Breaking News

Yearly Archives: 2025

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

ಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, ಪಿಯು ಕಾಜೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ …

Read More »

ಆಲ್ಕೋಮೀಟರ್ಗಳ ಖಚಿತತೆ ಕುರಿತು ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪರೀಕ್ಷಿಸುವ ಬ್ರೀತ್ ಅನಲೈಸರ್ಗಳು(ಆಲ್ಕೋ ಮೀಟರ್) ದೋಷರಹಿತವಾಗಿವೆ ಎಂಬುದಾಗಿ ಖಚಿತ ಪಡಿಸುವಿರಾ? ಎಂದು ನಗರ ಸಂಚಾರಿ ಪೊಲೀಸರನ್ನು ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಮದ್ಯಸೇವನೆ ಮಾಡದಿದ್ದರೂ ಮದ್ಯಪಾನ ಮಾಡಿರುವುದಾಗಿ ಬ್ರೀತ್ ಅನಲೈಸರ್ ತೋರಿಸಿದ ಪರಿಣಾಮ 10 ಸಾವಿರ ರೂ. ದಂಡ ವಿಧಿಸಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ನಗರದ ಸಿ. ಅಜಯ್ ಕುಮಾರ್ ಕಶ್ಯಪ್ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ …

Read More »

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯಿದೆ-2025ನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇದೇ ಆಗಸ್ಟ್​ 30ರಂದು ವಿಚಾರಣೆಗೆ ನಿಗದಿಪಡಿಸಿದೆ. ಎ23 ರಮ್ಮಿ ಎಂಬ ಆನ್‌ಲೈನ್​ ಗೇಮಿಂಗ್​ನ್ನು ನಡೆಸುತ್ತಿರುವ ಹೆಡ್​ ಡಿಜಿಟಲ್​ ವರ್ಕ್ಸ್​ ಪ್ರೈವೇಟ್​ ಲಿಮಿಟೆಡ್​ ಅರ್ಜಿಯನ್ನು ಸಲ್ಲಿಸಿದ್ದು, ತುರ್ತು ವಿಚಾರಣೆಗಾಗಿ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ …

Read More »

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿ ಬಿಟ್ಟುಹೋಗಿದ್ದರೆ ಮಾಹಿತಿ ನೀಡಲು ಸೆ.1ರವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆಪ್ಟೆಂಬರ್ 1ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 1ರ ವರೆಗೆ ಅವಕಾಶ: ಆಗಸ್ಟ್​​ 22, 2025ರಂದು ಯಾವುದೇ ಜಾತಿ, ಉಪ ಜಾತಿಗಳು ಬಿಟ್ಟು ಹೋಗಿದ್ದರೆ, ಅಂತಹ ಅಂಶಗಳ ಬಗ್ಗೆ …

Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟು, 11 ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಬಡೇಕೊಳ್ಳಮಠ ಬಳಿಯ ರಾಷ್ಟ್ರೀಯ ಹೆದ್ದಾರಿ – 4ರಲ್ಲಿ ಬುಧವಾರ ರಾತ್ರಿ ಸಂಭವಿಸಿದೆ‌. ಬಡೇಕೊಳ್ಳ ಘಾಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಿರು ಸೇತುವೆ ಗೋಡೆಗೆ ಡಿಕ್ಕಿಯಾದ ಪರಿಣಾಮ ಪಲ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಓರ್ವ ಪುರುಷ ಮತ್ತು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ …

Read More »

ನೀವು ಚಾಮುಂಡಿ ಪೂಜೆ ಮಾಡುತ್ತಿಲ್ಲ, ನಿಮ್ಮದು ವೋಟಿನ ಪೂಜೆ: ಬಾನು ಮುಷ್ತಾಕ್ ಆಹ್ವಾನ ಖಂಡಿಸುತ್ತೇವೆ: ಆರ್.ಅಶೋಕ್

ಬೆಂಗಳೂರು: “ನೀವು ಚಾಮುಂಡಿ ಪೂಜೆ ಮಾಡ್ತಿಲ್ಲ. ನಿಮ್ಮದು ವೋಟಿನ ಪೂಜೆ. ಬಾನು ಮುಷ್ತಾಕ್ ಅವರಿಗೆ ಆಹ್ವಾನವನ್ನು ಖಂಡಿಸ್ತೇವೆ” ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಜೊತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಇಮಾಮ್ ಸಾಬಿಗೂ‌ ಗೋಕುಲಾಷ್ಠಮಿಗೂ ಏನು ಸಂಬಂಧ? ಸಿದ್ರಾಮಣ್ಣ ಏನು ಸಂಬಂಧ? ನಿಸಾರ್ ಅಹ್ಮದ್ ಉದ್ಘಾಟಿಸಿದ್ರು ಅಂದ್ರಿ. ನಾನು ಕಂದಾಯ ಸಚಿವನಾಗಿದ್ದಾಗ ಅವರಿಗೆ ಚಿಕ್ಕಬಳ್ಳಾಪುರದಲ್ಲಿ 5 ಎಕರೆ ಭೂಮಿ ಕೊಟ್ಟಿದ್ದೆ. ಜೋಗದ …

