ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆ ಚುನಾವಣೆಯ ಹಿನ್ನೆಲೆ ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್’ನ್ನು ಬೆಂಬಲಿಸಿ’ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಇಂದು ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಪ್ಯಾನಲ್’ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ಶ್ರೀ ಮಲಪ್ರಭಾ …
Read More »Yearly Archives: 2025
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಭರಮಣ್ಣ ಉಪ್ಪಾರ
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಭರಮಣ್ಣ ಉಪ್ಪಾರ ಅವರು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ಸನ್ಮಾನಿಸಿದರು. ಈ ವೇಳೆ ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಿ ಎಂದು ಸಚಿವರು ಶುಭ ಹಾರೈಸಿದರು
Read More »ಪ್ರಜ್ವಲ್ ರೇವಣ್ಣ ಪ್ರಕರಣಗಳ ವಿಚಾರಣೆ ಬೇರೆ ಪೀಠಕ್ಕೆ ವರ್ಗಾಯಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ಸಿಐಡಿ ಪೊಲೀಸ್ ಠಾಣೆ ಮತ್ತು ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರತ್ಯೇಕ ಎರಡು ಪ್ರಕರಣಗಳ …
Read More »ರಮೇಶ ಕತ್ತಿಗೆ ಯುವಕನ ಸಖತ್ ಪ್ರಶ್ನೆಗಳು
ಕೆಇಬಿ ಸಹಕಾರಿಗೆ ಅಧ್ಯಕ್ಷರು ಇದ್ದರೂ, ಟಿಸಿ ಕೇಳಲು ನಿಮ್ಮ ಮನೆ ಬಾಗಿಲಿಗೆ ಏಕೆ ಬರಬೇಕು? ಮೀಟರ್ ಇದ್ದರೂ ಸಹಕಾರಿಯ ಚುನಾವಣೆಯಲ್ಲಿ ನಮ್ಮನ್ನು ಮತದಿಂದ ವಂಚಿತ ಏಕೆ ಮಾಡಿದ್ದೀರಿ? ರಮೇಶ ಕತ್ತಿಗೆ ಯುವಕನ ಸಖತ್ ಪ್ರಶ್ನೆಗಳು #hukkeri #sankeshwar #KEB
Read More »ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಆರೋಪ: ಯುವಕ ಅರೆಸ್ಟ್
ಶಿವಮೊಗ್ಗ: ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ ಕೊಲೆ ಮಾಡಿರುವುದಾಗಿ ದೂರು ದಾಖಲಾಗಿದೆ. ಭದ್ರಾವತಿ ತಾಲೂಕು ಅಂತರಗಂಗೆ ಬಳಿ ಯರೇಹಳ್ಳಿಯ ಬೋವಿ ಕಾಲೋನಿಯ ಸ್ವಾತಿ ಅಲಿಯಾಸ್ ಮಹಾಲಕ್ಷ್ಮಿ ಮೃತ ಯುವತಿ. ಯುವತಿಯ ಪೋಷಕರು ನೀಡಿದ ದೂರಿನ ಆಧಾರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸೂರ್ಯನನ್ನು ಬಂಧಿಸಲಾಗಿದೆ. ಇವರಿಬ್ಬರೂ ದೂರದ ಸಂಬಂಧಿಗಳಾಗಿದ್ದರು. ಸೆಪ್ಟಂಬರ್ 21 ರಂದು ಯುವತಿಯನ್ನು ಸೂರ್ಯ ಮನೆಯಿಂದ ಕರೆದುಕೊಂಡು ಹೋಗಿ ಗ್ರಾಮದ …
Read More »ಕಪಿಲೇಶ್ವರ ದೇವಸ್ಥಾನ ಅರ್ಚಕ ಪುತ್ರ ಆತ್ಮಹ* ಮೊಬೈಲ್ ಡೆತ್ ನೋಟ್ ನಲ್ಲಿ ಆರೋಪ |
ಕಪಿಲೇಶ್ವರ ದೇವಸ್ಥಾನ ಅರ್ಚಕ ಪುತ್ರ ಆತ್ಮಹ* ಮೊಬೈಲ್ ಡೆತ್ ನೋಟ್ ನಲ್ಲಿ ಆರೋಪ | ಕಪಿಲೇಶ್ವರ ದೇವಸ್ಥಾನದವರು ನನ್ನ ಮೇಲೆ ಸುಳ್ಳ ಆರೋಪ ಮಾಡಿದ್ದಾರೆ ಎಂದು ಮೊಬೈಲ್ ನಲ್ಲಿ ಡೆತ್ ನೋಟ್ ಬರೆದು ಅರ್ಚಕರ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಕಪಿಲೇಶ್ವರ ರೋಡ್ ನಲ್ಲಿರುವ ಮನೆಯಲ್ಲಿ ನಡೆದಿದೆ. ಸಿದ್ದಾಂತ ಪೂಜಾರಿ(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸತ್ತು ನಾನು ಮೇಲೆ ಹೋದಾಗ ದೇವರು ಸಿಕ್ಕರೆ ತನಗೆ ಕಿರುಕುಳ ಕೊಟ್ಟವರನ್ನ ಹೊಡೆಯಲು …
