ಬೆಳಗಾವಿ : ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯು ಅತ್ಯಾಧುನಿಕ ಸೌಲಭ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಅಮೆರಿಕದಲ್ಲಿ ನೆಲೆಸಿರುವ ಬೆಳಗಾವಿ ಜಿಲ್ಲೆಯ ಪ್ರಸಿದ್ಧ ವೈದ್ಯರೊಬ್ಬರು 8 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅವರ ಹೆಸರನ್ನೇ ಇಟ್ಟಿರುವ ಆ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ. ಅಮೆರಿಕದಲ್ಲಿ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ ಸಂಪತ್ ಕುಮಾರ್. ಸದಾ ತಾಯ್ನಾಡಿಗೆ ಏನಾದರು ಮಾಡಬೇಕು ಎನ್ನುವ ಅವರಲ್ಲಿನ ತುಡಿತ ಈಗ ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ …
Read More »Yearly Archives: 2025
ಕಾಮಗಾರಿ ನಡೆಯುತ್ತಿದ್ದ ಜಾಗದ ಮೋರಿಯೇ ಇತನ ಬಾಳಿಗೆ ಕಂಟಕ
ಬೆಂಗಳೂರು, (ಜನವರಿ 03): ಬೆಂಗಳೂರಿನ ಹೆಸರಘಟ್ಟ ರಸ್ತೆಯ ಲಕ್ಷ್ಮಿಪುರದ ನಿವಾಸಿ ಹರೀಶ್ ನಿನ್ನೆ ರಾತ್ರಿ 9.5ರ ಸುಮಾರು ತನ್ನ ಚಿಕ್ಕಮ್ಮನ ಮನೆಗೆ ತೆರಳಬೇಕಿತ್ತು. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಹರೀಶ್, ರಾತ್ರಿ ಊಟ ತೆಗೆದುಕೊಂಡು ತನ್ನ ಮನೆಗೆ ಹೊರಟಿದ್ದ. ಈ ವೇಳೆ ರಸ್ತೆಯ ಪಕ್ಕದಲ್ಲಿನ ತಡೆಗೋಡೆ ಇಲ್ಲದ ಜಾಗಕ್ಕೆ ಹೋಗಿ ಮೂರ್ತ ವಿಸರ್ಜನೆಗೆ ಹೋಗಿದ್ದಾನೆ ಅಷ್ಟೇ ಆಯತಪ್ಪಿ ಚರಂಡಿಯಲ್ಲಿ ಬಿದ್ದಿದ್ದಾನೆ. ಕಳೆದ ಆರು ತಿಂಗಳ ಹಿಂದೆ ಹರೀಶ್ ಮನೆ ಬಿಟ್ಟು …
Read More »ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!
ಬೆಂಗಳೂರು, : ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ಸಹ ಸತೀಶ್ನ ಲವ್ ಪ್ರಪೋಸ್ಗೆ ಒಪ್ಪಿಗೆ ನೀಡಿದ್ದಳು. ಹೀಗೆ ಪರಸ್ಪರ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದ್ರೆ, ಈ …
Read More »ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ
ನಾಳೆ ಶನಿವಾರ ಒಂದು ದಿನ ಕಳೆದರೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಕತ್ತರಿ ಬೀಳಲಿದೆ. ಭಾನುವಾರ ಬೆಳಗ್ಗೆಯಿಂದಲೇ ಅಂದರೆ ಜನವರಿ 5ರಿಂದ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಕರ್ನಾಟಕ ನಾಲ್ಕು ನಿಗಮಗಳ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು …
Read More »ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್ಪಿ ಸಸ್ಪೆಂಡ್
ತುಮಕೂರು, (ಜನವರಿ 03): ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು (ಜನವರಿ 03) ಡಿಜಿ ಆದೇಶ ಹೊರಡಿಸಿದ್ದಾರೆ. …
Read More »ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ
ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಹೊಸ ವರ್ಷದ ಆರಂಭದಲ್ಲೇ ಶಾಕ್ ನೀಡಿದ ಸರ್ಕಾರ 4 ನಿಗಮಗಳಿಂದ ಸಲ್ಲಿಸಲಾಗಿತ್ತು ದರ ಏರಿಕೆಗೆ ಪ್ರಸ್ತಾವ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ …
Read More »ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು
ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಅಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಿಜಗುಣ ದೇವರ ಸೇವಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಶುಕ್ರವಾರದಂದು …
Read More »ಬಸ್ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು
ಬಸ್ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
Read More »ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. …
Read More »“ವಂದೇ ಭಾರತ” ರೈಲು ನಿಲುಗಡೆಯಿಂದ ಪುಣೆ ಹಾಗೂ ಹುಬ್ಬಳ್ಳಿಗೆ ಜನರಿಗೆ ಸಿಗಲಿದೆ ಹೆಚ್ಚು ಅನುಕೂಲ; ಈರಣ್ಣ ಕಡಾಡಿ
ಘಟಪ್ರಭಾ:ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ ಪ್ರೈಸ್ ರೈಲು ನಿಲುಗಡೆಯಿಂದ ವೇಗದ ಪ್ರಯಾಣ ಒದಗಿಸುವ ಜೊತೆಗೆ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಜ-02 ರಂದು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ-ಪುಣೆ ವಂದೇ ಭಾರತ ಎಕ್ಸ್ ಪ್ರೈಸ್ ರೈಲಿನ ನಿಲುಗಡೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಂದೇ ಭಾರತ ರೈಲಿಗೆ ಹಸಿರು …
Read More »