ಧಾರವಾಡ: ಕೊರೊನಾ ವೈರಸ್ ಮತ್ತೆ ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿ ಭೈರಿದೇವರಕೊಪ್ಪದ 11 ತಿಂಗಳ ಮಗುವಿನಲ್ಲಿ ಕೋವಿಡ್ ಪತ್ತೆ ದೃಢಪಟ್ಟಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯ ಕಾಯಿಲೆ ಇದ್ದು, ಚಿಕಿತ್ಸೆ ಮುಂದುವರೆದಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಯಲ್ಲಿ ತಿಳಿಸಿದೆ. ಮುನ್ನೆಚ್ಚರಿಕೆ ಅಗತ್ಯ: ಸಾಧ್ಯವಾದಷ್ಟು ಜನಸಂದಣಿಯಿಂದ ದೂರ ಇರುವಂತೆ, ಮನೆಯಿಂದ ಹೊರಹೋಗುವಾಗ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಹಾಗೂ ಗರ್ಭಿಣಿಯರು, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ, …
Read More »Yearly Archives: 2025
ಕಮಲ್ ಹಾಸನ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ನಟ ಕಿಶೋರ್
ಮೈಸೂರು: ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನು ಭಾಷೆಯಾಗಿ ನೋಡಬೇಕಿದೆ ಎಂದು ಹೇಳುವ ಮೂಲಕ ಕಮಲ್ ಹಾಸನ್ ಹೇಳಿಕೆಯನ್ನು ನಟ ಕಿಶೋರ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು. ತುಂಬಾ ತಿಳಿದಂತಹ ಮನುಷ್ಯ ಏನೂ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು …
Read More »ಆರ್ಸಿಬಿ ಫೈನಲ್ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ: ರಾಯಚೂರಿನಲ್ಲಿ 8 ಯುವಕರ ಬಂಧನ
ರಾಯಚೂರು, : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (RCB) ಮೇ 29 ರಂದು ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿ ಗೆಲ್ಲುವು ದಾಖಲಿಸಿ ಐಪಿಎಲ್ ಫೈನಲ್ (IPL) ಪ್ರವೇಶಿಸಿತ್ತು. ಆರ್ಸಿಬಿ ಅಭಿಮಾನಿಗಳು ರಾಜ್ಯದಾದ್ಯಂತ ಸಂಭ್ರಮಾಚರಣೆ ಮಾಡಿದ್ದರು. ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು. ಗಡಿ ಜಿಲ್ಲೆ ರಾಯಚೂರಿನಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ಬಾಂಬ್ ರೀತಿಯಲ್ಲಿ ಪೆಟ್ರೋಲ್ ಚೀಲಗಳನ್ನು ಸಿಡಿಸಿ ಸಂಭ್ರಮ ಆಚರಣೆ ಮಾಡಿದ್ದು, ಇದೀಗ ಜೈಲು ಪಾಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಯುವಕರ ಗುಂಪು ಆರ್ಸಿಬಿ …
Read More »ವಿಧಾನಸೌಧ ಪ್ರವಾಸ ಇಂದಿನಿಂದ ಆರಂಭ
ಬೆಂಗಳೂರು, ಜೂನ್ 01: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhan Soudha) ಒಳಕ್ಕೆ ಇನ್ನು ಜನಸಾಮಾನ್ಯರು ಕೂಡ ಹೋಗಬಹುದಾಗಿದೆ. ದೂರದ ಊರಿನಿಂದ ಬೆಂಗಳೂರಿಗೆ (Bengaluru) ಬರುವ ಹಲವರಿಗೆ ವಿಧಾನಸೌಧ ನೋಡಬೇಕು ಎಂಬ ಆಸೆ ಇರುತ್ತದೆ. ಆದರೆ, ಇಷ್ಟು ದಿನಗಳ ಕಾಲ ಹೊರಗಿನಿಂದಲೇ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈಗ ವಿಧಾನಸೌಧದ ಒಳಗೆ ಹೋಗಬಹುದು. ಅದರೊಳಗೆಲ್ಲ ಸುತ್ತಾಡಬಹುದು. ಆ ಭವ್ಯ ಕಟ್ಟಡವನ್ನು ಮುಟ್ಟಬಹುದು. ಹೌದು, ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ …
Read More »ಸರಿಯಾದ ಸಮಯಕ್ಕೆ ಬಾರದ ಆಂಬ್ಯುಲೆನ್ಸ್, ನಡುರಸ್ತೆಯಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ನಾರಿಯರು
