Breaking News

Yearly Archives: 2025

ಜೆಪಿಸಿಯ ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡ ವಕ್ಫ್ ಹೋರಾಟದ ತಂಡ

ದೆಹಲಿ: ನಾವು ಶನಿವಾರ ವರದಿ ಮಾಡಿದ ಹಾಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ರಾಜ್ಯದಲ್ಲಿ ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದೆ. ಅವರ ತಂಡದ ಕೆಲ ನಾಯಕರು ಇಂದು ಮಧ್ಯಾಹ್ನ ಸಂಸತ್ ಭವನದಲ್ಲಿ ಜೆಪಿಸಿಯ ಕೆಲ ಅಧಿಕಾರಿಗಳೊಂದಿಗೆ ಕಾಫಿ ಅಥವಾ ಟೀ ಹೀರುತ್ತಿರುವುದನ್ನು ನೋಡಬಹುದು. ಮಾಜಿ ಸಂಸದರಾದ ಪ್ರತಾಪ್ ಸಿಂಹ, ಬಿವಿ ನಾಯಕ್, ಶಾಸಕ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಮೊದಲಾದವರು ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡರು …

Read More »

ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ

ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿದ ಆರೋಪದಲ್ಲಿ ನಟ ದರ್ಶನ್​ ಹಾಗೂ ಅವರ ಸಹಚರರು ಜೈಲು ಸೇರಿದ್ದರು. ಕೆಲವು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಅವರಿಗೆ ಇತ್ತೀಚೆಗೆ ಹೈಕೋರ್ಟ್​ ಜಾಮೀನು ನೀಡಿತ್ತು. ದರ್ಶನ್​ಗೆ ಬೆನ್ನು ನೋವು ಕಾಡುತ್ತಿದೆ. ಹೆಚ್ಚಿನ ಚಿಕಿತ್ಸೆ ಬಗ್ಗೆ ಅವರು ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ನಡುವೆ ದರ್ಶನ್ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್​ಗೆ ನೀಡಿರುವ ಬೇಲ್​ ರದ್ದು …

Read More »

ದೆಹಲಿ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ಕೇವಲ ಶಿವಕುಮಾರ್​​ರನ್ನು ಮಾತ್ರ ಚರ್ಚೆಗೆ ಕರೆದಿದ್ದು ಯಾಕೆ?

ಯಾದಗಿರಿ: ಜಿಲ್ಲೆಯ ಪ್ರವಾಸದಲ್ಲಿರುವ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದರು. ವಿಷಯವೇನೆಂದರೆ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕರ್ನಾಟಕ ಮಾದರಿಯನ್ನು ಅನುಸರಿಸಲು ಎಐಸಿಸಿ ನಿರ್ಧರಿಸಿದ್ದು ಅವುಗಳ ಬಗ್ಗೆ ಚರ್ಚೆಗೆ ಸಿದ್ದರಾಮಯ್ಯರನ್ನು ಬಿಟ್ಟು ಡಿಕೆ ಶಿವಕುಮಾರ್ ಅವರನ್ನು ಕರೆದಿದೆ. ಹೀಗ್ಯಾಕೆ ಅಂತ ಕೇಳಿದರೆ, ಉತ್ತರಿಸಲು ತಡವರಿಸುವ ಜಾರಕಿಹೊಳಿ, ಈ ಪ್ರಶ್ನೆ ತನ್ನನಲ್ಲ, ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯರನ್ನು ಕೇಳಬೇಕು, ತನ್ನ ಇಲಾಖೆಗೆ ಸಂಬಂಧಪಟ್ಟಿದ್ದು ಏನಾದರೂ ಇದ್ದರೆ …

Read More »

ಹುಬ್ಬಳ್ಳಿ-ಧಾರವಾಡದ ಬಿಆರ್‌ಟಿಎಸ್ ಯೋಜನೆ ಆರ್ಥಿಕ ನಷ್ಟದಲ್ಲಿದೆ

ಹುಬ್ಬಳ್ಳಿ, ಜನವರಿ 06: ಅದು ಹುಬ್ಬಳ್ಳಿ-ಧಾರವಾಡ (Hubballi-Dharwad) ಅವಳಿ ನಗರದ ಮಹತ್ವಾಕಾಂಕ್ಷೆಯ ಯೋಜನೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆ ಯೋಜನೆ ಆರಂಭ ಮಾಡುವ ಮುನ್ನವೇ ಸಾಕಷ್ಟು ಅಪಸ್ವರ ಕೇಳಿ ಬಂದಿದ್ದವು. ಹಾಗೂ ಹೀಗೂ ಯೋಜನೆ ಆರಂಭಿಸಲಾಗಿತ್ತು. ಆದರೆ ಆ ಯೋಜನೆಯಿಂದ ಆಗಿರುವ ಅನಕೂಲಕ್ಕಿಂತ ಅನಾನೂಕಲವೇ ಜಾಸ್ತಿ. ಆರ್ಥಿಕವಾಗಿಯೂ ಆ ಯೋಜನೆ ಸಾಕಷ್ಟು ನಷ್ಟದಲ್ಲಿದೆ. ಅವಳಿ ನಗರದಲ್ಲಿರುವ ಆ ಯೋಜನೆ ಇದೀಗ ಬಂದ್ ಆಗೋ ಲಕ್ಷಣವೇ ಹೆಚ್ಚಾಗಿದೆ. ಆ ಯೋಜನೆ‌ ಬದಲಾಗಿ ಮತ್ತೊಂದು ಯೋಜನೆ …

Read More »

ಎಂಎಲ್​ಸಿ ಸಿ. ಟಿ ರವಿ ಅವರು ಪೊಲೀಸ್ ದೌರ್ಜನ್ಯ ಆರೋಪಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ.

