Breaking News

Yearly Archives: 2025

ಶ್ರೇಷ್ಠ ಫೌಂಡೇಶನ್ ವತಿಯಿಂದ ನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ಕಾರುಗಳು ‘ಆಪರೇಷನ್‌ ಸಿಂಧೂರ’ಮಯ

ಬೆಳಗಾವಿ: ದೇಶಾದ್ಯಂತ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಹಲವೆಡೆ ತಮ್ಮ ಮಕ್ಕಳಿಗೆ ಸಿಂಧೂರ ಅಥವಾ ಸಿಂಧೂರಿ ಅಂತಾ ಹೆಸರಿಟ್ಟು ಸಂಭ್ರಮಿಸುತ್ತಿದ್ದರೆ, ಮತ್ತೊಂದಿಷ್ಟು ಕಡೆ ಭಾರತೀಯ ಸೈನಿಕರ ಪರಾಕ್ರಮ ಮೆಚ್ಚಿ ತಿರಂಗಾ ರ‍್ಯಾಲಿ ಸೇರಿ ದೇಶಾಭಿಮಾನ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ಇಬ್ಬರು ದೇಶಾಭಿಮಾನಿಗಳು ತಮ್ಮ ಕಾರುಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಬಿಂಬಿಸುವ ಚಿತ್ರಗಳನ್ನು ಅಂಟಿಸಿ‌ದ್ದಾರೆ. ಬೆಳಗಾವಿಯ ಹೈಟೆಕ್ ಮೋಟರ್ಸ್ ಆ್ಯಂಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್​ನ ಮ್ಯಾನೇಜಿಂಗ್ …

Read More »

ಲೋಕಾಯುಕ್ತ ಇನ್ಸ್​ಪೆಕ್ಟರ್​​ಗೆ ಲಂಚ ನೀಡಲು ಬಂದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಅರೆಸ್ಟ್

ಮಂಗಳೂರು: ದಾಳಿ ಮಾಡದಂತೆ ಲೋಕಾಯುಕ್ತ ಇನ್ಸ್​ಪೆಕ್ಟರ್​ಗೆ ಲಂಚ ನೀಡಲು ಹೋದ ಆರೋಪದ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಕೋಟೆಕಣಿ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಪ್ರವೀಣ್ ನಾಯ್ಕ್ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದಿದ್ದರು. ಪೊಲೀಸ್ …

Read More »

21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ, ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು …

Read More »

ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಬಿಇಒ ಆದೇಶ

ಬೆಳಗಾವಿ: ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅಮಾನತುಗೊಳಿಸಿರುವ ಘಟನೆ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅಮಾನತುಗೊಂಡವರು. ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 146 ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲ. ಹಾಗಾಗಿ, ಮಕ್ಕಳ ಸಂಖ್ಯೆ ಅನುಸಾರ ಕೊಠಡಿಗಳ ಮಂಜೂರಾತಿ ಮಾಡುವಂತೆ ಮಂಗಳವಾರ ಶಾಲೆಯ …

Read More »

ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ:VTU RESULT RECORD

ಬೆಳಗಾವಿ: ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸುವ ಮೂಲಕ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಹೊಸ ಇತಿಹಾಸ ನಿರ್ಮಿಸಿದೆ. ಮೇ 30ರಂದು ಅಂತಿಮ ಸೆಮಿಸ್ಟರ್‌ನ 50,321 ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ‌ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ. ಕಳೆದ ವರ್ಷ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟ: ಕಳೆದ ಬಾರಿ ಮೂರು …

Read More »

ಜೆಡಿಎಸ್ ನಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜನ್ಮದಿನ; ಜೆಡಿಎಸ್ ನಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಹೆಚ್.ಡಿ. ದೇವೇಗೌಡ ಅವರ 93ನೇ ಜನ್ಮದಿನದ ಹಿನ್ನೆಲೆಯಲ್ಲಿ ನಗರ ಜೆಡಿಎಸ್ ಘಟಕದ ವತಿಯಿಂದ ಆರು ಕಿ.ಮೀ.ಗೂ ಹೆಚ್ಚು ದೂರ ಬೃಹತ್ ಕ್ಯಾನ್ಸರ್ ಜಾಗೃತಿ ಜಾಥಾ ವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಜಿ ಪ್ರಧಾನಮಂತ್ರಿಗಳ …

Read More »

