2024 ರ ಲೋಕಸಭೆ ಚುನಾವಣೆ ನಂತರ ನಡೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಸಂಪೂರ್ಣ ಬಹುಮತದ ಗೆಲುವು ಪಡೆದಿರುವ ಬಿಜೆಪಿಯ ಗೆಲುವಿನ ಅಶ್ವಮೇಧ ಕುದುರೆಯನ್ನು ಸದ್ಯಕ್ಕಂತೂ ಯಾರೂ ಕಟ್ಟಿ ಹಾಕುವ ಲಕ್ಷಣ ಇಲ್ಲ. ಈ ಗೆಲುವು ಮುಂದಿನ ರಾಜ್ಯಸಭೆ ಬಹುಮತ, ರಾಷ್ಟ್ರಪತಿ ಚುನಾವಣಾ ಗೆಲುವಿಗೆ ಮುನ್ನುಡಿ ಬರೆದಬಹುದೇ, ಈ ಬಗ್ಗೆ ಇಲ್ಲಿದೆ ನೋಡಿ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದು ಮೊನ್ನೆ ಹೊರಬಿದ್ದಿದ್ದ ಮತಗಟ್ಟೆ ಸಮೀಕ್ಷೆಯ ಫಲಿತಾಂಶವನ್ನು ಹೋಲುವಂತಿದೆ. ಬಿಜೆಪಿ …
Read More »Yearly Archives: 2025
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ
ಬೆಳಗಾವಿ, ಫೆಬ್ರವರಿ 7: ಲೋಕಸಭೆ ಚುನಾವಣೆ ಮೂಲಕ ಮಗಳು ಪ್ರಿಯಾಂಕಾ ಜಾರಕಿಹೊಳಿಯನ್ನು ರಾಜಕೀಯ ಪ್ರವೇಶಿಸುವಂತೆ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಆಯ್ಕೆಯಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೋಕಾಕ್ನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದೆ. ರಾಹುಲ್ ಜಾರಕಿಹೊಳಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. …
Read More »ಹಾಲಿ ಮುಖ್ಯಮಂತ್ರಿಯ ವಿರುದ್ಧದ ಅಪರಾಧ ಆರೋಪವನ್ನು ತನಿಖೆ ಮಾಡಲು ಲೋಕಾಯುಕ್ತ ಸಂಸ್ಥೆ ಸಮರ್ಥವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣವನ್ನು ಸಿಬಿಐ ಇಲ್ಲವೇ ಇತರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆಯೇ?, ಸಾಂವಿಧಾನಿಕ ನ್ಯಾಯಾಲಯ (ಹೈಕೋರ್ಟ್, ಸುಪ್ರೀಂ ಕೋರ್ಟ್)ಗಳು …
Read More »ಪರ ಸ್ತ್ರೀಯೊಂದಿಗೆ ಸಲುಗೆ: ಸುಫಾರಿ ನೀಡಿ ಗಂಡನ ಕಾಲು ಮುರಿಸಿದ ಪತ್ನಿ ಜೈಲಿಗೆ
ಕಲಬುರಗಿ: ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ತರ ಕಾಂಪೌಂಡ್ ಬಳಿ ದರೋಡೆ ವೇಳೆ ಕಾಲು ಮುರಿದಿದೆ ಎಂದು ದಾಖಲಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ದರೋಡೆಕೋರರಲ್ಲ.. ಕೈಹಿಡಿದ ಧರ್ಮಪತ್ನಿಯೇ ತನ್ನ ಗಂಡನ ಕಾಲು ಮುರಿಯಲು ಸುಪಾರಿ ನೀಡಿ ಕಾಲು ಮುರಿಸಿದ್ದಾಳೆ ಅನ್ನುವ ವಿಚಾರ ಪೊಲೀಸರು ಬಯಲಿಗೆಳೆದಿದ್ದಾಳೆ. ಪತ್ನಿ ನೀಡಿದ ಸುಪಾರಿಯಿಂದ ಎರಡು ಕಾಲು ಮುರಿದುಕೊಂಡು ಪತಿ ವೆಂಕಟೇಶ್ ಬೆಡ್ ರೆಸ್ಟ್ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಪಾರಿ ಕೊಟ್ಟ ಮಹಿಳೆ ಸೇರಿ ನಾಲ್ವರನ್ನು …
