ಮೈಸೂರು ; ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದು ಉದಾರಿಯಾಗಿದ್ದಾರೆ. ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಕಣ್ಣು, ಹೃದಯ, ಕಿಡ್ನಿ ದಾನ ಮಾಡುವ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ. ಮೈಸೂರಿನ ರಿಂಗ್ ರಸ್ತೆಯಲ್ಲಿ ಐದು ದಿನಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಶ್, ಖಾಸಗಿ …
Read More »Yearly Archives: 2025
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ; ಸಿಎಂ ಭರವಸೆ
ಬೆಂಗಳೂರು : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ …
Read More »ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ.
ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
Read More »ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ
ಬೆಂಗಳೂರು: ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು. ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು. ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ …
Read More »ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥ ಗೌಡ
ಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ …
Read More »ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ …
Read More »ನೇತಾಜಿ ಸುಭಾಷ್ ಚಂದ್ರ ಬೋಸ್ : ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ …
Read More »ಈ ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್
ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ …
Read More »ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕ ಕ್ರಮಗಳಾಗಲಿ: ಸಚಿವ ಪ್ರಿಯಾಂಕ್ ಖರ್ಗೆ
ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಸಲಹೆ ನೀಡಿದರು. ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಪ್ರೊ.ಗೋವಿಂದರಾವ್ ಹಾಗೂ ಆಯೋಗದ ಸದಸ್ಯರು ಇಂದು ಸಚಿವ ಪ್ರಿಯಾಂಕ್ …
Read More »ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ; ಬೇಸಿಗೆಯಲ್ಲಿ ಲೋಡ ಶೆಡ್ಡಿಂಗ್ ಇಲ್ಲ: ಸಚಿವ ಜಾರ್ಜ್
ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ …
Read More »