ಚಿಕ್ಕೋಡಿ: ರಾಮನವಮಿ ಹಾಗೂ ಹನುಮಾನ ಜಯಂತಿಯ ಅಂಗವಾಗಿ ವಿಶ್ವ ಹಿಂದೂ ಪರಿಷದ ಹಾಗೂ ಬಜರಂಗದಳದ ವತಿಯಿಂದ ಸದಲಗಾ ಪಟ್ಟಣದಲ್ಲಿ ಪ್ರಭು ಶ್ರೀರಾಮ ಹಾಗೂ ಹನುಮಾನ ದೇವರ ಪುತ್ಥಳಿಯ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ, ಶ್ರದ್ಧಾನಂದ ಸ್ವಾಮೀಜಿ ಅವರು ಶ್ರೀರಾಮ ಹಾಗೂ ಹನುಮಾನ ಪುತ್ಥಳಿಗೆ ಪೂಜೆ ಸಲ್ಲಿಸಿ ಹಾಗೂ ಮೆರವಣಿಗೆಗೆ ಚಾಲನೆ ನೀಡಿದರು. ಅದೇ …
Read More »Yearly Archives: 2025
ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ; ಜಂಟಿ ವಿಚಾರ ಸಂಕಿರಣ ಎಥನಾಲ್ ಉತ್ಪಾದನೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ
ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ; ಜಂಟಿ ವಿಚಾರ ಸಂಕಿರಣ ಎಥನಾಲ್ ಉತ್ಪಾದನೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ ಬೆಳಗಾವಿ: ಎಥನಾಲ್ ಪರಿಸರ ಸ್ನೇಹಿ ಇಂಧನವಾಗಿದ್ದು, ಕಾರ್ಬನ್ ಡೈಆಕ್ಸೈಡ್ ಉತ್ಪತ್ತಿ ಕಡಿಮೆಯಾಗುವ ಕಾರಣ ರಾಜ್ಯ ಸರ್ಕಾರವು ಹಸಿರು ಇಂಧನವನ್ನು ಉತ್ತೇಜಿಸಲು ಯೋಜನೆಗಳನ್ನು ರೂಪಿಸುತ್ತಿದೆ. ಕೇಂದ್ರ ಸರ್ಕಾರ ಹಸಿರು ಇಂಧನ ಬಳಕೆಯನ್ನು ಕಡ್ಡಾಯಗೊಳಿಸುವ ಗುರಿ ಹೊಂದಿದ್ದು, ರಾಜ್ಯದಲ್ಲಿ ಸಹ ಹಂತ ಹಂತವಾಗಿ ಉತ್ಪಾದನೆ ಪ್ರಾರಂಭವಾಗಿದೆ ಎಂದು ಕೃಷಿ ಮಾರುಕಟ್ಟೆ ಮತ್ತು ಎಸ್ .ನಿಜಲಿಂಗಪ್ಪ …
Read More »ಕುಮಾರಸ್ವಾಮಿಗೆ ಹೆದರುವ ಮಗನಲ್ಲ ಎಂದ:ಡಿ ಕೆ ಶಿ
ಬೆಂಗಳೂರು: ನಾನು ಹೆಚ್ ಡಿ ಕುಮಾರಸ್ವಾಮಿಗೆ ಹೆದರುವ ಮಗನಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಲ್ಲದೆ, ಅವರ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಇನ್ನು ಸುಮ್ಮನಿರಲ್ಲ, ಸರ್ಕಾರದ ಮೇಲೆ ಸಮರಸಾರಿದ್ದೇನೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ‘ನೋಡಪ್ಪ, ಕುಮಾರಸ್ವಾಮಿಗೆ ನಾನು ಹೇಳುತ್ತೇನೆ. ಎಷ್ಟು ವ್ಯವಹಾರ ಇದೆ. ಅದನ್ನು ಬಿಡುಗಡೆ ಮಾಡಲಿ. ನನಗೂ …
Read More »ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಹೆಬ್ಬಾಳ್ಕರ್
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ. ಮೋಸ ಹೋಗಬೇಡಿ ಎಂದು ಪ್ರಕಟಣೆ: ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ …
Read More »197 ಡ್ರಗ್ಸ್ ಬಳಕೆದಾರರ ವಿರುದ್ಧ 46 ಪ್ರಕರಣ ದಾಖಲ
ಹುಬ್ಬಳ್ಳಿ: ಈ ವರ್ಷ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಮಾದಕ ವಸ್ತು ಮಾರಾಟ ಪ್ರಕರಣಗಳನ್ನು ಪರಿಶೀಲಿಶಿ ಯಾರಿಗೆ ಮಾರಾಟ ಮಾಡಿದ್ದಾರೆಂಬ ಮಾಹಿತಿ ಕಲೆಹಾಕಿ 505 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ 197 ಮಂದಿ ಡ್ರಗ್ಸ್ ಸೇವಿಸುತ್ತಿರುವುದು ಪತ್ತೆಯಾಗಿದೆ. ಇವರ ವಿರುದ್ಧ 46 ಪ್ರಕರಣ ದಾಖಲಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ. ಮಾದಕ ವ್ಯಸನಿಗಳಿಗೆ ಶಿಬಿರ: ಇಲ್ಲಿನ ಆರ್.ಎನ್. ಶೆಟ್ಟಿ …
Read More »ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆಯ ಯೋಜನೆಗಳ ಅನುಕೂಲಗಳೇನು?
