Breaking News

Yearly Archives: 2025

ಮುಡಾ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಇಂದು ಮುಂದೂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಜಮೀನಿನ ಮೂಲ ಮಾಲೀಕ ಜೆ.ದೇವರಾಜು ಎಂಬವರು ಸಲ್ಲಿಸಿರುವ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು …

Read More »

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಶಿಫಾರಸು

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂಗೆ ಕ್ಲೀನ್ ಚಿಟ್, ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ಅವರು, ಸ್ಥಳೀಯ …

Read More »

ದಸರಾ ಮಹೋತ್ಸವದ ಮುನ್ನುಡಿಯ ಸಡಗರಕ್ಕೆ ಸಿದ್ಧತೆ

ಮೈಸೂರು : ದಸರಾ ಮಹೋತ್ಸವಕ್ಕೂ ಮುನ್ನ ನಡೆಯುವ ‘ಯುವ ಸಂಭ್ರಮ’ದ ಸಾಂಸ್ಕೃತಿಕ ರಂಗು ಸೆ.10 ರಿಂದ 17ರ ವರೆಗೆ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಈ ಬಾರಿ 14 ವಿಶಿಷ್ಟ ವಸ್ತುವಿಷಯಗಳಡಿ (ಥೀಮ್) ರಾಜ್ಯದ ವಿವಿಧ ಕಾಲೇಜಿನ ಸುಮಾರು 400-500 ತಂಡಗಳು ಭಾಗವಹಿಸಲಿವೆ. ಯುವ ಸಂಭ್ರಮವನ್ನು ಯುವ ರಾಜ್ ಕುಮಾರ್ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದ ಶೀರ್ಷಿಕೆ ಗೀತೆಯನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ದಸರಾ ಮಹೋತ್ಸವದ ಆರಂಭಕ್ಕೂ …

Read More »

ಜಿಎಸ್​ಟಿ ದರ ಇಳಿಕೆಯಿಂದ ಜನರಿಗೆ ಅನುಕೂಲ, ರಾಜ್ಯಗಳಿಗೆ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಮಾಡಿದ್ದರು. ಬಡವರು, ಮಧ್ಯಮವರ್ಗದ ಮೇಲೆ ಹೊಡೆತ ಬಿದ್ದಿತ್ತು. ರಾಜ್ಯದಿಂದ 4.5 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹವಾಗಿ ಕೇಂದ್ರ ಸರ್ಕಾರಕ್ಕೆ ಹೋಗುತ್ತಿತ್ತು. ಅಲ್ಲಿಂದ ನಮಗೆ ತೀರಾ ಕಡಿಮೆ ವಾಪಸ್​ ಬರುತ್ತಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಲ್ಲಿ ಸುದ್ದಿಗಾರರೊಂದಿ​​​​​ಗೆ ಮಾತನಾಡಿದ ಅವರು, ಜಿಎಸ್​​ಟಿ ಸ್ತರ, ದರ ಇಳಿಕೆಯ ಬಳಿಕ ಕರ್ನಾಟಕಕ್ಕೆ 15 ಸಾವಿರ ಕೋಟಿ ಕೊರತೆಯಾಗುವುದು. ಇದನ್ನು …

Read More »

ಉಡುಪಿ: ಸೆಪ್ಟೆಂಬರ್ 7ರಂದು ಖಗ್ರಾಸ ಚಂದ್ರಗ್ರಹಣ; ಕೆಂಬಣ್ಣದ ಚಂದಿರನ ದರ್ಶನ

ಉಡುಪಿ: ಸೆ.7ರ ಹುಣ್ಣಿಮೆಯ ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಖಗ್ರಾಸ ಚಂದ್ರ ಗ್ರಹಣದ ವೇಳೆ, ಚಂದ್ರನು ತಾಮ್ರದಂತೆ ಕೆಂಪು ಬಣ್ಣದಲ್ಲಿ ಗೋಚರಿಸುತ್ತಾನೆ. ಭೂಮಿಯು, ಚಂದ್ರನ ಮೇಲೆ ನೇರವಾಗಿ ಬೀಳುವ ಸೂರ್ಯ ಕಿರಣಗಳನ್ನು ತಡೆಗಟ್ಟುತ್ತದೆ. ಈ ಕಾರಣ, ಭೂಮಿಯ ವಾತಾವರಣದಲ್ಲಿ ಚದುರಿಸುವ ಕೆಂಪು ಬಣ್ಣವು, ಚಂದ್ರನ ಮೈಮೇಲಿಂದ ಪ್ರತಿಬಿಂಬಿಸುತ್ತದೆ. ಈ ಬೆಳಕಿನಿಂದಾಗಿ ಚಂದ್ರನು ಕೆಂಬಣ್ಣದಲ್ಲಿ ಗೋಚರಿಸುತ್ತಾನೆ. ಖಗೋಳಶಾಸ್ತ್ರಜ್ಞರು ಆಕಾಶಕಾಯಗಳ ಬೆಳಕನ್ನು ಪರಿಮಾಣ ಮಾಪನದಿಂದ ಗುರುತಿಸುತ್ತಾರೆ (ಈ ಸಂಖ್ಯೆ ಕಡಿಮೆ ಇದ್ದಷ್ಟು ಆಕಾಶಕಾಯ ಹೆಚ್ಚು …

Read More »

ಹುಕ್ಕೇರಿಯಲ್ಲಿ ಬೆಂಬಲ ಬೇಲೆ ನೀಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ.

