Breaking News

Yearly Archives: 2025

ಇಬ್ಬರು ಅಂತಾರಾಜ್ಯ ಕಳ್ಳರು ಸೆರೆ

ಬೆಂಗಳೂರು: ಉತ್ತರ ಪ್ರದೇಶದಿಂದ ರೈಲಿನ ಮುಖಾಂತರ ನಗರಕ್ಕೆ ಬಂದು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಜೀಂ ಆಲಿ ಹಾಗೂ ಸದ್ದಾಂ ಬಂಧಿತ ಆರೋಪಿಗಳು. ಇವರಿಂದ 186 ಗ್ರಾಂ ಚಿನ್ನಾಭರಣ, ಎರಡು ದ್ವಿಚಕ್ರವಾಹನ ಹಾಗೂ 15 ಸಾವಿರ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ಧಾರೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ದೂರುದಾರರ ಕುಟುಂಬ ಕಳೆದ …

Read More »

ಕೊಪ್ಪಳದಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧವಿದೆ : ಸಚಿವ ಶಿವರಾಜ ತಂಗಡಗಿ

ಕೊಪ್ಪಳ : ಜಿಲ್ಲೆಯಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ಸಾವಿರ ಎಕರೆ ಜಮೀನು ಮೀಸಲಿರಿಸಿ ಖಾಸಗಿ ಕಂಪನಿ ಸ್ಥಾಪನೆಗೆ ಮುಂದಾಗಿರುವುದಕ್ಕೆ ಕೊಪ್ಪಳದ ಜನತೆ, ಗವಿಮಠದ ಗವಿಶ್ರೀಗಳು ವಿರೋಧಿಸಿದ್ದಾರೆ. ಅದಕ್ಕೆ ನಮ್ಮದು ವಿರೋಧವಿದೆ. ಈ ಕುರಿತು ಮಾ.4 ರಂದು ಸಿಎಂ ಜೊತೆ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುವುದಾಗಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಆದರೆ ಅವರು ನಮ್ಮ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. …

Read More »

ಟಿಪ್ಪರ್, ಕಾರು ಮಧ್ಯೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.

ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೈಸೂರಿನ ಶ್ರೀಲಕ್ಷ್ಮೀ(20), ಲಿಖಿತಾ, ಮಂಡ್ಯದ ಸುಹಾಸ್, ನಿತಿನ್ ಮತ್ತು ಶ್ರೇಯಸ್ ಮೃತಪಟ್ಟವರೆಂದು ತಿಳಿದುಬಂದಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, ಮಹಾಶಿವರಾತ್ರಿ ರಥೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ವೀಕೆಂಡ್ ಹಿನ್ನೆಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ …

Read More »

ಶೂಟಿಂಗ್‌ಗೆ ಅವಕಾಶ ಕೊಡದಿದ್ರೆ, ನೀವು ಹೇಗೆ ಸಿನಿಮಾ ಮಾಡ್ತೀರಿ. ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಬೇಕೋ ಮಾಡುತ್ತೇವೆ: ಡಿಸಿಎಂ

ಬೆಂಗಳೂರು: ”ಸಿನಿಮಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಚಿತ್ರರಂಗ ಭಾಗವಹಿಸಬೇಕು. ನಾವು ನಿಮ್ಮ ಶೂಟಿಂಗ್‌ಗೆ ಅವಕಾಶ ಕೊಡದಿದ್ರೆ, ನೀವು ಹೇಗೆ ಸಿನಿಮಾ ಮಾಡ್ತೀರಿ?. ನಾವೂ ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ. ಇದು ನನ್ನ ವಾರ್ನಿಂಗ್ ಅಂತಲಾದ್ರೂ ತಿಳಿದುಕೊಳ್ಳಿ, ರಿಕ್ವೆಸ್ಟ್ ಅಂತಲಾದ್ರೂ ತಿಳಿದುಕೊಳ್ಳಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು. ವಿಧಾನಸೌಧದ ಮುಂಭಾಗದಲ್ಲಿ ಶನಿವಾರ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ”ಈ ಕಾರ್ಯಕ್ರಮ …

Read More »

ಅಣ್ಣನನ್ನು ಸಿಎಂ ಮಾಡಬೇಕೆಂಬ ಆಸೆ ನನಗೆ ಈಗಲೂ ಇದೆ:ಡಿ ಕೆ ಸುರೇಶ್

ಬೆಂಗಳೂರು : ಅಣ್ಣನನ್ನು ಸಿಎಂ ಮಾಡಬೇಕೆಂಬ ಆಸೆ ಇದೆ ಎಂದು ಈಗಲೂ ಹೇಳುತ್ತೇನೆ. ನಾನು ನನ್ನ ಆಸೆ ಮುಚ್ಚಿಟ್ಟಿಲ್ಲ. ಅದಕ್ಕೂ ಕಾಲ ಬರಬೇಕು ಎಂದು ಮಾಜಿ ಸಂಸದ ಡಿ. ಕೆ ಸುರೇಶ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಮಾತನಾಡಿದ ಅವರು, ಈಗ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಕುಳಿತಿದ್ದಾರೆ. ಅವರನ್ನು ಎಳೆದು ಇವರನ್ನು ಕೂರಿಸಬೇಕು. ಅದು ಹೇಗಾಗುತ್ತದೆ. ಸಿದ್ದರಾಮಯ್ಯ ಅವರು ಆ ಸ್ಥಾನದಲ್ಲಿ ಕುಳಿತಿರುವಾಗ ಅವರ ಗೌರವ, ಘನತೆ, ಅವರ …

