ಹಾವೇರಿ: ಉತ್ತರ ಕರ್ನಾಟಕದ ಪ್ರಮುಖ ಜಾತ್ರೆ ಮತ್ತು ಆರಂಭಿಕ ಜಾತ್ರೆ ಎಂದು ಕರೆಸಿಕೊಳ್ಳುವ ಹಾವೇರಿ ಹುಕ್ಕೇರಿಮಠದ ಜಾತ್ರೆ ಭಾನುವಾರದಿಂದ ಆರಂಭವಾಗಿದೆ. ಜಾತ್ರೆಯ ಎರಡನೇಯ ದಿನವಾದ ಇಂದು ಜಾನುವಾರು ಜಾತ್ರೆಗೆ ಚಾಲನೆ ಸಿಕ್ಕಿತು. ರಾಜ್ಯದಲ್ಲಿಯೇ ದೊಡ್ಡ ಜಾನುವಾರು ಮಾರುಕಟ್ಟೆಯಾಗಿರುವ ಹಾವೇರಿಯಲ್ಲಿ ವರ್ಷಪೂರ್ತಿ ಜಾನುವಾರುಗಳು ಸಿಗುತ್ತವೆ. ಕಳೆದ 54 ವರ್ಷಗಳಿಂದ ಹುಕ್ಕೇರಿಮಠ ಜಾನುವಾರು ಜಾತ್ರೆ ಆಯೋಜಿಸುತ್ತಾ ಬರುತ್ತಿದೆ. ಸದ್ಯ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆ ಜಾನುವಾರುಗಳಿಗೆ ಚರ್ಮಗಂಟು ರೋಗ ಲಸಿಕೆ ಹಾಕುವ ಮೂಲಕ ಜಾನುವಾರು …
Read More »Yearly Archives: 2025
ವೈದ್ಯೆಗೆ ವಂಚನೆ: ಐಶ್ವರ್ಯ ಗೌಡ ಸೇರಿ ನಾಲ್ವರ ವಿರುದ್ಧ ಮತ್ತೊಂದು ಎಫ್ಐಆರ್
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚಿಸುತ್ತಿದ್ದ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಡಾ.ಮಂಜುಳಾ ಪಾಟೀಲ್ ಎಂಬವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ …
Read More »ಸಂಭಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ ಅನಧಿಕೃತ:D.C.
ಬೆಳಗಾವಿ: ಬೆಳಗಾವಿಯ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಿರ್ಮಿಸಿರುವ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಭಾನುವಾರ ಅನಧಿಕೃತವಾಗಿ ಅನಾವರಣವಾಗಿದೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಒಂದು ಕಾರ್ಯಕ್ರಮ ಮಾಡಿ ಪ್ರತಿಮೆಯನ್ನು ಉದ್ಘಾಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾಹಿತಿ ನೀಡಿದರು. ಜಿಲ್ಲಾಡಳಿತದ ವಿರೋಧದ ನಡುವೆಯೂ ನಿನ್ನೆ ಶಾಸಕ ಅಭಯ್ ಪಾಟೀಲ ನೇತೃತ್ವದಲ್ಲಿ ಅದ್ಧೂರಿಯಾಗಿ ಶೋಭಾಯಾತ್ರೆ ನಡೆಸುವ ಮೂಲಕ ಸಂಭಾಜಿ ಮಹಾರಾಜರ ಮೂರ್ತಿಯನ್ನು ಅನಾರವಣಗೊಳಿಸಲಾಗಿತ್ತು. ಈ ವೇಳೆ ಶಿವಾಜಿ ಮಹಾರಾಜರ 13ನೇ ವಂಶಸ್ಥರೂ ಆಗಿರುವ …
Read More »ಬಿಬಿಎಂಪಿ ಮುಖ್ಯ ಇಂಜಿನಿಯರ್ ಕಚೇರಿ ಮೇಲೆ ಇಡಿ ದಾಳಿ,
