Breaking News

Yearly Archives: 2025

ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್​​ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: “ಬಿಜೆಪಿ-ಜೆಡಿಎಸ್​ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್​ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. “ಶಿವಕುಮಾರ್​ ಅವರು ಜಲಸಂಪನ್ಮೂಲ …

Read More »

ನಂದಿನಿಯಿಂದ 2 ಹೊಸ ಉತ್ಪನ್ನ ಪರಿಚಯ: ಸೀಡ್ ಡಿಲೈಟ್, ಗುವಾ ಚಿಲ್ಲಿ ಲಸ್ಸಿ ಮಾರುಕಟ್ಟೆಗೆ

ಮಂಗಳೂರು: ಕೆಎಂಎಫ್​ನಿಂದ ನಂದಿನಿ ಬ್ರ್ಯಾಂಡ್​ನಲ್ಲಿ ಹಾಲಿನ ಜೊತೆಗೆ ಹಲವು ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ಇದರಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ 29 ಉತ್ಪನ್ನಗಳು ಗ್ರಾಹಕರನ್ನು ಸೆಳೆಯುತ್ತಿವೆ. ನವೆಂಬರ್ 16 ರಂದು ಆರೋಗ್ಯಕ್ಕೂ ಉತ್ತಮವಾಗಿರುವ ಇನ್ನೆರಡು ಉತ್ಪನ್ನಗಳ ಬಿಡುಗಡೆಗೆ ನಂದಿನಿ ಸಜ್ಜಾಗಿದೆ. ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ ನಂದಿನಿ ಬ್ರ್ಯಾಂಡ್​ನಲ್ಲಿ 29 ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ನವೆಂಬರ್ 16ರಂದು ನಂದಿನಿ ಸೀಡ್ ಡಿಲೈಟ್ ಮತ್ತು ನಂದಿನಿ …

Read More »

ಕಿತ್ತೂರು ರಾಣಿ‌ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಬೆಳಗಾವಿ/ಬೆಂಗಳೂರು: ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ (ನ.13) 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಡಿಎಫ್​ಒ ಎನ್.ಇ.ಕ್ರಾಂತಿ ಅವರನ್ನು ಈಟಿವಿ …

Read More »

ಹುಬ್ಬಳ್ಳಿಯಲ್ಲಿ ಅನಧಿಕೃತ ಬ್ಯಾನರ್​ಗಳ ಹಾವಳಿ: ಮಹಾನಗರ ಪಾಲಿಕೆ ಆದಾಯಕ್ಕೂ ಕೊಕ್ಕೆ

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಅವಳಿ‌ ನಗರದಲ್ಲಿ ಬ್ಯಾನರ್​ಗಳು, ಬಂಟಿಂಗ್ ಹಾಗೂ ಫ್ಲೆಕ್ಸ್​ಗಳ ಹಾವಳಿ ಮಿತಿ‌ಮೀರಿದೆ. ಮುಖ್ಯ ರಸ್ತೆಗಳು ಸೇರಿದಂತೆ ಎಲ್ಲೆಂದರಲ್ಲಿ ಅನಧಿಕೃತವಾಗಿ ಬ್ಯಾನರ್​ಗಳನ್ನು ಅಳವಡಿಸಿರುವುದರಿಂದ ನಗರ ಸೌಂದರ್ಯಕ್ಕೂ ಧಕ್ಕೆಯಾಗಿದೆ. ಸುಗಮ ಸಂಚಾರಕ್ಕೂ ಸಮಸ್ಯೆಯಾಗಿದೆ. ಜೊತೆಗೆ ಮಹಾನಗರ ಪಾಲಿಕೆ ಆದಾಯಕ್ಕೂ ಕುತ್ತು ಬಂದಿದೆ. ನಗರದಲ್ಲಿ ರಾಜಕೀಯ ಪಕ್ಷದ ಅಥವಾ ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೂಡ ಶುಭಕೋರುವ ಹಾಗೂ ಸ್ವಾಗತಕೋರುವ ಬ್ಯಾನರ್​​ಗಳು ದೊಡ್ಡ ಪ್ರಮಾಣದಲ್ಲಿವೆ. ಗೋಕುಲ ರಸ್ತೆಯ ವಿಮಾನ ನಿಲ್ದಾಣದಿಂದ …

