ಗುಂಡೇನಟ್ಟಿ ಗ್ರಾಮದಲ್ಲಿ ಹಾಸ್ಯ ಪ್ರಧಾನ ಕನ್ನಡ ಸಾಮಾಜಿಕ ನಾಟಕವನ್ನು ಉದ್ಘಾಟಿಸಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ತಾಲೂಕಿನ ಗುಂಡೇನಟ್ಟಿ ಗ್ರಾಮದಲ್ಲಿ ಸಸ್ಸಿಗೆ ನೀರು ಹಾಕಿ, ರಿಬ್ಬನ್ ಕಟ್ ಮಾಡುವ ಮೂಲಕ ಇನ್ನಿತರ ಮುಖಂಡರೊಂದಿಗೆ ಸಾಮಾಜಿಕ ನಾಟಕ ಉದ್ಘಾಟನೆ ನೆರವೇರಿಸಿದ ಮಹಾಲಕ್ಷ್ಮೀ ಗ್ರುಪ್ ಸಂಸ್ಥಾಪಕ ಅಧ್ಯಕ್ಷ ಶಾಸಕ ವಿಠ್ಠಲ ಹಲಗೇಕರ ತದನಂತರದಲ್ಲಿ ಮಾತನಾಡಿದ ಅವರು ಶ್ರೀ ಸತ್ಯಮ ದೇವಿ ಹಾಗೂ ಶ್ರೀ ಕರೇಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀ ಗುರು …
Read More »Yearly Archives: 2025
ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ
ಗೋಕಾಕ್ – ರಾಜ್ಯ ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ ಅಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಹೂ ಗುಚ್ಛ …
Read More »ಯುವಕನೋರ್ವನಿಗೆ ಚಾಕು ಇರಿತ: 6 ಆರೋಪಿಗಳ ಬಂಧನ- ಹು-ಧಾ ಪೊಲೀಸ್ ಕಮಿಷನರ್
ಹುಬ್ಬಳ್ಳಿ: ಯುವಕನೋರ್ವನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು. ನಗರದಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಇಬ್ರಾಹಿಂ ಎಂಬಾತನಿಗೆ ತಮ್ಮ ಗುಂಪಿಗೆ ಸೇರಿಕೊಳ್ಳಲು ಹೇಳಿದ್ದು, ಅದನ್ನು ನಿರಾಕರಿಸಿದ ಕಾರಣಕ್ಕಾಗಿ ಏ. 9ರಂದು ರಂದು ರಾತ್ರಿ 9:30 ಗಂಟೆಗೆ ಹುಬ್ಬಳ್ಳಿಯ ಬಾಕಳೆಗಲ್ಲಿ ಹತ್ತಿರ ಆರೋಪಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿದ್ದರು ಎಂದಿದ್ದಾರೆ. ಈ ಕುರಿತು ಹುಬ್ಬಳ್ಳಿ …
Read More »ಕೊಲೆಗಾರನ ಕಾಲಿಗೆ ಪೊಲೀಸ್ ಗುಂಡೇಟು
ವಿಜಯನಗರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪಿ, ಸ್ಥಳ ಪಂಚನಾಮೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಆತನ ಬಲಗಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿಬಾಬು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೊನ್ನೂರ ಅಲಿಯಾಸ್ ಹೊನ್ನೂರ ಸ್ವಾಮಿ (28) ಎನ್ನುವವನನ್ನು ಕೊಲೆ ಮಾಡಿರುವ ಘಟನೆ ಹೊಸಪೇಟೆ ನಗರದ ಜಂಬುನಾಥ ರಸ್ತೆಯ ಅಂಬೇಡ್ಕರ್ ನಗರದ …
Read More »ಪ್ರೀತಿಸುತ್ತಿದ್ದ ಬಾಲಕಿಗೆ ಸಾರಾಯಿ ಕುಡಿಸಿ ಅತ್ಯಾಚಾರ
ಬೆಳಗಾವಿ: ಪ್ರೀತಿಸುತ್ತಿದ್ದ ಬಾಲಕಿಗೆ ತಾನೇ ಸಾರಾಯಿ ಕುಡಿಸಿ ಆಕೆಯ ಮೇಲೆ ಯುವಕಯೋರ್ವ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಬೇಕಿದೆ ಎಂದು ತಿಳಿಸಿದ್ದಾರೆ. ಆ ಪ್ರಮುಖ ಆರೋಪಿ ಅಪ್ರಾಪ್ತೆ ವಯಸ್ಸಿನ ಬಾಲಕಿಯನ್ನು ಪ್ರೀತಿಸುತ್ತಿದ್ದ. ಅಲ್ಲದೆ ಪದೇ …
Read More »ಭಗವಾನ್ ಮಹಾವೀರರು ಜಗತ್ತಿಗೆ ಶಾಂತಿ, ಅಹಿಂಸೆ, ಕರುಣೆಯನ್ನು ಸಾರಿದ್ದಾರೆ: ರಾಜ್ಯಪಾಲ ಗೆಹ್ಲೋಟ್
ಹಾಸನ: ಮಾನವ ಕುಲದ ಲೋಕ ಕಲ್ಯಾಣಕ್ಕಾಗಿ ಮಹಾಪುರುಷರಾದ ಭಗವಾನ್ ಮಹಾವೀರರು ಇಡೀ ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಕರುಣೆಯನ್ನು ಸಾರಿದ್ದಾರೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಶ್ರವಣಬೆಳಗೊಳ ಕ್ಷೇತ್ರದ ಚಾವುಂಡರಾಯ ಸಭಾಮಂಟಪದಲ್ಲಿ ಗುರುವಾರ ಶ್ರೀ ಜೈನ ಮಠದ ಆಡಳಿತ ಮಂಡಳಿ ಆಯೋಜಿಸಿದ್ದ ಭಗವಾನ್ ಮಹಾವೀರಸ್ವಾಮಿಯ 2624ನೇ ಜನ್ಮ ಕಲ್ಯಾಣ ಮಹೋತ್ಸವವನ್ನು ತೀರ್ಥಂಕರರಿಗೆ ಅರ್ಘ್ಯ, ಪುಷ್ಪಾರ್ಚನೆ ಸಮರ್ಪಣೆಯೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಭಗವಾನ್ ಮಹಾವೀರರು, ಭಗವಾನ್ ಬಾಹುಬಲಿ ರಾಜಕುಮಾರರಾಗಿ …
Read More »ಪುತ್ರಿಯೊಂದಿಗೆ ತಾಯಿಯೂ ಪಿಯುಸಿ ಪಾಸ್!
ಬಂಟ್ವಾಳ: ಪುತ್ರಿಯೊಂದಿಗೆ ತಾಯಿಯೂ ಪಾಸ್ ಆದ ವಿಶೇಷವೊಂದು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ಎಂಬಲ್ಲಿ ನಡೆದಿದೆ. ಪುತ್ರಿ ತ್ರಿಶಾರೊಂದಿಗೆ ಪಿಯುಸಿ ಉತ್ತೀರ್ಣರಾದ ತಾಯಿಯ ಹೆಸರು ರವಿಕಲಾ. ತ್ರಿಶಾ ಪುತ್ತೂರು ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, 584 ಅಂಕಗಳನ್ನು ಪಡೆದು ವಿಶೇಷ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ರವಿಕಲಾ ಅವರು ಆರ್ಟ್ಸ್ ತೆಗೆದುಕೊಂಡು ಖಾಸಗಿಯಾಗಿ ಪರೀಕ್ಷೆ ಬರೆದು 275 ಅಂಕಗಳನ್ನು ಪಡೆದು ಪಾಸ್ ಆಗಿದ್ದಾರೆ. ರವಿಕಲಾ ಖಾಸಗಿಯಾಗಿ ಪರೀಕ್ಷೆ ಬರೆದಿರುವುದರಿಂದ ಸಾಮಾನ್ಯ …
Read More »ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸನ್ಮಾನ*
ಬೆಳಗಾವಿ: ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಜಿಪಂ ಹಾಗೂ ಡಿಡಿಪಿಯು ಇಲಾಖೆ ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲೆಗೆ ರ್ಯಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಯಿತು. ಬೆಳಗಾವಿ ಶೈ ಜಿಲ್ಲೆಯ ವಾಣಿಜ್ಯ ವಿಭಾಗ ದಲ್ಲಿ 597 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ತನವಿ ಹೇಮಂತ ಪಾಟೀಲ ಪಡೆದಿದ್ದಾರೆ. ಕಾಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಮಹಾಲಕ್ಷ್ಮೀ ಮಂಜುನಾಥ ಕುಸುಗುರ 580 ಅಂಕ, …
Read More »ಸರ್ವೇ, ನಕ್ಷೆ ಕೆಲಸವನ್ನು ರೋವರ್ 10 ನಿಮಿಷದಲ್ಲೇ ಮುಗಿಸಲಿದೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ. ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ”ಸರ್ವೇ ಇಲಾಖೆ ಇಡೀ ಸರ್ಕಾರಕ್ಕೆ ಮೂಲ ಇಲಾಖೆ. ಯಾವುದೇ ಭೂಮಿಗೆ ದಾಖಲೆಗಳ …
Read More »ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್ಐ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಹುಬ್ಬಳ್ಳಿ : ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್ಐ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ನಗರದ ನೇಕಾರನಗರದ ನಿವಾಸಿ ಆದರ್ಶ ಗೊಂದಕರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಜ್ವರದ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಕೆಎಂಸಿಆರ್ಐಗೆ ದಾಖಲಾಗಿ ಯುವಕ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಏಕಾಏಕಿ ಬೆಳಗಿನ ಜಾವ ಕೆಎಂಸಿಆರ್ಐ ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿ ಮೂಲಕ ಜಿಗಿದಿದ್ದಾನೆ. ಕೂಡಲೇ ತುರ್ತು …
Read More »