Read More »ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. …
Read More »ಕುಂಭಮೇಳಕ್ಕೆ ತೆರಳುವಾಗ ಮೃತಪಟ್ಟವರ ಶವ ತರಲು ಲಕ್ಷ್ಮೀ ಹೆಬ್ಬಾಳ್ಕರ್ ಫೌಂಡೇಶನನಿಂದ ಸಹಾಯ; ಮೃಣಾಲ್ ಹೆಬ್ಬಾಳ್ಕರ್
ಕುಂಭಮೇಳಕ್ಕೆ ತೆರಳುವಾಗ ಮೃತಪಟ್ಟವರ ಶವ ತರಲು ಲಕ್ಷ್ಮೀ ಹೆಬ್ಬಾಳ್ಕರ್ ಫೌಂಡೇಶನನಿಂದ ಸಹಾಯ; ಮೃಣಾಲ್ ಹೆಬ್ಬಾಳ್ಕರ್ ಇನ್ನು ಕಾಂಗ್ರೆಸ್ ಯುವಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರು ಸ್ಥಳೀಯ ಮುಖಂಡರಾದ ಮಾಹಿತಿಯನ್ನು ಪಡೆದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆದೇಶದ ಮೇರೆಗೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂದೋರಿನ ಆಸ್ಪತ್ರೆಯಲ್ಲಿರುವ ಮೃತರ ಪಾರ್ಥಿವ ಶರೀರಗಳನ್ನು ಬೆಳಗಾವಿಗೆ ತರಲು ವ್ಯವಸ್ಥೆಯನ್ನು ಮಾಡಲು ಸಚಿವರು ಆದೇಶವನ್ನು ನೀಡಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿಗಳ ಮೂಲಕ …
Read More »ಮುಡಾ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಬಿಐಗೆ ನೀಡುವಂತೆ ನಾವು ಅರ್ಜಿಯನ್ನು ಹಾಕಿಕೊಂಡಿದ್ವಿ.
ಮುಡಾ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಬಿಐಗೆ ನೀಡುವಂತೆ ನಾವು ಅರ್ಜಿಯನ್ನು ಹಾಕಿಕೊಂಡಿದ್ವಿ. ಅದರ ಅರ್ಜಿ ವಿಚಾರಣೆಯನ್ನು ಗೌರವಾನ್ವಿತ ಹೈಕೋರ್ಟ್ ನ್ಯಾಯಾಧೀಶರು ಆಲಿಸಿ ಇಂದು ತೀರ್ಪುಗೆ ಕಾಯ್ದಿರಿಸಿದ್ದರು. ಇಂದು ನಮ್ಮ ಅರ್ಜಿ ವಜಾ ಮಾಡಿ ಹೈ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದು, ಅದೇಶ ಪ್ರತಿ ಪಡೆದು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಸ್ನೇಹಮಯಿ ಕೃಷ್ಣ ಪರ ನ್ಯಾಯವಾದಿಗಳಾದ ಲಕ್ಷ್ಮಣ ಕುಲಕರ್ಣಿ ಹೇಳಿದರು. ಧಾರವಾಡ ಹೈಕೋರ್ಟ್ ತೀರ್ಪಿನ ಬಳಿಕ ಧಾರವಾಡದಲ್ಲಿಮಾಧ್ಯಮಕ್ಕೆ ಪ್ರತಿಕ್ರೆಯಿಸಿದ …
Read More »ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ
ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು …
Read More »ಶಿಕ್ಚಣ, ಸಂಶೋಧನೆಗೆ ಒತ್ತು ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, …
Read More »