Breaking News

Yearly Archives: 2025

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ನೇಹಾ ಹಿರೇಮಠ ಹತ್ಯೆಗೆ ಇಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ಇಲ್ಲಿನ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿತು. ಇದಕ್ಕೂ ಮೊದಲು ನೇಹಾ ಹಿರೇಮಠ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪೂರ್ಣಾಹುತಿ ಹೋಮ, ಹವನ ಮಾಡಲಾಯಿತು. …

Read More »

ವಲಸಿಗರ ಕಾರ್ಮಿಕರ ಲೆಕ್ಕಪರಿಶೀಲನೆ ನಡೆಸಿದ ವೇಳೆ ಅಚ್ಚರಿಯ ಅಂಶ ಬಯಲಾಗಿದೆ.

ಬೆಂಗಳೂರು, ಏಪ್ರಿಲ್​ 18: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ (Hubballi 5 Year Old Girl Murder) ಮಾಡಿದ್ದ ಆರೋಪಿ ರಿತೇಶ್​ ಕುಮಾರ್​​ ಹುಬ್ಬಳ್ಳಿ ಪೊಲೀಸರ (Hubballi Police) ಗುಂಡಿಗೆ ಮೃತಪಟ್ಟಿದ್ದಾನೆ. ಈ ಪ್ರಕರಣ ನಡೆದ ಬೆನ್ನಲ್ಲೇ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಮಂಡಳಿ ಅಲರ್ಟ್ ಆಗಿದೆ. ವಲಸಿಗ ಕಾರ್ಮಿಕರ ಲೆಕ್ಕ ಪರಿಶೀಲನೆಗೆ ಇಳಿದ ಇಲಾಖೆಗೆ ಅಚ್ಚರಿಯ ಮಾಹಿತಿ ತಿಳಿದಿದೆ. ರಾಜ್ಯದಲ್ಲಿ ಎಷ್ಟು ಜನ ವಲಸಿಗ ಕಾರ್ಮಿಕರಿದ್ದಾರೆ? ಅವರ ಹಿನ್ನೆಲೆ ಏನು? …

Read More »

ಲಸಿಕೆ ಹಾಕಿದ ಎರಡು ತಿಂಗಳ ಮಗು ಸಾವು ಆರೋಪ!

ಲಸಿಕೆ ಹಾಕಿದ ಎರಡು ತಿಂಗಳ ಮಗು ಸಾ*ವು ಆರೋಪ!* ಬೆಳಗಾವಿ ಅಥಣಿ ತಾಲೂಕಿನ ಬರಮಕುಡಿ ಗ್ರಾಮದಲ್ಲಿ ಘಟನೆ ಬರಮಕುಡಿ ಗ್ರಾಮದ ಅನ್ನಪ್ಪ ದುಂಡಪ್ಪ ಬೇವನೂರ( 2) ಸಾವನ್ನಪ್ಪಿದ ಮಗು ವೈದ್ಯರು ನಿರ್ಲಕ್ಷ್ಯವೇ ಮಗು ಸಾ**ವಿಗೆ ಕಾರಣ ಎಂದು ಕುಟುಂಬಸ್ಥರ ಕಣ್ಣೀರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎರಡು ತಿಂಗಳ ಹಸುಗೂಸು ಹೃದಯಲ್ಲಿ ಹೋಲು ಇದ್ದರೂ ಎರಡು ಹನಿ ಲಸಿಕೆ, ಒಂದು ಇಂಜೆಕ್ಷನ್ ಕೊಟ್ಟಿರುವ ವೈದ್ಯರು ತಡರಾತ್ರಿ ಮಗುವಿನ ಆರೋಗ್ಯದಲ್ಲಿ ಏರುಪೇರು …

Read More »

CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು: ಆಕ್ರೋಶ

ಶಿವಮೊಗ್ಗ, ಏಪ್ರಿಲ್​ 17: ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ (Brahmin) ವಿದ್ಯಾರ್ಥಿಗಳ (Students) ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ.  ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ. …

Read More »

ರಾಯಚೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು, ಏಪ್ರಿಲ್​ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ (accident) ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುವ ಕುರಿ …

Read More »

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ಳುತ್ತೇವೆ: ಸಚಿವ ಎಂಸಿ ಸುಧಾಕರ್

ಬೆಂಗಳೂರು, ಏಪ್ರಿಲ್ 18: ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ (Brahmin) ಸಮುದಾಯದ ವಿದ್ಯಾರ್ಥಿಯ ಜನಿವಾರ (Sacred Thread) ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ …

Read More »

ಯತ್ನಾಳ ಸ್ವ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ: ಜನಾಕ್ರೋಶ ಯಾತ್ರೆಯಲ್ಲಿ ಹೆಚ್ಚಿನ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿ ಜಿಲ್ಲೆಯ ಜನಪ್ರತಿನಿಧಿಗಳು

ಯತ್ನಾಳ ಸ್ವ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ: ಜನಾಕ್ರೋಶ ಯಾತ್ರೆಯಲ್ಲಿ ಹೆಚ್ಚಿನ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿ ಜಿಲ್ಲೆಯ ಜನಪ್ರತಿನಿಧಿಗಳು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಬಳಿಕ ಮೊದಲ ಬಾರಿಗೆ ವಿಜಯಪುರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗಮಿಸಿದ್ದರು. ವಿಜಯೇಂದ್ರ ಅವರ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಯಾತ್ರೆಯಲ್ಲಿ ಹೆಚ್ಚಿನ ಜನರು ಸೇರಲ್ಲ ಯತ್ನಾಳ ಬೆಂಬಲಿಗರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ ಎನ್ನಲಾಗಿತ್ತು. ಇದರ ಮದ್ಯೆ …

Read More »

ಶೂಟಿಂಗ್‌ ಮುಗಿಸಿ ರಿಲೀಸ್‌ ಗೆ ರೆಡಿಯಾದ ʼಎಲ್ಟು ಮುತ್ತಾʼ

ಶೂಟಿಂಗ್‌ ಮುಗಿಸಿ ರಿಲೀಸ್‌ ಗೆ ರೆಡಿಯಾದ ʼಎಲ್ಟು ಮುತ್ತಾʼ ಹೈ5 ಸ್ಟುಡಿಯೋಸ್ ನಿರ್ಮಾಣದ ಚೊಚ್ಚಲ ಸಿನಿಮಾ ಎಲ್ಟು ಮುತ್ತಾ ಟೈಟಲ್‌ ನಿಂದಲೇ ನಿರೀಕ್ಷೆ ಹೆಚ್ಚಿಸಿದೆ. ಪೋಸ್ಟರ್‌ ಮೂಲಕ ಗಮನಸೆಳೆದಿದ್ದ ಚಿತ್ರತಂಡ ಇತ್ತೀಚೆಗಷ್ಟೇ ಮಾಧ್ಯಮದರ ಮುಂದೆ ಬಂದಿದ್ದರು. ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ಎಲ್ಟಾ ಮುತ್ತಾ ಚಿತ್ರತಂಡದ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು, ಶೂಟಿಂಗ್‌ ಮುಗಿಸಿ ರಿಲೀಸ್‌ ಗೆ ರೆಡಿಯಾಗಿರುವ ಚಿತ್ರದ ಬಗ್ಗೆ ನಿರ್ದೇಶಕರು, ನಿರ್ಮಾಪಕ ಹಾಗೂ ಇಡೀ ತಂಡ ಮಾಹಿತಿ ಹಂಚಿಕೊಂಡಿದೆ. ನಿರ್ಮಾಪಕ …

Read More »

ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಸಿಎಂ ಚಾಲನೆ*:*ಲಾಂಛನ ಬಿಡುಗಡೆ* ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

‘ ಬೆಂಗಳೂರು : ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ಕಾರ್ಯಕ್ರಮದ ಲಾಂಛನ ಬಿಡುಗಡೆ ಮತ್ತು ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಸವಣ್ಣನವರು ಸಮಾಜಕ್ಕಾಗಿ …

Read More »

ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ

ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು …

Read More »