ಬೆಂಗಳೂರು: ಕೊಳವೆ ಬಾವಿ ಕೊರೆಯುವ ಹಾಗೂ ನೀರು ಸಂಸ್ಕರಣಾ ಘಟಕಗಳ (ಆರ್.ಒ) ಸ್ಥಾಪನೆಯಲ್ಲಿ ಹಣಕಾಸು ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಡ್ಸನ್ ವೃತ್ತದ ಬಳಿಯಿರುವ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿರುವ ಚೀಫ್ ಇಂಜಿನಿಯರ್ ಕಚೇರಿಯ ಮೇಲೆ ಬೆಳಗ್ಗೆ 11 ಗಂಟೆಗೆ 7 ಜನರಿದ್ದ ಅಧಿಕಾರಿಗಳ ತಂಡ ದಾಳಿ ನಡೆಸಿ, ದಾಖಲಾತಿ ಪರಿಶೀಲನೆ …
Read More »ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಬೆಂಗಳೂರು : ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು. ಬೇಡಿಕೆಗಳೇನು? ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಗೌರವಧನ ನೀಡಬೇಕು. ನಗರ ಪ್ರದೇಶದಲ್ಲಿ …
Read More »ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಎಲ್ಆರ್ಟಿ ಯೋಜನೆ ಜಾರಿಗೆ ತರಲು ಚಿಂತನೆ: ಸಂತೋಷ ಲಾಡ್
ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ಅವಳಿ ನಗರದ ನಡುವೆ ಸಂಚರಿಸುವ ಬಿಆರ್ಟಿಎಸ್ ಬಸ್ ಬದಲು ಲಘು ರೈಲು (ಎಲ್ಆರ್ಟಿ) ಯೋಜನೆ ಜಾರಿಗೆ ತರಲು ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಪಿಪಿಪಿ ಮಾಡಲ್ನಲ್ಲಿ ಬರಬೇಕು. ಸಾರ್ವಜನಿಕ ಸಹಭಾಗಿತ್ವದಲ್ಲಿ ಬರುವುದರಿಂದ ಅವರೇ ಬಂಡವಾಳ ಹೂಡಿಕೆ ಮಾಡಬೇಕು. ಕಾರಿಡಾರ್ ನಿರ್ಮಾಣ ಹಾಗೂ ಬಸ್ ನಿರ್ವಹಣೆ ಮಾಡಬೇಕು ಎಂಬ ಯೋಜನೆ ಇಟ್ಟುಕೊಂಡಿದ್ದೇವೆ …
Read More »ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ಏನೂ ಇರಲಿಲ್ಲ:ಸತೀಶ್ ಜಾರಕಿಹೊಳಿ
ರಾಯಚೂರು : ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ಏನೂ ಇರಲಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದು. ರಹಸ್ಯ ಸಭೆ ಎನ್ನುವ ಪ್ರಶ್ನೆಯೇ ಇಲ್ಲ. ಅದು ಊಟದ ಸಭೆ ಅಷ್ಟೇ. ಸಭೆಯಲ್ಲಿ ಅಂತಾ ಚರ್ಚೆ ಯಾವುದೂ ಆಗಿಲ್ಲ. ಸಂಪುಟ ವಿಸ್ತರಣೆಯೂ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸಿಎಂ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಇದ್ದಾರೆ, ಅಂತಹ ಅವಶ್ಯಕತೆ ಬರಲ್ಲ. …
Read More »ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪ್ರಕರಣ ರದ್ದು ಕೋರಿ ಅರ್ಜಿ, ಕೋರ್ಟ್ ಹೇಳಿದ್ದೇನು?
