ಕಲಬುರಗಿ, ಜೂನ್ 22: ಬಡವರಿಗೆ ಮನೆ ಬೇಕು ಅಂದರೆ ವಸತಿ ಇಲಾಖೆ ಅಧಿಕಾರಿಗಳಿಗೆ ಹಣ ಕೊಡಲೇಬೇಕು ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ (BR Patil) ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಚೆಕ್ ಮಾಡಿದಾಗ ಅಫಜಲಪುರ ಕ್ಷೇತ್ರದಲ್ಲಿ ಹಣ ಕೊಡದಿದಕ್ಕೆ ಮನೆಗಳ ಸ್ಥಳಾಂತರ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೀಗ ಇದೇ ರೀತಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ (Aland Assembly constituency) ವ್ಯಾಪ್ತಿಯ ಗ್ರಾಮದಲ್ಲಿ ಕೂಡ ರಿಯಾಲಿಟಿ ಚೆಕ್ ಮಾಡಿದ್ದು, ಮತ್ತೊಂದು ಸಾಕ್ಷಿ ಲಭ್ಯವಾಗಿದೆಹಣ ಕೊಟ್ಟರಷ್ಟೇ …
Read More »Yearly Archives: 2025
ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್
ಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರದಿಂದ ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಇಂದು (ಭಾನುವಾರ) ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ …
Read More »ಡಿಕೆಶಿ ಸಿಎಂ ಆಗುವ ಕನಸು ಮಾತ್ರ ಕಾಣಬೇಕು
ಮಂಡ್ಯ : ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ. ಡಿಕೆಶಿಗೆ ಕಾಂಗ್ರೆಸ್ನಲ್ಲಿ ಯಾರು ಬಿಟ್ಟು ಕೊಡ್ತಾರೆ? ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆಟೋ ಸ್ಟಾಂಡ್ ನಿರ್ಮಾಣದ ಗುದ್ದಲಿ ಪೂಜೆಯನ್ನು ಅವರು ಭಾನುವಾರ ನೆರವೇರಿಸಿದರು. ಹಲವು ವರ್ಷಗಳಿಂದ ಆಟೋ ಸ್ಟಾಂಡ್ಗೆ ಬೇಡಿಕೆ ಇತ್ತು. ಇಂದು ಗುದ್ದಲಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. CSR ಅನುದಾನದಲ್ಲಿ ಗುದ್ದಲಿ …
Read More »ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಇತರ 14 ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸದಸ್ಯರು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ಹುದ್ದೆಗಳ ಚುನಾವಣೆ 29.06.2025ರ ಭಾನುವಾರದಂದು ನಿಗದಿಯಾಗಿತ್ತು. ಆದರೆ, ಪ್ರತಿಸ್ಪರ್ಧಿಗಳು ಸ್ಪರ್ಧೆಯಿಂದ ಹಿಂದೆ ಸರಿದರು. ಹೀಗಾಗಿ, ಆಯ್ಕೆಯಾಗಬೇಕಾದ ಸ್ಥಾನಗಳಿಗೆ ಸಮಾನವಾಗಿ ಅಭ್ಯರ್ಥಿಗಳು ಉಳಿದಿರುವುದರಿಂದ 15 ಮಂದಿ ಚಿತ್ರಕಲಾ ಪರಿಷತ್ಗೆ ಅವಿರೋಧವಾಗಿ ಆಯ್ಕೆಯಾದ …
Read More »ಇರಾನ್ನಲ್ಲಿ ಸಿಲುಕಿದ್ದ ಕನ್ನಡಿಗರು ತಾಯ್ನಾಡಿಗೆ: ಒಂದೇ ಗ್ರಾಮದ 16 ಜನ ವಾಪಸ್
ಬೆಂಗಳೂರು, ಜೂನ್ 21: ಇರಾನ್ ಮತ್ತು ಇಸ್ರೇಲ್ (Iran and Israel) ನಡುವಿನ ಯುದ್ಧ ಮುಂದುವರೆಯುತ್ತಿದ್ದು ದಿನದಿಂದ ದಿನಕ್ಕೆ ಪರಿಸ್ಥಿತಿ ಉದ್ವಿಗ್ನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು (Kannadigas) ಶನಿವಾರ (ಜೂ.21) ಕರ್ನಾಟಕಕ್ಕೆ (Karnataka) ವಾಪಸ್ ಆಗಿದ್ದಾರೆ. ಇರಾನ್ನಿಂದ ಬೆಂಗಳೂರಿಗೆ ಆಗಮಿಸಿದ ಕನ್ನಡಿಗರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳಿಯ ಶಾಸಕ ಹಾಗೂ ಕುಟುಂಬಸ್ಥರು ಅದ್ದೂರಿಯಾಗಿ ಸ್ವಾಗತಕೋರಿದರು. ತಾಯ್ನಾಡಿಗೆ ಮರಳಿದ ಕನ್ನಡಿಗರು ಮತ್ತು ಇವರ ಪೋಷಕರಿಗೆ ಶಾಸಕ …
