Breaking News

Yearly Archives: 2025

ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು –

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ ಕಪ್​ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ಸಂಬಂಧ ಕೊಹ್ಲಿ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ, ನೈಜ ಹೋರಾಟಗಾರರ ವೇದಿಕೆ ಪದಾಧಿಕಾರಿಗಳು ಕಬ್ಬನ್‌ ಪಾರ್ಕ್ ಪೊಲೀಸ್​ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸರು ದೂರಿನ ಪ್ರತಿ ಪಡೆದು, ಹಿಂಬರಹ ನೀಡಿದ್ದಾರೆ. ಕಾಲ್ತುಳಿತದ …

Read More »

ಕೋವಿಡ್ ಅಕ್ರಮ: ವಿಚಾರಣಾ ಆಯೋಗದ ಅವಧಿ ಒಂದು ತಿಂಗಳು ವಿಸ್ತರಣೆ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನರು ಮೃತಪಟ್ಟ ಘಟನೆ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ವರದಿಯನ್ನು ಆಗಸ್ಟ್ 1ರಿಂದ ಆಗಸ್ಟ್ 31ಕ್ಕೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ ಸರ್ಕಾರದಿಂದ ಈ ಆದೇಶ ಹೊರಡಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ …

Read More »

ಲೇಔಟ್​ಗೆ ಭೂಮಿ ಗುರುತು ಮಾಡಿದ DHUDA: ದಾವಣಗೆರೆ ಜನರಿಗೆ ನಿವೇಶನದ ಚಿಂತೆ ದೂರ: ಸಚಿವರಿಂದ ಮಾಹಿತಿ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ದೂಡಾ) ನೂತನ ಬಡಾವಣೆ ನಿರ್ಮಿಸಲು ಕೊನೆಗೂ ಜಮೀನು ಸಿಕ್ಕಂತೆ ಆಗಿದೆ. ಪ್ರಾಧಿಕಾರದ ಅಧಿಕಾರಿಗಳಿಗೆ ಲೇಔಟ್​​​​ ಮಾಡಲು ಜಮೀನಿನ ಚಿಂತೆ ದೂರ ಆಗಿದೆ. ಈಗಾಗಲೇ ಎರಡು ಕಡೆ ಭೂಮಿ ಆಯ್ಕೆ ಮಾಡಲಾಗಿದೆ ಎಂದು ಸ್ವತಃ ಸಚಿವರಾದ ಎಸ್​. ಎಸ್.​ ಮಲ್ಲಿಕಾರ್ಜುನ್​ ಅವರು ಸಭೆ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮಧ್ಯಮ ವರ್ಗದವರಿಗೆ ಅಪಾರ್ಟ್​ಮೆಂಟ್ ಮಾಡಿ ಕೊಡಲಾಗುವುದು ಎಂದು ಸುಳಿವು ನೀಡಿದ್ದಾರೆ. ಅರ್ಜಿ ಹಾಕಿ ಹಲವು ದಿನಗಳೇ ಉರುಳಿದರೂ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   …

Read More »

ಪೊಲೀಸರ ದಿಢೀರ್ ದಾಳಿ: KSCA ಕಾರ್ಯದರ್ಶಿ, DNA ಮುಖ್ಯಸ್ಥ ನಾಪತ್ತೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆರ್ ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಹಾಗೂ ಇವೆಂಟ್ ಆಯೋಜಿಸಿದ್ದ ಡಿಎನ್ ಎ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆ ಎಸ್ ಸಿಎ ಕಾರ್ಯದರ್ಶಿ ಶಂಕರ್, ಖಜಾಂಚಿ ಜಯರಾಮ್, ಡಿಎನ್ ಎ ಮುಖ್ಯಸ್ಥ ವೆಂಕಟ್ …

Read More »

ಪತ್ನಿಯನ್ನು ಹತ್ಯೆಗೈದು ಆಕೆಯ ರುಂಡವನ್ನು ಕತ್ತರಿಸಿ ರುಂಡದ ಸಮೇತ ಪತಿ ಮಹಾಶಯ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.

ಪತ್ನಿಯನ್ನು ಹತ್ಯೆಗೈದು ಆಕೆಯ ರುಂಡವನ್ನು ಕತ್ತರಿಸಿ ರುಂಡದ ಸಮೇತ ಪತಿ ಮಹಾಶಯ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಕಾಚನಾಯಕನಹಳ್ಳಿ ನಿವಾಸಿ ಶಂಕರ್(28) ಪತ್ನಿಯನ್ನೇ ಕೊಂದ ಆರೋಪಿ. ಮಾನಸಾ ಪತಿಯಿಂದಲೇ ಹತ್ಯೆಯಾದ ಪತ್ನಿ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆಕೆಯನ್ನು ಹತ್ಯೆಗೈದ ಶಂಕರ್, ಬಳಿಕ ರುಂಡ ಹಿಡಿದು ಬೈಕ್ ನಲ್ಲಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯನ್ನು …

Read More »

