ಮೈಸೂರು: ನಾಗರಹೊಳೆ ಹಾಗೂ ಬಂಡೀಪುರ ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ. ರೈತರು ತಮ್ಮ ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆಯವರು ಗಸ್ತು ಹೆಚ್ಚಿಸಿದರೂ ಹುಲಿ ಭಯದಿಂದ ಈ ಭಾಗದಲ್ಲಿ ಕೃಷಿ ಚಟುವಟಿಕೆಗಳಿಗೆ ತೊಡಕಾಗಿದೆ. ಎಲ್ಲೆಲ್ಲಿ ಹುಲಿ ಭಯ?: ಜಿಲ್ಲೆಯ ಸರಗೂರು, ಹೆಚ್.ಡಿ.ಕೋಟೆ ಹಾಗೂ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಅರಣ್ಯ ಪ್ರದೇಶಗಳ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ …
Read More »Yearly Archives: 2025
ಕೊಪ್ಪಳ ಜಿಲ್ಲೆಯ ಮೂವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಕೊಪ್ಪಳ: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಪ್ರಕಟಿಸಿದ್ದು, ಜಿಲ್ಲೆಯ ಮೂವರಿಗೆ ಪ್ರಶಸ್ತಿ ಘೋಷನೆಯಾಗಿದೆ. ಕುಷ್ಟಗಿ ತಾಲೂಕಿನ ತೆಗ್ಗಿಹಾಳ ಗ್ರಾಮದ ಬಸಪ್ಪ ಬರಮಪ್ಪ ಚೌಡ್ಕಿ, ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ದೇವೇಂದ್ರ ಕುಮಾರ ಪತ್ತಾರ ಹಾಗು ಕೊಪ್ಪಳದ ಶೇಕರಗೌಡ ವಿ ಮಾಲಿ ಪಾಟೀಲ್ ಅವರಿಗೆ ಪ್ರಶಸ್ತಿ ಒಲಿದಿದೆ. ಈ ಪ್ರಶಸ್ತಿ 5 ಲಕ್ಷ ರೂ ನಗದು, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕ …
Read More »ಬಿಜೆಪಿ ಮುಖಂಡ ದಯಾಸಾಗರ ಪಾಟೀಲ ಗಡಿಪಾರಿಗೆ ಗಾಣಿಗ ಹಾಗೂ ಹಾಲುಮತ ಸಮಾಜ ಮುಖಂಡರ ಆಗ್ರಹ*
ವಿಜಯಪುರ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಅಶಾಂತಿ ಹುಟ್ಟು ಹಾಕುತ್ತಿರುವ ಬಿಜೆಪಿ ನಾಯಕ ದಯಾಸಾಗರ ಪಾಟೀಲ ಇವರಿಗೆ ಜಿಲ್ಲೆಯಿಂದಲೇ ಹೊರ ಹಾಕಬೇಕು ಎಂದು ಉಪವಿಭಾಗಾಧಿಕಾರಿಗಳ ಮೂಲಕ ಇಂದು ಸರಕಾರಕ್ಕೆ ಆಗ್ರಹಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಗಾಣಿಗ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲು ಲೋಣಿ ತಿಳಿಸಿದರು. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಗಾಣಿಗ ಸಮುದಾಯದ ಹಾಗೂ ಹಾಲುಮತ ಸಮುದಾಯದ ಮುಖಂಡರು ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಯಶವಂತರಾಯಗೌಡ ಪಾಟೀಲ ಎಲ್ಲ ಸಮುದಾಯಗಳ …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,
ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ ಸಾರ್ವಜನಿಕ ವೀಕ್ಷಣಾ ಗೋಪುರ ನಿರ್ಮಾಣ ಸೇರಿದಂತೆ ಅಂದಾಜು ರೂ. 3 ಕೋಟಿಗಳ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
Read More »ಡಾ. ಭೀಮಶಿ ಲಕ್ಷ್ಮಣರಾವ ಜಾರಕಿಹೊಳಿ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಕುಟುಂಬದ ವತಿಯಿಂದ ಅಭಿನಂದನೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಡಾ. ಭೀಮಶಿ ಲಕ್ಷ್ಮಣರಾವ ಜಾರಕಿಹೊಳಿ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಕುಟುಂಬದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದೀಪಕ ಗುಡಗನಟ್ಟಿ , ರಾಜ್ಯ ಸಂಚಾಲಕರಾದ ಸುರೇಶ ಗವನ್ನವರ , ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು ..