Read More »ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡುವವರಿಗೆ ಜೈಲು, ದಂಡ:ರಾಜ್ಯ ಸರ್ಕಾರ
ಬೆಂಗಳೂರು, (ಜೂನ್ 22): ಕರ್ನಾಟಕದಲ್ಲಿ ಸುಳ್ಳು ಸುದ್ದಿ ((Fake News) , ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು …
Read More »ರಾಜ್ಯದಲ್ಲಿ ನಿರಂತರ ಮಾವು ಬೆಲೆ ಕುಸಿತ:
ಬೆಂಗಳೂರು: ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದಿರುವ ಹಿನ್ನೆಲೆಯಲ್ಲಿ ‘ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ’ಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರಡೆರೆಡು ರೂ.ಗಳಂತೆ ಒಟ್ಟು 4 ರೂ. ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿವೆ. ಶನಿವಾರ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿಡಿಯೋ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ …
Read More »ಹೂತಿಟ್ಟ ಶವದ ಹಿಂದಿನ ಕಾರಣ ಬಯಲು
ಚಾಮರಾಜನಗರ: ಹೂತಿಟ್ಟ ಶವದಿಂದ ಮುಂಗೈ ಹೊರಬಂದ ಪ್ರಕರಣದಲ್ಲಿ ಮಹಿಳೆಯ ಗುರುತು ಪತ್ತೆಯಾಗಿದ್ದು, ಕೊಲೆಗೈದ ಪ್ರಿಯಕರ ಸಿಕ್ಕಿಬಿದ್ದಿದ್ದಾನೆ. ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದ ಸುವರ್ಣಾವತಿ ನದಿ ದಂಡೆಯಲ್ಲಿ ಗುರುವಾರ ರಾತ್ರಿ ಶವದ ಮುಂಗೈ ಕಾಣಿಸಿಕೊಂಡಿತ್ತು. ಮೋಳೆ ಗ್ರಾಮದ ಸೋನಾಕ್ಷಿ (29) ಎಂಬಾಕೆಯ ಶವ ಇದಾಗಿದೆ. ಈಕೆಯನ್ನು ಪ್ರಿಯಕರ ಮಾದೇಶ(35) ಕೊಲೆ ಮಾಡಿ, ಹೂತು ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋನಾಕ್ಷಿ ತನ್ನ ಸೋದರ ಮಾವ ವಿಜಯ್ ಕುಮಾರ್ ಎಂಬವರನ್ನು ಮದುವೆಯಾಗಿದ್ದರೂ ಸಂಬಂಧದಲ್ಲಿ …
Read More »ಪಣಜಿ ಹೆದ್ದಾರಿಯಲ್ಲಿರುವ ಲೊಂಡಾ ಫಾಟಾದಿಂದ ಲೊಂಡಾ ಗ್ರಾಮಕ್ಕೆ ಹೋಗುವ ಸುಮಾರು 300 ಮೀಟರ್ ಉದ್ದದ ರಸ್ತೆ ತೀವ್ರವಾಗಿ ಹದಗೆಟ್ಟಿದೆ.
ಲೊಂಡಾ ಫಾಟಾದಿಂದ ಲೊಂಡಾ ಗ್ರಾಮದವರೆಗಿನ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯ… ಶೀಘ್ರ ದುರಸ್ತಿಗಾಗಿ ಗ್ರಾಮಸ್ಥರ ಆಗ್ರಹ… ಬೆಳಗಾವಿ-ಪಣಜಿ ಹೆದ್ದಾರಿಯಲ್ಲಿರುವ ಲೊಂಡಾ ಫಾಟಾದಿಂದ ಲೊಂಡಾ ಗ್ರಾಮಕ್ಕೆ ಹೋಗುವ ಸುಮಾರು 300 ಮೀಟರ್ ಉದ್ದದ ರಸ್ತೆ ತೀವ್ರವಾಗಿ ಹದಗೆಟ್ಟಿದೆ. ಕಳೆದ ನಾಲ್ಕು ವರ್ಷಗಳಿಂದ ಈ ರಸ್ತೆ ದುರಸ್ತಿಗಾಗಿ ಕಾಯುತ್ತಿದ್ದು, ಇದರಿಂದ ಸಣ್ಣಪುಟ್ಟ ಅಪಘಾತಗಳು ನಿತ್ಯ ಸಹಜವಾಗಿದ್ದು ಶೀಘ್ರ ದುರಸ್ತಿಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ ಲೊಂಡಾ ಗ್ರಾಮವನ್ನು ಲೊಂಡಾ ಜಂಕ್ಷನ್ ಎಂದು ಕರೆಯಲಾಗುತ್ತದೆ, ಏಕೆಂದರೆ ಗೋವಾಕ್ಕೆ ಹೋಗುವ …
Read More »ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ:C.M.
ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು : ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು …
Read More »