Breaking News

Yearly Archives: 2025

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಇಂದು ರದ್ದುಪಡಿಸಿ ಆದೇಶಿಸಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ …

Read More »

ಬಂಡೀಪುರ ಹಾಗೂ ನಾಗರಹೊಳೆ ಕಾಡಂಚಿನ ಪ್ರದೇಶಗಳಲ್ಲಿ ಸುಮಾರು 20 ಹುಲಿಗಳ ಓಡಾಟ: ಡಿಸಿಎಫ್ ಪರಮೇಶ್ವರ್

ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶಗಳ ಕಾಡಂಚಿನ ಗ್ರಾಮಗಳ ಪ್ರದೇಶದಲ್ಲಿ ಸುಮಾರು 20 ಹುಲಿಗಳು ಓಡಾಟ ಮಾಡುತ್ತಿವೆ ಎಂದು ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್​) ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದ ಗುಂಡ್ಲುಪೇಟೆ, ಹೆಚ್.ಡಿ. ಕೋಟೆ, ಸರಗೂರು ಹಾಗೂ ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ಹಲವು …

Read More »

ಕುವೆಂಪು ವಿವಿ ಡಿಜಿಟಲ್ ಮೌಲ್ಯಮಾಪನದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಜಾರಿಗೆ ತಂದಿರುವ ಡಿಜಿಟಲ್ ಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವಿವಿಯಲ್ಲಿ ಜಾರಿಗೆ ಬಂದಿರುವ ಡಿಜಿಟಲ್ ಮೌಲ್ಯಮಾಪನ ಸರಿಯಾಗಿ ಮಾಡಿಲ್ಲವೆಂದು ಆರೋಪಿಸಿರುವ ನೂರಾರು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಒಮ್ಮೆ ನಡೆದ ಮೌಲ್ಯಮಾಪನದಿಂದ ಫೇಲ್ ಆದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಹಾಕಿದಾಗ ಕೆಲವರು ಫೇಲ್ ಆಗಿದ್ದು, ಮತ್ತೆ ಕೆಲವರು ಪಾಸ್ ಆಗಿದ್ದಾರೆ. ಪರೀಕ್ಷಾಂಗ ವಿವಿಯ ದಿನಗೂಲಿ ನೌಕರರಿಂದ ಉತ್ತರ ಪತ್ರಿಕೆಯ ಬಂಡಲ್ ಅದಲು ಬದಲಾದ ಕಾರಣಕ್ಕೆ ಮೌಲ್ಯ …

Read More »

ಇಂದು ಮತ್ತೊಂದು ಸಾವು, 31ಕ್ಕೆ ಏರಿದ ಸಾವಿನ ಸಂಖ್ಯೆ

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಇಂದು(ಸೋಮವಾರ) ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಈ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಐದು ದಿನಗಳ ಅಂತರದಲ್ಲಿ ಒಟ್ಟು 31 ಕೃಷ್ಣ ಮೃಗಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ನ.13ರಂದು 8, ನ.15ರಂದು 20, ನಿನ್ನೆ 16ರಂದು ಬೆಳಗ್ಗೆ 1 ಮತ್ತು ಸಂಜೆ …

Read More »

ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು: 29ಕ್ಕೇರಿದ ಸಾವಿನ ಸಂಖ್ಯೆ

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಇದರಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿದೆ. ಕೃಷ್ಣಮೃಗಗಳ ಸಾವು ಪ್ರಾಣಿಪ್ರಿಯರ ಮನಸ್ಸಿಗೆ ನೋವುಂಟು ಮಾಡಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಮತ್ತೊಂದು ಕೃಷ್ಣಮೃಗ ಇಂದು ಮೃತಪಟ್ಟಿದೆ. ನ.13 ರಂದು ಕಿರು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ …

Read More »