Read More »

ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ

ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ   ದಾವಣಗೆರೆ : ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದ ಆವರಣದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೂ ಮುನ್ನ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆ ಸಂಚಾರ ಮಾಡಲು ಹೆಲಿಕಾಪ್ಟರ್ …

Read More »

ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ

ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ ಕರ್ನಾಟಕ ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಿದರು.‌ ಜಲಸಂಪನ್ಮೂಲ ಇಲಾಖೆ, ಕರ್ನಾಟಕ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಲಿಂಗದಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಕಬ್ಬು ಬೆಳೆಗೆ ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಂತ್ಯ

ಬಾಗಲಕೋಟೆ: ಕಬ್ಬು ಬೆಳೆಗೆ ದರ ನಿಗದಿ ಸಂಬಂಧಪಟ್ಟಂತೆ ನಡೆಯುತ್ತಿರುವ ರೈತರ ಹೋರಾಟ ಇಬ್ಬರು ಸಚಿವರ ಸಂಧಾನದಿಂದಾಗಿ ಯಶಸ್ಸು ಕಂಡಿದ್ದು, ರೈತರ ಹೋರಾಟ ಸಮಾಪ್ತಿಗೊಂಡಿದೆ. ಕಳೆದ ದಿನ ಕಬ್ಬು ತುಂಬಿದ ಟ್ರ್ಯಾಕ್ಟರ್​​​ಗೆ ಬೆಂಕಿ ಹಚ್ಚಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ರೈತರು & ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನ ಸಭೆ ನಡೆಸಿ, …

Read More »

ವಿರೋಧದ ಮಧ್ಯೆ ಬೆಂಗಳೂರಿನಲ್ಲಿ ಟನಲ್ ರಸ್ತೆ ಗುದ್ದಲಿ ಪೂಜೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, (ನವೆಂಬರ್ 14): ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ರಸ್ತೆ (Bengaluru Tunnel Road) ನಿರ್ಮಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಈಗಾಗಲೇ ಹಲವು ಅಪಸ್ವರ ಕೇಳಿಬರುತ್ತಿದೆ. ಲಾಲ್ ಬಾಗ್ ಗೆ ಹಾನಿಯಾಗುತ್ತೆ, ಟ್ರಾಫಿಕ್ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತೆ ಎನ್ನುವ ಆರೋಪಗಳ ಜೊತೆಗೆ ಇದೀಗ ಟನಲ್ ರಸ್ತೆಯ ನಿರ್ಮಾಣದಿಂದ ರಾಜಧಾನಿಯ ಅಂತರ್ಜಲಮಟ್ಟಕ್ಕೂ ಹೊಡೆತ ಬೀಳುವ ಆತಂಕ ಎದುರಾಗಿದೆ. ಸದ್ಯ ಹೆಬ್ಬಾಳ ಟು ಸಿಲ್ಕ್ ಬೋರ್ಡ್ ತನಕ ನಡೆಸಲು ಹೊರಟಿರೋ ಟನಲ್ ರೋಡ್ ಕಾಮಗಾರಿ …

Read More »

ಕರ್ನಾಟಕದ ನಾಲ್ಕು ರೈಲ್ವೇ ಸ್ಟೇಷನ್​ಗಳ ಮರುನಾಮಕರಣ ಕೋರಿ ಎಂಬಿ ಪಾಟೀಲ್ ಪತ್ರ

ಬೆಂಗಳೂರು, ನವೆಂಬರ್ 14: ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಸಲುವಾಗಿ ರಾಜ್ಯದ ನಾಲ್ಕು ರೈಲ್ವೇ ನಿಲ್ದಾಣಗಳ ಮರುನಾಮಕರಣ (Renaming Of four Railway Stations) ಮಾಡಲು ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಗುರುವಾರ ಮಾತನಾಡಿದ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪರಂಪರೆಗೆ ಕೊಡುಗೆ ನೀಡಿದ ಸಂತರ ಹೆಸರನ್ನಿಡಲು ಮನವಿ ಮಾಡಿದ್ದೇವೆಂದು ಹೇಳಿದರು. ಯಾವ ಯಾವ ನಿಲ್ದಾಣಗಳ …

Read More »