ದಾವಣಗೆರೆ: ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿಯನ್ನು ಪತಿಯೇ ಅಪಹರಿಸಿರುವ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ. ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ಕು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ …
Read More »Yearly Archives: 2025
ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು
ಹಾವೇರಿ: ಸಂಕ್ರಾಂತಿ ದಿನವೇ ವರದಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹೊಂಕಣ ಗ್ರಾಮದಲ್ಲಿ ಬಳಿ ನಡೆದಿದೆ. ಮೃತ ಯುವಕನನ್ನು ಹಿರೇಕೆರೂರು ತಾಲೂಕಿನ ಯತ್ತಿನಹಳ್ಳಿ ಗ್ರಾಮದ ನಿವಾಸಿ 32 ವರ್ಷದ ರಮೇಶ ಕಡ್ಡೇರ್ ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಬಂದಿದ್ದ ರಮೇಶ್ ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ಬಂದಿದ್ದ. ಈ ವೇಳೆ ಘಟನೆ ನಡೆದಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …
Read More »ಹೆಬ್ಬಾಳ್ಕರ್ ಕಾರು ಅಪಘಾತವಾದ ಸ್ಥಳದಲ್ಲಿ ವಾಮಾಚಾರ ನಡೆದಿತ್ತಾ?
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾದ ಸ್ಥಳದಲ್ಲಿ ವಾಮಾಚಾರ ನಡೆದಿತ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಕಾರು ಅಪಘಾತ ನಡೆದ ಕೆಲವೇ ಹೆಜ್ಜೆಗಳ ದೂರದಲ್ಲಿ ಮಡಿಕೆ, ನಿಂಬೆ ಹಣ್ಣು , ದಾರದ ಉಂಡಿ,ಕುಂಬಳಕಾಯಿ ಇಟ್ಟು ವಾಮಾಚಾರ ನಡೆಸಲಾಗಿದೆ. ಇದರ ನಡುವೆ ಅಪಘಾತಕ್ಕೂ ವಾಮಾಚಾರಕ್ಕೂ ಲಿಂಕ್ ಇದ್ಯಾ ಎನ್ನುವ ಅನುಮಾನ ಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಅಪಘಾತ ನಡೆದ 50 …
Read More »ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗಕ್ಕೆ ಸೂರ್ಯನ ಪೂಜೆ ನಡೆದಿದೆ: ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್
ಬೆಂಗಳೂರು: ಗವಿಪುರದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯನಿಂದ ಶಿವಲಿಂಗ ಸ್ಪರ್ಶದ ಕೌತುಕ ಕಣ್ತುಂಬಿಕೊಳ್ಳಲು ಬಂದ ಭಕ್ತರಿಗೆ ನಿರಾಸೆಯಾಗಿದೆ. ಮೋಡ ಕವಿದಿದ್ದರಿಂದ ಇತಿಹಾಸದಲ್ಲೇ 2ನೇ ಬಾರಿಗೆ ಸೂರ್ಯ ರಶ್ಮಿ ಶಿವಲಿಂಗದ ಸ್ಪರ್ಶ ಮಾಡಿಲ್ಲ. ಪ್ರತಿ ಮಕರ ಸಂಕ್ರಾಂತಿ ದಿನ ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗದ ಮೇಲೆ ಸೂರ್ಯ ರಶ್ಮಿಯ ಸ್ಪರ್ಶವಾಗುತ್ತದೆ. ಆದರೆ, ಈ ಬಾರಿ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಿಲ್ಲ. ಗವಿಗಾಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಪ್ರತಿಕ್ರಿಯಿಸಿ, “ಸಂಜೆ 5:20 ರಿಂದ 5:23ರ …
Read More »ನಾನು ಸಿ.ಎಲ್.ಪಿ ಸಭೆಗೆ ಗೈರಾಗಿಲ್ಲ…