ಅಂಜುಮನ್ ಕಾಲೇಜಿನಿಂದ ಯುವಶಕ್ತಿ ಮತದಾನ ಜಾಗೃತಿ ಅಭಿಯಾನ ಯುವಶಕ್ತಿಯಿಂದ ಮತದಾನ ಜಾಗೃತಿ ಅಭಿಯಾನ

ಅಂಜುಮನ್ ಕಾಲೇಜಿನಿಂದ ಯುವಶಕ್ತಿ ಮತದಾನ ಜಾಗೃತಿ ಅಭಿಯಾನ ಯುವಶಕ್ತಿಯಿಂದ ಮತದಾನ ಜಾಗೃತಿ ಅಭಿಯಾನ ಅಂಜುಮನ್ ಪಿ ಯು ಸಿ ಮತ್ತು ಐಟಿಐ ವಿದ್ಯಾರ್ಥಿಗಳಿಂದ ಜಾಗೃತಿ ನಾಗರಿಕರ ಹಕ್ಕು ಮತ್ತು ಮತದ ಮೌಲ್ಯವನ್ನು ಜನರಿಗೆ ತಿಳಿಸುವ ಗುರಿ ಸಮರ್ಥ ಸರ್ಕಾರ ರಚನೆಯಾದರೆ ದೇಶದ ಭವಿಷ್ಯ ಉಜ್ವಲ; ಡಾ. ಹೆಚ್ ಐ ತಿಮ್ಮಾಪೂರ ಬೆಳಗಾವಿ: ದೇಶದ ಭವಿಷ್ಯವನ್ನು ಉತ್ತಮಗೊಳಿಸುವ ಸದುದ್ದೇಶದಿಂದ, ಅಂಜುಮನ್ ಪಿಯು ಮಹಾವಿದ್ಯಾಲಯ ಹಾಗೂ ಅಂಜುಮಾನ್ ಐಟಿಐ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು …

Read More »

ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ

ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ ಉದ್ಘಾಟಿಸಿ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ಅವರು ಆರಂಭಿಸಿರುವ ಸ್ಕಿನ್ ಆ‌್ಯಂಡ್ ಹೇರ್ ಕೇರ್ ಕ್ಲಿನಿಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಸಂಜೆ ಉದ್ಘಾಟಿಸಿದರು. ಕಾಲೇಜು ರಸ್ತೆಯ ಹೋಟೆಲ್ ಸನ್ಮಾನ್ ಹಿಂಭಾಗದಲ್ಲಿರುವ ದಾಸಪ್ಪ ಶಾನಭಾಗ್ ಎಂಪೈರ್ ನಲ್ಲಿ ಕ್ಲಿನಿಕ್ ಆರಂಭವಾಗಿದೆ. ಹಿತಾ ಅವರು ಬಹಳಷ್ಟು ಅಧ್ಯಯನ ಮಾಡಿದ್ದು, ಅತ್ಯಾಧುನಿಕ ಯಂತ್ರೋಪಕರಣಗಳನ್ನು …

Read More »

ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ

ವೈಯಕ್ತಿಕ ದ್ವೇಷ ಬದಿಗಿಟ್ಟರಷ್ಟೇ ಸಹಕಾರಿ ಕ್ಷೇತ್ರದಲ್ಲಿ ಯಶಸ್ಸು* 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ *ಬೆಳಗಾವಿ:* ಚುನಾವಣೆ ವೇಳೆ ಬರುವ ಮನಸ್ತಾಪ, ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು, ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಕಾರಿ ತತ್ವ, ಆದರ್ಶದಡಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಹೇಳಿದ್ದಾರೆ. ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮ ದೇವಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ …

Read More »

6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ

ವಿಜಯಪುರ :6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ  ಕಬ್ಬು ಬೆಳೆಗಳ ಮಧ್ಯೆ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 15 ಕೆಜಿ 100 ಗ್ರಾಂ ಹಸಿ ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಿಕೋಟಾ ತಾಲ್ಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ ಶಿವಪ್ಪ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿ, ಅಂದಾಜು 6.ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ …

Read More »

ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಂದ್ರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೈಸೂರು: ದರೋಡೆ ನೆಪದಲ್ಲಿ ಪತ್ನಿಯೇ ತನ್ನ ಪತಿಯ ಕೊಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾದ ಪ್ರಕರಣದಲ್ಲಿ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಪತಿ ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ. ಡ್ರ್ಯಾಗರ್ ಹಾಗೂ ಲಾಂಗ್​ನಿಂದ ಹಲ್ಲೆಗೊಳಗಾದ ರಾಜೇಂದ್ರ ಎಂಬವರು ಇಪ್ಪತ್ತು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತಿಯ ಕೊಲೆಗೆ ಪತ್ನಿಯೇ ದರೋಡೆ ತಂತ್ರ ರೂಪಿಸಿದ್ದಳು ಎಂದು ಮೃತ ವ್ಯಕ್ತಿಯ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ …

Read More »