Breaking News

Yearly Archives: 2025

ಟೆಲಿಫೋನ್​ ಕದ್ದಾಲಿಕೆ ಆರೋಪ ಪ್ರಕರಣ: ಅಲೋಕ್​ ಕುಮಾರ್​ ವಿರುದ್ಧದ ಇಲಾಖಾವಾರು ತನಿಖೆ ರದ್ದುಪಡಿಸಿದ ಸಿಎಟಿ

ಬೆಂಗಳೂರು: ಟೆಲಿಫೋನ್​ ಕದ್ದಾಲಿಕೆ ಆರೋಪ ಸಂಬಂಧ ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರ ವಿರುದ್ಧ ಇಲಾಖಾವಾರು ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಇಂದು ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ಅರ್ಜಿದಾರ ಅಲೋಕ್​ ಕುಮಾರ್ ರಿಗೆ ಸಲ್ಲಬೇಕಾದ ಎಲ್ಲ ರೀತಿಯ ಸವಲತ್ತುಗಳನ್ನು ಲಭ್ಯವಾಗುವಂತೆ ಮಾಡಬೇಕು ಎಂದು ಪೀಠ ತಿಳಿಸಿದೆ. ಟೆಲಿಫೋನ್​ ಕದ್ದಾಲಿಕೆ ಪ್ರಕರಣ ಸಂಬಂಧ ತನ್ನ ವಿರುದ್ಧ ಇಲಾಖಾವಾರು ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಆಲೋಕ್​ ಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ …

Read More »

ಶ್ರೀ ಹಾಸನಾಂಬ ದೇವಾಲಯಕ್ಕೆ ಕುಟುಂಬಸಮೇತ ಭೇಟಿ ನೀಡಿ: ಡಿ.ಕೆ.ಶಿ

ಸಿಎಂ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಭಗವಂತನಿಗೆ ಮಾತ್ರ ಗೊತ್ತಿದೆ: ಡಿ.ಕೆ.ಶಿ ಹಾಸನ: ನನಗೆ ಸಿಎಂ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಆ ಭಗವಂತನಿಗೆ ಮಾತ್ರ ಗೊತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದು (ಮಂಗಳವಾರ) ಶ್ರೀ ಹಾಸನಾಂಬ ದೇವಾಲಯಕ್ಕೆ ಕುಟುಂಬಸಮೇತ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಾಲಯ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ …

Read More »

ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ

ಕೊಪ್ಪಳ, ಅಕ್ಟೋಬರ್​ 14: ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Abhinava Gavisiddeshwara Swamiji) ನಡೆದಾಡುವ ದೇವರು ಎಂದೇ ಪ್ರಸಿದ್ದ. ಅವರ ದರ್ಶನಕ್ಕಾಗಿ ಪ್ರತಿನಿತ್ಯ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಿರುವಾಗ ಸ್ವಾಮೀಜಿಯ ಅದೊಂದು ನಡೆ ಮಾತ್ರ ಎಲ್ಲರಲ್ಲೂ ಅಚ್ಚರಿಗೆ ಕಾರಣವಾಗಿದೆ. ವಾರದಲ್ಲಿ ಒಂದು ದಿನ ಮಾತ್ರ ಮೌನ ಅನುಷ್ಠಾನ ಆಚರಿಸುತ್ತಿದ್ದ ಅವರು, ಇದೀಗ ವಾರದಲ್ಲಿ ಆರು ದಿನ ಮೌನ ಅನುಷ್ಠಾನದ ಮೊರೆಹೋಗುತ್ತಿದ್ದಾರೆ. ಆ ಮೂಲಕ ಕಾರ್ಖಾನೆಯೊಂದರ ವಿಚಾರವಾಗಿ ಪರೋಕ್ಷವಾಗಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. …

Read More »

ಪುಟಿದೆದ್ದ ಜಾರಕಿಹೊಳಿ ಸಹೋದರರು ಜೊಲ್ಲೆ ಗೆಲುವಿಗಾಗಿ ಒಂದಾದ ಮೂವರು ಜಾರಕಿಹೊಳಿ ಬ್ರದರ್ಸ್‌, ಇದು ಬೆಳಗಾವಿ ರಾಜಕೀಯ ಆಟ

