Breaking News

Yearly Archives: 2025

ಡಿಸೆಂಬರ್ ಅಂತ್ಯದೊಳಗೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ

ಡಿಸೆಂಬರ್ ಅಂತ್ಯದೊಳಗೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ- ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿದ ಜನ

ಬೆಂಗಳೂರು: ವಿಶೇಷಚೇತನ ಯವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಸ್ಥಳಿಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್​​ 9ರಂದು ಆಡುಗೋಡಿಯ ಎಂ.ಆರ್​. ನಗರದಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಮಾಹಿತಿಯನ್ವಯ ಆರೋಪಿ ವಿಘ್ನೇಶ್​ ಅಲಿಯಾಸ್​ ದಾಡು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾತು ಬಾರದ, ಕಾಲು ಸ್ವಾಧೀನವಿರದ 21 ವರ್ಷ ವಯಸ್ಸಿನ ಯುವತಿಯನ್ನು ಮನೆಯಲ್ಲಿ ಬಿಟ್ಟು, ಹೊರಗಿನಿಂದ ಬಾಗಿಲ ಚಿಲಕ ಹಾಕಿಕೊಂಡು ಆಕೆಯ …

Read More »

ಬೆಳಗಾವಿಯಲ್ಲಿ 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್: 5 ಸಾವಿರ ಮಕ್ಕಳು ಭಾಗಿಯಾಗುವ ನಿರೀಕ್ಷೆ

ಬೆಳಗಾವಿ: 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ (ಬೃಹತ್ ಮಕ್ಕಳ ಮೇಳ) ಇದೇ ಡಿಸೆಂಬರ್ 27ರಿಂದ ಜ.1ರ ವರೆಗೆ 6 ದಿನಗಳ ಕಾಲ ಬೆಳಗಾವಿಯಲ್ಲಿ ಏರ್ಪಡಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಘಟಕದ ಅಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಫಿನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯದ …

Read More »

ಕುರುಬರ ಸಂಘ, ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು: ಸಿಎಂ

ಬೆಂಗಳೂರು: ನಾನು ಮೊದಲಿನಿಂದಲೂ ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸುವ ಸನಾತನವಾದಿ ಆರ್​​ಎಸ್​​ಎಸ್ ವಿರೋಧಿಯಾಗಿದ್ದೇನೆ. ಈ ಕಾರಣಕ್ಕಾಗಿ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದೇನೆ. ಈ ಮೂಲಕ ಜಾತಿ ಪದ್ದತಿ ಹಾಗೂ ಮೌಢ್ಯದ ವಿರುದ್ದ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು. ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ …

Read More »

ಬುದ್ಧಿವಂತರೆಂದು ಎನಿಸಿಕೊಳ್ಳುವವರೇ ದಡ್ಡರಾಗಿರುತ್ತಾರೆ

ಬೆಂಗಳೂರು: ಸ್ಯಾಂಡಲ್​​​ವುಡ್​ ರಿಯಲ್​​ ಸ್ಟಾರ್​ ಉಪೇಂದ್ರ ಮತ್ತು ನಟಿ ಪ್ರಿಯಾಂಕಾ ಉಪೇಂದ್ರ ದಂಪತಿಯ ಮೊಬೈಲ್‌ ಹ್ಯಾಕ್ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸದಾಶಿವನಗರ ಠಾಣೆ ಪೊಲೀಸರು ಸೈಬರ್ ವಂಚಕನನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ದೆಹಲಿಯ ಸೋನಿಯಾ ನಗರದಲ್ಲಿ ಬಂಧಿಸಿ ಕರೆತರಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸದಾಶಿವನಗರ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಬಳಿ ಪ್ರತಿಕ್ರಿಯಿಸಿದ ದೂರುದಾರರಾದ …

Read More »

