ಹೃದಯಾಘಾತದ ಭಯ: ಪರೀಕ್ಷೆಗಾಗಿ ಮೈಸೂರು ಜಯದೇವ ಆಸ್ಪತ್ರೆ ಮುಂದೆ ಜನಜಂಗುಳಿ
ಮೈಸೂರು: ರಾಜ್ಯದಲ್ಲಿ ಅತಿ ಕಿರಿಯ ವಯಸ್ಸಿನವರು, ಯುವಕರು ಕೂಡ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಈ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿದ್ದು, ಮುಂಜಾಗ್ರತ ಕ್ರಮವಾಗಿ ಪರೀಕ್ಷೆಗಾಗಿ ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ. ನಗರದ ಸರ್ಕಾರಿ ಜಯದೇವ ಹೃದ್ರೋಗ ಆಸ್ಪತ್ರೆಯ ಬಳಿ ಸಾವಿರಾರು ಜನರು ಜಮಾಯಿಸಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹೈರಾಣಾಗಿದ್ದಾರೆ. ಜನರು ಪ್ಯಾನಿಕ್ ಆಗಬೇಡಿ ಎಂಬ ವೈದ್ಯರ ಸಲಹೆ ಒಂದೆಡೆಯಾದರೆ, ಪರೀಕ್ಷೆಗಾಗಿ ಬಂದ ಜನರು ಹೇಳುವುದೇನು? ಇದರ ಪ್ರತ್ಯಕ್ಷ ವರದಿ ಇಲ್ಲಿದೆ. ಯುವಕರೇ ಹೆಚ್ಚು: ಪ್ರತಿದಿನ …
Read More »ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಏಕೆ ಮೋದಿ ಟಿಕೆಟ್ ಕೊಡಲಿಲ್ಲ?: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಿಜೆಪಿಯ ಕಳಪೆ ಪ್ರಾಡಕ್ಟ್ಗಳಿಗೆ ನಾನು ಬೇಕಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ನಾನು ಟ್ಯಾಲೆಂಟ್ ಅಂತಾರೆ. ಮತ್ತೇಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಟಿಕೆಟ್ ಕೊಡಲಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಆಡಿಯೋ ಕೇಳಿದ್ರಾ? ಅಥವಾ ಮೊಬೈಲ್ ಸೀಸ್ ಆಗಿದ್ದಾಗ ಏನಾದ್ರು ಸಿಕ್ತಾ? ಯಾಕೆ ನಿಮಗೆ ಟಿಕೆಟ್ ಕೊಡಲಿಲ್ಲ ಅನ್ನೋದನ್ನು …
Read More »ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ
ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಪ್ರಾರಂಭ ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪ್ರಯತ್ನದಿಂದ ಕಾರ್ಯಾರಂಭ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ಮಂಜೂರು ಸಚಿವೆ ಹೆಬ್ಬಾಳ್ಕರ ಅಭಿವೃದ್ಧಿ ಕಾರ್ಯಕ್ಕೆ ನಾಗರಿಕರಿಂದ ಕೃತಜ್ಞತೆ ರಝಾ-ಎ ಮುಸ್ತಫಾ ಕಾಲೋನಿಯಲ್ಲಿ ಅಲ್ಪಸಂಖ್ಯಾತರ ನಿಧಿಯಿಂದ ₹19 ಲಕ್ಷ ವೆಚ್ಚದ ಸಿಮೆಂಟ್ ರಸ್ತೆಯ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು ಕಳೆದ ಏಳು ವರ್ಷಗಳಿಂದ ಈ ಪ್ರದೇಶದಲ್ಲಿ ಅನೇಕ …
Read More »ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ
ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬೆಳಗಾವಿಯಲ್ಲಿ ಹೆಚ್ಚಾಗಿರುವ ಬಂಜಾರಾ ಸಮಾಜ ಶುಭ ಸಮಾರಂಭಗಳಿಗೆ ಸಮುದಾಯ ಭವನದ ಅವಶ್ಯಕತೆ ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬಂಜಾರಾ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಲು 1 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಬಂಜಾರಾ ಜನ ಅಭಿವೃದ್ಧಿ …
Read More »ಮೊಬೈಲ್ ಅಪ್ಲಿಕೇಶನ್ ಮೂಲಕ ನಕಲಿ ಜ್ಯೋತಿಷಿಯಿಂದ 20 ಲಕ್ಷ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಯುವತಿ;
ಹಾವೇರಿ: ಅಂತರ್ಜಾಲದಲ್ಲಿ ಹಲವು ಬಗೆಯ ವಂಚನೆಗಳು ನಡೆಯುತ್ತಲೇ ಇರುತ್ತವೆ. ಹಿಂದೆಲ್ಲ ಮನೆಗೆ ಬ್ಯಾಂಕ್ಗಳಿಗೆ ಹಣ ಸಾಗಿಸುವ ವಿಷಯ ತಿಳಿದು ದಾಳಿ ಮಾಡುತ್ತಿದ್ದ ಖದೀಮರು ಇದೀಗ ಅಂತರ್ಜಾಲದ ಮೂಲಕ ಜನರ ಹಣ ದೋಚುತ್ತಿದ್ದಾರೆ. ಇದೇ ರೀತಿಯ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ. ಭವಿಷ್ಯವನ್ನು ತಿಳಿದು ಕೊಳ್ಳಲು ತನ್ನ ಮೊಬೈಲ್ನಲ್ಲಿ ಅಪ್ಲಿಕೇಶನ್ ಡೌನಲೋಡ್ ಮಾಡಿಕೊಂಡ ಯುವತಿಯೊಬ್ಬಳು ಬರೋಬ್ಬರಿ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳೆದುಕೊಂಡಿದ್ದಾಳೆ. ಜ್ಯೋತಿಷ್ಯ ಸಂಬಂಧಿತ ಅಪ್ಲಿಕೇಶನ್ ಡೌನಲೋಡ್ ಮಾಡಿ ಮಾಹಿತಿ ಪಡೆಯಲು …
Read More »ಬೆಳಗಾವಿಯಲ್ಲಿ ಡೆತ್ ನೋಟ್ ಬರೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಚಿಂತಾಜನಕ
ಬೆಳಗಾವಿ: ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಖಾಸಬಾಗದ ಜೋಶಿ ಮಾಳದ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಕೂಡಿಕೊಂಡು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ ಕುರಡೇಕರ್ (44), ಪುತ್ರಿ ಸುವರ್ಣ ಕುರಡೇಕರ್(42) ಮೃತ ದುರ್ದೈವಿಗಳು. …
Read More »ಬೆಳಗಾವಿ ಜಿಲ್ಲಾ ವಿದ್ಯಾರ್ಥಿಗಳಿಗೆ ಧಾರವಾಡ ಐಐಟಿ ಪ್ರವಾಸ
ಬೆಳಗಾವಿ: ಐಐಟಿಯ ಆಧುನಿಕ ತಂತ್ರಜ್ಞಾನ ಸಂಶೋಧನೆಗಳು, ಹೊಸ ಕಲಿಕೆಯ ಅವಕಾಶ, ಅನ್ವೇಷಣೆಗಳು, ಅಲ್ಲಿನ ಪರಿಸರದಿಂದ ವಿದ್ಯಾರ್ಥಿಗಳಲ್ಲಿ ಹೊಸ ದೃಷ್ಟಿ ಮೂಡಬೇಕು. ಐಐಟಿ ಸೇರಬೇಕೆಂಬ ಹಾಗು ಹೊಸ ನಾವೀನ್ಯತೆಗೆ ಮುಂದಾಗಲು ಪ್ರೇರೇಪಿಸುವ ಉದ್ದೇಶದಿಂದ ಜಿಲ್ಲೆಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳನ್ನು ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕಾಗಿ ಧಾರವಾಡ ಐಐಟಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಕಳುಹಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ …
Read More »
Laxmi News 24×7