ರಾಯಚೂರು: ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದಿರುವ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಕುಟುಂಬ ಸಮೇತ ಭೇಟಿ ನೀಡಿದರು. ಭಾನುವಾರ ರಿಯಲ್ ಸ್ಟಾರ್ ನಟ ಉಪೇಂದ್ರ ತಮ್ಮ ಕುಟುಂಬದೊಂದಿಗೆ ಹಾಗೂ ನಟಿ ತಾರಾ ತಮ್ಮ ಕುಟುಂಬದೊಂದಿಗೆ ಮಂತ್ರಾಲಯಕ್ಕೆ ಬಂದು ರಾಯರ ದರ್ಶನ ಪಡೆದರು. ನಟ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ ಹಾಗೂ ಮಕ್ಕಳೊಂದಿಗೆ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದುಕೊಂಡರು. ಮೊದಲಿಗೆ ಶ್ರೀ ಮಂಚಲಮ್ಮ …
Read More »Yearly Archives: 2025
ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ಶಿವಮೊಗ್ಗದಲ್ಲಿ ವ್ಯಕ್ತಿ ವಿರುದ್ಧ ಪ್ರಕರಣ
ಶಿವಮೊಗ್ಗ: ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಇಲ್ಲಿನ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದವು. ಈ ವೇಳೆ, ದಾಳಿ ಸಂಬಂಧಿಸಿದ ವಿಡಿಯೋ ತುಣಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್ ಇಬ್ರಾಹಿಂ ಖಾನ್ ಎಂಬಾತನ ವಿರುದ್ಧ ಕೇಸ್ …
Read More »ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಬೆಳಗಾವಿಯ ಸೊಸೆ …
Read More »ಮಲಿಕವಾಡ ಗ್ರಾಮದಲ್ಲಿ ಮಹಾಲಕ್ಷ್ಮೀ ಮೂರ್ತಿ ಭವ್ಯ ಮೆರವಣಿಗೆ
ಮಲಿಕವಾಡ ಗ್ರಾಮದಲ್ಲಿ ಮಹಾಲಕ್ಷ್ಮೀ ಮೂರ್ತಿ ಭವ್ಯ ಮೆರವಣಿಗೆ ಚಿಕ್ಕೋಡಿ: ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಮಹಾಲಕ್ಷ್ಮೀ ಮಂದಿರದ ವಾಸ್ತು ಪೂಜೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭದ ಅಂಗವಾಗಿ ಮಹಾಲಕ್ಷ್ಮೀ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು. ಪ್ರಾರಂಭದಲ್ಲಿ ಧೂದಗಂಗಾ ನದಿಗೆ ಪೂಜೆ ಸಲ್ಲಿಸಿದ ಸುಮಂಗಲೆಯರು ನಂತರ ಮೂರ್ತಿಯ ಮತ್ತು ಕುಂಭ ಮೇಳದ ಭವ್ಯ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿತು. ವಿವಿಧ ವಾಧ್ಯಗಳು ಮತ್ತು ರೂಪಕಗಳು ಮೆರಗು ತಂದವು, …
Read More »ಶಕ್ತಿ ಯೋಜನೆ ಟಿಕೇಟ್ ನೀಡಲು ಹಣ ನೀಡಿ…
ಶಕ್ತಿ ಯೋಜನೆ ಟಿಕೇಟ್ ನೀಡಲು ಹಣ ನೀಡಿ… ಬೆಳಗಾವಿಯಲ್ಲಿ ಪ್ರಯಾಣಿಕರೊಂದಿಗೆ ಸಾರಿಗೆ ಬಸ್ ಕಂಡಕ್ಟರ್ ಕಿರಿಕ್…ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಿಂದ ಜಾನೇವಾಡಿ ಗ್ರಾಮಕ್ಕೆ ಹೊರಟ್ಟಿದ ಸಾರಿಗೆ ಬಸ್ ಕಂಡಕ್ಟರ್ ಮಹಿಳೆಯರೊಂದಿಗೆ ಕಿರಿಕ್ ಮಾಡಿದ ಹಿನ್ನೆಲೆ ಪ್ರಯಾಣಿಕರು ಕಂಡಕ್ಟರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಕೊಡಬೇಕಿದ್ದ ಕಂಡಕ್ಟರ್ ನೀವು ಹಣ ಕೊಡಬೇಕು ಇಲ್ಲದಿದ್ದರೆ ಕೆಳಗೆ ಇಳಿಯಿರಿ …
