ಜನತಾ ದರ್ಶನ ನಡೆಸಿದ ಶಾಸಕ ಆಸೀಫ್ ಸೇಠ್… ನಗರಸೇವಕರಿಂದ ಬಾಕಿ ಕಾಮಗಾರಿಗಳ ಮಾಹಿತಿ ಪಡೆದ ಶಾಸಕರು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿಯ ವೀರಭದ್ರ ನಗರದಲ್ಲಿ ಜನತಾ ದರ್ಶನ ನಡೆಸಿ ನಾಗರೀಕರ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಸ್ಥಳೀಯರೊಂದಿಗೆ ಸಂವಾದ ನಡೆಸಿದ ಶಾಸಕರ ಮುಂದೆ ಸ್ಥಳೀಯರು ಮೂಲಭೂತ ಸೌಕರ್ಯಗಳು, ಸ್ವಚ್ಛತೆ, ನೀರು ಸರಬರಾಜು, ಸೇರಿದಂತೆ ವಿವಿಧ ಬೇಡಿಕೆಗಳನ್ನು ತೆರೆದಿಟ್ಟರು. ನಂತರ ಶಾಸಕ ಆಸೀಫ್ ಸೇಠ್ ಮತ್ತು ಅಮಾನ್ …
Read More »Yearly Archives: 2025
ವಿವಿಧ ನಾಲ್ಕು ಪ್ರಕರಣಗಳಲ್ಲಿ 11 ಜನರ ಬಂಧನ
ವಿವಿಧ ನಾಲ್ಕು ಪ್ರಕರಣಗಳಲ್ಲಿ 11 ಜನರ ಬಂಧನ ವಿವಿಧ ನಾಲ್ಕು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 11 ಜನರನ್ನು ಬಂಧಿಸಿ ಅವರಿಂದ ಸುಮಾರು 14.400 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿರುವ ಘಟನೆ ಜರುಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಮಚ್ಚೆಯ ಹಿಂದುಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದ ಹಿಂದುಗಡೆ ಜೂಜಾಟ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಸಂತೋಷ ದಳವಾಯಿ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಮಹಾದೇವ ಬಸವಣ್ಣಿ …
Read More »ಹುಬ್ಬಳ್ಳಿ- ಕಾರೈಕ್ಕುಡಿ ನಡುವೆ ವಿಶೇಷ ರೈಲು ಸಂಚಾರ: ತಾಳಗುಪ್ಪ– ಯಶವಂತಪುರ ರೈಲು ಸಮಯ ಬದಲು
ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆ ಮತ್ತು ನಂತರದ ರಜಾ ದಿನಗಳ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ತಮಿಳುನಾಡಿನ ಕಾರೈಕ್ಕುಡಿ ಜಂಕ್ಷನ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ – ಕಾರೈಕ್ಕುಡಿ ಜಂಕ್ಷನ್ ನಡುವೆ 07331 ಸಂಖ್ಯೆಯ ಈ ವಿಶೇಷ ಎಕ್ಸ್ಪ್ರೆಸ್ ರೈಲು ಆಗಸ್ಟ್ 14 ರಂದು (ಗುರುವಾರ) ಮಧ್ಯಾಹ್ನ 4 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಗ್ಗೆ 11 …
Read More »ಮತಗಳ್ಳತನ ಆರೋಪದ ವಿರುದ್ಧ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಪದಚ್ಯುತಿಗೊಳಿಸಲಾಗಿದೆ.
ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಪದಚ್ಯುತಿಗೊಳಿಸಲಾಗಿದೆ. ತುಮಕೂರಿನಲ್ಲಿ ಮಾತನಾಡಿದ್ದ ಸಚಿವ ಕೆ.ಎನ್.ರಾಜಣ್ಣ, ವೋಟರ್ ಲಿಸ್ಟ್ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದರು. ಮತಪಟ್ಟಿ ಅಕ್ರಮಗಳು ನಡೆದಿರುವುದು ಸತ್ಯ. ಆದರೆ, ಆ ಅಕ್ರಮಗಳು ನಮ್ಮ ಕಣ್ಮುಂದೆನೆ ನಡೆದಿದ್ದಲ್ಲ. ನಮಗೆ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ ಎಂದು …
Read More »ಕೇವಲ ಐದನೂರು ರೂಪಾಯಿ ಹಣಕ್ಕಾಗಿ ಸ್ನೇಹಿತನ ಹತ್ಯೆ
ಕೇವಲ ಐದನೂರು ರೂಪಾಯಿ ಹಣಕ್ಕಾಗಿ ಸ್ನೇಹಿತನ ಹತ್ಯೆ ಕೇವಲ ಐದನೂರು ರೂಪಾಯಿ ಹಣಕ್ಕಾಗಿ ಸ್ನೇಹಿತನ ಮನೆಗೆ ನುಗ್ಗಿ ತಾಯಿ ಸಮ್ಮುಖದಲ್ಲಿ ಸ್ನೇಹಿತನ ಮೇಲೆ ಹಲ್ಲೆ ನಡಿಸಿ ಕೊಲೆ ಮಾಡಿರುವ ಘಟನೆ ಜರುಗಿದೆ, ಕೇವಲ ಐದನೂರು ರೂಪಾಯಿಗೆ ಸ್ನೇಹಿತನ ಮನೆಗೆ ನುಗ್ಗಿ ತಾಯಿ ಸಮ್ಮುಖದಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ(45) ಕೊಲೆಯಾದ ದುರ್ದೈವಿ. ಆರೋಪಿಗಳಾದ ಮಿಥುನ ಕುಬಜಿ, …
Read More »ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಂಧನ ಭೀತಿಯಿಂದ ಹೈಕೋರ್ಟ್ಗೆ ಸಂಸದ ಸುಧಾಕರ್ ಅರ್ಜಿ, ಮಧ್ಯಾಹ್ನ ವಿಚಾರಣೆ
ಬೆಂಗಳೂರು: ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಅವರಣದಲ್ಲಿ ಡೆತ್ನೋಟ್ ಬರೆದಿಟ್ಟು ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವ ಸಂಸದ ಡಾ. ಕೆ. ಸುಧಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೋಮವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠಕ್ಕೆ ವಿಷಯವನ್ನು ಪ್ರಸ್ತಾಪಿಸಿ, ಅರ್ಜಿದಾರರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅವರನ್ನು ಬಂಧಿಸಬೇಕು ಎಂಬ ಕಾರಣದಿಂದ ವ್ಯಾಪ್ತಿಯಿಲ್ಲದ ನ್ಯಾಯಾಲಯಕ್ಕೆ ದೂರು ದಾಖಲಿಸಲಾಗಿದೆ. ಆದ್ದರಿಂದ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. …
Read More »‘ನನ್ನನ್ನು ಜೈಲಿಗೆ ಹಾಕಿ, ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ’: ಜನಾರ್ದನ ಪೂಜಾರಿ
ಮಂಗಳೂರು: “ಧರ್ಮಸ್ಥಳದ ವಠಾರವನ್ನು ಎಸ್ಐಟಿ ಅಗೆಯುತ್ತಿದೆ. ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ಮೋದಿಯವರು ಏನು ಮಾಡುತ್ತಿದ್ದಾರೆ? ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಮುಖ್ಯಮಂತ್ರಿಯವರೇ ನಾಚಿಕೆಯಾಗುತ್ತಿದೆ ನನಗೆ, ಒಂದು ದೇವಸ್ಥಾನವನ್ನು ಹಾಳುಗೆಡವುತ್ತಿರುವಾಗ ಮಾತನಾಡುವ ಧೈರ್ಯ ಇಲ್ಲವೇ ನಿಮಗೆ? ನಾನು ಇದರ ವಿರುದ್ಧ ಧ್ವನಿ ಎತ್ತುತ್ತೇನೆ. ನನ್ನನ್ನು ಬೇಕಾದರೆ ಜೈಲಿಗೆ ಹಾಕಿ. ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ” ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಸರ್ಕಾರದ ವಿರುದ್ಧ ದೋಸ್ತಿಗಳ ಪ್ರತಿಭಟನೆ
ಬೆಂಗಳೂರು: ಮಳೆಗಾಲದ ಅಧಿವೇಶನದ ಮೊದಲ ದಿನವೇ ಮೈತ್ರಿ ಪಕ್ಷಗಳು ಸರ್ಕಾರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಿದವು. ಕಾಲ್ತುಳಿತ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ ಸದನ ಆರಂಭಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಎಲ್ಲ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ …
Read More »ಮೈಸೂರು ದಸರಾ ಗಜಪಡೆಯ ತೂಕ ಪರೀಕ್ಷೆ: 25 ವರ್ಷದ ಭೀಮನೇ ಬಲಾಢ್ಯ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ. ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ …
Read More »ಧರ್ಮಸ್ಥಳ ಘರ್ಷಣೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 6 ಮಂದಿ ಬಂಧನ
ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಆ. 6ರಂದು ನಡೆದಿದ್ದ ಅಹಿತಕರ ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22), ಶಶಿಧರ್(30), ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಕಲ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತ ಆರೋಪಿಗಳು. ಧರ್ಮಸ್ಥಳದ ಪಾಂಗಳದಲ್ಲಿ ಆಗಸ್ಟ್ 6 ರಂದು ನಾಲ್ವರು ಯೂಟ್ಯೂಬರ್‌ಗಳ …
Read More »