ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಬಿಜೆಪಿ ಏಪ್ರಿಲ್ 2ರಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಬೆಲೆ ಏರಿಕೆ ಆಗುತ್ತಿದೆ. ದೇಶದಲ್ಲಿ ಅತ್ಯಂತ ದುಬಾರಿ ಜೀವನ ನಡೆಸುವ ದುಃಸ್ಥಿತಿ ನಾಡಿನ ಜನರಿಗೆ ಬಂದಿದೆ. ಉಸಿರಾಡುವ ಗಾಳಿಯೊಂದನ್ನು ಬಿಟ್ಟು ಉಳಿದೆಲ್ಲವುಗಳ ಬೆಲೆ ಏರಿಕೆ ಮಾಡಲಾಗಿದೆ. …
Read More »Yearly Archives: 2025
ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದುಗೋವಾ C.M.
ಹುಬ್ಬಳ್ಳಿ: ಮಹದಾಯಿ ಯೋಜನೆಯ ವಿಚಾರ ಈಗಾಗಲೇ ನ್ಯಾಯಾಲಯದಲ್ಲಿದೆ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ವರೂರಿನ ಜೈನ ತೀರ್ಥಂಕರ ಮಹಾಮಸ್ತಕಾಭಿಷೇಕದ ಕೊನೆಯ ದಿನದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಅವರು, ಕಳಸಾ ಬಂಡೂರಿ ಮಹದಾಯಿ ಕಾಮಗಾರಿ ವಿಳಂಬ ವಿಚಾರದ ಕುರಿತ ಪ್ರಶ್ನೆಗೆ ಈ ರೀತಿ ಉತ್ತರಿಸಿದರು. ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದೇನೆ. ಈ ಐತಿಹಾಸಿಕ ಕಾರ್ಯಕ್ರಮದ ಮೂಲಕ ಮುನಿಗಳ ಆಶೀರ್ವಾದ ಪಡೆದಿದ್ದೇನೆ ಎಂದರು.ಇದಕ್ಕೂ …
Read More »ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸ್ಪೀಕರ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಂತೆ, ಅವರಿಗೆ ಗೌರವ ಕೊಡಬೇಕು ಎಂದು ಹೇಳಿದ್ದಾರೆ.
ಹಾಸನ : ಸಭಾಧ್ಯಕ್ಷರ (ಸ್ಪೀಕರ್) ಪೀಠದ ಮೇಲೆ ಕುಳಿತುಕೊಳ್ಳುವುದು, ಮುಖದ ಮೇಲೆ ಪೇಪರ್ ಎಸೆಯುವುದು ಒಳ್ಳೆಯದಲ್ಲ. ಸಭಾಧ್ಯಕ್ಷರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಂತೆ, ಅವರಿಗೆ ಗೌರವ ಕೊಡಬೇಕು. ಈ ಪರಿಸ್ಥಿತಿ ಮುಂದುವರಿದರೆ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಹೇಳಿದರು. ಸಕಲೇಶಪುರಕ್ಕೆ ಭೇಟಿ ನೀಡಿದ್ದ ಅವರು ಇತ್ತೀಚೆಗೆ ಅನಾವರಣಗೊಂಡ ಕೆಂಪೇಗೌಡ ಪ್ರತಿಮೆ ಸ್ಥಳದಲ್ಲಿ ಕೆಲ ಸಮಯ ಕಳೆದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸದನ …
Read More »ಬೆಳಗಾವಿ ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಿಂಹಿಣಿ
ಬೆಳಗಾವಿ: ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಹೊಸದಾಗಿ ಸಿಂಹಿಣಿಯೊಂದು ಸೇರ್ಪಡೆಯಾಗಿದೆ. ಇನ್ಮುಂದೆ ಮೃಗಾಲಯಕ್ಕೆ ಬರುವ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಬಹುದು. ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ. ಫೆಬ್ರವರಿ 6ರಂದು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ಇಲ್ಲಿನ ಕೃಷ್ಣಾ ಎಂಬ …
Read More »ಅಪ್ಪ ಮೃತಪಟ್ಟರೂ ಮುಖ ನೋಡಲೂ ಸಹ ಬಾರದ ಪುತ್ರ
ಬೆಳಗಾವಿ, ಮಾರ್ಚ್ 31: ಬೆಳಗಾವಿಯಲ್ಲಿ (Belagavi) ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅಪ್ಪ ಮೃತಪಟ್ಟರೂ ಮುಖ ನೋಡಲೂ ಸಹ ಪುತ್ರ ಬಾರದ ಘಟನೆ ಬೆಳಗಾವಿಯ ಶಹಾಪುರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋವಾ ಮೂಲದ ಸತೀಶ್ವರ ಸಿನ್ಹಾ (62) ಕೆಲ ದಿನಗಳಿಂದ ಸುಟ್ಟ ಗಾಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ತಂದೆ ಸತೀಶ್ವರ ಸಿನ್ಹಾರನ್ನು ಪುತ್ರ ಉತ್ತಮ್ ಸಿನ್ಹಾ ಮಾರ್ಚ್ 22ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ …
Read More »ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ
ಬೆಂಗಳೂರು, ಮಾರ್ಚ್ 31: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ (Organ donation). ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ …
Read More »ಕುಡಿತದ ಚಟಕ್ಕೆ ದಾಸನಾಗಿ, ನಿತ್ಯ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಲೆ ಮಾಡಿರುವ ಮಗ
ಕಲಬುರಗಿ, : ಕುಡಿತದ ಚಟಕ್ಕೆ ದಾಸನಾಗಿ, ನಿತ್ಯ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ರಾಜು ಗಾಯಕವಾಡ (43) ಕೊಲೆಯಾದ ವ್ಯಕ್ತಿ. ರಾಜು ಗಾಯಕವಾಡ ಕಲಬುರಗಿ ಹೊರ ವಲಯ ಶಾಹಬಾದ್ ರಸ್ತೆಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದ ರಾಜು, ಮನೆಯಲ್ಲಿ ಮಾತ್ರ ಅಕ್ಷರಶಃ ಖಳನಾಯಕನ ರೀತಿ ಆಗಿದ್ದರು. ವಿಜಯಪುರ (Vijayapura) ಜಿಲ್ಲೆಯ ಇಂಡಿ (Indi) ಮೂಲದ ರಾಜು ಗಾಯಕವಾಡ ಕುಟುಂಬ …
Read More »ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ. ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ …
Read More »ಬೆಳಗಾವಿಯಲ್ಲಿ ಸಡಗರ ಸಂಭ್ರಮದ ರಮಜಾನ್…
ಬೆಳಗಾವಿಯಲ್ಲಿ ಸಡಗರ ಸಂಭ್ರಮದ ರಮಜಾನ್… ಸಾಮೂಹಿಕ ನಮಾಜ್ ಅದಾ…ಪರಸ್ಪರ ಶುಭಾಷಯ ವಿನಿಯೋಗ… ಇಸ್ಲಾಂ ಧರ್ಮಿಯರ ಪವಿತ್ರ ಹಬ್ಬ ಈದ್-ಉಲ್-ಫಿತರ್ ಇಂದು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಣೆಗೊಳ್ಳುತ್ತಿದೆ. ಬೆಳಗಾವಿ ನಗರದಲ್ಲಿಯೂ ಇಸ್ಲಾಂ ಧರ್ಮೀಯರು ಅತ್ಯುತ್ಸಾಹದಿಂದ ರಮಜಾನ್ ಹಬ್ಬವನ್ನು ಆಚರಿಸಿದರು. ಇಂದು ಎಲ್ಲೆಡೆ ಇಸ್ಲಾಂ ಬಾಂಧವರಿಂದ ಈದ್-ಉಲ್-ಫಿತರ್ ಅರ್ಥಾತ್ ರಮಜಾನ್ ಹಬ್ಬವನ್ನು ಅತ್ಯುತ್ಸಾಹದಿಂದ ಆಚರಿಸಲಾಗುತ್ತಿದೆ. ಒಂದು ತಿಂಗಳ ಕಾಲ ಕಠಿಣ ರೋಜಾ ಉಪವಾಸವನ್ನು ಕೈಗೊಂಡು ದೇವರಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ, ಅಂತಿಮ ದಿನ ರಮಜಾನ್ …
Read More »ಯುಗಾದಿಯ ದಿನದಂದೇ ಬಾಗಲಕೋಟೆಯಲ್ಲಿ ದುರಂತ… ಈಜಲೂ ಹೋದ ಮೂವರು ಬಾಲಕರು ನೀರು ಪಾಲು…
ಯುಗಾದಿಯ ದಿನದಂದೇ ಬಾಗಲಕೋಟೆಯಲ್ಲಿ ದುರಂತ… ಈಜಲೂ ಹೋದ ಮೂವರು ಬಾಲಕರು ನೀರು ಪಾಲು… ಒಬ್ಬನ ಮೃತದೇಹ ಪತ್ತೆ…ಇಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ಯುಗಾದಿ ಹಬ್ಬದಂದು ನದಿಯಲ್ಲಿ ಈಜಲು ಹೋಗಿ ಮೂರು ಬಾಲಕರು ನೀರು ಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಸೀತಿಮನಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಸೀತಿಮನಿಯಲ್ಲಿ ಯುಗಾದಿ ಹಬ್ಬದ ದಿನವೇ ದುರಂತವೊಂದು ನಡೆದಿದೆ. ನಿನ್ನೆ ಸೀತಿಮನಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ, ಇಲಾಳದ ಮಲ್ಲಪ್ಪ (16) ಪರನಗೌಡ …
Read More »