ಬಿಹಾರದಲ್ಲಿ ನಿರೀಕ್ಷೆ ಮೀರಿ ಬಿಜೆಪಿ ಗೆಲುವು ಸಾಧಿಸಲಿದೆ: ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ನಿರೀಕ್ಷೆಗೂ ಮೀರಿ ಬಿಹಾರ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿಯ ಕೇಂದ್ರ ಸಂಸದಿಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿಶ್ಬಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ನಿರೀಕ್ಷೆ ಮೀರಿ ಬಿಹಾರ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಮೋದಿ ಹಾಗೂ ಅಮಿತ್ ಷಾ ಅವರ ಪರಿಶ್ರಮದಿಂದ ಚುನಾವಣೆಯಲ್ಲಿ ಈಗಾಗಲೇ ಗೆದ್ದಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಅರ್ಡಸ್ ಇಲ್ಲದಂತೆ ಆಗಿದೆ. ಈಗಾಗಲೇ ಎಲ್ಲಾ ಸಮೀಕ್ಷೆಗಳು ಅದನ್ನೇ ಹೇಳುತ್ತಿವೆ. …

Read More »

ಕಪ್ಪಲಗುದ್ದಿ ಗ್ರಾಮದಲ್ಲಿ ‌ಇತ್ತಿಚೀಗೆ ನೂತನವಾಗಿ ಪ್ರತಿಷ್ಠಾಪಿಸಿದ ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಪ್ರತಿಮೆಗೆ ಇಂದು ಪುಷ್ಪ ನಮನ

ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ‌ಇತ್ತಿಚೀಗೆ ನೂತನವಾಗಿ ಪ್ರತಿಷ್ಠಾಪಿಸಿದ ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಪ್ರತಿಮೆಗೆ ಇಂದು ಪುಷ್ಪ ನಮನಗಳನ್ನು ‌ಸಲ್ಲಿಸಿದೆ. ಈ ವೇಳೆ ಗ್ರಾಮದ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.

Read More »

ಇಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಾಯಿತು.

ಇಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಾಯಿತು. ಈ ಸಂದರ್ಭದಲ್ಲಿ ಪೀಠದ ಮಹಾಸ್ವಾಮಿಗಳಾದ ಶ್ರೀ ಪ್ರಸನ್ನಾನಂದ ಪುರಿ ಶ್ರೀಗಳನ್ನು ಸನ್ಮಾನಿಸಿ, ಅವರೊಂದಿಗೆ ಆತ್ಮೀಯ ಹಾಗೂ ಸೌಹಾರ್ದಪೂರ್ಣ ಚರ್ಚೆ ನಡೆಸಲಾಯಿತು. ಈ ವೇಳೆ ಶ್ರೀಗಳು ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು.

Read More »

ಹುಲಿ ದಾಳಿ ಪ್ರಕರಣ: ಕಳೆದ 26 ದಿನಗಳಲ್ಲಿ 5 ಮರಿಗಳ ಸಹಿತ 10 ಹುಲಿಗಳ ಸೆರೆ

ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಮಾಡಿ ಮೂವರನ್ನು ಬಲಿ ಪಡೆದ ನಂತರ ಅರಣ್ಯ ಇಲಾಖೆಯ ಹುಲಿಸೆರೆ ಕಾರ್ಯಾಚರಣೆಯ ಪಡೆ ಕಳೆದ 26 ದಿನಗಳಲ್ಲಿ 5 ಹುಲಿ ಮರಿಗಳು ಸೇರಿದಂತೆ 10 ಹುಲಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಹುಲಿ ಸೆರೆಯ ಕಾರ್ಯಾಚರಣೆಯ ಒಂದು ವರದಿ ಇಲ್ಲಿದೆ. ಮೈಸೂರು ಜಿಲ್ಲೆಯ ಸರಗೂರು, ಹೆಚ್.ಡಿ.ಕೋಟೆ ಹಾಗೂ ನಂಜನಗೂಡು ಭಾಗದ ಬಂಡೀಪುರ ಹಾಗೂ ನಾಗರಹೊಳೆ ಹುಲಿ …

Read More »

ಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್​ ಚನ್ನೇಗೌಡ ನಿಧನ

ಮಂಡ್ಯ: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್​ ಚನ್ನೇಗೌಡ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದವರಾದ ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿರಲಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೇ ನಟನಿಗೆ ಹೃದಯ ಸಂಬಂಧಿ ಸಮಸ್ಯೆ, ಕೆಮ್ಮು, ಉಬ್ಬಸ, ಶ್ರವಣದೋಷ ಸೇರಿದಂತೆ ವಯೋಸಹಜ ಅನಾರೋಗ್ಯ ಸಮಸ್ಯೆಗಳಿದ್ದವು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ. …

Read More »