ಇಂದು ಸಂಜೆ ಸವದತ್ತಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಸವದತ್ತಿ ಮತಕ್ಷೇತ್ರದ ಶಾಸಕರ ಘನ ಉಪಸ್ಥಿತಿಯಲ್ಲಿ ಉಗರಗೋಳ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ / ಗ್ರಾಮಸ್ಥರೊಂದಿಗೆ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಾಗೂ ಜಮೀನಿನ ವಿಷಯದ ಕುರಿತು ಸಭೆ ಜರುಗಿಸಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿ ಯವರ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು …
Read More »Yearly Archives: 2025
ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮ
ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಕ್ಷೇತ್ರದ ಎಲ್ಲ ಗ್ರಾಮಗಳ, ಸರ್ವ ಜನಾಂಗಗಳ ಹಿತ ದೃಷ್ಟಿಯಿಂದ ಎಲ್ಲ ಮಹನೀಯರ ಮೂರ್ತಿಗಳ ಪ್ರತಿಷ್ಟಾಪನೆಗೆ ಮಹತ್ವ ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಮಹನೀಯರ ಮೂರ್ತಿಗಳು ತಲೆ ಎತ್ತಲಿವೆ. ಈ ಸಂದರ್ಭದಲ್ಲಿ ಯುವರಾಜಣ್ಣ ಕದಂ, ಜಯವಂತ ಬಾಳೇಕುಂದ್ರಿ, ಯುವ ಕಾಂಗ್ರೆಸ್ ಮುಖಂಡ …
Read More »ತಹಶೀಲ್ದಾರ್ ಸಹಿ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್ಐ!
ದೇವನಹಳ್ಳಿ, ಫೆಬ್ರವರಿ 20: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಲಪಟಾಯಿಸಿ ಸಿಕ್ಕಿ ಬಿದ್ದಿದ್ದಾರೆ. ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ, 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ ಇಲಾಖೆಯಲ್ಲಿನ …
Read More »ಸಾಲಗಾರನ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ
ಧಾರವಾಡ, ಫೆಬ್ರವರಿ 19: ಕಿರುಕುಳ ತಪ್ಪಿಸಬೇಕು ಮತ್ತು ಸಾವಿನ ಸರಣಿ ನಿಲ್ಲಬೇಕು ಅಂತಾ ಸರ್ಕಾರ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ತಂದಿದೆ. ಆದರೆ ಫೈನಾನ್ಸ್ (Microfinance) ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಕರ್ನಾಟಕದಲ್ಲಿ ಮತ್ತೆ ಸಾವುಗಳು ಸಂಭವಿಸುತ್ತಲ್ಲೇ ಇದ್ದಾವೆ. ಇದೀಗ ಸಾಲಗಾರನ ಕಿರುಕುಳದಿಂದಾಗಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಉಣಕಲ್ಕೆರೆಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಯಲಿವಾಳ ಗ್ರಾಮದ ನಿವಾಸಿ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ …
Read More »ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಆಟವಾಡುತ್ತಿದ್ದ ಮಗು ಮೇಲೆ ಹರಿದ ಜೆಸಿಬಿ
ಬೆಂಗಳೂರು, ಫೆಬ್ರವರಿ 19: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ (death) ಹೊಂದಿರುವಂತಹ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. …
Read More »ಮಹಾಕುಂಭಕ್ಕೆ ನಿರೀಕ್ಷೆಮೀರಿದ ಜನಸಾಗರ; ವ್ಯಾಪಾರ ವಹಿವಾಟು ಮೂರು ಲಕ್ಷ ಕೋಟಿ
ನವದೆಹಲಿ, ಫೆಬ್ರುವರಿ 19: ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ಮುಂದಿನ ವಾರ ಸಮಾಪ್ತಿಗೊಳ್ಳಲಿರುವ ಮಹಾಕುಂಭ ಮೇಳ ನಿರೀಕ್ಷೆಮೀರಿದ ಯಶಸ್ಸು ಕಾಣುತ್ತಿದೆ. ಜನವರಿ 13ರಂದು ಆರಂಭವಾಗಿರುವ ಮತ್ತು ಪ್ರತೀ 144 ವರ್ಷಗಳಿಗೊಮ್ಮೆ ನಡೆಯುವ ಈ ಕುಂಭಮೇಳದಲ್ಲಿ ನಿರೀಕ್ಷಿಸಿದುದಕ್ಕಿಂತಲೂ ಹೆಚ್ಚಿನ ಜನರು ಈವರೆಗೆ ಭೇಟಿ ನೀಡಿದ್ದಾರೆ. ಇಡೀ ಕುಂಭಮೇಳದ ಆರು ವಾರದಲ್ಲಿ ಒಟ್ಟು 40 ಕೋಟಿ ಭಕ್ತರು ಆಗಮಿಸಬಹುದು ಎಂದು ಭಾವಿಸಲಾಗಿತ್ತು. ಆದರೆ, ಈವರೆಗಿನ ಸಂಖ್ಯೆ 55 ಕೋಟಿ ಮೀರಿದೆ. ಇನ್ನೊಂದು ವಾರ ಬಾಕಿ ಇದ್ದು ಒಟ್ಟು …
Read More »ಸನಾತನ ಧರ್ಮದ ಅತ್ಯಂತ ಪ್ರಸಿದ್ಧ ಮಹಾಪರ್ವ ಮತ್ತು ಧಾರ್ಮಿಕ ಮೇಳವಾದ ಕುಂಭ
ಸನಾತನ ಧರ್ಮದ ಅತ್ಯಂತ ಪ್ರಸಿದ್ಧ ಮಹಾಪರ್ವ ಮತ್ತು ಧಾರ್ಮಿಕ ಮೇಳವಾದ ಕುಂಭವು ಪ್ರಪಂಚದಾದ್ಯಂತ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆದರೆ ಅದರ ಬಗ್ಗೆ ಮನಸ್ಸಿನಲ್ಲಿ ಹಲವು ರೀತಿಯ ಕುತೂಹಲಗಳಿವೆ. ಕೆಲವೊಮ್ಮೆ ಅದು ಹೇಗೆ ಪ್ರಾರಂಭವಾಯಿತು..? ಕೆಲವೊಮ್ಮೆ ಅದರೊಂದಿಗೆ ಸಂಬಂಧಿಸಿದ ಧಾರ್ಮಿಕ ನಂಬಿಕೆಗಳೇನು.? ಕುಂಭ ಮಹಾಪರ್ವವನ್ನು ಯಾಕೆ ಆಚರಿಸಬೇಕು..? ಹೀಗೆ ನಾನಾ ಪ್ರಶ್ನೆಗಳು, ಗೊಂದಲಗಳು ನಮ್ಮ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಮೂರು ವಿಧಗಳ ಕುಂಭವಿದ್ದು, ಅವುಗಳನ್ನೇಕೇ ಬೇರೆ ಬೇರೆ ವರ್ಷಗಳಲ್ಲಿ ಆಯೋಜಿಸಲಾಗುತ್ತದೆ.? ಎನ್ನುವ …
Read More »ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಡಿಸಿಎಂ ಡಿ.ಕೆ.ಶಿವಕುಮಾರ್.
ಉದಯಪುರ: “ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು …
Read More »ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ …
Read More »140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ …
Read More »