ಬೆಂಗಳೂರು: “ಊಟಕ್ಕೆ ಸೇರುವುದು ಅಪರಾಧ ಎನ್ನುವ ರೀತಿ ಆಡುತ್ತೀರಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರು ಸಿಟ್ಟನ್ನು ಹೊರಹಾಕಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಊಟಕ್ಕೆ ನಾವು ಸೇರಲೇ ಬಾರದಾ?. ನನಗೆ ಅರ್ಥ ಆಗುತ್ತಿಲ್ಲ. ಬಿಜೆಪಿಯ ಮಾತು ಕೇಳಿ ಪ್ರಶ್ನೆ ಕೇಳಿದರೆ ಹೇಗೆ?. ಆಗಾಗ ಊಟಕ್ಕೆ ಸೇರುತ್ತಿರುತ್ತೇವೆ. ತಪ್ಪೇನು ಅದರಲ್ಲಿ. ಮತ್ತೆ ಏಕೆ ಅದನ್ನು ಕೇಳುತ್ತೀರ” ಎಂದು ಸಿಟ್ಟಿನಲ್ಲೇ ಮರು ಪ್ರಶ್ನಿಸಿದರು. ಇದೇ ವೇಳೆ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ನಿಷೇಧಿಸುವ ಸಂಬಂಧ ಪ್ರತಿಕ್ರಿಯೆ …
Read More »Yearly Archives: 2025
ಸಿಎಂ ಬದಲಾವಣೆ ಬಗ್ಗೆ ಈಗ ಶಾಸಕರ ಅಭಿಪ್ರಾಯ ಪಡೆಯಬಹುದು, ಬೇಡ ಅಂತಲೂ ಹೈಕಮಾಂಡ್ ತೀರ್ಮಾನಿಸಬಹುದು’
ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಈಗಲೂ ಶಾಸಕರ ಅಭಿಪ್ರಾಯ ಪಡೆಯಬಹುದು. ಶಾಸಕರ ಅಭಿಪ್ರಾಯ ಬೇಡ ಅಂತಲೂ ಹೈಕಮಾಂಡ್ ತೀರ್ಮಾನಿಸಬಹುದು ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿನನಗರ ನಿವಾಸದ ಬಳಿ ಮಾತನಾಡಿದ ಅವರು, ಸಿಎಂ ಬದಲಾವಣೆ ಹೈಕಮಾಂಡ್ ಆಯ್ಕೆ ಹೊರತು ಶಾಸಕರ ಆಯ್ಕೆಯಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಶಾಸಕರ ಬಲವೇ ಮುಖ್ಯ. ಪಕ್ಷ ಗೆದ್ದ ಮೇಲೆ ಸಿಎಂ ಆಯ್ಕೆ ಆಗುತ್ತದೆ. ಶಾಸಕರ ಅಭಿಪ್ರಾಯ ಪಡೆದು ಮಾಡ್ತಾರೆ. ಹೈಕಮಾಂಡ್ …
Read More »ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ಕನ್ನಡಿಗರಿಗೆ ಕರವೇ ದೀಕ್ಷೆ: ನಾರಾಯಣಗೌಡ
ಬೆಳಗಾವಿ: ಕನ್ನಡ ನಾಡು, ನುಡಿ, ಗಡಿ, ಜಲ ರಕ್ಷಣೆಗಾಗಿ ಜಿಲ್ಲೆಯ 2500ಕ್ಕೂ ಹೆಚ್ಚು ಕಾರ್ಯಕರ್ತರು “ಕನ್ನಡ ದೀಕ್ಷೆ” ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಯುವಕ, ಯುವತಿಯರಿಗೆ ಕನ್ನಡ ದೀಕ್ಷೆ ಕೊಡುವ ಕೆಲಸವನ್ನು ಕರ್ನಾಟಕ ರಕ್ಷಣಾ ವೇದಿಕೆ ಮಾಡಲಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ತಿಳಿಸಿದರು. ಕರವೇ ಕಾರ್ಯಕರ್ತರ ಮೆರವಣಿಗೆಗೆ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. …
Read More »ಶಾಸಕ ವೀರೇಂದ್ರ ಬಂಧನ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಆನ್ಲೈನ್ ಮತ್ತು ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಶಾಸಕರ ಪತ್ನಿ ಡಿ.ಆರ್.ಚೈತ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನುಬಾಹಿರ ಎಂದು ಘೋಷಿಸುವಂತೆ ಪತ್ನಿ ಚೈತ್ರಾ ತಮ್ಮ ಅರ್ಜಿಯಲ್ಲಿ ಕೋರಿದ್ದರು. ಅದರ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ, ತೀರ್ಪು …
Read More »ಹುಬ್ಬಳ್ಳಿ ತಾ. ಗಾಮನಗಟ್ಟಿಯಲ್ಲಿ ಅದ್ದೂರಿಯಾಗಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ… ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭಾಗಿ.
