Breaking News

Yearly Archives: 2025

ಪತಿ ಹಾಗೂ ಅವರ ಮನೆಯವರ ಕಿರುಕುಳಕ್ಕೆ ಬೆಸತ್ತು ಗೃಹಿಣಿ ಆತ್ಮಹತ್ಯೆ.

ಬೆಳಗಾವಿ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮತ್ತು ಅವರ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ಮೃತ ಮಹಿಳೆ. ಶನಿವಾರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿ ಜೊತೆಗೆ …

Read More »

ಮೃತಪಟ್ಟ ಗರ್ಭಿಣಿ ಮತ್ತು ಆತ್ಮಹತ್ಯೆಗೆ ಯತ್ನಿಸಿದ ಪತಿ

ಹುಬ್ಬಳ್ಳಿ: ಗರ್ಭಿಣಿ ಪತ್ನಿ ಮೃತಪಟ್ಟ ವಿಷಯ ತಿಳಿದ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ರಾಧಿಕಾ(19) ಮೃತಪಟ್ಟಿರುವ ಗರ್ಭಿಣಿ. ಈಕೆಯ ಪತಿ ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದವರು. ಮಲ್ಲೇಶ್​ಗೆ ಕಿಮ್ಸ್​ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲೇ 8 ತಿಂಗಳ ಭ್ರೂಣ ಸಾವನ್ನಪ್ಪಿದ್ದ ಕಾರಣ ರಾಧಿಕಾ ಆರೋಗ್ಯದಲ್ಲಿ ತೀವ್ರವಾಗಿ …

Read More »

ರಾಜ್ಯದಲ್ಲಿ ​ವರ್ಷದ ಮೊದಲ ದಿನವೇ ಮತ್ತೋರ್ವ ಬಾಣಂತಿ ಡೆತ್.

ರಾಯಚೂರು: ರಾಜ್ಯದಲ್ಲಿ ಹೊಸ ​ವರ್ಷದ ಮೊದಲ ದಿನವೇ ಮತ್ತೋರ್ವ ಬಾಣಂತಿ ಮೃತರಾಗಿದ್ದಾರೆ. ಸಿಸೇರಿಯನ್​ ಹೆರಿಗೆಗೆ ಒಳಗಾಗಿದ್ದ ಬಾಣಂತಿ ಹಾಗೂ ಶಿಶು ಚಿಕಿತ್ಸೆಗೆ ಸ್ಫಂದಿಸದೇ ಮೃತಪಟ್ಟ ಘಟನೆ ಇಲ್ಲಿನ ರಿಮ್ಸ್ (ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಸೀದಾಪೂರ ಗ್ರಾಮದ ಶಿವಲಿಂಗಮ್ಮ (22) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಚೊಚ್ಚಲ ಹೆರಿಗೆಯ ಸಮಯದಲ್ಲಿಯೇ ಬಾಣಂತಿ ಸಾವನ್ನಪ್ಪಿದ್ದಾರೆ. ಅವರನ್ನು ಮಾನವಿ ಆಸ್ಪತ್ರೆಯಿಂದ ಡಿಸೆಂಬರ್ …

Read More »

ನಿಮ್ಮ ಸಹಕಾರ ಹೆಚ್ಚು ಬೇಕು ; ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಸಿ.ಎಂ ಕರೆ;

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ …

Read More »

120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ; 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳು

ಹಾವೇರಿ: ಪ್ರತಿಯೊಬ್ಬರಿಗೂ ಒಂದೊಂದು ಹವ್ಯಾಸ ಇರುತ್ತದೆ. ಕೆಲವರಿಗೆ ಹಳೆಯ ಕಾರ್​​ಗಳ ಸಂಗ್ರಹದ ಹವ್ಯಾಸ, ಇನ್ನು ಕೆಲವರಿಗೆ ಅಂಚೆ ಚೀಟಿ ಸಂಗ್ರಹಿಸುವ ಹವ್ಯಾಸ ಇರುತ್ತದೆ. ಆದರೆ, ಹಾವೇರಿಯಲ್ಲೊಬ್ಬ ವಿಶಿಷ್ಟ ಹವ್ಯಾಸವಿರುವ ಯುವಕನೊಬ್ಬನಿದ್ದಾನೆ. ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ …

Read More »

ಬೆಳಗಾವಿಯಲ್ಲಿ ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬೆಳಗಾವಿ: ಕಾಂಗ್ರೆಸ್​​​​​​ ಅಧಿವೇಶನದ ಶತಮಾನೋತ್ಸವದ ನಿಮಿತ್ತ ಬೆಳಗಾವಿಯಲ್ಲಿ ಆಯೋಜಿಸಿರುವ ಅಸ್ಮಿತೆ ಮಾರಾಟ ಮೇಳ, ಸರಸ್​​ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರ ದಂಡೇ ಹರಿದು ಬರುತ್ತಿದೆ. 4 ದಿನಗಳಲ್ಲಿ ಬರೋಬ್ಬರಿ 1.03 ಕೋಟಿ ರೂ. ವ್ಯಾಪಾರ ವಹಿವಾಟು ಕಂಡು ಬಂದಿದೆ. ಬೆಳಗಾವಿ ಸರ್ದಾರ ಮೈದಾನದಲ್ಲಿ ಡಿ.26ರಿಂದ ಜ. 4ರವರೆಗೆ ನಡೆಯುತ್ತಿರುವ ಸರಸ್ ಮೇಳ – ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಜನಾಕರ್ಷಣೀಯ ಕೇಂದ್ರ ಬಿಂದುವಾಗಿ ಮಾರ್ಪಾಡಾಗಿದೆ. ಡಿ.26 ರಂದು …

Read More »

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ”ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕಾ? ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು.‌ ಇದು ನಮ್ಮ ಹಂತದಲ್ಲಿ ಆಗುವಂತದ್ದಲ್ಲ.‌ ಹೈಕಮಾಂಡ್ ನಿರ್ಧರಿಸಲಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಒಬ್ಬೊಬ್ಬರು ಎರಡೂ ಹುದ್ದೆಯಲ್ಲಿದ್ದರೆ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಆಗುತ್ತದೆ. ಆದರೆ, ಅದು ನಮ್ಮ ಹಂತದಲ್ಲಿ ಇಲ್ಲ. ಹಾಗಾಗಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ …

Read More »