ಚಾಮರಾಜನಗರ: ಎತ್ತಿನಗಾಡಿ ಓಡಿಸುವಾಗ ಆಯತಪ್ಪಿ ಕೆಳಕ್ಕೆ ಬಿದ್ದ ವ್ಯಕ್ತಿಯ ಮೇಲೆ ಚಕ್ರ ಹರಿದು ಆತ ಮೃತಪಟ್ಟ ಘಟನೆ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆಯಿತು. ಕಮರವಾಡಿ ಗ್ರಾಮದ ಬಸವ (45) ಮೃತರು. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮೂಗೂರು ಜಾತ್ರೆಗೆ ಕಮರವಾಡಿ ಗ್ರಾಮದಿಂದಲೂ ಬಂಡಿಗಳು ಬಂದಿದ್ದವು. ಪೂಜೆ ಮುಗಿಸಿಕೊಂಡು ಗ್ರಾಮಕ್ಕೆ ಮರಳುತ್ತಿದ್ದಾಗ ಅವಘಡ ಸಂಭವಿಸಿದೆ. ಬಂಡಿಯ ನೊಗ ಕಳಚಿಕೊಂಡ ಕಾರಣ ಬಸವ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಬಂಡಿಯ ಚಕ್ರ ಅವರ …
Read More »Yearly Archives: 2025
ಅಪಘಾತ ಪ್ರಕರಣದಲ್ಲಿ ಮೆಡಿಕ್ಲೈಮ್ ಹೊರತುಪಡಿಸಿ ಉಳಿದ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಪಾವತಿಸುವ ಪರಿಹಾರ ಮೊತ್ತದಲ್ಲಿ ಮೆಡಿಕ್ಲೈಮ್‌ನ ಅಡಿಯಲ್ಲಿ ಪಾವತಿಸಿರುವ ಮೊತ್ತವನ್ನು ಕಡಿತಗೊಳಿಸಿ ಉಳಿದ ಮೊತ್ತ ಪಾವತಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ. ಬೆಂಗಳೂರಿನ ಮಾರತ್‌ಹಳ್ಳಿಯ ವಾಸಿ ಹನುಮಂತಪ್ಪ ಪರವಾಗಿ ಮೋಟಾರು ವಾಹನಗಳ ಅಪಘಾತ ಪರಿಹಾರ ನ್ಯಾಯಾಧಿಕರಣ(ಎಂಎಸಿಟಿ)ದ ಆದೇಶವನ್ನು ಪ್ರಶ್ನಿಸಿ ವಿಮಾ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕ ಸದಸ್ಯಪೀಠ ಸೋಮವಾರ ಈ ಆದೇಶ ನೀಡಿತು. ಅರ್ಜಿದಾರರ ಕುಟುಂಬಕ್ಕೆ …
Read More »ಅದ್ಧೂರಿಯಾಗಿ ಜರುಗಿದ ಬಾದಾಮಿ ಬನಶಂಕರಿ ಜಾತ್ರೆ
ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗು ಶಕ್ತಿ ಪೀಠಗಳಲ್ಲಿ ಒಂದಾಗಿರುವ ಬಾದಾಮಿ ಬನಶಂಕರಿ ದೇವಾಲಯ ಜಾತ್ರಾ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ಜರುಗಿತು. ಪ್ರತಿವರ್ಷವೂ ಬನದ ಹುಣ್ಣಿಮೆ ದಿನ ಜಾತ್ರೋತ್ಸವದ ಪ್ರಯುಕ್ತ ರಥೋತ್ಸವ ನಡೆಯುತ್ತದೆ. ಅದರಂತೆ, ಲಕ್ಷಾಂತರ ಭಕ್ತರ ಮಧ್ಯೆ ದೇವಿಗೆ ಶಂಭೋಕೋ ಎಂದು ಘೋಷಣೆ ಮೊಳಗಿಸುತ್ತಾ ಭಕ್ತರು ರಥ ಎಳೆದು ಸಂಭ್ರಮಿಸಿದರು. ಈ ಜಾತ್ರೆಗೆ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಪಾದಯಾತ್ರೆ ಮೂಲಕವೂ ಸಾವಿರಾರು ಭಕ್ತರು ಬರುತ್ತಾರೆ. ಪಾದಯಾತ್ರೆ ಮೂಲಕ …
Read More »ಕೆಟ್ಟು ನಿಂತ ವಾಹನ, ಸಂಚಾರ ಅಸ್ತವ್ಯಸ್ತ
ಬೆಂಗಳೂರು, ಜನವರಿ 13: ಎನ್ಆರ್ ಜಂಕ್ಷನ್, ಹೂಡಿ ಜಂಕ್ಷನ್, ಶಿವಾಜಿನಗರ ಮತ್ತು ನಾಯಂಡಹಳ್ಳಿ ಸೇರಿದಂತೆ ಇತರೆ ನಗರಗಳಲ್ಲಿ ಇಂದು ಕೆಲ ಕಾರಣಾಂತರಗಳಿಂದ ಸಾರ್ವಜನಿಕ ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿತ್ತು. ಹಾಗಾಗಿ ಆಯಾ ಠಾಣಾ ವ್ಯಾಪ್ತಿಯ ಸಂಚಾರಿ ಪೋಲಿಸರು ಸಂಚಾರ ಸಲಹೆ (Traffic Advisory) ನೀಡುವ ಮೂಲಕ ದಯವಿಟ್ಟು ಸಹಕರಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ .ಎನ್ಆರ್ ಜಂಕ್ಷನ್ ಬಳಿ ವಾಹನ ಕೆಟ್ಟು ನಿಂತಿರುವುದರಿಂದ ಟೌನ್ ಹಾಲ್ ಕಡೆಗೆ ನಿಧಾನಗತಿಯ ಸಂಚಾರವಿದೆ. ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ …
Read More »ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು
ಕಾಸರಗೋಡು, (ಜನವರಿ 13): ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು ಕಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದಲ್ಲಿ ನಡೆದಿದೆ. ಅನಸ್ ಮೃತ ಬಾಲಕ. ಶನಿವಾರ ಪಿಸ್ತಾ ಸಿಪ್ಪೆ ನುಂಗಿದ್ದ. ತಕ್ಷಣ ಪೋಷಕರು, ಸಿಪ್ಪೆಯ ಒಂದು ಭಾಗ ಹೊರ ತೆಗೆದಿದ್ದರು. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ತಪಾಸಣೆ ಮಾಡಿ ಮಗುವಿನ ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಆದ್ರೆ, ಭಾನುವಾರ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು …
Read More »ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ: ಜೋಶಿ ಕಿಡಿ
ಹುಬ್ಬಳ್ಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ. ಅಧಿಕಾರಕ್ಕೆ ಬಂದಾಗೆಲ್ಲ ಪಿಎಫ್ಐ, ಎಸ್ಡಿಪಿಐ ಮೇಲಿನ ಕೇಸ್ಗಳನ್ನ ಹಿಂಪಡೆದ ಹಿನ್ನೆಲೆ ಕೆಲವರಿಗೆ ಶಕ್ತಿ ಬಂದಿದೆ. ಹೀಗಾಗಿ ಹಸು ಕೆಚ್ಚಲು ಕೊಯ್ಯುವ ಮಟ್ಟಕ್ಕೆ ಬಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕ್ರಿಮಿನಲ್ಗಳಿಗೆ ಧೈರ್ಯ ಬಂದಿದೆ. ಏನಾದರೂ ಆದ್ರೆ ರಕ್ಷಿಸಿಸುತ್ತಾರೆ ಅನ್ನೋ ಧೈರ್ಯ ಹುಟ್ಟಿಕೊಂಡಿದೆ. …
Read More »ದಕ್ಷಣಿ ಕಾಶಿಯಲ್ಲಿ ನಡೆದ ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ
ಮೈಸೂರು: ದಕ್ಷಿಣಿ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ವತಿಯಿಂದ ಪಟ್ಟಣದ ರಾಕ್ಷಸ ಮಂಟಪದ ಬಳಿ ಅಂಧಕಾಸುರ ಸಂಹಾರ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಇಲ್ಲಿ ಅಂಧಕಾಸುರ ರಾಕ್ಷಸನನ್ನ ಹೋಲುವ ರಾಕ್ಷಸನನ ಭಾವಚಿತ್ರವನ್ನ ರಂಗೋಲಿಯಲ್ಲಿ ಬಿಡಿಸಿ ಉತ್ಸವ ಮೂರ್ತಿಗಳನ್ನು ತಂದು ಪೂಜೆ ಮಾಡಲಾಯಿತು. ಅಂಧಕಾಸುರ ಭಾವಚಿತ್ರದ ರಂಗೋಲಿಯನ್ನು ಅಳಿಸಿ ಹಾಕುವ ಆಚರಣೆ ಇದಾಗಿದ್ದು, ಇದಕ್ಕೆ ಐತಿಹಾಸಿಕ ಹಿನ್ನೆಲೆಯೂ ಉಂಟು. ಧರ್ನುಮಾಸದ, ಆರಿದ್ರ ನಕ್ಷತ್ರದ ಹುಣ್ಣಿಮೆಯ ಹಿಂದಿನ ದಿನ ದೇವಾಲಯದ ವತಿಯಿಂದ ರಾಕ್ಷಸ ಮಂಟಪದ ಬಳಿ …
Read More »ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ಕರೆ
ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ಕರೆ ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ: ಪಕ್ಷದ ಕಾರ್ಯಕರ್ತರಿಗೆ ಸಿ.ಎಂ ಕರೆ ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ ಎಂದ ಸಿಎಂ ನಾವು ಗಾಂಧಿ ವಂಶಸ್ಥರು ಮತ್ತು ಅವರು ಗೋಡ್ಸೆ ವಂಶಸ್ಥರು: ಸಿ.ಎಂ ಬೆಂಗಳೂರು ಜ13: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ …
Read More »ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳ ಕೆಚ್ಚಲು ಕತ್ತರಿಸುವುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಪ್ರೇರಣೆ” ಎಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು: “ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳ ಕೆಚ್ಚಲು ಕತ್ತರಿಸುವುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಪ್ರೇರಣೆ” ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ನಿಟ್ಟಿನಲ್ಲಿ 14 ಗೋಶಾಲೆಗಳನ್ನು ಆರಂಭಿಸಿತ್ತು. ಆದರೆ, ಈ ಸರ್ಕಾರ ಸಚಿವ ಸಂಪುಟದಲ್ಲಿ ಎಲ್ಲ ಗೋಶಾಲೆಗಳನ್ನು ರದ್ದು ಮಾಡುವ ನಿರ್ಧಾರಕ್ಕೆ ಮುಂದಾಗಿದೆ. ಗೋವಿನ ಬಗ್ಗೆ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಧೋರಣೆ ಕಿಡಿಗೇಡಿಗಳಿಗೆ ಸ್ಫೂರ್ತಿ. …
Read More »ಎಸಿ ಕೋರ್ಟ್ಗಳಲ್ಲಿ ಬಾಕಿ ಇರುವ ಪ್ರಕರಣ 6 ತಿಂಗಳಲ್ಲಿ ಇತ್ಯರ್ಥಗೊಳಿಸಿ
ಬೆಂಗಳೂರು: ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ ಗಡುವನ್ನು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜೊತೆಗೆ ಸಚಿವರು ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ …
Read More »