ಬೆಳಗಾವಿಯಲ್ಲಿ ಫೈರ್ ಫ್ರೈಡೆ…!!! ಒಂದೇ ದಿನ 2 ಕಡೆ ಬೆಂಕಿ ಅವಘಡ..!! ಸದಾಶಿವನಗರ ವಿಜಯ್ ಬೇಕರಿಯಲ್ಲಿಯೂ ಬೆಂಕಿ ಅವಘಡ

ಬೆಳಗಾವಿಯಲ್ಲಿ ಫೈರ್ ಫ್ರೈಡೆ…!!! ಒಂದೇ ದಿನ 2 ಕಡೆ ಬೆಂಕಿ ಅವಘಡ..!! ಸದಾಶಿವನಗರ ವಿಜಯ್ ಬೇಕರಿಯಲ್ಲಿಯೂ ಬೆಂಕಿ ಅವಘಡ ಅಗ್ನಿಶಾಮಕದಳದಿಂದ ಸ್ಪಂದನೆ ಸಿಗದಿದ್ದಕ್ಕೆ ಬೇಕರಿ ಮಾಲೀಕರ ಅಸಮಾಧಾನ ಬೆಳಗಾವಿಯಲ್ಲಿ ಶುಕ್ರವಾರ ಬೆಳಗಿನ ಜಾವ ಬಹುಶಃ ಅಗ್ನಿದೇವ ವಕ್ರದೃಷ್ಠಿ ಬೀರಿದ್ದಾನೆ. ನಗರದ ಕಾಂದಾ ಮಾರ್ಕೇಟ್’ನಲ್ಲಿ ಬೆಂಕಿ ಅವಘಡಕ್ಕೆ 2 ಅಂಗಡಿಗಳು ಬೆಂಕಿಗಾಹುತಿಯಾದರೇ, ಬೆಳಗಾವಿಯ ಸದಾಶಿವನಗರದಲ್ಲಿರುವ ವಿಜಯ್ ಬೇಕರಿಯಲ್ಲಿಯೂ ಕೂಡ ಅಗ್ನಿ ಅವಘಡ ಸಂಭವಿಸಿದೆ. ಬೆಳಗಾವಿಯ ಸದಾಶಿವನಗರ ಸೆಕೆಂಡ್ ಕ್ರಾಸ್ ಬಳಿಯಿರುವ ವಿಜಯ್ …

Read More »

ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು..

ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು…. ಬೈಲಹೊಂಗಲ ತಾಲೂಕಿನಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬೈಲಹೊಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಗೋಕಾಕ ತಾಲೂಕಿನ ನೆಲಗಂಟಿ ಗ್ರಾಮದ ಬಸಪ್ಪ ಸತ್ಯಪ್ಪ ತಳವಾರ 27 ಅಡಿವಪ್ಪ ಲಕ್ಷ್ಮಣ್ ಸಿಂತಮನಿ 28 ರಾಜು ಶೆಟ್ಟಿಪ್ಪ ನಾಯ್ಕ 26 ಸಿದ್ದಪ್ಪ ಶಿವಪ್ಪ ಚಿಕ್ಕೊಪ್ಪದವರ 20 ಪರಪ್ಪ ಬಸಪ್ಪ ಕಡ್ಲಿ 21 ಬಂಧಿತ ಆರೋಪಿಗಳು ಬಂದಿತ …

Read More »

ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟಕ್ಕೆ ಕುಮ್ಮಕ್ಕು

ಬೆಂಗಳೂರು: ಆರ್​ಸಿಬಿ ಹಾಗೂ ಕೋಲ್ಕತ್ತಾ ನಡುವಿನ ಐಪಿಎಲ್ ಪಂದ್ಯಕ್ಕೆ ಅಕ್ರಮವಾಗಿ ಟಿಕೆಟ್ ಮಾರಾಟ ಮಾಡಲು ನೆರವು ನೀಡಿದ್ದ ಇಬ್ಬರು ಟ್ರಾಫಿಕ್ ಕಾನ್​ಸ್ಟೇಬಲ್​ಗಳನ್ನು ಅಮಾನತು ಮಾಡಿ ಇಲಾಖಾ ತನಿಖೆಗೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಆದೇಶಿಸಿದ್ದಾರೆ. ಹಲಸೂರು ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವಿಚಂದ್ರ ಹಾಗೂ ಸಂಚಾರ ನಿರ್ವಹಣಾ ಕೇಂದ್ರದಲ್ಲಿ(ಟಿಎಂಸಿ) ಕೆಲಸ ಮಾಡುತ್ತಿರುವ ವೆಂಕಟಗಿರಿ ಗೌಡ ಎಂಬವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ …

Read More »