Breaking News

Yearly Archives: 2025

ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ಬಿಜೆಪಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಘಟಕದಿಂದ ವತಿಯಿಂದ ಪ್ರತಿಭಟನೆ ನಡೆಸಿ, ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಲಾಯಿತು. ಬನಹಟ್ಟಿ ನಗರದಲ್ಲಿನ ಜಮಖಂಡಿ -ಮಿರಜ್ ರಸ್ತೆ ತಡೆದು ಬನಹಟ್ಟಿ ಬಿಜೆಪಿ ನಗರ ಘಟಕದ ಅಧ್ಯಕ್ಷ …

Read More »

ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ

ಉಡುಪಿ; ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ …

Read More »

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್…

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್… ಕಸ ವಿಲೇವಾರಿಯಾಗುತ್ತಿಲ್ಲ, ನಾಯಿಗಳ ಹಾವಳಿ, ಗಬ್ಬು ವಾಸನೆ… ಪಾಲಿಕೆ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿರುವ ನಿವಾಸಿಗಳು….. ಬೆಳಗಾವಿ ಅಜಂನಗರ ಕೆಎಲ್ಇ ಕಂಪೌಂಡ ಪಕ್ಕದಲ್ಲಿರುವ ಮೊದಲೇ ಕ್ರಾಸ್ ನಲ್ಲಿ ಬಿದ್ದಿರುವ ಕಸದ ರಾಶಿಯನ್ನು ನೋಡಿದರೆ ಅಕ್ಷರಶಹ ತ್ಯಾಜ್ಯ ವಿಲೇವಾರಿ ಘಟಕದಂತಾಗಿದ್ದು, ಪಾಲಿಕೆ ನಿರ್ಲಕ್ಷ್ಯಕ್ಕೆ ಇಲ್ಲಿಯ ನಿವಾಸಿಗಳು ಹಿಡಿ ಶಾಪ ಹಾಕುತ್ತಿದ್ದಾರೆ ಅಜಮ್ ನಗರ ಮಹಾನಗರ ಪಾಲಿಕೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. …

Read More »

ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಚಾಮರಾಜನಗರ : ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ದೇಶಿಪುರ ಕಾಲೋನಿಯ ಪುಟ್ಟಮ್ಮ ಎಂಬಾಕೆ ಹುಲಿಗೆ ಬಲಿಯಾಗಿರುವ ದುರ್ದೈವಿ. ಇಂದು ಮಧ್ಯಾಹ್ನ ಕಾಲೋನಿ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಅವರ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದುಹಾಕಿದೆ. ಬಳಿಕ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು. ಬಳಿಕ, ಗ್ರಾಮಸ್ಥರು ಹುಡುಕಾಡಿದ್ದರಿಂದಾಗಿ ಪುಟ್ಟಮ್ಮನ ಶವ ದೊರೆತಿದ್ದು, ಬಂಡೀಪುರ ಹುಲಿ ಸಂರಕ್ಷಿತ …

Read More »

ಬಿಎಸ್‌ವೈ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿಗೆ ವಿಳಂಬ: ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ಸೆಂಟರ್‌ ಫಾರ್‌ ಎಜುಕೇಷನ್‌ ಆ್ಯಂಡ್‌ ಸೋಷಿಯಲ್‌ ಸ್ಟಡೀಸ್‌ (ಸಿಇಎಸ್‌ಎಸ್‌) ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ (ಪ್ರಾಸಿಕ್ಯೂಷನ್‌) ಪೂರ್ವಾನುಮತಿ ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಳಂಬ ಮಾಡುತ್ತಿರುವ ಸಂಬಂಧ ರಾಜ್ಯಪಾಲರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್‌ ನೋಟಿಸ್‌ ಜಾರಿ …

Read More »

ಸಕ್ಕರೆ ಕಾರ್ಖಾನೆಗಳಿಂದ ಬಿಲ್​​ ಪಾವತಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಬಾಗಲಕೋಟೆ: ಸಕ್ಕರೆ ಕಾರ್ಖಾನೆಗಳಿಂದ ಬಿಲ್​​​ ಪಾವತಿಸುವಂತೆ ಒತ್ತಾಯಿಸಿ ರೈತರು ಇಲ್ಲಿನ ಜಿಲ್ಲಾಡಳಿತ ಭವನದೆದುರು ಗುರುವಾರ ಪ್ರತಿಭಟನೆ ನಡೆಸಿದರು. ಕಳೆದ ಒಂದು ವರ್ಷದಿಂದ ಸಕ್ಕರೆ ಕಾರ್ಖಾನೆಯವರು ಕಬ್ಬು ನುರಿಸಿದ ರೈತರ ಬಿಲ್ ಹಾಗೂ ಬಾಕಿ ಹಣ ಪಾವತಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ರೈತ ಮುಖಂಡರಾದ ಮುತ್ತಪ್ಪ ಕೋಮಾರ್, ಈರಣ್ಣ ಹಂಚಿನಾಳ ಹಾಗೂ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿದರು. ಜಿಲ್ಲಾಡಳಿತ ಭವನದೊಳಗೆ ಹೋಗಲು ಪೊಲೀಸರು ತಡೆಯೊಡ್ಡಿದ್ದರಿಂದ ರೈತರು …

