ಬೆಂಗಳೂರು : ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಬತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದ್ದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ. …
Read More »Yearly Archives: 2025
ಮಾಜಿ ಪ್ರಿಯಕರನಿಗೆ ಚಾಕು ಇರಿತ; ಮನುಕುಮಾರ್ ಅಂದರ್
ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮನನ್ನುಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ …
Read More »ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಆರೋಪ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು;ಹೈಕೋರ್ಟ್
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸುಮಾರು 103 ಎಕರೆ ಅರಣ್ಯ ಭೂಮಿಯ ಪೋಡಿಗೆ ಶಿಫಾರಸು ಮಾಡಿದ್ದ ಭೂ ದಾಖಲೆಗಳ ಜಂಟಿ ನಿರ್ದೇಶಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಜಂಟಿ ನಿರ್ದೇಶಕ ಇ.ಪ್ರಕಾಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನ್ಯಾಯಮೂರ್ತಿ …
Read More »ಸರ್ಕಾರದ ಅನುಮತಿ ಸಿಕ್ಕ ನಂತರ 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಪರೀ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ನಿಗಮಗಳು ಸೇರಿದಂತೆ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ ಕೋರಿಕೆ ಸಲ್ಲಿಕೆಯಾಗಿದೆ. ಸರ್ಕಾರದ ಅಂತಿಮ ಒಪ್ಪಿಗೆ ದೊರೆತ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, …
Read More »ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನ ಆಯ್ಕೆ ಮಾಡಲಾಗಿದೆ.
ಬೆಂಗಳೂರು : ಪ್ರತಿ ವರ್ಷ ಕೊಡಮಾಡುವಂತ ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12ರಂದು ನಡೆಯುವಂತಹ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ. ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕುರಿತಂತೆ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು …
Read More »ರಾತ್ರಿ ಔತಣಕೂ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ
ಬೆಂಗಳೂರು(ಜ.03): ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ …
Read More »ಬಿಜೆಪಿಯವರು ಎಲ್ಲರ ರಾಜೀನಾಮೆ ಕೇಳುತ್ತಾರೆ
ಬೆಂಗಳೂರು: ನಾವೆಲ್ಲರೂ ನಮ್ಮ ಇಲಾಖೆಯ ಕಾರ್ಯವೈಖರಿಯ ರಿಪೋರ್ಟ್ ಕಾರ್ಡ್ ಅನ್ನು ಹೈಕಮಾಂಡ್ಗೆ ನೀಡಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಮ್ಮ ಬಳಿ ರಿಪೋರ್ಟ್ ಕೇಳಿತ್ತು, ಕೊಟ್ಟಿದ್ದೇವೆ. ಇಲಾಖೆಯ ಕೆಲಸ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕೇಳಿದ್ದರು. ಸಚಿವರೆಲ್ಲರೂ ಅವರವರ ಕಾರ್ಯವೈಖರಿ ಬಗ್ಗೆ ವರದಿ ನೀಡಿದ್ದಾರೆ ಎಂದರು. ಸಚಿವ ಸಂಪುಟ ಪುನರ್ರಚನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬಳಿಯೇ ನೀವು ಕೇಳಬೇಕು. …
Read More »ಐಶ್ವರ್ಯ ಗೌಡ ಮನೆ ಜಾಲಾಡಿದ ಪೊಲೀಸರು
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ 3.25 ಕೋಟಿ ರೂ ವಂಚಿಸಿರುವ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಆರ್.ಆರ್.ನಗರ ಪೊಲೀಸರು, ಸರ್ಚ್ ವಾರೆಂಟ್ ಪಡೆದು ಬುಧವಾರ ಆರೋಪಿ ಐಶ್ವರ್ಯ ಗೌಡ ಮನೆಗೆ ತೆರಳಿ ಪರಿಶೀಲನೆ ನಡೆಸಿದರು. 3.25 ಕೋಟಿ ರೂ. ಹಾಗೂ 430 ಗ್ರಾಂ ಚಿನ್ನಾಭರಣ ವಂಚಿಸಿರುವುದಾಗಿ ಆರೋಪಿಸಿ ಶಿಲ್ಪಾ ಗೌಡ ಎಂಬವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರೆಂಟ್ …
Read More »ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಯತ್ನಾಳ್
ಬೆಂಗಳೂರು: ಬಿಜೆಪಿಯಿಂದ ನನ್ನನ್ನು ಯಾಕೆ ಉಚ್ಛಾಟನೆ ಮಾಡುತ್ತಾರೆ. ನನ್ನನ್ನು ಉಚ್ಛಾಟಿಸಲಾಗುತ್ತದೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಜೊತೆಗೂ ಸಹ ನನಗೆ ಅಡ್ಜಸ್ಟ್ಮೆಂಟ್ ಇಲ್ಲ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …
Read More »ಬಿಜೆಪಿಯ ಮಾಜಿ ಶಾಸಕರಾದ ಎಸ್. ಎ ರಾಮದಾಸ್ ಹಾಗೂ ಎಲ್. ನಾಗೇಂದ್ರ ಲೋಕಾಯುಕ್ತ ವಿಚಾರಣೆಗೆ ಹಾಜರು
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಹಂಚಿಕೆ ವಿಚಾರ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಇಂದು ಬಿಜೆಪಿಯ ಮಾಜಿ ಶಾಸಕರಾದ ಎಸ್. ಎ ರಾಮದಾಸ್ ಹಾಗೂ ಎಲ್. ನಾಗೇಂದ್ರ ಅವರನ್ನ ಕರೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ರಾಮದಾಸ್ 5 …
Read More »