ಬೆಳಗಾವಿ, (ಅಕ್ಟೋಬರ್ 14): ಹುಕ್ಕೇರಿ ವಿದ್ಯುತ್‌ ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ರಮೇಶ್‌ ಕತ್ತಿ (Ramesh Katti), ಜಾರಕಿಹೊಳಿ ಬ್ರದರ್ಸ್‌(Jarkiholi Brothers) ವಿರುದ್ಧ ಮೀಸೆ ತಿರುವಿದ್ದರು. ಇದಾಗಿ ಒಂದೇ ವಾರಕ್ಕೆ ಜಾರಕಿಹೊಳಿ ಸಹೋದರರು ಪುಟಿದೆದ್ದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ನ (Belagavi DCC Bank Election)  16 ಸ್ಥಾನಗಳ ಪೈಕಿ ಜಾರಕಿಹೊಳಿ ಬಣದ 9 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆ ಮೂಲಕ ಡಿಸಿಸಿ ಬ್ಯಾಂಕ್‌ನ ಆಡಳಿತ ಜಾರಕಿಹೊಳಿ ಪ್ಯಾನಲ್‌ ಪಾಲಾಗುವುದು …

Read More »

IPS ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರಕ್ಕೆ ಶಾಕ್

ಬೆಂಗಳೂರು, (ಅಕ್ಟೋಬರ್ 14): ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ (Phone Tapping Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಗೊಳಿಸಿದೆ. ಅಲ್ಲದೇ ತಡೆಹಿಡಿಯಲಾಗಿದ್ದ ಅವರ ಬಡ್ತಿ ಮತ್ತು ಇತರ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದೆ. ಸರ್ಕಾರದ ಇಲಾಖಾ ತನಿಖೆ ಆದೇಶ ಪ್ರಶ್ನಿಸಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಆದ್ರೆ, ಇಬ್ಬರು ನ್ಯಾಯಮೂರ್ತಿಗಳ ನಡುವೆ ವಿಭಿನ್ನ ತೀರ್ಪು …

Read More »

ನಾರಾಯಣ’, ‘ವೆಂಕಟರಮಣ’ ಎನ್ನುತ್ತಾ ಚಿನ್ನಾಭರಣ ಎಗರಿಸುತ್ತಿದ್ದ ನಕಲಿ ಸ್ವಾಮೀಜಿ ಸೆರೆ; ₹53 ಲಕ್ಷದ ಮಾಲು ಜಪ್ತಿ

ಬೆಂಗಳೂರು: ಪೂಜೆಯ ಹೆಸರಿನಲ್ಲಿ ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ಆರೋಪದ ಮೇಲೆ ನಕಲಿ ಸ್ವಾಮೀಜಿಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ದಾದಾಪೀರ್ (49) ಬಂಧಿತ ಆರೋಪಿ. ಜನರನ್ನು ವಂಚಿಸಿ ಪಡೆದ ಚಿನ್ನಾಭರಣವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗಲೇ ಆರೋಪಿಯನ್ನು ಬಂಧಿಸಿ, ಆತನಿಂದ ಒಟ್ಟು 53 ಲಕ್ಷ ರೂ ಮೌಲ್ಯದ 485.4 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ತನ್ನನ್ನು ತಾನು ನಾರಾಯಣ, ವೆಂಕಟರಮಣ ಮತ್ತಿತರ ಹೆಸರುಗಳಲ್ಲಿ ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಸ್ವಾಮೀಜಿಯ …

Read More »

ಚರ್ಚೆಗಳಿಗೆ ಟ್ಯಾಕ್ಸ್​, ಜಿಎಸ್​ಟಿ ಇರುವುದಿಲ್ಲ:ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಎಂಪಿ, ಎಂಎಲ್ಎ ಚುನಾವಣೆ ಬಿಟ್ಟರೆ ಎಲ್ಲ ಚುನಾವಣೆಗಳಿಗೆ ರೆಸಾರ್ಟ್, ಪ್ರವಾಸ ರಾಜಕೀಯ ಅನ್ವಯಿಸುತ್ತದೆ. ಒಟ್ಟಿಗೆ ಇರೋಣ ಎನ್ನುವ ಕಾರಣಕ್ಕೆ ಎಲ್ಲರೂ ಹೋಗಿದ್ದಾರೆ. ಇನ್ನುಳಿದ ಏಳು ಕ್ಷೇತ್ರಗಳಲ್ಲಿ ನಾವು ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತು ಮಾತನಾಡಿದ ಅವರು, ಕಿತ್ತೂರಿನಲ್ಲಿ ಯಾರ ಮೇಲೆ ಮತದಾರರ ಪ್ರೀತಿ ಹೆಚ್ಚಿದೆ ಅವರು ಗೆಲ್ಲುತ್ತಾರೆ. ಮತದಾರರು ಅದನ್ನು ನಿರ್ಧರಿಸಬೇಕು. …