Read More »ರಾಷ್ಟ್ರೀಯ ಏಕತಾ ದಿವಸ್ ನಿಮಿತ್ಯ ನಂದಗಡ ಪೋಲಿಸ್ ಠಾಣೆಯಿಂದ “ರನ್ ಫಾರ್ ಯೂನಿಟಿ ” ಓಟ
ರಾಷ್ಟ್ರೀಯ ಏಕತಾ ದಿವಸ್ ನಿಮಿತ್ಯ ನಂದಗಡ ಪೋಲಿಸ್ ಠಾಣೆಯಿಂದ “ರನ್ ಫಾರ್ ಯೂನಿಟಿ ” ಓಟ -ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ನಂದಗಡ ಪೋಲಿಸ್ ಠಾಣೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ “ರನ್ ಫಾರ್ ಯೂನಿಟಿ ಓಟ ಆಯೋಜಿಸಲಾಗಿತ್ತು ನಂದಗಡ ಪೋಲಿಸ್ ಠಾಣೆಯ ಮುಂಭಾಗದಿಂದ ಈ ರನ್ ಫಾರ್ ಯೂನಿಟಿ ಓಟ ಸಂಗೋಳ್ಳಿ ರಾಯಣ್ಣ ಸರ್ಕಲ್ ದಿಂದ ಸಂಗೋಳ್ಳಿ ರಾಯಣ್ಣನ ಸಮಾಧಿ ಸ್ಥಳ ಪುಣ್ಯ ಭೂಮಿ, ನಂದಗಡ …
Read More »ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಎಸ್‌ಐಟಿ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೇ, ಪ್ರಕರಣ ಸಂಬಂಧ ಪ್ರಕರಣದಲ್ಲಿ ದೂರು ದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರುಗಳಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಇದೇ ವೇಳೆ ಪೊಲೀಸರಿಗೆ ಸೂಚನೆ ನೀಡಿದೆ. ಶವಗಳನ್ನು ಹೂತ್ತಿಟ್ಟಿದ್ದಾರೆ ಎನ್ನಲಾದ ಆರೋಪ ಬಹುತೇಕ ಸುಳ್ಳು ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಎಸ್‌ಐಟಿ …
Read More »ಬೆಳಗಾವಿ ಜಿಲ್ಲೆಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಳಗಾವಿ: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಬೆಳಗಾವಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ರಾಜಶ್ರೀ ನಾಗರಾಜ, ಸಂಕೀರ್ಣ ಕ್ಷೇತ್ರದಲ್ಲಿ ಪುಂಡಲೀಕಶಾಸ್ತ್ರಿ (ಬುಡಬುಡಕೆ) ಮತ್ತು ಜಾನಪದ ಕ್ಷೇತ್ರದಲ್ಲಿ ಸಣ್ಣನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಸಣ್ಣನಿಂಗಪ್ಪ ಮುಶನ್ನಗೋಳ ಅವರು ಗೋಕಾಕ್ ತಾಲೂಕಿನ ತೆಳಗಿನಹಟ್ಟಿ ಗ್ರಾಮದವರು. 77 ವರ್ಷದ ಅವರು ಬಾಲ್ಯದಲ್ಲಿಯೇ ಡೊಳ್ಳಿನ ಹಾಡುಗಳನ್ನು ಹಾಡುತ್ತಾ ಬೆಳೆದವರು. ಡೊಳ್ಳಿನ …
Read More »2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಉಮಾಶ್ರೀ ಭಾಜನ: ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟ
ಬೆಂಗಳೂರು: 2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿ ಸೇರಿದಂತೆ ಚಲನಚಿತ್ರ ಸಾಹಿತ್ಯ ವಾರ್ಷಿಕ ಹಾಗೂ ಕಿರುಚಿತ್ರ ಪ್ರಶಸ್ತಿಗಳಿಗೆ ಅರ್ಹರನ್ನು ರಾಜ್ಯ ಸರ್ಕಾರ ಘೋಷಿಸಿದೆ. ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್. ಆರ್. ನಂಜುಂಡೇಗೌಡ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಗೆ ನಿರ್ಮಾಪಕ ಹಾಗೂ ನಿರ್ದೇಶಕರಾಗಿರುವ ರಿಚರ್ಡ್ ಕ್ಯಾಸ್ಟಲಿನೋ ಅವರು ಗೌರವಕ್ಕೆ ಪಾತ್ರರಾಗಿದ್ದಾರೆ. ಈ …
Read More »ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ
ಬೀದರ್: ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಗೆ ಕಾರಣವಾಗಿರುವ ಮೊಂಥಾ ಚಂಡಮಾರುತ ರಾಜ್ಯದ ಗಡಿ ಜಿಲ್ಲೆ ಬೀದರ್ನಲ್ಲೂ ರೈತರ ನಿದ್ದೆಗೆಡಿಸಿದೆ. ಸೋಮವಾರ ಸ್ವಲ್ಪ ಮಳೆಯಾದರೆ, ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನ ಜಾವದವರೆಗೆ ಜಿಲ್ಲೆಯ ಬಹುತೇಕ ಕಡೆ ವರುಣ ಆರ್ಭಟಿಸಿತು. ಬುಧವಾರ ಬೆಳಗ್ಗೆಯಿಂದ ರಾತ್ರಿವರೆಗೂ ಆಗಾಗ್ಗೆ ಎಲ್ಲೆಡೆ ಮಳೆ ಸುರಿದಿದೆ. ಮಳೆಯೊಂದಿಗೆ ಚಳಿ ಗಾಳಿ ಸಹ ಬೀಸುತ್ತಿದ್ದು, ಇದು ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಕಳೆದ ರಾತ್ರಿಯಿಂದ ಬೆಳಗ್ಗೆವರೆಗೆ ನಾಲ್ಕೈದು …
Read More »
Laxmi News 24×7