Breaking News

Yearly Archives: 2025

ಸರ್ಕಾರ ಘೋಷಿಸಿದಂತೆಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನೀಡಬೇಕು: ರೈತ ಮುಖಂಡ ಚುನ್ನಪ್ಪ ಪೂಜಾರಿ ಆಗ್ರಹ

ಚಿಕ್ಕೋಡಿ(ಬೆಳಗಾವಿ): ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಣಿದು ಸರ್ಕಾರ 3,300 ರೂಪಾಯಿ ಕೊಡುವುದಾಗಿ ಘೋಷಿಸಿದೆ. ಆದರೆ ಸಕ್ಕರೆ ಕಾರ್ಖಾನೆ ಮಾಲೀಕರು ಹೆಚ್ಚಿಗೆ 50 ರೂಪಾಯಿ ಕೊಡುವುದಕ್ಕೆ ಬರುವುದಿಲ್ಲ ಎಂದಿದ್ದಾರೆ. ಅದು ನಮಗೆ ಗೊತ್ತಿಲ್ಲ, ಸರ್ಕಾರ ಘೋಷಿಸಿದಂತೆ ನಮಗೆ ಪ್ರತಿ ಟನ್ ಕಬ್ಬಿಗೆ 3,300 ದರ ನೀಡಬೇಕು ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ಈಟಿವಿ ಭಾರತ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು. ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ  ಮಾತನಾಡಿದ ಅವರು, ಪ್ರತಿ ಟನ್ …

Read More »

ಜೈಲಿನಲ್ಲಿ ಮೊಬೈಲ್​ ಬಳಸುತ್ತಿರುವ ಕೈದಿಗಳು

ಬೆಂಗಳೂರು: ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಉಮೇಶ್‌ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ತರಣ್ ರಾಜ್​​ ತಮ್ಮ ಸೆಲ್​ಗಳಲ್ಲಿ ಮೊಬೈಲ್​ ಬಳಸುತ್ತಿದ್ದಾರೆ ಎಂಬ ವಿಡಿಯೋ ವೈರಲ್​ ಆಗಿವೆ. ಈ ವಿಚಾರ ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸ ಒದಗಿಸಿವೆ. ಉಮೇಶ್​ ರೆಡ್ಡಿ ಸೆಲ್​ನಲ್ಲಿ ಟಿವಿ ವ್ಯವಸ್ಥೆ ಇರುವುದು ವೈರಲ್​ ವಿಡಿಯೋದಲ್ಲಿ ಕಂಡು ಬಂದಿದೆ. ಬ್ಯಾರಕ್​ ಪರಿಶೀಲನೆಗೆ ಎಡಿಜಿಪಿ ಸೂಚನೆ: ಈ ದೃಶ್ಯಗಳು ಬಹಿರಂಗವಾಗುತ್ತಿದ್ದಂತೆ ಸಂಬಂಧಪಟ್ಟ ಕೈದಿಗಳ ಬ್ಯಾರಕ್‌ಗಳನ್ನು …

Read More »

ಸಾರಿಗೆ ಸಂಸ್ಥೆ ಬಸ್ ಹರಿದು ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ.

ರಾಯಚೂರು: ಸಾರಿಗೆ ಸಂಸ್ಥೆ ಬಸ್ ಹರಿದು ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ. ಸಿದ್ದರಾಮ(11) ಸ್ಥಳದಲ್ಲೇ ಮೃತಪಟ್ಟ ಬಾಲಕ. ಬಾಲಕ ಧನಂಜಯ್​ನ ಎರಡು ಕೈಗಳಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗಸೂಗೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಮೂಲತಃ ಲಿಂಗಸೂಗೂರು ಪಟ್ಟಣದ ನಿವಾಸಿಯಾದ ಬಸವರಾಜ ಎಂಬವರು ಬೇರೆ ಊರಿಗೆ ತೆರಳು ತನ್ನ ಇಬ್ಬರು ಮಕ್ಕಳಾದ ಸಿದ್ದರಾಮ …

Read More »

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಜೊತೆಗಿನ ಸಭೆಯಲ್ಲಿ ತೀರ್ಮಾನವಾದಂತೆ ಆದೇಶ ಹೊರಬಿದ್ದಿದೆ. 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಕ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು …

Read More »

ರಸ್ತೆ ಗುಂಡಿ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ‘ಗುಂಡಿಗಳಿಗೆ ಅವರ ಸರ್ಕಾರವೇ ಪಿತಾಮಹ’ – ಡಿಸಿಎಂ

ಬೆಂಗಳೂರು: ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು, ಅಪಘಾತಕ್ಕೆ ಕಾರಣವಾಗುವ ಹಾಗೂ ಜನರ ಜೀವಹಾನಿಗೆ ಕಾರಣವಾಗುತ್ತಿರುವ ರಸ್ತೆ ಗುಂಡಿಗಳ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ನಿಲ್ಲಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ನಗರದಲ್ಲಿ ಕಸದ ಸಮಸ್ಯೆ ಹಾಗೂ ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ, ಸರ್ಕಾರದ ಗಮನ ಸೆಳೆಯಲು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದರು. ಜನಜಾಗೃತಿ ಅಭಿಯಾನದಲ್ಲಿ …

Read More »

ರಿಕವರಿ ಆಧಾರದ ಮೇಲೆ 3,300 ರೂ. ದರ ನಿಗದಿ ಅವೈಜ್ಞಾನಿಕ; 3,500 ರೂ. ದರಕ್ಕಾಗಿ ಬೈಲಹೊಂಗಲ ಬಂದ್!

