Breaking News

Yearly Archives: 2025

ಮಾರ್ಚ್ 7 ರಂದು ಆಯವ್ಯಯ ಮಂಡನೆ: ಮಾರ್ಚ್ ಮೂರರಿಂದ ಅಧಿವೇಶನ ;ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು …

Read More »

ಲಾರ್ಡ್ ಗಾಗಾ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ನಿರ್ದೇಶಕ ಶೂನ್ಯ.

ಬೆಂಗಳೂರು: ಹೆಡ್ ಬುಷ್ ಮತ್ತು ರೋಸಿ ಸಿನಿಮಾಗಳ ಸೂತ್ರಧಾರ ಶೂನ್ಯ ಈಗ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. ಸದ್ಯ ಲೂಸ್ ಮಾದ ಯೋಗಿ 50ನೇ ಚಿತ್ರ ರೋಸಿ ನಿರ್ದೇಶನದಲ್ಲಿ ಬ್ಯುಸಿಯಾಗಿ ಅವರು ಈ ಮಧ್ಯೆ ‘ಲಾರ್ಡ್ ಗಾಗಾ’ ಎಂಬ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ನಿರ್ದೇಶನ ಪಕ್ಕಕ್ಕಿಟ್ಟು ಶೂನ್ಯ ಲಾರ್ಡ್ ಗಾಗಾ ಮೂಲಕ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಶೂನ್ಯ ನಾಯಕನಾಗಿ ನಟಿಸುತ್ತಿರುವ ಚೊಚ್ಚಲ ಸಿನಿಮಾಗೆ ಲಾರ್ಡ್ ಗಾಗಾ ಎಂಬ …

Read More »

ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ; ಸಚಿವ ಕೆ.ಜೆ.ಜಾರ್ಜ್‌

ಹಾವೇರಿ : ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ದೊಳಗೆ ಲೈನ್‌ಮನ್‌ಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ …

Read More »

ರೈತರಿಗೆ ಗುಡ್ ನ್ಯೂಸ್ ,ಫೆ. 21ರಿಂದ ನಂದಿನಿ ಹಾಲಿನ ದರ ಪರಿಷ್ಕರಣೆ; ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಗೋಕಾಕದಲ್ಲಿಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನಿ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬೆಮ್ಯೂಲ್ ಅಧ್ಯಕ್ಷ್ ಬಾಲಚಂದ್ರ ಜಾರಕಿಹೊಳಿ. ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ನಗರದ ಹೊರವಲಯದಲ್ಲಿರುವ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ …

Read More »

ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿಎಂ ಸಿದ್ದರಾಮಯ್ಯಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ …

Read More »

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ವರದಿ ನೀಡಲು ಸೂಚನೆ; ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ …

Read More »

ತ್ರಿವೇಣಿ ಸಂಗಮದಲ್ಲಿ ಫೋನ್‌ಗೂ ಕುಂಭಸ್ನಾನ ಮಾಡಿಸಿದ ಭೂಪ..!

ಉತ್ತರ ಪ್ರದೇಶದ:  ತ್ರಿವೇಣಿ ಸಂಗಮದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಮಹಾ ಕುಂಭಮೇಳ ಇಡೀ ಜಗತ್ತಿನ ಗಮನ ಸೆಳೆದಿದೆ. 144 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಈಗಾಗಲೇ 50 ಕೋಟಿ ಭಕ್ತರು ಬಂದು, ಪವಿತ್ರ ಸ್ನಾನ ಮಾಡಿದ್ದಾರೆ. ಈ ಶುಭ ಘಳಿಗೆಯಲ್ಲೇ ಭಕ್ತನೊಬ್ಬ ತನ್ನ ಮೊಬೈಲ್ ಫೋನ್‌ಗೂ ಪವಿತ್ರ ಸ್ನಾನ ಮಾಡಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಹಿಂದೂಗಳ ಪವಿತ್ರ ಆಚರಣೆ ಆಗಿರುವ ಮಹಾ ಕುಂಭಮೇಳ ಪ್ರಪಂಚದ ಮೂಲೆ ಮೂಲೆಯಲ್ಲಿ ಸದ್ದು ಮಾಡುತ್ತಿದೆ. …

Read More »

ಫಾಸ್ಟ್​ಟ್ಯಾಗ್ ಹೊಸ ರೂಲ್ಸ್; ದುಪ್ಪಟ್ಟು ಹಣ ಪಾವತಿ..! ಏನಿದು ಹೊಸ ನಿಯಮ..?

ಬೆಂಗಳೂರು: ಫಾಸ್ಟ್‌ಟ್ಯಾಗ್‌ನ ಹೊಸ ನಿಯಮಾವಳಿಗಳು  ಇಂದಿನಿಂದ ಫೆ. 17 ಜಾರಿಗೆ ಬಂದಿವೆ. ಇದರ ಅಡಿಯಲ್ಲಿ, ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್‌ಟ್ಯಾಗ್ ಅನ್ನು ಕಪ್ಪುಪಟ್ಟಿಗೆ  ಸೇರಿಸಿದರೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ. ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಹನವು ಟೋಲ್ ದಾಟುವ ಮೊದಲು 60 ನಿಮಿಷಗಳಿಗಿಂತ ಹೆಚ್ಚು ಕಾಲ ಮತ್ತು ಟೋಲ್ ದಾಟಿದ ನಂತರ 10 ನಿಮಿಷಗಳ ಕಾಲ ಫಾಸ್ಟ್‌ಟ್ಯಾಗ್ ನಿಷ್ಕ್ರಿಯವಾಗಿದ್ದರೆ, ವಹಿವಾಟನ್ನು ತಿರಸ್ಕರಿಸಲಾಗುತ್ತದೆ. ಇದು ದೋಷ ಕೋಡ್ …

Read More »

ತಾಯಿ, ಹೆಂಡತಿ,ಮಗನಿಗೆ ವಿಷಕೊಟ್ಟು ಕೊನೆಗೆ ತಾನು ನೇಣಿಗೆ ಶರಾಣಾದ ವ್ಯಕ್ತಿ.

ಮೈಸೂರ: ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕೊಲೆ ಹಾಗೂ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ತಾಯಿ, ಪತ್ನಿ ಹಾಗೂ ಮಗನಿಗೆ ವಿಷವುಣಿಸಿದ ಗಂಡಸು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿ ಬಳಿಕ …

Read More »

ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.

ಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಕರೆದೊಯ್ದರೂ ಫಲಿಸದ ಚಿಕಿತ್ಸೆ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. …

Read More »