Read More »ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವರು ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ತಲುಪಿಸಬೇಕು ಉಡುಪಿ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, …
Read More »ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ, ಮುಂಜಾಗ್ರತಾ ಕ್ರಮಕ್ಕೆ ಸಚಿವರ ಆದೇಶ
ಮಳೆಗಾಲ ಎದುರಿಸಲು ಸನ್ನದ್ಧರಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ, ಮುಂಜಾಗ್ರತಾ ಕ್ರಮಕ್ಕೆ ಸಚಿವರ ಆದೇಶ ಉಡುಪಿ: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಳೆಗಾಲ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ …
Read More »ಗುರಾಯಿಸಿ ನೋಡಿದ್ದಕ್ಕೆ ಮೂವರು ಯುವಕರಲ್ಲಿ ಮಾರಾಮಾರಿ…ಚಾಕು ಇರಿತ
ಗುರಾಯಿಸಿ ನೋಡಿದ್ದಕ್ಕೆ ಮೂವರು ಯುವಕರಲ್ಲಿ ಮಾರಾಮಾರಿ…ಚಾಕು ಇರಿತ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ಗುರಾಯಿಸಿ ನೋಡುವ ವಿಚಾರದಲ್ಲಿ ನಡೆದ ಪರಸ್ಪರ ಹಲ್ಲೆಯಲ್ಲಿ ಇಬ್ಬರೂ ಯುವಕರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆಯ ಪಂಕಾ ಮಸೀದಿ ಬಳಿ ನಡೆದಿದೆ. ಬಾಗಲಕೋಟೆಯ ಪಂಕಾ ಮಸೀದಿ ಬಳಿ ಗುರಾಯಿಸಿ ನೋಡುವ ವಿಚಾರದಲ್ಲಿ ಅಲ್ತಾಫ್, ಸಂದೀಪ್ ಮತ್ತು ಸಚಿನ್ ಎಂಬುವರ ಮಧ್ಯೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆದಿದೆ. ನಂತರ ಪರಸ್ಪರ ಚಾಕು ಇರಿದುಕೊಂಡಿದ್ದಾರೆ. ಸಂದೀಪ್ ಮತ್ತು …
Read More »ಹಲಕರ್ಣಿ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಖಾನಾಪೂರ : ಹಲಕರ್ಣಿ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಖಾನಾಪೂರ ತಾಲೂಕು ಹಲಕರ್ಣಿ ಗ್ರಾಮದ 19 ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪ್ರತೀಕ್ ರಾಜು ತುರಮುರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಬಾಗದ ದುರ್ಗಾದೇವಿ ಜಾತ್ರೆಗೆ ಹೋಗಿ ಬಂದು ಎದೆ ನೋವಿದೆ ಎಂದು ಕೆಲಸಕ್ಕೆ ಹೋಗದೆ ಎರಡು ದಿನ ಮನೆಯಲ್ಲಿಯೇ ಇದ್ದ ಪ್ರತೀಕ್ ಇಂದು ನೇಣು …
Read More »ಬೆಳಗಾವಿಯಲ್ಲಿ ಶಿವಕಾಲಿನ ಸಮರ ಕಲೆಗಳ ತರಬೇತಿ… ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ
ಬೆಳಗಾವಿಯಲ್ಲಿ ಶಿವಕಾಲಿನ ಸಮರ ಕಲೆಗಳ ತರಬೇತಿ… ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ ಬೆಳಗಾವಿಯ ಸವ್ಯಸಾಚಿ ಗುರುಕುಲಂ, ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ್ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಶಿವಕಾಲೀನ ಸಮರ ಕಲೆಗಳು ಮತ್ತು ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನದ ಪ್ರದೇಶದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿ 10 ರಿಂದ 60 …
Read More »
Laxmi News 24×7