Read More »ಶಾಸಕ ಕೆ.ಸಿ.ವೀರೇಂದ್ರಗೆ 2 ದಿನ ಜಾಮೀನು ನೀಡುವ ಕುರಿತು ಪರಿಶೀಲಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಶಾಸಕ ಕೆ.ಸಿ.ವೀರೇಂದ್ರಗೆ 2 ದಿನ ಜಾಮೀನು ನೀಡುವ ಕುರಿತು ಪರಿಶೀಲಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು: ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿರುವ ಮನವಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ತಿಳಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರದ ಪರ ವಕೀಲರಿಗೆ ಇಂದು ನಿರ್ದೇಶನ ನೀಡಿತು. ತನ್ನ ಪತಿಯನ್ನು ಬಂಧಿಸುವುದಕ್ಕೂ ಮುನ್ನ …
Read More »ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ
ಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ. ಅದೊಂದು ಕುಟುಂಬದ ಟ್ರಸ್ಟ್, ಕಳ್ಳರ ಕೂಟ. ಹೀಗಾಗಿ ಉಚ್ಚಾಟನೆ ಎಂಬ ಪ್ರಶ್ನೆಯೇ ಬರುವುದಿಲ್ಲ. ಆದ್ದರಿಂದ ಈ ಬಗ್ಗೆ ನಾನು ಮಾತನಾಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಹರಿಹಾಯ್ದರು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಇಂದು ದಿ.ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ …
Read More »ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ
ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, ರೈತರೇ ನಮ್ಮ ಆಸ್ತಿ ಎಂದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಡಗೇರಿ (ತಾ. ಹುಕ್ಕೇರಿ)- ನಮ್ಮ ವಿರೋಧಿಗಳು ಸಾವಿರ ಸಲ ಟೀಕಿಸಲಿ, ಬೈಯಲಿ. ಅಂತಹ ಯಾವುದೇ ಟೀಕೆ- ಟಿಪ್ಪಣಿಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಅವುಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಯಾರನ್ನೂ ಟೀಕಿಸುವುದಿಲ್ಲ. ಮತ್ತೊಬ್ಬರನ್ನು ಬೈಯುವಂತಹ ಸಂಸ್ಕೃತಿಯೂ …
Read More »ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ: ಸೆ.28 ರಿಂದ ಹುಬ್ಬಳ್ಳಿ – ಕೊಲ್ಲಂ ವಿಶೇಷ ರೈಲು ಸೇವೆ ಆರಂಭ
ನವದೆಹಲಿ/ಹುಬ್ಬಳ್ಳಿ: ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೆಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗಲು ವಿಶೇಷ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪ್ರಯತ್ನದ ಫಲವಾಗಿ ಹುಬ್ಬಳ್ಳಿಯಿಂದ ಕೊಲ್ಲಂವರೆಗೆ 22 ಕೋಚ್ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟಂಬರ್ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಯಾವ ಮಾರ್ಗದಲ್ಲಿ ರೈಲು ಸಂಚಾರ: ರಾಜ್ಯದ ಹುಬ್ಬಳ್ಳಿ, …
Read More »