ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಸಿಪಿಐ ಬಿ ಆರ್ ಗಡ್ಡೇಕರ್ ಮತ್ತು ತಂಡ ಧಾರವಾಡದ ಸಮೀರ್ ಲಾಟ್ಮಣವರ್ ಅವರನ್ನು ಗಾಂಜಾ ಮಾರಾಟ ಮಾಡಿದ್ದಕ್ಕಾಗಿ ಬಂಧಿಸಿದರು. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಿತು. `1Q43 ಇದು ಇತಿಹಾಸದಲ್ಲಿ ಮೊದಲ ಎನ್‌ಡಿಪಿಎಸ್ ಶಿಕ್ಷೆ ಪ್ರಕರಣವಾಗಿದೆ.
Read More »Yearly Archives: 2025
ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ- ಮಾಧ್ಯಮದವರಿಗೆ ಸಿಎಂ ಸಲಹೆ*
* *ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ* *ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಸೆಪ್ಟೆಂಬರ್ 19: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ …
Read More »ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ
ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ವೀರಶೈವ ಲಿಂಗಾಯತ್ ಏಕತಾ ಸಮಾವೇಶ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜನೆಎಂ.ಎಲ್.ಸಿ ಚನ್ನರಾಜ್ಹಟ್ಟಿಹೊಳಿ ಭಾಗಿವಿವಿಧ ವಿಷಯಗಳ ಕುರಿತು ಚರ್ಚೆ ಹುಬ್ಬಳ್ಳಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾದರು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ …
Read More »ನೂತನ ಹೆಲಿಕಾಪ್ಟರ್ ಖರೀದಿಸಿದ ಸಚಿವ ಸತೀಶ್ ಜಾರಕಿಹೊಳಿ?
ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ. ಹೌದು…. ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಉತ್ತರಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ …
Read More »ಮೈಸೂರು ದಸರಾ: ಎರಡನೇ ಹಂತದ ಸಿಡಿಮದ್ದು ತಾಲೀಮು ಹೇಗಿತ್ತು?
ಮೈಸೂರು: ದಸರಾ ಜಂಬೂ ಸವಾರಿ ದಿನ ನಡೆಯುವ ಸಾಂಪ್ರದಾಯಿಕ ಕುಶಾಲತೋಪಿಗೆ ಗಜಪಡೆ ಹಾಗೂ ಅಶ್ವದಳವನ್ನು ಸಿದ್ಧಗೊಳಿಸುವ, ಸಿಡಿಮದ್ದು ಸಿಡಿಸುವ ಎರಡನೇ ಹಂತದ ತಾಲೀಮು ಇಂದು ನಡೆಯಿತು. ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ತಾಲೀಮು ನಡೆಸಿದರು. ಅಭಿಮನ್ಯು ನೇತೃತ್ವದ 14 ಆನೆಗಳು ಹಾಗೂ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ 30 ಅಶ್ವಗಳು ಎರಡನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಭಾಗವಹಿಸಿದವು. ಸಿಡಿಮದ್ದು …
Read More »ಗೃಹಲಕ್ಷ್ಮಿ ಹಣದಲ್ಲಿ ನಿರ್ಮಿಸಿದ ಮನೆ ಬಾಗಿಲಿನಲ್ಲಿ ಸಿಎಂ
ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಸಿಎಂ ಸಿದ್ದರಾಮಯ್ಯ ಕಟ್ಟಾ ಅಭಿಮಾನಿಯಾದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ತಮ್ಮ ಮನೆಯ ಬಾಗಿಲಿನಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರವನ್ನು ಕೆತ್ತಿಸುವ ಮೂಲಕ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾದ ಪಾರ್ವತಮ್ಮರಿಗೆ 30 ಸಾವಿರ ರೂ. ಬಂದಿದ್ದು, ಅದನ್ನು ಕೂಡಿಟ್ಟು ಅದರಿಂದ ಅವರ ಮನೆಗೆ ಹೊಸ ಬಾಗಿಲನ್ನು ನಿರ್ಮಿಸಿದ್ದಾರೆ. ಅದರ ಮೇಲ್ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರನ್ನು ಕೆತ್ತಿಸಿದ್ದಾರೆ. ಅದರ ಮಧ್ಯಭಾಗದಲ್ಲಿ ಸಿದ್ದರಾಮಯ್ಯ …
