Breaking News

Yearly Archives: 2025

ಒಕ್ಕುಂದ ಗ್ರಾಮದ 10ನೇ ವರ್ಷದ ಉತ್ಸವ ಮೆರವಣಿಗೆಯಲ್ಲಿ ಗೊಂಬೆ ಮತ್ತು ಡೊಳ್ಳು ಕುಣಿತ ಗಮನ ಸೆಳೆದವು.

ಬೈಲಹೊಂಗಲ : ತಾಲೂಕಿನ ಒಕ್ಕುಂದ ಗ್ರಾಮದಲ್ಲಿ ತಿರುಳ್ಗನ್ನಡನಾಡು ಒಕ್ಕುಂದ ಉತ್ಸವ ನಿಮಿತ್ತ ಶನಿವಾರ ಬೆಳಗ್ಗೆ ಅಮೋಘವರ್ಷ ನೃಪತುಂಗ ಜ್ಯೋತಿ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. ಗೊಂಬೆ ಮತ್ತು ಡೊಳ್ಳು ಕುಣಿತ ಮೆರವಣಿಗೆಯಲ್ಲಿ ಗಮನ ಸೆಳೆದವು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಒಕ್ಕುಂದ ಗ್ರಾಮದ 10ನೇ ವರ್ಷದ ಉತ್ಸವ ಹಿನ್ನೆಲೆ ಮಲಪ್ರಭಾ ನದಿ ದಂಡೆಯ ಮೇಲೆ ನೃಪತುಂಗ ಜ್ಯೋತಿಗೆ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಪರಮಪೂಜ್ಯ ರಾಚೋಟಿ ಸ್ವಾಮೀಜಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ …

Read More »

ವಿವಿಧ ಸಂಘಟನೆಗಳ ಮುಖಂಡರಿಂದ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒದಗಿಸುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಿ, ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ, ಬೆಳಗಾವಿ ಜನರ ಜೀವನಾಡಿ ಹಿಡಕಲ್ ಜಲಾಶಯದಿಂದ 0.5 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಕೈಗಾರಿಕೆಗೆ ಬಿಡಬಾರದು ಎಂದು ಒತ್ತಾಯಿಸಿ, ಜಿಲ್ಲೆಯ ವಿವಿಧ ಮಠಾಧೀಶರು, ಮೌಲ್ವಿಗಳು, ಚರ್ಚ್ ಮುಖ್ಯಸ್ಥರು, ಕೈಗಾರಿಕೋದ್ಯಮಿಗಳು, ಕನ್ನಡ …

Read More »

ಮೈಕ್ರೋ ಫೈನಾನ್ಸ್​​ ಕಿರುಕುಳ ಆರೋಪಕ್ಕೆ ಹಾವೇರಿ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಹಾವೇರಿ: ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ. ರಾಣೇಬೆನ್ನೂರು ನಗರದ ಅಡವಿ ಆಂಜನೇಯ ಬಡಾವಣೆಯ 42 ವರ್ಷದ ಮಾಲತೇಶ್ ಅರಸಿಕೇರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೈಕ್ರೋ ಫೈನಾನ್ಸ್​​ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮಾಲತೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಮಾಲತೇಶ್ ಅಡವಿ ಆಂಜನೇಯ ಬಡಾವಣೆಯಲ್ಲಿ ಹೇರ್ ಕಟಿಂಗ್ ಸಲೂನ್​ ನಡೆಸುತ್ತಿದ್ದರು. ಮಾಲತೇಶ್ – ಗೀತಾ ದಂಪತಿ ನಾಲ್ಕು ಲಕ್ಷಕ್ಕೂ ಅಧಿಕ ಸಾಲ …

Read More »

ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ದಂಡ ವಿಧಿಸಿರುವ ಜಿಲ್ಲಾ ಗ್ರಾಹಕರ ಆಯೋಗ,

ಧಾರವಾಡ: ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ, ಪರಿಹಾರ ನೀಡಲು ಆದೇಶಿಸಿದೆ. ಧಾರವಾಡದ ನಿವಾಸಿ, ವಕೀಲ ಚೇತನ್​ಕುಮಾರ ಈಟಿ ಎಂಬವರು 23,999 ರೂ ಮೌಲ್ಯದ ಹೊಸ ಮೊಬೈಲ್​​ ಅನ್ನು ಬಜಾಜ್ ಫೈನಾನ್ಸ್ ಕಂಪೆನಿಯಿಂದ ಸಾಲ ಪಡೆದು ಖರೀದಿಸಿದ್ದರು. ಆ ಮೊಬೈಲ್‌ಗೆ ಆದಿತ್ಯ ಬಿರ್ಲಾ ವಿಮಾ ಕಂಪೆನಿಯಲ್ಲಿ 1 ಲಕ್ಷ ರೂ. ಮೊತ್ತದ ಗ್ರೂಪ್ ಹೆಲ್ತ್ ವಿಮೆ ಮಾಡಿಸಿದ್ದರು. 23/02/2023ರಂದು ದೂರುದಾರರು …

Read More »

ತ್ರಿವೇಣಿ ಸಂಗಮದಲ್ಲಿ ಮಿಂದವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂದರು!

ಪ್ರಯಾಗ್​​ರಾಜ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ ಬಾಯ್ಮುಚ್ಚಿಕೊಂಡು ಕೆಲಸ ಮಾಡಿ ಅಂತ ರಾಜ್ಯದ ಕಾಂಗ್ರೆಸ್ ನಾಯಕರನ್ನು ಗದರುವ ಬದಲು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ವಿಷಯದಲ್ಲಿ ಆಗಿರಬಹುದಾದ ಒಪ್ಪಂದದ ಬಗ್ಗೆ ಅಂತ ಹೇಳಿದ್ದರೆ ಇಂಥ ಉಪದ್ವ್ಯಾಪಗಳಿಗೆ ಅವಕಾಶವಿರುತ್ತಿರಲಿಲ್ಲ. ಇಲ್ನೋಡಿ, ಬೆಳಗಾವಿಯ ಮೂರ್ನಾಲ್ಕು ಜನ ಪ್ರಯಾಗ್​ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿ ನದಿತೀರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಫೋಟೋವೊಂದನ್ನು ಹಿಡಿದು ಮುಂದಿನ …

Read More »

ಹೈಕಮಾಂಡ್​​ ಮುಂದೆ ಮೂರು ಬೇಡಿಕೆ ಇಟ್ಟ ಯತ್ನಾಳ್

ಬೆಂಗಳೂರು, : ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವರ್ಸಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಅಂತಿಮ ಹಂತದ ಕದನ ದಿಲ್ಲಿಗೆ ಶಿಫ್ಟ್ ಆಗಿದೆ. ಈಗಾಗಲೇ ಬೆಂಗಳೂರಿನಿಂದ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮತ್ತು ಎನ್‌.ಆರ್ ಸಂತೋಷ್ ದೆಹಲಿಗೆ ತೆರಳಿದ್ದು, ಇನ್ನು ನಾಳೆ(ಫೆಬ್ರವರಿ 04) ಬಸನಗೌಡ ಪಾಟೀಲ್ ಯತ್ನಾಳ್, ಬಿ.ಪಿ ಹರೀಶ್ ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ದೆಹಲಿಗೆ ತೆರಳಲಿದ್ದಾರೆ. ಇದಲ್ಲದೇ ಯತ್ನಾಳ್​ ಟೀಮ್ …

Read More »

ಬಾಲಕಿಯನ್ನು ಕರೆದ್ಯೊಯ್ದು ಸುಲೇಮಾನ್ ಅತ್ಯಾಚಾರ: ವಿಡಿಯೋ ಮಾಡಿದ ಅಲ್ತಾಫ್ ಅರೆಸ್ಟ್!

ಗದಗ, ): ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಇಂದು (ಫೆಬ್ರವರಿ 03) ಗದಗನಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದ್ಯೊಯ್ದು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು,  ಕಾಮಾಂಧರ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.  ಅತ್ಯಾಚಾರಿ ಆರೋಪಿ ಸುಲೇಮಾನ್​ ಸೇರಿದಂತೆ ಅತ್ಯಾಚಾರ ಎಸಗುವುದನ್ನು ವಿಡಿಯೋ ಮಾಡಿದ್ದ …

Read More »

ಸರ್ಕಾರಿ ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವು

ಚಾಮರಾಜನಗರ, : ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ (death) ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ …

Read More »

ಬೆಂಗಳೂರಲ್ಲಿ ಆರ್​ಟಿಓ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳು ಸೀಜ್‌

ಬೆಂಗಳೂರು, : ತೆರಿಗೆ (tax) ಪಾವತಿ ಮಾಡದೆ ಅನಧಿಕೃತವಾಗಿ ನಗರದಲ್ಲಿ ಸಂಚಾರ ಮಾಡುತ್ತಿದ್ದ ಫೆರಾರಿ, ಪೋರ್ಷೆ ಮತ್ತು ರೇಂಜ್ ರೋವರ್​ ಸೇರಿದಂತೆ 30 ಐಷಾರಾಮಿ ಸ್ಪೋರ್ಟ್ಸ್ ಕಾರುಗಳನ್ನು ಆರ್‌ಟಿಒ ಅಧಿಕಾರಿಗಳು ಸೋಮವಾರ ಸೀಜ್‌ ಮಾಡಿದ್ದಾರೆ. ಜಪ್ತಿಯಾದ ಕಾರುಗಳಿಂದ 3 ಕೋಟಿ ರೂ. ತೆರಿಗೆ ವಸೂಲಿ ಆಗಬೇಕಿದೆ. ನಿನ್ನೆ ನಗರದಲ್ಲಿ ಕಾರ್ಯಚರಣೆ ಮಾಡಿದ ಆರ್‌ಟಿಒ ಅಧಿಕಾರಿಗಳು ಮಾಸೆರಾಟಿ, ಫೆರಾರಿ, ಪೋರ್ಷೆ, ರೇಂಜ್ ರೋವರ್, ಬಿಎಂಡಬ್ಲ್ಯು ಸೇರಿ 30 ಲಕ್ಸುರಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ದೆಹಲಿ, …

Read More »

ಕರ್ನಾಟಕದಲ್ಲಿಂದು ಒಂದೇ ದಿನ 7 ಆತ್ಮಹತ್ಯೆ

ಬೆಂಗಳೂರು, (ಫೆಬ್ರವರಿ 03): ಕರ್ನಾಟಕದಲ್ಲಿಂದು (ಫೆಬ್ರವರಿ 03) ಒಂದೇ ದಿನ ಬರೋಬ್ಬರಿ ಏಳು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಐದು ಜನರು ಸಾಲಬಾಧೆಯಿಂದ ಸಾವಿನ ಹಾದಿ ತುಳಿದಿದ್ದರೆ,. ಸಾಲಬಾಧೆಯಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಹಾಸನ-1 , ಬೀದರ್-1, ದಾವಣಗೆರೆ ಜಿಲ್ಲೆಯಲ್ಲಿ ಓರ್ವ ರೈತ ಸಾವಿನ ಹಾದಿ ತುಳಿದಿದ್ದಾರೆ. ಇನ್ನು ತುಮಕೂರಿನ ವ್ಯಕ್ತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗೆಳೆಯ ಮೋಸ ಮಾಡಿದ್ದಾನೆಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ …

Read More »