ಬೆಳಗಾವಿಯಲ್ಲಿ 4ನೇ ಚುಟುಕು ಸಾಹಿತ್ಯ ಸಮ್ಮೇಳನ ಸಾಹಿತ್ಯಲೋಕಕ್ಕೆ ಬೆಳಗಾವಿ ಸಾಹಿತಿಗಳ ಕೊಡುಗೆ ಅಪಾರ; ಚುಟುಕು ಕವಿ ಅಪ್ಪಾಸಾಹೇಬ್ ಅಲಿಬಾದಿ ಬೆಳಗಾವಿಯಲ್ಲಿ 4ನೇ ಚುಟುಕು ಸಾಹಿತ್ಯ ಸಮ್ಮೇಳನ ಸಾಹಿತ್ಯಲೋಕಕ್ಕೆ ಬೆಳಗಾವಿ ಸಾಹಿತಿಗಳ ಕೊಡುಗೆ ಅಪಾರ ಹಲವು ಶತಮಾನಗಳಿಂದ ಬೆಳಗಾವಿಯಲ್ಲಿದೆ ಕನ್ನಡ-ಮರಾಠಿಗರ ಬಾಂಧವ್ಯ ಚುಟುಕು ಕವಿ ಅಪ್ಪಾಸಾಹೇಬ್ ಅಲಿಬಾದಿ ಅಭಿಪ್ರಾಯ ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ಬಾಂಧವ್ಯತೆ ಹಲವು ಶತಮಾನಗಳ ಹಿಂದಿನದ್ದಾಗಿದ್ದು, ಕುಂದಾನಗರಿಯೂ ಸಾಹಿತ್ಯ ಲೋಕಕ್ಕೆ ಹಲವಾರು ಸಾಹಿತಿ, ಚುಟುಕು ಸಾಹಿತಿಗಳನ್ನು …
Read More »Yearly Archives: 2025
ದಯಾಮರಣ ಕಾನೂನು ಹೋರಾಟಗಾರ್ತಿ ಎಚ್.ಬಿ.ಕರಿಬಸಮ್ಮ
ದಾವಣಗೆರೆ: ಎಚ್.ಬಿ. ಕರಿಬಸಮ್ಮ 85 ವರ್ಷದ ವೃದ್ಧೆ. 30 ವರ್ಷಗಳ ಕಾಲ ಶಾಲಾ ಮಕ್ಕಳಿಗೆ ಒಳ್ಳೆಯ ಗುರುವಾಗಿ ನೀತಿ ಪಾಠ ಮಾಡಿ ನಿವೃತ್ತಿ ಆಗಿರುವ ಶಿಕ್ಷಕಿ. 24 ವರ್ಷಗಳ ಹಿಂದೆ ತಾನು ಅನುಭವಿಸಿದ ನರಕಯಾತನೆಗೆ ಮುಕ್ತಿ ಬಯಸಿದ್ದ ಎಚ್.ಬಿ. ಕರಿಬಸಮ್ಮ ಅವರು ಕಾನೂನಿನಡಿ ಘನತೆಯಿಂದ ಮರಣ ಹೊಂದುವ ಹಕ್ಕು ಸಿಗಬೇಕೆಂದು ಹೋರಾಡಿದವರಲ್ಲಿ ಇವರೂ ಒಬ್ಬರು. ಕೇಂದ್ರ ಸರ್ಕಾರ ದಯಾಮರಣಕ್ಕೆ ಸಂಬಂಧಿಸಿದಂತೆ ಕಾನೂನಿನಡಿ ಮಾರ್ಗಸೂಚಿಗಳನ್ನು ತಯಾರು ಮಾಡುವಂತೆ ಆಯಾಯ ರಾಜ್ಯಗಳಿಗೆ ಸೂಚನೆ ನೀಡಿದೆ. …
Read More »ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಪತ್ನಿ ಹೆಸರಿನಲ್ಲಿ ₹ 9,99,999 ದೇಣಿಗೆ ನೀಡಿದ ಡಿಸಿಎಂ
ಉಡುಪಿ : ಡಿಸಿಎಂ ಡಿ. ಕೆ ಶಿವಕುಮಾರ್ ಅವರಿಂದು ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ತಮ್ಮ ಪತ್ನಿ ಹೆಸರಿನಲ್ಲಿ ದೇವಸ್ಥಾನಕ್ಕೆ 9,99,999 ರೂ. ದೇಣಿಗೆ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇವರು ವರ-ಶಾಪ ಕೊಡಲ್ಲ, ಅವಕಾಶ ಮಾತ್ರ ಕೊಡ್ತಾನೆ. ಮಾತೃಭೂಮಿ, ಭೂತಾಯಿ, ದೇವಿ ದರ್ಶನ ಮಾಡುವ ಅವಕಾಶ ಸಿಕ್ಕಿದೆ ಎಂದರು. ನಮ್ಮ ಧರ್ಮವನ್ನ ನಾವು ಕಾಪಾಡಬೇಕು. ಯಾರು ಯಾರಿಗೂ ತೊಂದರೆ …
Read More »ಬಸ್ಸಿನ ಟೈರ್ ಸ್ಫೋಟ 100 ಮೀಟರ್‌ಗೂ ಹೆಚ್ಚು ತೆವಳಿಕೊಂಡು ಹೋಗಿ ನಿಂತ. ಬಸ್
