ಬೆಳಗಾವಿ : ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಸಾಲ ತುಂಬದ ಹಿನ್ನೆಲೆ ಮನೆಗೆ ಬೀಗ ಜಡಿದು ಬಾಣಂತಿ, ಹಸುಗೂಸು ಮತ್ತು ಮನೆಯವರನ್ನೆಲ್ಲ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೊರ ಹಾಕಿದ ವಿಚಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಆ ಕುಟುಂಬಕ್ಕೆ ವಾಪಸ್ ಮನೆಯನ್ನು ಹಸ್ತಾಂತರಿಸಲಾಗಿದೆ. ತಾರಿಹಾಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿತ್ತು. ಗಣಪತಿ ರಾಮಚಂದ್ರ ಲೋಹಾರ್ ಅವರ ಮನೆ ಜಪ್ತಿ ಪಡಿಸಿಕೊಂಡಿದ್ದ ಫೈನಾನ್ಸ್ …
Read More »Yearly Archives: 2025
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದೇ ದಾವಣಗೆರೆಯಲ್ಲಿ 14 ಹೆಣ್ಣು ಮಗು ಜನನ
ದಾವಣಗೆರೆ: ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ. ಭಾರತದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಶಿಕ್ಷಣ, ಪೋಷಣೆ, ಬಾಲ್ಯವಿವಾಹ, ಕಾನೂನು ಹಕ್ಕುಗಳು ಮತ್ತು ವೈದ್ಯಕೀಯ ಆರೈಕೆ, ರಕ್ಷಣೆ, ಗೌರವದಂತಹ ಸಮಸ್ಯೆಗಳ ಜಾಗೃತಿಯನ್ನು ಉತ್ತೇಜಿಸುವುದೇ ಹೆಣ್ಣು ಮಕ್ಕಳ ದಿನದ ಉದ್ದೇಶ. ಇಂತಹ ಸಂಭ್ರಮದ ದಿನದಂದೇ ದಾವಣಗೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 14 ಹೆಣ್ಣುಮಕ್ಕಳ ಜನನವಾಗಿದ್ದು, ಆಸ್ಪತ್ರೆಗಳಲ್ಲಿ ಸಂಭ್ರಮ ಮನೆ ಮಾಡಿದೆ. ಜ. 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಈ ಶುಭ …
Read More »ಯಮಕನಮರಡಿ ಗ್ರಾಮದ ನರೇಗಾ ಕಾರ್ಮಿಕರನ್ನು ಆರೋಗ್ಯ ವಿಚಾರಿಸಿ ಬಿಮ್ಸ್ ಆಸ್ಪತ್ರೆಯಲ್ಲಿ ಭೇಟಿ
ವಾಹನ ಅಪಘಾತದಲ್ಲಿ ಗಾಯಗೊಂಡ ಯಮಕನಮರಡಿ ಗ್ರಾಮದ ನರೇಗಾ ಕಾರ್ಮಿಕರನ್ನು ಇಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿ ಈ ದುರಂತದಿಂದಾಗಿ ಕುಟುಂಬದವರು ಭಯಭೀತರಾಗಿದ್ದು, ಅವರಿಗೆ ಧೈರ್ಯ ಹೇಳಿ, ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆಯನ್ನು ನೀಡಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಕಾರ್ಮಿಕರು ಶೀಘ್ರವೇ ಆರೋಗ್ಯದಲ್ಲಿ ಚೇತರಿಸಿಕೊಳ್ಳಲು ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. …
Read More »ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ
ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಆರೋಪಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ ಅವರು, ಸುಮಾರು ಕಡೆ ಕಿರುಕುಳ ಕೊಡುವ ವರದಿಗಳು ಬರುತ್ತಿವೆ. ತೊಂದರೆ ಕೊಟ್ಟರೆ ದೂರು ದಾಖಲು ಮಾಡುವಂತೆ ತಿಳಿಸಿದ್ದೇವೆ. ಫೈನಾನ್ಸ್ ಕಿರುಕುಳದ ಬಗ್ಗೆ ಗೊಂದಲ ಇದೆ. ಸಾಲ ಪಡೆಯೋದು, ಕಿರುಕುಳ ಕೋಡೊದು ಬೇರೆ ವಿಚಾರ. ಆದರೆ, ಸಬ್ಸಿಡಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸಾಲ ಕೊಟ್ಟಿದ್ದಾರೆ. ಹಣ ತುಂಬುವ ವಿಚಾರದಲ್ಲಿ ಈಗ ಸಂಘರ್ಷ ಆರಂಭವಾಗಿದೆ. ಈಗಾಗಲೇ ಡಿಸಿ ನೇತೃತ್ವದಲ್ಲಿ ಒಂದು …
Read More »ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ:ಸತೀಶ ಜಾರಕಿಹೊಳಿ
ಬೆಳಗಾವಿ: ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ. ಪೂರ್ಣ ಪ್ರಮಾಣದಲ್ಲಿ ಏನು ಬೆಳವಣಿಗೆ ಆಗಿದೆ ಗೊತ್ತಿಲ್ಲ. ಟಿವಿಯಲ್ಲಿ ನೋಡಿದ್ದೇನಷ್ಟೇ. ಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.