ಬೆಂಗಳೂರು : ರೈತರು ಕೃಷಿ ವ್ಯವಸಾಯದೊಂದಿಗೆ ಹೈನುಗಾರಿಕೆ ಮತ್ತು ಪಶುಸಂಗೋಪನೆ ಸಹ ಮಾಡುತ್ತಿದ್ದು, ಸರ್ಕಾರ ಹೈನುಗಾರಿಕೆ ಹಾಗೂ ಪಶುಸಂಗೋಪನೆ ಮೂಲಕ ಆರ್ಥಿಕ ಬಲವರ್ಧನೆ ಮಾಡಿಕೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಕೆಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಮುಖ್ಯವಾಗಿ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುತ್ತಿದ್ದು, ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಸರಬರಾಜು ಮಾಡುವ ಸದಸ್ಯರಿಗೆ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ. 5 ರೂ. ರಂತೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. …
Read More »ಪಕ್ಷಿಗಳಿಗೆ ನೀರು, ಆಹಾರ ನೀಡುತ್ತಿರುವ ಪಕ್ಷಿಪ್ರೇಮಿಗಳು
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ ಈ ಭಾರಿ ತಾಪಮಾನ 40 ಡಿಗ್ರಿ ತಲುಪಿದೆ. ಜನರಷ್ಟೆ ಅಲ್ಲದೆ, ಪಕ್ಷಿಗಳೂ ಸಹ ಬಿಸಿಲಿನ ಧಗೆ ತಾಳಲಾಗದೆ ಪರದಾಡುತ್ತಿವೆ. ಇದನ್ನು ಮನಗಂಡ ಶಿವಮೊಗ್ಗದ ಪಕ್ಷಿ ಪ್ರೇಮಿಗಳು ಪಕ್ಷಿಗಳಿಗೆ ನೀರು ಹಾಗೂ ಆಹಾರ (ಕಾಳು) ಇಡುವ ಮೂಲಕ ತಮ್ಮ ಪರಿಸರಪ್ರೇಮ ಮೆರೆದಿದ್ದಾರೆ. ಶಿವಮೊಗ್ಗದ ಡಿ.ಕೆ. ಶಿವಕುಮಾರ್ ಬ್ರಿಗೇಡ್ ವಿವಿಧ ಸಂಘಟನೆಗಳ ಜೊತೆ ಸೇರಿ ಪಕ್ಷಿಗಳಿಗೆ ನೀರು ಆಹಾರ ಇಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ನೀರಿನ ಮೂಲಗಳು ಬತ್ತುತ್ತವೆ. …
Read More »ರೈತರೇ ಈ ದೇಶದ ಬೆನ್ನೆಲುಬು
ರೈತರೇ ಈ ದೇಶದ ಬೆನ್ನೆಲುಬು” ನಿಪ್ಪಾಣಿ ನಗರದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ “ಕೃಷಿ ಉತ್ಸವ” STALL ಮಳಿಗೆಗಳನ್ನು ಕನ್ನೇರಿಯ ಪ.ಪೂಜ್ಯ.ಜಗದ್ಗುರು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಉದ್ಘಾಟಿಸಿ,ಮಳಿಗೆಗಳನ್ನು ವಿಕ್ಷಿಸಲಾಯಿತು. ಕೃಷಿ ಮೇಳದಲ್ಲಿ ವಿವಿಧ ತಳಿಯ ವಿಶೇಷ ಜಾನುವಾರು ಪ್ರದರ್ಶನ,ಕೃಷಿ ವಿಚಾರಗಳಿಗೆ ಸಂಬಂಧಪಟ್ಟ ವಿವಿಧ ತಂತ್ರಜ್ಞಾನ ಪ್ರದರ್ಶನ,ಅಟೋಮೊಬೈಲ್ ಮಳಿಗೆ,ಗ್ರಹಪಯೋಗಿ ವಸ್ತುಗಳ ಮಳಿಗೆ,ಆಹಾರ ಮಳಿಗೆಗಳು,ವಿವಿಧ ಬಗೆಯ ಹಲವಾರು ಸ್ಟಾಲ್ ಗಳು ರೈತರ ಮಾಹಿತಿಗಾಗಿ ತೆರದಿರುತ್ತವೆ. ಏಪ್ರಿಲ್ 08 ರವೆಗೆ ನಡೆಯಲಿರುವ ಕೃಷಿ …
Read More »ಹೈಕೋರ್ಟ್ ನ್ಯಾಯಮೂರ್ತಿಗಳು ಆಸ್ತಿ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘ ಆಗ್ರಹ
ಬೆಂಗಳೂರು : ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿರುವಂತೆ, ಹೈಕೋರ್ಟ್ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರ ಘೋಷಣೆ ಮಾಡುವಂತೆ ಬೆಂಗಳೂರು ವಕೀಲರ ಸಂಘ ಆಗ್ರಹಿಸಿದೆ. ಈ ಕುರಿತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮತ್ತಿತರರ ಪದಾಧಿಕಾರಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಅಲ್ಲದೆ, ಕೂಡಲೇ ಎಲ್ಲಾ ನ್ಯಾಯಮೂರ್ತಿಗಳ ಪೂರ್ಣಪೀಠದ ಸಭೆ ಕರೆದು, ಸಾರ್ವಜನಿಕವಾಗಿ ಆಸ್ತಿ ವಿವರಗಳನ್ನು ಘೊಷಣೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ತೆಗ್ಗಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »