ಹಾವೇರಿ: ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಎಂಟು ದಿನ ಪೂರೈಸಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರೂ ಸಹ ಇದೀಗ ಸೂಕ್ತ ಬೆಲೆಗೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಹಾವೇರಿ ತಾಲೂಕಿನ ಸಂಗೂರು, ರಟ್ಟಿಹಳ್ಳಿ ತಾಲೂಕಿನ ಬೈರನಪಾದ ಮತ್ತು ಶಿಗ್ಗಾಂವ್ ತಾಲೂಕಿನ ಕೋಣನಕೆರೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿವೆ. ಈ ಕಾರ್ಖಾನೆಗಳ ಮಾಲೀಕರು ಹಾವೇರಿ ಜಿಲ್ಲೆಯ ರೈತರ ಕಬ್ಬಿಗೆ ಸೂಕ್ತ …
Read More »Yearly Archives: 2025
ಬಿಡದಿ ಟೌನ್ಶಿಪ್: ಒಂದಿಂಚು ಭೂಮಿ ಕೊಡಬೇಡಿ, ನಿಮ್ಮೊಂದಿಗೆ ನಾನಿದ್ದೇನೆ- ಹೆಚ್.ಡಿ.ಕುಮಾರಸ್ವಾಮಿ
ಮಂಡ್ಯ: ಬಿಡದಿ ಟೌನ್ಶಿಪ್ ಹೆಸರಿನಲ್ಲಿ ಈ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ನೀವು ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜೊತೆ ನಾನಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್ಶಿಪ್ಗೆ ರೈತರು ವಿರೋಧ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರಿಗೆ ಮಿಡಿಯುವುದು ಬಿಟ್ಟು ಈ ಸರ್ಕಾರ …
Read More »ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ*
ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ* *ವಿಧಾನಸೌಧದಲ್ಲಿ ನಾಳೆಯೇ ಬೆಳಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಮಧ್ಯಾಹ್ನ ರೈತ ಹೋರಾಟಗಾರರ ಸಭೆ ಕರೆದ ಮುಖ್ಯಮಂತ್ರಿಗಳು* *FRP ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ* *ಪ್ರಧಾನಿ ಮೋದಿಯವರಿಗೆ ತಕ್ಷಣ ಪತ್ರ ಬರೆದು ರೈತರ ಬೇಡಿಕೆ ಬಗ್ಗೆ ಚರ್ಚಿಸಲು ಸಮಯ ಕೇಳಲು ಸಚಿವ ಸಂಪುಟ ಸಭೆ ನಿರ್ಧಾರ* FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: …
Read More »ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ* * *ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರು* *ಬೆಂಗಳೂರು* : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ …
Read More »ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ
ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದೆದುರು ಪ್ರತಿಭಟನೆ ಡಿಸಿ ಮೂಲಕ ಸಿಎಂ’ಗೆ ಮನವಿ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ಹೇರಲಾಗಿರುವ ಜಿಲ್ಲಾ ಪ್ರವೇಶ ನಿರ್ಬಂಧವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ …
Read More »ನಟ ಹರೀಶ್ ರಾಯ್ ಇನ್ನಿಲ್ಲ
ನಟ ಹರೀಶ್ ರಾಯ್ ಇನ್ನಿಲ್ಲ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಗೆದ್ದರೂ ಬದುಕಿ ಉಳಿಯಲಿಲ್ಲ. ಉಡುಪಿ ರಥ ಬೀದಿಯಲ್ಲಿ ಸ್ವಂತ ನೋವೆಲ್ಟಿ ಚಿನ್ನದ ಜುವೆಲ್ಲರಿ ಹೊಂದಿದ್ದ ಹರೀಶ್ ರಾಯ್ ಅವರಿಗೆ ಸಿನಿಮಾದಲ್ಲಿ ಅಭಿನಯಿಸುವ ಗೀಳಿತ್ತು. ನಾನೂ ಉಡುಪಿಯಲ್ಲಿ ಕಲಿಯುತ್ತಿದ್ದ ವೇಳೆ ರಥ ಬೀದಿಯಲ್ಲಿ ಜ್ಯುವೆಲ್ರಿಯಲ್ಲಿ ಇವರನ್ನು ನೋಡುತ್ತಿದ್ದೆ. ಆಗ ಇವರು ಒಂದು ತರಹ ಶೋ ಮ್ಯಾನ್ ರೀತಿ ಕಾಣಿಸುತ್ತಿದ್ದರು. ʻಓಂʼ ಸಿನಿಮಾದಲ್ಲಿ ಡಾನ್ ಪಾತ್ರದ ಮೂಲಕ ಖ್ಯಾತಿ ಪಡೆದರು. ಬಳಿಕ …
Read More »ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ಶಿಫಾರಸು
ಬೆಂಗಳೂರು: ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸಿ, ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವಂತೆ ಸಂಪನ್ಮೂಲ ಕ್ರೋಢೀಕರಣ ಸಮಿತಿ (RMC) ತನ್ನ ಅಂತಿಮ ವರದಿಯಲ್ಲಿ ಶಿಫಾರಸು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿ ತನ್ನ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು …
Read More »ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸದಿದ್ದರೆ ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್
ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಾತುಕತೆ ಮುಂದಾಗಿತ್ತು. ಅಂತೆಯೇ ಬುಧವಾರ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಸರ್ಕಾರದ ಪರವಾಗಿ ರೈತರ ಜೊತೆ ಸಭೆ ನಡೆಸಿದರೂ ಯಾವುದೇ ಸಂಧಾನ ಆಗಿಲ್ಲ. ಇದರಿಂದ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಜೊತೆ ರೈತ ಮುಖಂಡ ಶಶಿಕಾಂತ ಗುರೂಜಿ ಮಾತನಾಡಿ, ಕಳೆದ ಏಳು …
Read More »ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್
ಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು ಕಟ್ಟಿ ಹಾಕಿ 200 ಗ್ರಾಂ ಚಿನ್ನಾಭರಣ ದೋಚಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯ ನೆರಳೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ನೆರಳೂರು ಗ್ರಾಮದ ನಿವಾಸಿಗಳಾದ ನಾಗವೇಣಿ ಮತ್ತು ರವಿಕುಮಾರ್ ಅವರ ಮನೆಗೆ ಆಹ್ವಾನ ಪತ್ರಿಕೆ ನೀಡಲು ಬಂದವರಂತೆ ನಟಿಸಿ ಕಳ್ಳರು ಕೃತ್ಯ ಎಸಗಿದ್ದಾರೆ. ರವಿಕುಮಾರ್ ಖಾಸಗಿ ಕಂಪನಿಯಲ್ಲಿನ ಉದ್ಯೋಗಿಯಾಗಿದ್ದಾರೆ. …
Read More »8 ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ, ಸರ್ಕಾರಕ್ಕೆ ಸಂಜೆ 7 ಗಂಟೆಯ ಡೆಡ್ಲೈನ್
ಬೆಳಗಾವಿ, ನವೆಂಬರ್ 6: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ (Farmers Protest), ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ ಇದೆ. ಪ್ರತೀ ಟನ್ ಕಬ್ಬಿಗೆ 3500 ರೂಪಾಯಿ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರೋ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಒಂದು ವಾರದಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ಹೋರಾಟ ಇಂದು 8 …
Read More »
Laxmi News 24×7