ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. 98.10 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು. ಈ ವೇಳೆ ಸುರೇಶ ರೊಟ್ಟಿ, ಮಾಳಿ, ಮುಸ್ತಾಕ್ ಮುಲ್ಲಾ, ಸಂಜೀವ ದೇಸಾಯಿ, ಸುಜಾತಾ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Read More »Yearly Archives: 2025
H.E.R.F FOUNDATION BOAT 15 ವರ್ಷಗಳ ಕನಸು ನನಸು
H.E.R.F FOUNDATION BOAT 15 ವರ್ಷಗಳ ಕನಸು ನನಸು ‘ಹೆಲ್ಪ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್’ಗೆ ಹೊಸ ‘ಸ್ಕೂಟರ್ ಬೋಟ್’ ಸೇರ್ಪಡೆ 15 ವರ್ಷಗಳ ಕನಸು ನನಸು ಹೊಸ ‘ಸ್ಕೂಟರ್ ಬೋಟ್’ ಸೇರ್ಪಡೆ ‘ಹೆಲ್ಪ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್’ನಿಂದ ಹರ್ಷ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಬೆಳಗಾವಿಯ ಹೆಲ್ಪಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್ ತಂಡವು ಕಳೆದ 15 ವರ್ಷಗಳ ನಿರಂತರ ಸೇವಾ ಪಯಣದ ಮಹತ್ವದ ಮೈಲಿಗಲ್ಲನ್ನು ತಲುಪಿದೆ. …
Read More »ದಸರಾ ವಿದ್ಯುತ್ ದೀಪಾಲಂಕಾರಕ್ಕೆ ತೆರೆ; 2,57,520 ಯೂನಿಟ್ ವಿದ್ಯುತ್ ಬಳಕೆ
ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ವಿಜೃಂಭಣೆಯ ದೀಪಾಲಂಕಾರಕ್ಕೆ ಇಂದು (ಭಾನುವಾರ) ರಾತ್ರಿ ತೆರೆ ಬೀಳುತ್ತಿದೆ. ಕಳೆದ 21 ದಿನಗಳಿಂದ ನಡೆದ ದೀಪಾಲಂಕಾರಕ್ಕೆ 300 ಕಿ.ಲೋ ವ್ಯಾಟ್ಗಳ, 2,57,520 ಯೂನಿಟ್ ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ. ಸೆ.22ರಂದು ದಸರಾ ಉದ್ಘಾಟನಾ ದಿನ ಸಯ್ಯಾಜಿರಾವ್ ರಸ್ತೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ದೀಪಾಲಂಕಾರಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಅ.12ರ ವರೆಗೆ 21 ದಿನಗಳ ಕಾಲ ಸಾಂಸ್ಕೃತಿಕ ನಗರಿ …
Read More »ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ ಅಡಿಯಲ್ಲಿ ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್ನ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ಈ ಯೋಜನೆಯು ಮಹಿಳೆಯರ ಸ್ವಾವಲಂಬನೆ, ಉದ್ಯೋಗಾವಕಾಶ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಹೊಸ ದಾರಿಯನ್ನು ತೆರೆಯಲಿದೆ.
Read More »ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ
ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಕನ್ನಡ ಶಾಲೆಯ ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ ಸಚಿವರು ಗೋಕಾಕ: ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವ ಕಾರ್ಯವನ್ನು ಮಾಡಬೇಕು, ಭವಿಷ್ಯತ್ತಿನಲ್ಲಿ ಅದೇ ಶಿಕ್ಷಣ ದೀಪವಾಗಿ ಬೆಳಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಜನರು ಮಧ್ಯ ಸಮನ್ವಯತೆ ಸಹಕಾರದಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ …
Read More »ಇಂದು ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ‘ಕನ್ನಡ ದೀಕ್ಷೆ’ ಪ್ರತಿಜ್ಞಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಲಾಯಿತು.