Read More »

ಧಾರವಾಡ ಕೃಷಿ ವಿವಿಯಲ್ಲಿ 2018ರಿಂದ ಇಲ್ಲಿಯವರೆಗೆ ಲೆಕ್ಕಪರಿಶೋಧನೆ ನಡೆಸಲು ಸಿಎಜಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಕಳೆದ 2018ರಿಂದ ಕಂಟ್ರೋಲರ್‌ ಹುದ್ದೆ ನಿರ್ವಹಿಸಿರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಕಳೆದ 2018ರಿಂದ 2025ರವರೆಗೂ ವಿವಿಯ ಎಲ್ಲ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧನೆ ನಡೆಸುವಂತೆ ಕಂಟ್ರೋಲರ್‌ ಮತ್ತು ಆಡಿಟರ್‌ ಜನರಲ್-ಕರ್ನಾಟಕ (ಸಿಎಜಿ)ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಲೆಕ್ಕಪರಿಶೋಧನೆ ಸಮಯದಲ್ಲಿ ಯಾವುದೇ ಅಕ್ರಮ ಮತ್ತು ಹಣಕಾಸಿನ ದುರುಪಯೋಗ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ …

Read More »

ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಮೈಸೂರು: ನಾನೂ ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಆಗಿಲ್ಲ, ಇದೆಲ್ಲ ಮಾಧ್ಯಮದವರ ಸೃಷ್ಟಿ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ. ಎಲ್ಲರೂ ಊಟಕ್ಕೆ ಮಾತ್ರ ಸೇರಿದ್ದೆವು. ಇನ್ನು, ನವೆಂಬರ್‌ ಕ್ರಾಂತಿ ಎಂಬುದು ಮಾಧ್ಯಮದವರ ಸೃಷ್ಟಿ ಎಂದು ಹೇಳಿದರು. ಸಚಿವ ಪ್ರಿಯಾಂಕ್​ …

Read More »

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸದ್ಯ ಹಾಲಿ – ಮಾಜಿ ಶಾಸಕರ ದಂಡೇ ದುಂಬಾಲು ಬಿದ್ದಿದೆ.

ಬೆಳಗಾವಿ : ಅದೊಂದು ಕಾಲ ಇತ್ತು, ಜಿಲ್ಲೆಯ ಪ್ರಭಾವಿ ನಾಯಕರ ಶಿಷ್ಯರು, ಆಪ್ತರು, ದ್ವಿತೀಯ ಸಾಲಿನ ನಾಯಕರು ಮತ್ತು ಕಾರ್ಯಕರ್ತರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆ ಆಗುತ್ತಿದ್ದರು. ಆದರೆ, ಸದ್ಯ ಹಾಲಿ – ಮಾಜಿ ಶಾಸಕರ ದಂಡೇ ಅಧಿಕಾರಕ್ಕಾಗಿ ದುಂಬಾಲು ಬಿದ್ದಿದೆ. ಅದರಲ್ಲೂ ಪ್ರಭಾವಿ ಕುಟುಂಬಗಳೂ ಪೈಪೋಟಿಗೆ ಬಿದ್ದಿದ್ದು,  ವಿಸ್ತೃತ ವರದಿ ಇಲ್ಲಿದೆ. ಮಾಜಿ ಇದ್ದವರು ಹಾಲಿ ಆಗಲು ಇದು ಸಹಕಾರಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಡಿಸಿಸಿ) ಜಿಲ್ಲಾ ರಾಜಕಾರಣದ …

Read More »