ಹಾವೇರಿ : ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಎತ್ತುಗಳನ್ನು ಸಾಂಪ್ರದಾಯಿಕವಾಗಿ ಅಲಂಕರಿಸಿ, ನಂತರ ದೇವಾಲಯಕ್ಕೆ ಹೋಗಿ ಅವುಗಳನ್ನು ಮೆರವಣಿಗೆ ಮಾಡುವ ಸಂಪ್ರದಾಯ ಇದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ, ಮೆರವಣಿಗೆ ಸಮಯದಲ್ಲಿ ಅವರು ಹೋರಿಯನ್ನು ಬೆದರಿಸಿದ್ದರಿಂದಾಗಿ ಅವು ಹೆದರಿ ಓಡಿದ್ದರಿಂದಾಗಿ ನಮ್ಮಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ, ದನ ಬೆದರಿಸುವ ಸ್ಪರ್ಧೆಯ ಆಯೋಜಕರು ಹಾಗೂ ಹೋರಿ ಮಾಲೀಕರ ಮೇಲೆ ಕೇಸ್ ದಾಖಲಿಸಿಕೊಂಡಿದ್ದೇವೆ ಎಂದು ಎಸ್ಪಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ. …
Read More »Yearly Archives: 2025
ಎರಡೂವರೆ ವರ್ಷದ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಮಂತ್ರಿ ಸ್ಥಾನ ಬಿಡಲು ನಾನು ರೆಡಿ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎರಡೂವರೆ ವರ್ಷಗಳ ಬಳಿಕ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಸಚಿವ ಸಂಪುಟದಿಂದ ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕೆಂದು ನಿರ್ಧಾರ ಆಗಿದೆ. ಸಂಪುಟಕ್ಕೆ …
Read More »ಮಳೆ ಹೊಡೆತಕ್ಕೆ ನೀರು ಪಾಲಾದ ಭತ್ತ
ಉಡುಪಿ : ಜಿಲ್ಲೆಯಲ್ಲಿ ನವರಾತ್ರಿಯಿಂದ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. ದೀಪಾವಳಿ ಸಂದರ್ಭದಲ್ಲೂ ಭಾರೀ ಮಳೆಯಾಗಿದೆ. ಯಾವ ವರ್ಷದಲ್ಲೂ ಕೂಡ ನವರಾತ್ರಿಯ ಆಸುಪಾಸಿನ ದಿನಗಳಲ್ಲಿ ಈ ಪ್ರಮಾಣದ ಮಳೆ ಬಿದ್ದ ಉದಾಹರಣೆ ಇಲ್ಲ. ಆದರೆ, ಈ ಬಾರಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಭತ್ತ ಬೆಳೆದ ರೈತರು ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದೆ. ಇದರಿಂದಾಗಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ …
Read More »ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು
ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್ 20 ರಿಂದ 23ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಮೂರು ದಿನದ ಅವಧಿಯಲ್ಲಿ ಒಟ್ಟು 54 ಜೂಜಾಟ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಪ್ರಕರಣದಲ್ಲಿ 492 ಜನ ಆರೋಪಿತರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ …
Read More »ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು.:
ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇಂದು ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿ ಕುಡಚಿ ವತಿಯಿಂದ ಆಯೋಜಿಸಿದ್ದ ಮುಜಾವರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದೆ. ಈ ಸಂದರ್ಭದಲ್ಲಿ ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು. ಸಮಾಜದ ಯುವಕರು ಜ್ಞಾನ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳಲ್ಲಿ ಮುಂಚೂಣಿಯಲ್ಲಿರಲಿ, ಸಮಾಜದ ಪ್ರಗತಿಗೆ ದಾರಿದೀಪರಾಗಲಿ ಎಂದು ಹಾರೈಸಿದೆ. ಕಾರ್ಯಕ್ರಮದಲ್ಲಿ ಸಾಧಕ …
Read More »ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ:ಕೆ.ಎನ್.ರಾಜಣ್ಣ
ಬೆಂಗಳೂರು: ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ. ತಪ್ಪೇನಿದೆ ಅದರಲ್ಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ ತಪ್ಪೇನಿದೆ ಅದರಲ್ಲಿ? ಎಂದು ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಬೆಳಗಾವಿಯಲ್ಲಿ ಸಿದ್ದರಾಮಯ್ಯ ನಂತರ ಅಹಿಂದ ಚಳವಳಿ ಮುಂದುವರೆಸುವಲ್ಲಿ ಜಾರಕಿಹೊಳಿ ಸಮರ್ಥರಿದ್ದಾರೆ ಎಂದಿದ್ದಾರೆ. ಇದಕ್ಕೆ ನನ್ನ ಸಹಮತವಿದೆ. ಸತೀಶ್ ಜಾರಕಿಹೊಳಿ ಈಗ ಸಿಎಂ ಆಗಲ್ಲ. 2028ಕ್ಕೆ ಸಿಎಂ ಆಕಾಂಕ್ಷಿ ಎಂದಿದ್ದಾರೆ. ಅದಕ್ಕೂ ನನ್ನ ಸಹಮತವಿದೆ ಎಂದು ಅವರು ಹೇಳಿದ್ದಾರೆ. …
Read More »ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವು
ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಬಮ್ ತಾಜ್(23) ಮತ್ತು ನಾಲ್ಕನೇ ಮಗಳಾದ ಸಿಮ್ರಾನ್ ತಾಜ್ (21) ಮೃತಪಟ್ಟ ಸಹೋದರಿಯರು. ಪಿರಿಯಾಪಟ್ಟಣದ ಜೋನಿಗೇರಿ ಬೀದಿಯಲ್ಲಿ ಅಲ್ತಾಫ್ ಪಾಷಾ ಮತ್ತು ಅವರ ಕುಟುಂದವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 7ರ ಸಮಯದಲ್ಲಿ ಸಹೋದರಿಯರು ಒಟ್ಟಿಗೆ …
Read More »ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ: 17 ಲಕ್ಷ ರೂ. ಪ್ರವೇಶ ಶುಲ್ಕ ಸಂಗ್ರಹ
ಬೆಳಗಾವಿ: ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಅಮೃತಹಸ್ತದಿಂದ ಕಿತ್ತೂರಿನಲ್ಲಿ ಉದ್ಘಾಟನೆಗೊಂಡ “ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯ”ಕ್ಕೆ ಈಗ 58ರ ಸಂಭ್ರಮ. ಕಿತ್ತೂರು ಕೋಟೆಗೆ ಬರುವವರು ಈ ವಸ್ತು ಸಂಗ್ರಹಾಲಯ ಕಣ್ತುಂಬಿಕೊಳ್ಳುತ್ತಾರೆ. ಕಳೆದ ಎರಡು ವರ್ಷಗಳಲ್ಲಿ 1.72 ಲಕ್ಷ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದು, ಪ್ರವಾಸಿಗರಿಂದ 17 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದೆ. ಈ ವಸ್ತು ಸಂಗ್ರಹಾಲಯದಲ್ಲಿ ಏನೇನಿದೆ? ಇನ್ನೂ ಏನಾಗಬೇಕಿದೆ? ಎಂಬ ಕುರಿತು ಇಲ್ಲಿದೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಬಂಗ್ಲೆ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿ
ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ. ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ. ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು …
Read More »
Laxmi News 24×7