Read More »

ಗೋವಿನ ಗೆಜ್ಜೆಯಲ್ಲಿ ನಿರ್ಮಾಣವಾಗಿರುವ ಗಣೇಶನ ಮೂರ್ತಿ

ದಾವಣಗೆರೆ : ಗಣೇಶ ಹಬ್ಬ ಬಂತು ಎಂದರೆ ಸಾಕು ತರಹೇವಾರಿ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪನೆ ಮಾಡಿ ವಿಘ್ನ ನಿವಾರಕ, ವಿಘ್ನ ವಿನಾಶಕನಿಗೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ದಾವಣಗೆರೆ ಹಿಂದೂ ಯುವ ಶಕ್ತಿ ವೇದಿಕೆ, ಕಳೆದ 33 ವರ್ಷಗಳಿಂದ ಪೂಜಾ ಸಾಮಗ್ರಿಗಳನ್ನ ಬಳಸಿಕೊಂಡು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಬರುತ್ತಿದೆ. ಈ ಬಾರಿ ಸ್ವಲ್ಪ ಬದಲಾವಣೆಯಂತೆ ಹಿಂದೂ ಯುವ ಶಕ್ತಿ ವೇದಿಕೆಯಿಂದ ಯುವಕರು ವಿಶೇಷವಾಗಿ ಗೋವಿನ ಗೆಜ್ಜೆ ಬಳಸಿ ಗಣೇಶ ಮೂರ್ತಿ ಪ್ರತಿಷ್ಠಾಪನೆ …

Read More »

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಆರೋಪಿಯನ್ನು ಇಂದು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ವೀರೇಂದ್ರ ಅವರನ್ನು ಮತ್ತೆ 6 ದಿನಗಳ ಕಾಲ ಇ.ಡಿ ವಶಕ್ಕೆ ನೀಡಿ ಆದೇಶಿಸಿತು. ಕೆ.ಸಿ.ವೀರೇಂದ್ರ ಅವರು ಆನ್​​ಲೈನ್ ಹಾಗೂ ಆಫ್​ಲೈನ್ ಮೂಲಕ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ನಡೆದ ದಾಳಿ ವೇಳೆ ಅಪಾರ ಪ್ರಮಾಣ …

Read More »

ರಾಯಚೂರು ಎಪಿಎಂಸಿಗೆ ಉಪ ಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ

ರಾಯಚೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ತರಕಾರಿ ಮಾರುಕಟ್ಟೆಗೆ ಇಂದು ಬೆಳಗ್ಗೆ ದಿಢೀರ್ ಆಗಿ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ, ಎಪಿಎಂಸಿ ಅಧಿಕಾರಿಗಳ ವಿರುದ್ಧ ಎರಡು ಸುಮೊಟೊ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಂದಿನಿಂದ ಮೂರು ದಿನಗಳ ಕಾಲ ಉಪ ಲೋಕಾಯುಕ್ತರ ಪ್ರವಾಸವಿದೆ. ಮೊದಲ ದಿನವಾದ ಇಂದು ಬೆಳಗ್ಗೆ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಅವರು, ವ್ಯಾಪಾರಸ್ಥರು, ರೈತರು, ಕೂಲಿ ಕಾರ್ಮಿಕರನ್ನು …

Read More »

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಎ 2ನೇ ಹಂತದ ಮಾನ್ಯತೆ ಸಿಕ್ಕಿದೆ.

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸುಗಮ ಪ್ರಯಾಣಸ್ನೇಹಿ ಸೌಲಭ್ಯಗಳು ಮತ್ತು ತಂತ್ರಜ್ಞಾನ ಬಳಕೆಗಾಗಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸಿಎ 2ನೇ ಹಂತದ ಮಾನ್ಯತೆ ಸಿಕ್ಕಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯು (ಎಸಿಐ) ಪ್ರವೇಶ ವರ್ಧಕ ಮಾನ್ಯತೆ (ಎಇಎ) ಕಾರ್ಯಕ್ರಮದಡಿ ವಿಮಾನ ನಿಲ್ದಾಣಗಳಲ್ಲಿನ ಸೌಲಭ್ಯ, ತಂತ್ರಜ್ಞಾನ ಬಳಕೆ, ಪ್ರಯಾಣಿಕಸ್ನೇಹಿ ಸೌಕರ್ಯಗಳನ್ನು ಆಧರಿಸಿ ಮಾನ್ಯತೆಯನ್ನು ನೀಡುತ್ತದೆ. ಈ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐನ 2ನೇ ಹಂತದ ಮಾನ್ಯತೆ ಪಡೆದ …

Read More »