ಬೆಳಗಾವಿ: ರಿಕವರಿ ಆಧಾರದ ಮೇಲೆ ಪ್ರತಿ ಟನ್ ಕಬ್ಬಿಗೆ 3,300 ರೂ. ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದ್ದಂತೆ ಒಂದೆಡೆ ವಿಜಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದೆಡೆ 3,500 ರೂ.‌ ದರವನ್ನೇ ನಿಗದಿಪಡಿಸುವಂತೆ ಹೋರಾಟ ಮುಂದುವರಿದಿದೆ. ಬೈಲಹೊಂಗಲ ಬಂದ್ ಮಾಡಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಲಹೊಂಗಲ ನಗರದಲ್ಲಿ ಇಂದು ಬೆಳಗ್ಗೆಯಿಂದ ಅಂಗಡಿ – ಮುಂಗಟ್ಟು ಬಂದ್ ಮಾಡಿರುವ ಹೋರಾಟಗಾರರು, ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಘೋಷಣೆ ಮೊಳಗಿಸಿದರು. ಪ್ರತಿ …

Read More »

ಧರ್ಮಸ್ಥಳದಲ್ಲಿ 74 ಪ್ರತ್ಯೇಕ ಎಫ್ಐಆರ್‌ ದಾಖಲಿಸಿ ತನಿಖೆ ನಡೆಸಬೇಕು: ಬೆಳ್ತಂಗಡಿ ವಿದ್ಯಾರ್ಥಿನಿ ತಾಯಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲು 74 ಅನಾಥ ಶವಗಳನ್ನು ಹೂತು ಹಾಕಿರುವ ಆರೋಪ ಸಂಬಂಧ ಆ ಎಲ್ಲ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡಬೇಕು ಎಂದು ಕೋರಿ ಮೃತ ಬೆಳ್ತಂಗಡಿ ವಿದ್ಯಾರ್ಥಿನಿಯ ತಾಯಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲ ಅನಾಥ ಶವಗಳು ಮತ್ತು ನಾಪತ್ತೆ ಪ್ರಕರಣದಲ್ಲಿ ಅವರ ಪೋಷಕರಿಗೆ ನ್ಯಾಯ ದೊರಕಿಸಿಕೊಡಬೇಕಾಗಿದ್ದು, ಪ್ರತಿಯೊಂದು ಪ್ರಕರಣಕ್ಕೂ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ನಿರ್ದೇಶನ ನೀಡಬೇಕು …

Read More »

ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು

ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು ಹುಬ್ಬಳ್ಳಿ: “ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ತಾತ್ಕಾಲಿಕವಾಗಿ ಮಾತ್ರ ಶಮನವಾಗಿದೆ. ಮತ್ತೆ ಯಾವಾಗ ಬೇಕಾದರೂ ಹೋರಾಟ ಹೆಚ್ಚಾಗಬಹುದು. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಇಂತಹ ಸಮಸ್ಯೆ ನಿರ್ಮಾಣವಾಗಿದೆ” ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ಕಾರ ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನು ಮಾಡಿಲ್ಲ. ಸಕ್ಕರೆ ಮಂತ್ರಿಗಳಿಗೆ ಎಲ್ಲಾ ಗೊತ್ತಿರುತ್ತದೆ. ನಾನು …

Read More »

“ನನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು, ಆಕೆಯಿಂದಲೇ ನನಗೆ ವಂಚನೆಯಾಗಿದೆ..”: ಇವಿಪಿ ಫಿಲ್ಮ್ ಸಿಟಿ ಮಾಲೀಕರಿಂದ ಪ್ರತಿ ದೂರು

ಬೆಂಗಳೂರು: ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಇವಿಪಿ ಫಿಲ್ಮ್ ಸಿಟಿ ಮಾಲೀಕರ ವಿರುದ್ಧ ದೂರು ನೀಡಿದ್ದ ಮಹಿಳಾ ಫ್ಯಾಷನ್ ಡಿಸೈನರ್ ವಿರುದ್ಧ ಪ್ರಕರಣ ದಾಖಲಿಸಿದ್ದು, ತಮ್ಮ ಮೇಲೆ ಬಂದಿರುವ ಆರೋಪ ಸುಳ್ಳು ಎಂದು ಮಾಲೀಕ ಸಂತೋಷ್ ಸ್ಪಷ್ಟನೆ ನೀಡಿದ್ದಾರೆ. ದೂರುದಾರ ಮಹಿಳೆ ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕಳೆದ ಅ.14ರಂದು ಇವಿಪಿ ಫಿಲ್ಮ್ ಸಿಟಿ ಮಾಲೀಕ ಸಂತೋಷ್ ರೆಡ್ಡಿ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ದೂರು ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯದ …

Read More »

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್​ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ

ಮೈಸೂರು: “ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಮತ್ತು ಮಾನವೀಯತೆಯನ್ನು ಏಕತೆಯಲ್ಲಿ ಬಂಧಿಸುವ ಶಕ್ತಿಯನ್ನು ಹೊಂದಿದೆ” ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್​ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, “ಕಲೆಯ ಉದ್ದೇಶ ಕೇವಲ ಅದನ್ನು ಪ್ರದರ್ಶಿಸುವುದಲ್ಲ, ಬದಲಾಗಿ ಸಮಾಜದಲ್ಲಿ ಸಂವೇದನೆ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸಂಗೀತ ಮತ್ತು …

Read More »