Read More »

ಕಂದಾಯ ಇಲಾಖೆ ಕಚೇರಿಯಲ್ಲಿ ಲಂಚದ ರೇಟ್ ಕಾರ್ಡ್ ಹಾಕಿ: ಸಚಿವ ಕೃಷ್ಣ ಬೈರೇಗೌಡ ಕಿಡಿ

ಬೆಂಗಳೂರು (ಜೂ.20): ಪ್ರತಿಯೊಂದು ಕೆಲಸಕ್ಕೂ ಲಂಚ, ಅಲೆದಾಟ, ವಿಳಂಬ ನೀತಿಯ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹೆಚ್ಟುವರಿ ಆಯುಕ್ತರ ಕಚೇರಿಗಳು ಮತ್ತು ತಹಸೀಲ್ದಾರ್ ಕಚೇರಿಗಳಿರುವ ಕಂದಾಯ ಭವನಕ್ಕೆ ಗುರುವಾರ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಇಂಥ ಕೆಲಸಕ್ಕೆ ಇಂತಿಷ್ಟು ಲಂಚ ಆಗುತ್ತದೆ ಎನ್ನುವ ‘ಲಂಚದ ದರ ಫಲಕವನ್ನೇ ಅಳವಡಿಸಿಬಿಡಿ’ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದರು. ದಿಢೀರ್ ಭೇಟಿಗೆ …

Read More »

ಮೃಗಾಲಯದ ಹೆಣ್ಣು ಹುಲಿ ದೇವಿ ಸಾವು

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಶ್ರೀ ಅಟಲ್​​​ ಬಿಹಾರಿ ವಾಜಪೇಯಿ ಜೂಲಾಜಿಕಲ್​​ ಪಾರ್ಕ್‌ನಲ್ಲಿ​ ‘ದೇವಿ’ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದೆ ಎಂದು ಉಪ ಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗೆ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಿಸಲಾಗಿತ್ತು. ಇಲ್ಲಿನ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ವೈದ್ಯೋಪಚಾರ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ …

Read More »

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

ಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬುಧವಾರ ಬೆಳಗ್ಗೆ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲ ಗೇಟ್​ನಿಂದ ವೈಟ್ ಫೀಲ್ಡ್ ಕಡೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಜೈನ್ ಹೆರಿಟೇಜ್ ಶಾಲೆಯ ಬಸ್ ಇದಾಗಿದೆ. ಮಕ್ಕಳನ್ನ ಶಾಲೆಗೆ ಬಿಟ್ಟು ಇಂಧನ ತುಂಬಿಸಿಕೊಳ್ಳಲು ಬಸ್ ಚಾಲಕ ಪೆಟ್ರೋಲ್ ಬಂಕ್​ಗೆ ಹೋಗುವಾಗ ಬ್ರೇಕ್ …

Read More »

ಇಸ್ರೇಲ್ ನಿಂದ ತವರಿಗೆ ಬಂದ ಕನ್ನಡಿಗರು

ಬೆಂಗಳೂರು : ಪೌರಾಡಳಿತ ಅಧ್ಯಯನಕ್ಕೆಂದು ಇಸ್ರೇಲ್ ಪ್ರವಾಸಕ್ಕೆ ರಾಜ್ಯದಿಂದ ತೆರಳಿದ್ದ 18 ಜನರ ತಂಡ ರಾಜ್ಯಕ್ಕೆ ಗುರುವಾರ ಹಿಂದಿರುಗಿದೆ. ಇಸ್ರೇಲ್ ದೇಶದಲ್ಲಿ ಪೌರಾಡಳಿತ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಅಧ್ಯಯನ ಮಾಡುವುದಕ್ಕಾಗಿ ರಾಜ್ಯದಿಂದ ಬಿ ಪ್ಯಾಕ್ ತಂಡದಲ್ಲಿ 18 ಜನರು ತೆರಳಿದ್ದರು. ಇರಾನ್​ -ಇಸ್ರೇಲ್​ ದೇಶಗಳ ನಡುವೆ ಕಳೆದ ಕೆಲ ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್​ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಇಸ್ರೇಲ್ ನಿಂದ ಕುವೈತ್​, ಕುವೈತ್​ನಿಂದ ಮುಂಬೈ …

Read More »