Read More »ಮೈಸೂರು ದಸರಾ ಭದ್ರತೆಗೆ 6000ಕ್ಕೂ ಹೆಚ್ಚು ಪೊಲೀಸರು, 30 ಸಾವಿರಕ್ಕೂ ಅಧಿಕ ಸಿಸಿಟಿವಿ ಕಣ್ಗಾವಲು
ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಮಾಡಿಕೊಳ್ಳಲಾಗಿದೆ. ಸೆ.22 ರಿಂದ 29ನೇ ತಾರೀಕಿನವರೆಗೆ ಮೊದಲ ಹಂತದ ಭದ್ರತೆ ಮತ್ತು ಸೆ.30 ರಿಂದ ಅ.2ರವರೆಗೆ ಎರಡನೇ ಹಂತದ ಜಂಬೂಸವಾರಿ ಭದ್ರತೆ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದರು. ಇಂದು ಖಾಸಗಿ ಹೋಟೆಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ದಸರಾದ ಜಂಬೂಸವಾರಿ ಮೆರವಣಿಗೆ ಹಾಗೂ ಸುರಕ್ಷತೆ, ಸುಗಮ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಯ ಸಿದ್ಧತೆ ಹಾಗೂ ಜಂಬೂಸವಾರಿ …
Read More »ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ
ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ನಾಡಹಬ್ಬದ ಪ್ರಧಾನ ಕಾರ್ಯದರ್ಶಿ ಡಾ. ಸಿ.ಕೆ.ಜೋರಾಪೂರ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ನಡೆಸುವ ನಾಡಹಬ್ಬಕ್ಕೆ ತನ್ನದೆಯಾದ ಇತಿಹಾಸ ಇದೆ. ಪ್ರಚಲಿತ ವಿಷಯವನ್ನು ಮುಂದಿಟ್ಟುಕೊಂಡು ಚಿಂತನೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸೆ.22 ರಂದು ಸಂಜೆ 6ಕ್ಕೆ ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ …
Read More »ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ*
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಪಿ ಐ ಗುರುಶಾಂತ ಗೌಡ ದಾಶ್ಯಾಳ ಮಾತನಾಡಿ ಸಮಾಜದಲ್ಲಿ ಶಾಂತತೆ ಇರಬೇಕಾದರೆ ಜನರ ಸಹಕಾರ ಬೇಕು ಅಂತ ಹೇಳಿದರು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಣ್ಣ- ಪುಟ್ಟ ಪ್ರಕರಣಗಳನ್ನು ಹೊರತು ಪಡಿಸಿ ಈ ವರ್ಷ ಯಾವುದೇ …
Read More »ಹುಬ್ಬಳ್ಳಿ ವೀರಶೈವ ಸಮಾವೇಶಕ್ಕೆ ಪಂಚಮಸಾಲಿಗರು ಹೋಗಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ
ಹುಬ್ಬಳ್ಳಿ ವೀರಶೈವ ಸಮಾವೇಶಕ್ಕೆ ಪಂಚಮಸಾಲಿಗರು ಹೋಗಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ಬೆಳಗಾವಿ: “ಹುಬ್ಬಳ್ಳಿಯಲ್ಲಿ ಶುಕ್ರವಾರ (ಇಂದು) ನಡೆಯಲಿರುವ ಅಖಿಲ ಭಾರತ ವೀರಶೈವ ಮಹಾಸಭಾ ಸಮಾವೇಶಕ್ಕೆ ಪಂಚಮಸಾಲಿ ಸಮಾಜದವರು ಯಾರೂ ಹೋಗಬಾರದು” ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ವಾಮೀಜಿ ಅವರು, “ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ನಮಗೆ ಸಹಕಾರ …
Read More »