ಅಂತರರಾಜ್ಯ ಕಳ್ಳನ ಬಂಧನ : 14.71 ಲಕ್ಷ ಮೌಲ್ಯದ ಮೊಬೈಲ್, ಕಾರು ವಶಕ್ಕೆ

ಅಂತರರಾಜ್ಯ ಕಳ್ಳನ ಬಂಧನ : 14.71 ಲಕ್ಷ ಮೌಲ್ಯದ ಮೊಬೈಲ್, ಕಾರು ವಶಕ್ಕೆ ಸಂಕೇಶ್ವರ : ಅಂತರರಾಜ್ಯ ಕಳ್ಳನೋರ್ವನನ್ನು ಬಂಧಿಸಿರುವ ಸಂಕೇಶ್ವರ ಪೊಲೀಸರು ಬಂಧಿತನಿಂದ 14.71 ಲಕ್ಷ ಮೌಲ್ಯದ 101 ವಿವಿಧ ಕಂಪನಿಯ ಮೊಬೈಲ್ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಖದೀಮನನ್ನು ತೆಲಂಗಾಣ ರಾಜ್ಯದ ನಿಜಾಮಾಬಾದ ಜಿಲ್ಲೆಯ ಬಾಣಸವಾಡದ ನವೀನ ಸಂಪತ ಎಂಬುವ ಈ ಮೊಬೈಲ್ ಕಳ್ಳತನ ಪ್ರಕರಣ ದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ. ಸಂಕೇಶ್ವರ ಪೋಲಿಸರು …

Read More »

ಮೊರಾರ್ಜಿ ಶಾಲೆಗೆ ಎಂಟನೇ ತರಗತಿಗೆ ಅಡ್ಮಿಷನ್ ಆಗಲು ಫಿಟ್ನೆಸ್ ಸರ್ಟಿಫಿಕೇಟ್ಗಾಗಿ ಬೆಳಿಗ್ಗೆಯಿಂದ ಮಧ್ಯಾಹ್ನ 1. 45ರ ತನಕ ತಾಯಿ ಮಗ ಇಬ್ಬರೂ ಆಸ್ಪತ್ರೆಯ ಮುಂಭಾಗ ಕಾಯುತ್ತಲೇ ಇದ್ದಾರೆ.

ಮೊರಾರ್ಜಿ ಶಾಲೆಗೆ ಎಂಟನೇ ತರಗತಿಗೆ ಅಡ್ಮಿಷನ್ ಆಗಲು ಫಿಟ್ನೆಸ್ ಸರ್ಟಿಫಿಕೇಟ್ಗಾಗಿ ಬೆಳಿಗ್ಗೆಯಿಂದ ಮಧ್ಯಾಹ್ನ 1. 45ರ ತನಕ ತಾಯಿ ಮಗ ಇಬ್ಬರೂ ಆಸ್ಪತ್ರೆಯ ಮುಂಭಾಗ ಕಾಯುತ್ತಲೇ ಇದ್ದಾರೆ. ಕೇವಲ ಒಂದು ಸಹಿ ಅಷ್ಟೇ ಬಾಕಿ.ಇಂತಹ ವ್ಯವಸ್ಥೆಯನ್ನು ನೋಡಿದ ಮಕ್ಕಳು ಹೇಗೆ ಈ ಸಮಾಜದ ಬಗ್ಗೆ, ಅಧಿಕಾರಿಗಳ ಬಗ್ಗೆ ಒಳ್ಳೇ ಅಭಿಪ್ರಾಯ ಹೊಂದೋಕೆ ಸಾಧ್ಯ. ಕೊನೆ ಪಕ್ಷ ಆ ಕೇಸ್ ವರ್ಕರ್ ಇವರ ಅರ್ಜಿ ತೆಗೆದುಕೊಂಡು ಹೋಗಿ ಊಟ ಮಾಡಿಕೊಂಡು ಬನ್ನಿ …

Read More »

ದಯಾನಂದ್​ ಅಮಾನತು ಆದೇಶ ರದ್ದು ಪಡಿಸುವಂತೆ ಹೆಡ್ ಕಾನ್ಸ್​ಟೇಬಲ್​ ಏಕಾಂಗಿ ಪ್ರತಿಭಟನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಏಕಾಏಕಿ ಮಾಡಿರುವ ದಯಾನಂದ್ ಅವರ ಸಸ್ಪೆಂಡ್ ರದ್ದುಪಡಿಸಬೇಕೆಂದು ರಾಜಭವನ ಮುಂದೆ ಹೆಡ್​ ಕಾನ್ಸ್​ಟೇಬಲ್​ ಏಕಾಂಗಿ ಪ್ರತಿಭಟನೆ ನಡೆಸಿದರು. ತೋಳಿಗೆ ಕಪ್ಪುಪಟ್ಟಿ ಧರಿಸಿ ಅಂಬೇಡ್ಕರ್ ಫೋಟೊ ಇಟ್ಟುಕೊಂಡು ರಾಜಭವನ ಮುಂದೆ ಪ್ರತಿಭಟನೆ ನಡೆಸಿದರು. ದಯಾನಂದ್ ಅವರನ್ನು ಅಮಾನತುಗೊಳಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಪೊಲೀಸರಿಗೆ ರಕ್ಷಣೆ ನೀಡಬೇಕೆಂದು ನರಸಿಂಹರಾಜ್ ಅವರು ದೂರಿನಲ್ಲಿ …

Read More »

ಕೆಆರ್​ಎಸ್​ ಸುತ್ತ ಕಲ್ಲು ಗಣಿಗಾರಿಕೆ ವರದಿ ನೀಡಲು IISCಗೆ ಎಷ್ಟು ದಿನ ಬೇಕಾಗಲಿದೆ:HIGH COURT

ಬೆಂಗಳೂರು: ಕೃಷ್ಣ ರಾಜ ಸಾಗರ ಜಲಾಶಯ (ಕೆಆರ್​ಎಸ್​)ದ ಸುತ್ತಮುತ್ತಲಿನ 20 ಕಿಮೀ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟದಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ಎಷ್ಟು ಸಮಯಬೇಕು ಎಂಬ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್​ಸಿ)ಯಿಂದ ಮಾಹಿತಿ ಪಡೆದು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಸಿ.ಜಿ.ಕುಮಾರ್‌ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರರಾವ್‌ ಮತ್ತು ನ್ಯಾಯಮೂರ್ತಿ …

Read More »