ಹುಬ್ಬಳ್ಳಿ ತಾ. ಗಾಮನಗಟ್ಟಿಯಲ್ಲಿ ಅದ್ದೂರಿಯಾಗಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ… ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭಾಗಿ. ಆದಿ ಕವಿ, ಮೊದಲ ಕವಿ ಸೇರಿ ರಾಮಾಯಣ ಪಿತಾಮಹ ಹಾಗೂ ವಾಲ್ಮೀಕಿ ಸಮಾಜ ಸೇರಿದಂತೆ ಹಿಂದೂಗಳ ಆರಾಧ್ಯ ದೈವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು, ಹುಬ್ಬಳ್ಳಿ ತಾಲ್ಲೂಕಿನ ಗಾಮನಗಟ್ಟಿ ಗ್ರಾಮದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಗ್ರಾಮದ ವಾಲ್ಮೀಕಿ ಸಮಾಜದ ನೇತೃತ್ವದಲ್ಲಿ ಗ್ರಾಮಸ್ಥರೆಲ್ಲರು ಒಟ್ಟಾಗಿ ಅರ್ಥಪೂರ್ಣವಾಗಿ ಜಯಂತಿ ಆಚರಣೆ ಮಾಡಿದರು. ಧಾರವಾಡ ಜಿಲ್ಲೆಯ …
Read More »ಬೆಳಗಾವಿ ಜಿಲ್ಲೆಗೆ ಜಾರಕಿಹೊಳಿ ಕುಟುಂಬವೇ ಕಿಂಗ್ ಮೇಕರ್….!
ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಜಾರಕಿಹೊಳಿ ಕುಟುಂಬವೇ ಕಿಂಗ್ ಮೇಕರ್ ಎಂಬುದು ಮತ್ತೆ ಸಾಬೀತಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಪೇನಲ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಅಣ್ಣಾ ಸಾಹೇಬ್ ಜೊಲ್ಲೆ, ಲಖನ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚುನಾವಣೆಯಲ್ಲಿ ಜಾರಕಿಹೊಳಿ ಪೇನಲಗೆ ಮೇಲುಗೈ ಸಾಧಿಸಿದ್ದಾರೆ. ಮೀನಿನ ಹೆಜ್ಜೆ ಕಂಡು ಹಿಡಿಯಬಹುದು ಆದರೆ ರಾಜಕೀಯದಲ್ಲಿ ಜಾರಕಿಹೊಳಿ …
Read More »ಉದ್ಯಾನ ಕಾಮಗಾರಿಗೆ ಭೂಮಿ ಪೂಜೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. 98.10 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು. ಈ ವೇಳೆ ಸುರೇಶ ರೊಟ್ಟಿ, ಮಾಳಿ, ಮುಸ್ತಾಕ್ ಮುಲ್ಲಾ, ಸಂಜೀವ ದೇಸಾಯಿ, ಸುಜಾತಾ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Read More »H.E.R.F FOUNDATION BOAT 15 ವರ್ಷಗಳ ಕನಸು ನನಸು
H.E.R.F FOUNDATION BOAT 15 ವರ್ಷಗಳ ಕನಸು ನನಸು ‘ಹೆಲ್ಪ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್’ಗೆ ಹೊಸ ‘ಸ್ಕೂಟರ್ ಬೋಟ್’ ಸೇರ್ಪಡೆ 15 ವರ್ಷಗಳ ಕನಸು ನನಸು ಹೊಸ ‘ಸ್ಕೂಟರ್ ಬೋಟ್’ ಸೇರ್ಪಡೆ ‘ಹೆಲ್ಪ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್’ನಿಂದ ಹರ್ಷ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಬೆಳಗಾವಿಯ ಹೆಲ್ಪಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್ ತಂಡವು ಕಳೆದ 15 ವರ್ಷಗಳ ನಿರಂತರ ಸೇವಾ ಪಯಣದ ಮಹತ್ವದ ಮೈಲಿಗಲ್ಲನ್ನು ತಲುಪಿದೆ. …
Read More »ದಸರಾ ವಿದ್ಯುತ್ ದೀಪಾಲಂಕಾರಕ್ಕೆ ತೆರೆ; 2,57,520 ಯೂನಿಟ್ ವಿದ್ಯುತ್ ಬಳಕೆ
ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ವಿಜೃಂಭಣೆಯ ದೀಪಾಲಂಕಾರಕ್ಕೆ ಇಂದು (ಭಾನುವಾರ) ರಾತ್ರಿ ತೆರೆ ಬೀಳುತ್ತಿದೆ. ಕಳೆದ 21 ದಿನಗಳಿಂದ ನಡೆದ ದೀಪಾಲಂಕಾರಕ್ಕೆ 300 ಕಿ.ಲೋ ವ್ಯಾಟ್ಗಳ, 2,57,520 ಯೂನಿಟ್ ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ. ಸೆ.22ರಂದು ದಸರಾ ಉದ್ಘಾಟನಾ ದಿನ ಸಯ್ಯಾಜಿರಾವ್ ರಸ್ತೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ದೀಪಾಲಂಕಾರಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಅ.12ರ ವರೆಗೆ 21 ದಿನಗಳ ಕಾಲ ಸಾಂಸ್ಕೃತಿಕ ನಗರಿ …
Read More »ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ ಅಡಿಯಲ್ಲಿ ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ಈ ಯೋಜನೆಯು ಮಹಿಳೆಯರ ಸ್ವಾವಲಂಬನೆ, ಉದ್ಯೋಗಾವಕಾಶ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಹೊಸ ದಾರಿಯನ್ನು ತೆರೆಯಲಿದೆ.
Read More »
Laxmi News 24×7