Read More »

“ನೀತಿ ಸಮಿತಿಯಲ್ಲೇ ಸಿ.ಟಿ.ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗಲಾಟೆ ಪ್ರಕರಣ ಪರಿಹಾರ: ಹೊರಟ್ಟಿ

ಬೆಂಗಳೂರು: “ನೀತಿ ಸಮಿತಿಯಲ್ಲೇ ಸಿ.ಟಿ.ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗಲಾಟೆ ಪ್ರಕರಣ ಪರಿಹಾರವಾಗುವ ವಿಶ್ವಾಸವಿದೆ” ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮಾತನಾಡಿದ ಅವರು, “ಸದನದಲ್ಲಿ ನಡೆದಿದ್ದನ್ನು ಅಲ್ಲೇ ಮುಗಿಸಬೇಕಿತ್ತು. ಸದನ ನಡೆದಾಗ ನಡೆದಿದ್ದರೆ ಹೀಗೆ ಆಗುತ್ತಿರಲಿಲ್ಲ. ಹೀಗಾಗಿ ಘಟನೆ ಇಷ್ಟು ದೊಡ್ಡದಾಗಿದೆ. ಇದನ್ನು ಎಥಿಕ್ಸ್ ಕಮಿಟಿಗೆ ಕೊಡಲಾಗಿದ್ದು, ವರದಿ ಬರಬೇಕಿದೆ. ಎಥಿಕ್ಸ್ ಕಮಿಟಿಯಲ್ಲಿಯೇ ಶೇ 99ರಷ್ಟು ಸಮಸ್ಯೆ ಪರಿಹಾರವಾಗೋ ವಿಶ್ವಾಸವಿದೆ. ಇಲ್ಲದೇ …

Read More »

ಬಳ್ಳಾರಿಯಲ್ಲಿ ಕೋಳಿಗಳ ಸಾವು 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ?

ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ಕಳೆದ ವಾರದಿಂದ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರವಿ ಎಂಬವರಿಗೆ ಸೇರಿದ ಫಾರಂನಲ್ಲಿ ಮೊದಲು 15 ಸಾವಿರ ಕೋಳಿಗಳಿದ್ದವು. ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇದೀಗ 7 ಸಾವಿರ ಕೋಳಿಗಳು ಮಾತ್ರ ಉಳಿದಿವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆಗಳಿವೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. …

Read More »

ಚಲನಚಿತ್ರ ವಾಣಿಜ್ಯ ಮಂಡಳಿ, ಈ ಸಿನಿಮಾ ನಟರ ಬಗ್ಗೆ ನನಗೆ ಬಹಳ ಸಿಟ್ಟು ಬಂದುಬಿಟ್ಟಿದೆ:ಡಿಕೆ ಶಿ

ಬೆಂಗಳೂರು ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾಷಣದ ವೇಳೆ ಸಿನಿಮಾ ನಟ, ನಟಿಯರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಅಲ್ಲದೆ, ನಿಮ್ಮ ಚಲನ ವಲನ, ಹಾವ ಭಾವ ಎಲ್ಲವೂ ನಮಗೆ ಅರ್ಥವಾಗುತ್ತದೆ, ಎಲ್ಲವನ್ನು ಗಮನಿಸುತ್ತಿರುತ್ತೇನೆ’ ಎಂದು ಹೇಳಿದರು. ಅಷ್ಟು ಮಾತ್ರವೇ ಅಲ್ಲದೆ ಸಿನಿಮಾ ರಂಗದವರ ಮೇಲೆ ವಿಶೇಷವಾಗಿ ನಮ್ಮ ನಟ, ನಟಿಯರ ಮೇಲೆ ನನಗೆ ಬಹಳ ಸಿಟ್ಟಿದೆ ಎಂದು ನೇರವಾಗಿಯೇ ಸಿಟ್ಟು ಹೊರಹಾಕಿದರು. ಕಾರ್ಯಕ್ರಮದಲ್ಲಿ …

Read More »

ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು. ಶನಿವಾರದಂದು ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಗೊಕಾಕ- ಮೂಡಲಗಿ ಉಪ ಕೇಂದ್ರದಿಂದ ರೈತ ಫಲಾನುಭವಿಗಳಿಗೆ ಒಟ್ಟು ೭.೧೫ ಲಕ್ಷ ರೂಪಾಯಿಗಳ ಚೆಕ್‌ಗಳನ್ನು ವಿತರಿಸಿ …

Read More »

ಬೆಳಗಾವಿಯಲ್ಲಿ ಗ್ಯಾರೇಜ್‌‌ಗೆ ಬೆಂಕಿ, 10ಕ್ಕೂ ಹೆಚ್ಚು ವಾಹನ ಬೆಂಕಿಗಾಹುತಿ

ಬೆಳಗಾವಿಯಲ್ಲಿ ಗ್ಯಾರೇಜ್‌‌ಗೆ ಬೆಂಕಿ, ತಪ್ಪಿದ ಭಾರಿ ಅನಾಹುತ ಬೆಳಗಾವಿಯ ಆಟೋ ನಗರದಲ್ಲಿರುವ ಖಾಸಗಿ ಗ್ಯಾರೇಜ್‌ಗೆ ಬೆಂ*ಕಿ ಶಾರ್ಟ್ ಸರ್ಕ್ಯೂ*ಟ್ ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ಗ್ಯಾರೇಜ್‌ನಲ್ಲಿದ್ದ 10ಕ್ಕೂ ಹೆಚ್ಚು ವಾಹನ ಬೆಂಕಿಗಾಹುತಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

Read More »