ಹುಕ್ಕೇರಿ : ಹುಕ್ಕೇರಿಯಲ್ಲಿ ಬೆಂಬಲ ಬೇಲೆ ನೀಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ. ಹುಕ್ಕೇರಿ ನಗರದಲ್ಲಿ ಕರ್ನಾಟಕ ರೈತ ಸಂಘದ ವತಿಯಿಂದ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೇಲೆ ಘೋಷನೆ ಮಾಡುವಂತೆ ಆಗ್ರಹಿಸಿ ಕೋರ್ಟ ಸರ್ಕಲ್ ಬಂದ್ ಮಾಡಿ ಪ್ರತಿಭಟನೆ ಜರುಗಿಸಿದರು. ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದು ಹಾಗೂ ಸೋಯಾಬೀನ, ಕಬ್ಬು ಗೋವಿನ ಜೋಳ ಗಳಿಗೆ ಕರ್ನಾಟಕ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷನೆ ಮಾಡಬೇಕು …

Read More »

ಹುಕ್ಕೇರಿ : ಹುಕ್ಕೇರಿ ಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ ಪಥ ಸಂಚಲನ.

ಹುಕ್ಕೇರಿ : ಹುಕ್ಕೇರಿ ಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ ಪಥ ಸಂಚಲನ. ಹುಕ್ಕೇರಿ ನಗರದಲ್ಲಿ ಭದ್ರಾವತಿಯ ರಾಷ್ಟ್ರೀಯ RAF ಸೇನಾ ಪಡೆಯಿಂದ ಪಥಸಂಚಲನ ಜರುಗಿತು. ನಗರದಲ್ಲಿ ಕಳೆದ 9 ದಿನಗಳಿಂದ ಗಣೇಶ ಹಬ್ಬ ಆಚರಣೆ ಮತ್ತು ಶುಕ್ರವಾರ ದಿನ ಇದ್ ಮಿಲಾದ್ ಆಚರಣೆ ಹಾಗೂ ಸರಣಿ ಉರುಸು ಕಾರ್ಯಕ್ರಮಗಳು ಜರಗುತ್ತಿರುವದರಿಂದ ಯಾವದೇ ತರಹದ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಗೋಕಾಕ ಡಿ ಎಸ್ಪಿ ರವಿ ನಾಯ್ಕ ನೇತೃತ್ವದಲ್ಲಿ ಹುಕ್ಕೇರಿ …

Read More »

ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ*

ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ* *ಬೆಂಗಳೂರು:* ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ …

Read More »

7ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ ಎನ್ ರಾಜಣ್ಣ ಅವಿರೋಧ ಆಯ್ಕೆ

ತುಮಕೂರು : ಇಂದು ನಡೆದ ಚುನಾವಣೆಯಲ್ಲಿ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಹಿದಾ ಜಂಜಂ ಪ್ರಕಟಿಸಿದರು. 7ನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಿರುವುದು ಕೆ. ಎನ್. ರಾಜಣ್ಣ ಅವರಿಗೆ ಹೆಗ್ಗಳಿಕೆಯೆನಿಸಿದೆ. ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸಭಾಂಗಣದ ಒಳಗಡೆ ನೂತನ ನಿರ್ದೇಶಕ ಮಂಡಳಿಯವರು ಹೂಗುಚ್ಛ ನೀಡಿ ಹಾರ ಹಾಕಿ ಅಭಿನಂದಿಸಿದರೆ, ಬ್ಯಾಂಕ್ ಹೊರಗಡೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ಅಭಿಮಾನಿಗಳು ಪಟಾಕಿ …

Read More »

ಜಿಲ್ಲಾ ಹಾಲು ಒಕ್ಕೂಟದ ಹುಕ್ಕೇರಿ ಪ್ರಾದೇಶಿಕ ಸಭೆಯಲ್ಲಿ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗಿ* *ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಗುಂಪಿಗೆ ಅಧಿಕಾರ ಚುಕ್ಕಾಣಿ,*

ಜಿಲ್ಲಾ ಹಾಲು ಒಕ್ಕೂಟದ ಹುಕ್ಕೇರಿ ಪ್ರಾದೇಶಿಕ ಸಭೆಯಲ್ಲಿ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗಿ* *ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಗುಂಪಿಗೆ ಅಧಿಕಾರ ಚುಕ್ಕಾಣಿ,* *ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ಸ್ಥಾನ; ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ* *ಹುಕ್ಕೇರಿ-* ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಫೆನಲ್ ಅಧಿಕಾರಕ್ಕೆ ಬರಲಿದ್ದು, ಸುಮಾರು 12 ಜನ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ನಾವೇ ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ …

Read More »