ದಲಿತ ನಾಯಕರ ಸಭೆಯ ಕುರಿತು ಸುರ್ಜೆವಾಲಾ ಜೊತೆ ಮಾತನಾಡಿಲ್ಲ- ಗೃಹ ಸಚಿವ ಜಿ.ಪರಮೇಶ್ವರ ಬೆಂಗಳೂರಿನಲ್ಲಿ ಸಿ.ಎಲ್.ಪಿ ಸಭೆ ದಲಿತ ನಾಯಕರ ಸಭೆಯ ಕುರಿತು ಮಾತನಾಡಿಲ್ಲ ಸಿ.ಎಲ್.ಪಿ ಸಭೆಗೆ ಗೈರಾಗಿಲ್ಲ ಗೃಹ ಸಚಿವ ಜಿ. ಪರಮೇಶ್ವರ ಮಾಹಿತಿಸಿ.ಎಲ್.ಪಿ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಅವರೊಂದಿಗೆ ದಲಿತ ನಾಯಕರ ಸಭೆಯ ಕುರಿತು ಮಾತನಾಡಿಲ್ಲವೆಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಭವನ ನಿರ್ಮಿಸುವ …
Read More »ಮಕರ ಸಂಕ್ರಮಣ ಹಿನ್ನೆಲೆ, ಲೋಕ ಕಲ್ಯಾಣಕ್ಕಾಗಿ ಶ್ರೀಶೈಲ್ ಜಗದ್ಗುರುಗಳಿಂದ ಕೃಷ್ಣಾ ನದಿಯ ಪುಣ್ಯ ಸ್ನಾನ
ಚಿಕ್ಕೋಡಿ:ಲೋಕಕಲ್ಯಾಣಕ್ಕಾಗಿ ಹಾಗೂ ಭಕ್ತರ ಪಾಪಗಳು ನಿವಾರಣೆಯಾಗಿ ಸಕಲ ಸುಖ ಪ್ರಾಪ್ತಿಯಾಗಲೆಂದು ಶ್ರೀಶೈಲ್ ಜಗದ್ಗುರು ಡಾ!ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಯವರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಸಕಲ ಭಕ್ತಾದಿಗಳೊಂದಿಗೆ ಪುಣ್ಯಸ್ಥಾನ ಜರುಗಿತು. ಇಂದು ಸಂಕ್ರಾತಿ ದಿನದಂದು ಸೂರ್ಯನೂ ದಕ್ಷಿಣದಿಂದ-ಉತ್ತರ ದಿಕ್ಕಿಗೆ ಪ್ರಯಾಣ ಬೆಳೆಸುವ ಶುಭದಿನ.ಭಕ್ತರು ಸಂಕ್ರಾಂತಿ ದಿನದಂದು ಪುಣ್ಯಕ್ಷೇತ್ರಗಳ ನದಿಯ ತೀರದಲ್ಲಿ ಜದ್ಗುರುಗಳ ಪಾದದಿಂದ ನೀರು ಹಾಕಿಕೊಳ್ಳುವುದರಿಂದ ಭಕ್ತರ ಸಕಲ ತೊಂದರೆಗಳು ನಿವಾರಣೆಯಾಗಿ,ಸಕಲ ಸೌಭಾಗ್ಯ ಪ್ರಾಪ್ತಿಯಾಗುತ್ತದೆ. ಲೋಕಕಲ್ಯಾಣಕ್ಕಾಗಿ …
Read More »ಹೆಬ್ಬಾಳ್ಕರ್ ಶೀಘ್ರ ಗುಣಮುಖರಾಗಲಿ ;ಸಿ.ಟಿ ರವಿ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಾರ್ಥಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿ.ಟಿ ರವಿ ಅವರು, ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಿ.ಟಿ ರವಿ ಮಧ್ಯೆ ನಡೆದ …
Read More »ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ
ಬೆಳಗಾವಿ: ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಇಂದು ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪದಮುಕಿ(43) ಕೊಲೆಯಾದ ಮಹಿಳೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ(24) ಕೊಲೆ ಮಾಡಿದ ಆರೋಪಿ. ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ಮಗಳು ಛಾಯಾ, ಅಳಿಯ ಶುಭಂ ಜೊತೆ ವಾಸವಾಗಿದ್ದರು. ಕಳೆದ 7 ತಿಂಗಳ ಹಿಂದೆ ಅಷ್ಟೇ ಇವರ ಮದುವೆ …
Read More »ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ
ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ (Bengaluru) ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ …
Read More »ನಾನು ದಲಿತ, ನಾನೇಕೆ ಸಿಎಂ ಆಗಬಾರದು?’: ಸಚಿವ ತಿಮ್ಮಾಪುರ
ಹುಬ್ಬಳ್ಳಿ, ಜನವರಿ 14, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ ಬಳಿಕವೂ ಸಿಎಂ ಆಗುವ ಕೂಗು ನಿಂತಿಲ್ಲ. ದಲಿತ ಸಿಎಂ ಕೂಗು ರಾಜ್ಯದಲ್ಲಿ …
Read More »