Read More »ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ:
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ಕಾರ್ಯಕ್ರಮ ರೂಪಿಸಿದೆ. ಹೆಣ್ಣುಮಕ್ಕಳ ಲಿಂಗಾನುಪಾತ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ರಾಜ್ಯದ ಎಲ್ಲ ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆಸ್ಪತ್ರೆಗಳನ್ನು ಪಿಂಕ್ ಲೈಟಿಂಗ್ನಿಂದ ಸಿಂಗರಿಸಲು ತಿಳಿಸಲಾಗಿದೆ. ಅಲ್ಲದೇ ಇಂದು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ …
Read More »ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿರುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ, ಕುಟುಂಬವೊಂದರ ಮನೆ ಜಪ್ತಿ ಮಾಡಿದೆ.
ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳು ಮುಂದುವರೆದಿದ್ದು, ಬೆಳಗಾವಿಗೂ ತಟ್ಟಿದೆ. ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿದ್ದಲ್ಲದೇ, ವಾಸಿಸುವ ಮನೆ ಗೋಡೆ ಮೇಲೆ ಹರಾಜಿದೆ ಎಂದು ಬರೆದಿರುವುದಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬ ಅಳಲು ತೋಡಿಕೊಂಡಿದೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಗಣಪತಿ ರಾಮಚಂದ್ರ ಲೋಹಾರ್ ಎಂಬುವರ ಮನೆ ಜಪ್ತಿ ಪಡಿಸಿಕೊಳ್ಳಲಾಗಿದೆ. ಬಾಣಂತಿ, ಹಸುಗೂಸು ಅಂತಾನೂ …
Read More »ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಲು ಸಾಲದ ಮೊರೆ: ಕೊನೆ ತ್ರೈಮಾಸಿಕದಲ್ಲಿ ₹48,000 ಕೋಟಿ ಸಾಲ ಎತ್ತುವಳಿಗೆ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರ ತೆರಿಗೆ ಆದಾಯವನ್ನು ಪಂಚಗ್ಯಾರಂಟಿ, ಬದ್ಧ ವೆಚ್ಚಕ್ಕಾಗಿ ಬಳಕೆ ಮಾಡುತ್ತಿದೆ. ಇತ್ತ ಅಭಿವೃದ್ಧಿಗಾಗಿನ ಬಂಡವಾಳ ವೆಚ್ಚಕ್ಕಾಗಿ ಸಂಪೂರ್ಣ ಸಾಲವನ್ನೆ ನೆಚ್ಚಿಕೊಂಡಿದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗಾಗಿ 48,000 ಕೋಟಿ ಸಾಲ ಮಾಡಲು ಯೋಜಿಸಿದೆ. ಆರ್ಥಿಕ ವರ್ಷದ ಮುಕ್ಕಾಲು ಭಾಗ ಪೂರ್ಣವಾಗಿದೆ. ಕೊನೆಯ ತ್ರೈಮಾಸಿಕ ಚಾಲ್ತಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ ನಡೆಸುತ್ತಿದೆ. ತನ್ನ ಸ್ವಂತ ತೆರಿಗೆ ಆದಾಯದ ಬಹುಪಾಲನ್ನು ಪಂಚ …
Read More »ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ; ಮೂವರ ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ …
Read More »108 ತರಕಾರಿಗಳಿಂದ ಅಲಂಕಾರಗೊಂಡ ಬನಶಂಕರಿ ತಾಯಿ: ಪಲ್ಲೇದ ಹಬ್ಬ ಕಣ್ತುಂಬಿಕೊಂಡ ಭಕ್ತರು
ಹಾವೇರಿ: ಶಿವಲಿಂಗ ನಗರದಲ್ಲಿರುವ ಬನಶಂಕರಿಯ ಜಾತ್ರಾ ಮಹೋತ್ಸವದ ವಿಶೇಷ ಪಲ್ಲೇದ ಹಬ್ಬವನ್ನು ಗುರುವಾರ ಆಚರಿಸಲಾಯಿತು. ಸುಮಾರು 108 ತರಕಾರಿಗಳಿಂದ ಬನಶಂಕರಿ ದೇವಿಯನ್ನು ಅಲಂಕರಿಸುವುದು ಈ ಪಲ್ಲೇದ ಹಬ್ಬದ ವಿಶೇಷ. ನೂರಾರು ವರ್ಷಗಳ ಹಿಂದೆ ಭೂಮಿಯಲ್ಲಿ ಬರಗಾಲ ತಾಂಡವಾಡುತ್ತಿತ್ತು. ಜನ ಜಾನುವಾರುಗಳು ನೀರಿಲ್ಲದೆ ಪರದಾಡುತ್ತಿದ್ದ ವೇಳೆ ಋಷಿಮುನಿಗಳು ದೇವಿಯ ಮೊರೆ ಹೋಗುತ್ತಾರೆ. ದೇವಿ ಬನಶಂಕರಿ ತನ್ನ ದೇಹದ ಉಷ್ಣಾಂಶ ಹೆಚ್ಚಿಸಿಕೊಂಡು ಶಾಕಾಂಬರಿಯಾಗುತ್ತಾಳೆ. ಅಲ್ಲದೆ ಬರದಿಂದ ತತ್ತರಿಸಿದ ಭೂಮಿಗೆ ಮಳೆ ತರುತ್ತಾಳೆ. ಈ ರೀತಿ …
Read More »