ಬೆಂಗಳೂರು, ಜನವರಿ 06: ನಗರದ ಮಾರತಹಳ್ಳಿಯಲ್ಲಿ ನೇಣಿಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಟೆಕ್ಕಿ ವಿಚಾರ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳ ಅಂಗಳ ತಲುಪುವ ಮೂಲಕ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣವನ್ನು ರದ್ದುಕೋರಿ ನಿಖಿತಾ, ನಿಶಾ, ಅನುರಾಗ್, ಸುಶೀಲ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅತುಲ್ ಸುಭಾಪ್ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ …
Read More »ಮುಳಬಾಗಲು ಆರ್.ಎಫ್.ಓ ಅಧಿಕಾರಿಯ ಕುರ್ಚಿ ಫೈಟ್
ಕೋಲಾರ, : ಕುರ್ಚಿಗಾಗಿ (Chair) ಸರ್ಕಾರದ ಆದೇಶವನ್ನೇ ಅಧಿಕಾರಿಗಳು ಗಾಳಿಗೆ ತೂರಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಧಿಕಾರ ಹಸ್ತಾಂತರ ಮಾಡಲು ಇಚ್ಚಿಸಿದೆ ಕಚೇರಿಗೆ ಬೀಗ ಹಾಕಿಕೊಂಡು ಹೋಗಿದ್ದ ಅಧಿಕಾರಿಯ ಕಾರ್ಯವೈಖರಿ ಕುರಿತು ದಿಶಾ ಸಭೆಯಲ್ಲಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುರ್ಚಿಗಾಗಿ ಇಬ್ಬರ ಅಧಿಕಾರಿಗಳ ನಡುವೆ ನಡೆಯುತ್ತಿರುವ ಹೈಡ್ರಾಮಾ ಜಿಲ್ಲೆಯ ಜನರಿಗೆ ಪುಕ್ಕಟೆ ಮನರಂಜನೆ ನೀಡುತ್ತಿದೆ. ಮುಳಬಾಗಲು ಆರ್.ಎಫ್.ಓ ಅಧಿಕಾರಿಯ ಕುರ್ಚಿ ಫೈಟ್ ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದ ಮಲ್ಲೇಶ್ ಬಾಬು ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ …
Read More »ನಾಲ್ಕು ಮಂತ್ರಿಗಳು ಒಂದೆಡೆ ಊಟಕ್ಕೆ ಸೇರಿದರೆ ಮಾಧ್ಯಮದವರಿಗೆ ಅದೊಂದು ಸುದ್ದಿಯೇ?C.M
ಬೆಂಗಳೂರು: ಪತ್ರಿಕಾ ಗೋಷ್ಠಿ ನಡೆಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಮೂಡ್ ನಲ್ಲಿದ್ದರೆ ಜೋಕ್ ಗಳನ್ನು ಕಟ್ ಮಾಡುತ್ತ ಮಾತಾಡುತ್ತಾರೆ. ಸತೀಶ್ ಜಾರಕಿಹೊಳಿ ಮನೆಗೆ ಅವರು ಹೊಸ ವರ್ಷದಂದು ಊಟಕ್ಕೆ ಹೋಗಿದ್ದು ಬಹಳ ಚರ್ಚೆಯಾಗುತ್ತಿದೆ. ಏನ್ಸಾರ್ ವಿಶೇಷ ಅಂತ ಕೇಳಿದರೆ, ಮಂತ್ರಿಗಳು ಶಾಸಕರು ಜೊತೆಯಾಗಿ ಊಟ ಮಾಡಿದರೆ ನಿಮಗೆ ಅದೊಂದು ಸುದ್ದಿಯೇ ಎಂದು ವಾಪಸ್ಸು ಪ್ರಶ್ನಿಸುತ್ತಾರೆ. ಉಳಿದವರು ಔತಣದಲ್ಲಿ ಯಾಕಿರಲಿಲ್ಲ ಅಂದರೆ, ಯಾರನ್ನು ಅವರು ಕರೆದಿದ್ದರೋ, ಅವರು ಮಾತ್ರ ಇದ್ದರು, ಆಹ್ವಾನ …
Read More »