ಮಹಾರಾಷ್ಟ್ರ, ಜೂನ್ 1 : ಹೆರಿಗೆ (Childbirth) ಎನ್ನುವುದು ಹೆಣ್ಣಿಗೆ ಮರುಹುಟ್ಟು ಇದ್ದಂತೆ. ಮಗುವಿಗೆ ಜನ್ಮ ನೀಡುವುದು ಹೆಣ್ಣಿಗೆ ಹುಟ್ಟು ಸಾವಿನ ನಡುವಿನ ಹೋರಾಟ. ಹೀಗಾಗಿ ಈ ಸಮಯದಲ್ಲಿ ಆಕೆ ಅನುಭವಿಸುವ ನೋವನ್ನು ಹೇಳಲು ಅಸಾಧ್ಯ. ಹೆರಿಗೆ ನೋವು ಕಾಣಿಸಿಕೊಂಡಾಗ ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ಕೆಲವೊಮ್ಮೆ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬರುವುದೇ ಇಲ್ಲ. ಹೀಗಾಗಿ ಮಾರ್ಗ ಮಧ್ಯದಲ್ಲೇ ಹೆರಿಗೆ ಆಗುವುದಿದೆ. ಆದರೆ ಇದೀಗ ಆರೋಗ್ಯ ಸೌಲಭ್ಯದ ಕೊರತೆಯಿಂದ ಆದಿವಾಸಿ …
Read More »ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
ಪ್ರತಿ ತಿಂಗಳಿನಂತೆ ಇಂದೂ ಪೆಟ್ರೋಲಿಯಂ ಕಂಪನಿಗಳಿಂದ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆಗೊಂಡಿದ್ದು, ವಾಣಿಜ್ಯ ಸಿಲಿಂಡರ್ ಗಳ ದರವನ್ನು 24 ರೂ. ಕಡಿತಗೊಳಿಸಲಾಗಿದೆ. ದೇಶಾದ್ಯಂತ ಈ ದರ ಇಂದಿನಿಂದಲೇ ಜಾರಿಗೆ ಬರಲಿದ್ದು, 19 ಕೆ.ಜಿ ವಾಣಿಜ್ಯ ಸಿಲಿಂಡರ್ ದರ ನವದೆಹಲಿಯಲ್ಲಿ 1723 ರೂ. ಆಗಿದೆ. ಗೃಹಬಳಕೆ ಸಿಲಿಂಡರ್ ದರ ಯಾವುದೇ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಗೃಹಬಳಕೆ ಸಿಲಿಂಡರ್ ದರ ಯಥಾವತ್ತಾಗಿ ಮುಂದುವರೆಯಲಿದೆ. ಕೆಲವೇ ದಿನಗಳ ಹಿಂದಷ್ಟೇ ಹೋಟೆಲ್ ಗಳು ಸಿಲಿಂಡರ್ ಮತ್ತು ಹಾಲಿನ …
Read More »ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025
ಹೈದರಾಬಾದ್ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ ಕಿರೀಟದ ಮೌಲ್ಯ ಸುಮಾರು ಮೂರು ಕೋಟಿ …
Read More »ಬೆಳಗಾವಿಯಲ್ಲಿ ಮತ್ತೋರ್ವ ಬಾಲಕಿಯ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿ ಐವರ ಬಂಧನ
ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಅಪ್ರಾಪ್ತರು ಸೇರಿ ಐವರನ್ನು ಇಲ್ಲಿನ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಬೆಳಗಾವಿಯಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣವಿದು. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಕಿರಾತಕರು, ಬಳಿಕ ಮತ್ತೆ ಜನವರಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಪೋಷಕರು ನಿನ್ನೆ ಬೆಳಗ್ಗೆ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ …
Read More »ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಜೂನ್ 13ರಿಂದ ಪಾಠ ನಿಲ್ಲಿಸಿ ಹೋರಾಟದ ಎಚ್ಚರಿಕೆ –
ಮೈಸೂರು: ರಾಜ್ಯ ಸರ್ಕಾರ ಕಳೆದ ಹಲವು ವರ್ಷಗಳಿಂದ ಸತತವಾಗಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಕನಿಷ್ಠ ಸೌಲಭ್ಯವನ್ನೂ ನೀಡದೇ ವಂಚಿಸುತ್ತಿದೆ. ಹೀಗಾಗಿ ಜೂನ್ 13ರಿಂದ ಅತಿಥಿ ಶಿಕ್ಷಕರು ಶಾಲೆ ತೊರೆದು ಪ್ರತಿಭಟಿಸಲಿದ್ದಾರೆ ಎಂದು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಖಜಾಂಚಿ ಹೆಚ್.ಎಸ್.ಸೌಮ್ಯ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಶಾಲಾ ಶಿಕ್ಷಣ ಮತ್ತು ಪ್ರಾಥಮಿಕ ಸಾಕ್ಷರತಾ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಇವರು ಅತಿಥಿ …
Read More »ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು
ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್ನಿಂದ ಬಿದ್ದ ಕೂಡಲೇ ಕ್ಯಾಂಟರ್ ಹರಿದು ಮಗು ಸಾವನ್ನಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ, ಪೋಷಕರು ಸೇರಿದಂತೆ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಸೇರಿ ಪ್ರತಿಭಟನೆ ನಡೆಸಿದರು. ಮಳವಳ್ಳಿ …
Read More »