ಇಂದು ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ‘ಕನ್ನಡ ದೀಕ್ಷೆ’ ಪ್ರತಿಜ್ಞಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಲಾಯಿತು. ಕನ್ನಡದ ಘನತೆ, ಪ್ರೀತಿ ಮತ್ತು ಅಸ್ತಿತ್ವವನ್ನು ರಕ್ಷಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಪ್ರತಿಜ್ಞೆ ಕೈಗೊಂಡೆವು. ಕನ್ನಡದ ಹಿತಾಸಕ್ತಿ, ರಾಜ್ಯದ ಗೌರವ ಮತ್ತು ನಮ್ಮ ಸಾಂಸ್ಕೃತಿಕ ಗುರುತನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ ಎಂಬ ಪ್ರಮುಖ ಸಂದೇಶವನ್ನು ಈ ಸಮಾರಂಭವು ಸಾರಿತು. ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ …
Read More »ಡಿಸೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ: ಯತೀಂದ್ರ ಸಿದ್ದರಾಮಯ್ಯ
ರಾಯಚೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಅಂತ ಹಿರಿಯ ಸಚಿವರುಗಳು ಹೇಳಿದ್ದು, ಮುಖ್ಯಮಂತ್ರಿ ಅವರು ಕೂಡ ಸೂಚ್ಯವಾಗಿ ತಿಳಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಬಹುಶಃ ಡಿಸೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ತಿಳಿಸಿದರು. ಬಿಹಾರಕ್ಕೆ ಯಾರ್ಯಾರು ಎಷ್ಟೆಷ್ಟು ಕೊಡಬೇಕು ಅಂತ ನಿರ್ಧರಿಸಲು ಸಿಎಂ ಸಚಿವರ ಔತಣಕೂಟ ಕರೆದಿದ್ದಾರೆ ಎಂಬ ವಿಪಕ್ಷ ನಾಯಕ …
Read More »ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ನೀರು ಪೋಲು
ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದ ಹೊರಭಾಗದಲ್ಲಿರುವ ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2.50 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಮಾಲವಿ ಜಲಾಶಯ, ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಭರ್ತಿಯಾಗಿದೆ. ಆದ್ರೆ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ಕೃಷಿ ಚಟುವಟಿಕೆಗೆ ಬಳಕೆಯಾಗಬೇಕಿದ್ದ ಜಲಾಶಯದ ನೀರು ವ್ಯರ್ಥವಾಗಿ ಹರಿಯುತ್ತಿದೆ. ಕ್ರಸ್ಟ್ ಗೇಟ್ …
Read More »ತುಂಬಿ ತುಳುಕಿದ ಕುಕ್ಕೆ ಸುಬ್ರಹ್ಮಣ್ಯ
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ದಕ್ಷಿಣ ಭಾರತದ ಪ್ರಸಿದ್ಧ ನಾಗದೇವತಾ ಕ್ಷೇತ್ರ ಹಾಗೂ ಕರ್ನಾಟಕದ ಮುಜರಾಯಿ ಇಲಾಖೆಗೆ ಅತಿ ಹೆಚ್ಚಿನ ಆದಾಯ ನೀಡುವ ಪುಣ್ಯಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾನುವಾರದಂದು ಭಕ್ತರ ಮಹಾಪೂರವೇ ಕಂಡುಬಂತು. ಜಾತಿ ಸಮೀಕ್ಷೆಯ ಹಿನ್ನೆಲೆಯಲ್ಲಿನ ಶಾಲಾ ರಜೆಗಳು ಹಾಗೂ ಎರಡನೇ ಶನಿವಾರದ ಸುದೀರ್ಘ ವಾರಾಂತ್ಯದ ಪ್ರಯೋಜನ ಪಡೆದುಕೊಂಡ ಸಾವಿರಾರು ಭಕ್ತಾದಿಗಳು ವಿವಿಧೆಡೆಯಿಂದ ಆಗಮಿಸಿ, ಶ್ರೀ ಸುಬ್ರಹ್ಮಣ್ಯದ ದರ್ಶನ ಪಡೆಯುವ ಭಾಗ್ಯವನ್ನು ಆಸ್ವಾದಿಸಿದರು. ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ, …
Read More »ಆರ್ಎಸ್ಎಸ್ ಚಟುವಟಿಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಚಟುವಟಿಕೆಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶೀಲಿಸಿ ಕ್ರಮವಹಿಸಲು ಮುಂದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು …
Read More »