ಗಂಗಾವತಿ(ಕೊಪ್ಪಳ): ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಮುಂಭಾಗದ ಟೈರ್ ಸ್ಫೋಟಗೊಂಡ ಘಟನೆ ದಾಸನಾಳದ ಹೊರವಲಯದಲ್ಲಿ ನಡೆದಿದೆ. ನಿಯಂತ್ರಣ ತಪ್ಪಿದ ಬಸ್ಸನ್ನು ಚಾಲಕ ಹತೋಟಿಗೆ ತಂದು 20 ಪ್ರಯಾಣಿಕರ ಜೀವ ಕಾಪಾಡಿದ್ದಾರೆ. ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್ ಕೊಪ್ಪಳದಿಂದ ಗಂಗಾವತಿಯತ್ತ ಸಂಚರಿಸುತ್ತಿದ್ದಾಗ ಮುಂದಿನ ಚಕ್ರ ಸ್ಫೋಟಗೊಂಡಿದೆ. ಚಾಲಕ ಮಂಜುನಾಥ ಗಾಣಿಗೇರ ತಕ್ಷಣ ಬಸ್ಸನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಪರಿಣಾಮ ಬಸ್ ಸುಮಾರು 100 ಮೀಟರ್‌ಗೂ ಹೆಚ್ಚು ತೆವಳಿಕೊಂಡು ಹೋಗಿ ನಿಂತಿದೆ. “ಟೈರ್ …
Read More »ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ಮಹಿಳೆ ಹೊಟ್ಟೆಯಲ್ಲಿತ್ತು 5 ಕೆ.ಜಿ ಗೆಡ್ಡೆ
ದೊಡ್ಡಬಳ್ಳಾಪುರ: ಹೊಟ್ಟೆನೋವು ಎಂದು 45 ವರ್ಷದ ಮಹಿಳೆಯೊಬ್ಬರು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ತಪಾಸಣೆ ನಡೆಸಿದ ವೈದ್ಯರು ಆಕೆಯ ಉದರದಲ್ಲಿದ್ದ 5 ಕೆ.ಜಿ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು. ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಆಕೆ, ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಡಾ.ಅರ್ಚನಾ ಅವರು ಪರೀಕ್ಷೆ ನಡೆಸಿದ್ದು, ಸ್ಕ್ಯಾನಿಂಗ್ನಲ್ಲಿ ಹೊಟ್ಟೆಯಲ್ಲಿ 5 ಕೆ.ಜಿ ಗಾತ್ರದ ಗೆಡ್ಡೆ ಇರುವುದು …
Read More »ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ವಂಚಿಸಿದ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ: ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ ವಂಚಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಪ್ಪ ಶಿವಪ್ಪ ತೋಟದ ಬಂಧಿತ ಆರೋಪಿ. ಹೆಚ್ಚು ಲಾಭ ಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಹಾಕಿಸಿಕೊಂಡು ಚಂದ್ರಪ್ಪ ಮೋಸ ಮಾಡುತ್ತಿದ್ದ ಎಂದು ಹಾವೇರಿ ನಗರದ ಸಿಇಎನ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹಾನಗಲ್ ತಾಲೂಕಿನ ಶೀಗಿಹಳ್ಳಿ ಗ್ರಾಮದ ಮನೋಜ ಹಾದಿಮನಿ ಎಂಬವರು ದೂರು ನೀಡಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ …
Read More »ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು, ಮಾರ್ಚ್ 01: ಡಾ. ಬಿಆರ್ ಅಂಬೇಡ್ಕರ್ (BR Ambedkar) ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ನ್ಯಾ.ಎಸ್.ಆರ್.ಕೃಷ್ಣಕುಮಾರ್ರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು, ಹೀಗಾಗಿ ಕೇಸ್ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶನಿವಾರ ಆದೇಶ …
Read More »ಇಬ್ಬರು ಅಂತಾರಾಜ್ಯ ಕಳ್ಳರು ಸೆರೆ
ಬೆಂಗಳೂರು: ಉತ್ತರ ಪ್ರದೇಶದಿಂದ ರೈಲಿನ ಮುಖಾಂತರ ನಗರಕ್ಕೆ ಬಂದು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಜೀಂ ಆಲಿ ಹಾಗೂ ಸದ್ದಾಂ ಬಂಧಿತ ಆರೋಪಿಗಳು. ಇವರಿಂದ 186 ಗ್ರಾಂ ಚಿನ್ನಾಭರಣ, ಎರಡು ದ್ವಿಚಕ್ರವಾಹನ ಹಾಗೂ 15 ಸಾವಿರ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ಧಾರೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ದೂರುದಾರರ ಕುಟುಂಬ ಕಳೆದ …
Read More »ಕೊಪ್ಪಳದಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧವಿದೆ : ಸಚಿವ ಶಿವರಾಜ ತಂಗಡಗಿ
ಕೊಪ್ಪಳ : ಜಿಲ್ಲೆಯಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ಸಾವಿರ ಎಕರೆ ಜಮೀನು ಮೀಸಲಿರಿಸಿ ಖಾಸಗಿ ಕಂಪನಿ ಸ್ಥಾಪನೆಗೆ ಮುಂದಾಗಿರುವುದಕ್ಕೆ ಕೊಪ್ಪಳದ ಜನತೆ, ಗವಿಮಠದ ಗವಿಶ್ರೀಗಳು ವಿರೋಧಿಸಿದ್ದಾರೆ. ಅದಕ್ಕೆ ನಮ್ಮದು ವಿರೋಧವಿದೆ. ಈ ಕುರಿತು ಮಾ.4 ರಂದು ಸಿಎಂ ಜೊತೆ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುವುದಾಗಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಆದರೆ ಅವರು ನಮ್ಮ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. …
Read More »ಟಿಪ್ಪರ್, ಕಾರು ಮಧ್ಯೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೈಸೂರಿನ ಶ್ರೀಲಕ್ಷ್ಮೀ(20), ಲಿಖಿತಾ, ಮಂಡ್ಯದ ಸುಹಾಸ್, ನಿತಿನ್ ಮತ್ತು ಶ್ರೇಯಸ್ ಮೃತಪಟ್ಟವರೆಂದು ತಿಳಿದುಬಂದಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, ಮಹಾಶಿವರಾತ್ರಿ ರಥೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ವೀಕೆಂಡ್ ಹಿನ್ನೆಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ …
Read More »