ಬೆಂಗಳೂರು : ಕಳೆದ ಡಿಸೆಂಬರ್​ ತಿಂಗಳು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ತಮ್ಮ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ. ಟಿ ರವಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.‌ ಬೆಳಗಾವಿ ಸುವರ್ಣ ಸೌಧದಲ್ಲಿ ಹಾಗೂ ಹೊರಗೆ ನಡೆದ ಘಟನೆ ಬಗ್ಗೆ ದೂರು ನೀಡಿದ ಅವರು, ರಾಜ್ಯ ಪೊಲೀಸ್ ಹಾಗೂ ಸರ್ಕಾರ ನಡೆದುಕೊಂಡ ರೀತಿ ಬಗ್ಗೆ ವಿವರವಾಗಿ ದೂರು ನೀಡಿದ್ದಾರೆ. ದೂರಿನಲ್ಲಿ ಡಿಸಿಎಂ ಡಿ. …

Read More »

ಅರಣ್ಯ ಅಪರಾಧಗಳ ನಿರ್ವಹಣೆಗಾಗಿ ಗರುಡಾಕ್ಷಿ ಆನ್​ಲೈನ್ ಎಫ್ಐಆರ್ ತಂತ್ರಾಂಶ ಅಭಿವೃದ್ಧಿ

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು ಗರುಡಾಕ್ಷಿ ಆನ್​​​ಲೈನ್ ಎಫ್​ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಾಳೆ (ಜ.7ರಂದು) ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದಾರೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ. ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲೂ ಸಹ ಪ್ರಥಮ ವರ್ತಮಾನ ವರದಿಯನ್ನು …

Read More »

HMPV ವೈರಸ್​ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹೆಚ್​ಎಂಪಿವಿ ಅಪಾಯಕಾರಿ ವೈರಸ್ ಅಲ್ಲ, ಆದರೂ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಚೈನಾ ವೈರಸ್ ಕಾಣಿಸಿಕೊಂಡಿದೆ. ಕರ್ನಾಟಕಕ್ಕೆ HMPV ವೈರಸ್ ಬಂದಿದೆ ಎಂಬ ಮಾಹಿತಿ ಬಂದಿದೆ. ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆಗೆ ದಿನೇಶ್ ಗುಂಡೂರಾವ್ ಅವರಿಗೆ ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಇದರ ಬಗ್ಗೆ ಸಭೆ ನಡೆಯುತ್ತಿದೆ. ಈ ವೈರಸ್ ಎರಡು ಮಕ್ಕಳಲ್ಲಿ ಕಾಣಿಸಿಕೊಂಡಿದೆ ಎಂದರು. ಆರೋಗ್ಯ ಇಲಾಖೆಯವರು ಏನೇನು …

Read More »

ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್‌ಎಂವಿ 2ನೇ ಹಂತದಲ್ಲಿರುವ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಅನೂಪ್ (38), ಅವರ ಪತ್ನಿ ರಾಖಿ (35), ಮತ್ತು ಐದು ಹಾಗೂ 2 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಮಕ್ಕಳಿಬ್ಬರಿಗೂ ವಿಷಪ್ರಾಶನ ಮಾಡಿದ ಬಳಿಕ ದಂಪತಿ ಆತ್ಮಹತ್ಯೆ …

Read More »

ಕೆಎಸ್​​ಆರ್​​ಟಿಸಿ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಕೆಎಸ್ಆರ್​​ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಮೂಲಕ ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲ ಆಸ್ಪತ್ರೆಗಳು ಕೆಎಸ್​​ಆರ್​ಟಿಸಿ ನೌಕರರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದಾಗ ಅವರನ್ನು ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು ಎಂದು …

Read More »

ಚರಂಡಿಯಲ್ಲಿ ನವಜಾತ ಶಿಶು ಪತ್ತೆ

ಮೈಸೂರು : ಇಲ್ಲಿನ ಹೆಚ್. ಡಿ ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿನ ಚರಂಡಿಯಲ್ಲಿ ನವಜಾತ ಶಿಶುವೊಂದು ಇಂದು ಪತ್ತೆಯಾಗಿದೆ. ಇದೀಗ ಮಗುವನ್ನ ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳಗ್ಗೆ ಗ್ರಾಮಸ್ಥರು ತಮ್ಮ ಹೊಲಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ಈ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ …

Read More »