ಬೆಳಗಾವಿ – ಇದೇ ಅಕ್ಟೋಬರ್ 19 ರಂದು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನೆಲ್ ನಿಂದ ಒಟ್ಟು 6 ಜನರು ಆಯ್ಕೆಯಾಗಿದ್ದು, ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವ ಮಾತು ಸುಳ್ಳಾಗಿಸುವುದಿಲ್ಲ ಎಂದು ಬ್ಯಾಂಕಿನ ಪೆನೆಲ್ ಸಾರಥಿಯಾಗಿರುವ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬ್ಯಾಂಕಿನ ಚುನಾವಣೆಗೂ ಮುನ್ನವೇ ಎರಡು ತಿಂಗಳಿನಿಂದ ಹೇಳಿಕೊಂಡು ಬರುತ್ತಿದ್ದೆ. ಈ ಸಲ ನಮ್ಮದೇ ಆಡಳಿತ ಚುಕ್ಕಾಣಿ ಅಂತಾ. 16 ರಲ್ಲಿ …
Read More »Yearly Archives: 2025
ಪ್ರಾಣ ರಕ್ಷಣೆ :RPF ಸಿಬ್ಬಂದಿಯ ಸಾಹಸಕ್ಕೆ ಮೆಚ್ಚುಗೆ
ಬೆಳಗಾವಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ ರೈಲಿನಿಂದ ಬಿದ್ದ ವೃದ್ಧರೊಬ್ಬರನ್ನು ಕ್ಷಣಾರ್ಧದಲ್ಲಿ RPF ಸಿಬ್ಬಂದಿ ರಕ್ಷಿಸಿದ ಘಟನೆ ನಿನ್ನೆ ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆದಿದೆ. ಜಿಲ್ಲೆಯ ಉಚ್ಚಗಾಂವ ಸಮೀಪದ ಬಸುರತೆ ಗ್ರಾಮದ ನಿವಾಸಿಯಾದ ಶ್ರೀ ಬರಮಾ ಗಂಗರಾಮ ಕುಂಬಾರ (ವಯಸ್ಸು 55) ಎಂಬುವರು ಬೆಳಗಾವಿ ಯಿಂದ ಪುಣೆಗೆ ತೆರಳುವ ತಮ್ಮ ಮೊಮ್ಮಗನಾದ ಶ್ರೀ ಲಕ್ಷ್ಮಿ ರಾಜಾರಾಮ ಕುಂಬಾರ ಅವರನ್ನು ಮೈಸೂರು–ಅಜ್ಮೀರ್ ಎಕ್ಸ್ಪ್ರೆಸ್ ರೈಲಿಗೆ ( ಸಂಖ್ಯೆ16210) ಬೀಳ್ಕೊಡಲು ಬಂದಿದ್ದರು. ಆಗ ರೈಲು …
Read More »ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ
ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ -ಖಾನಾಪೂರದ ಶಾಸಕ ಮಹಾಲಕ್ಷ್ಮಿ ಗ್ರುಪ್ ಸಂಸ್ಥಾಪಕ ಅಧ್ಯಕ್ಷ ವಿಠ್ಠಲ ಹಲಗೇಕರ ಅವರು ರಾಜಾಸ್ಥಾನದ ಮೌಂಟ್ ಅಬು ಶಾಂತಿವನ ಕ್ಯಾಂಪಸ್ ನಲ್ಲಿ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ “ಏಕತೆ ಮತ್ತು ವಿಶ್ವಾಸ” ಕುರಿತು ಜಾಗತಿಕ ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು ಈ ಬೃಹತ್ ಅಂತಾರಾಷ್ಟ್ರೀಯ ಶೃಂಗ ಸಭೆಯಲ್ಲಿ ಜಾಗತಿಕ ನಾಯಕರು, ನೀತಿ ನಿರೂಪಕರು, …
Read More »ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ನೀರು ಪೋಲು: ಅಧಿಕಾರಿಗಳ ವಿರುದ್ದ ಜನರ ಆಕ್ರೋಶ
ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದ ಹೊರಭಾಗದಲ್ಲಿರುವ ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2.50 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಮಾಲವಿ ಜಲಾಶಯ, ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಭರ್ತಿಯಾಗಿದೆ. ಆದ್ರೆ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ಕೃಷಿ ಚಟುವಟಿಕೆಗೆ ಬಳಕೆಯಾಗಬೇಕಿದ್ದ ಜಲಾಶಯದ ನೀರು ವ್ಯರ್ಥವಾಗಿ ಹರಿಯುತ್ತಿದೆ. ಕ್ರಸ್ಟ್ ಗೇಟ್ …
Read More »RSS ಬ್ಯಾನ್ ಮಾಡಲು ಇಂದಿರಾ ಗಾಂಧಿ ಕೈಯಲ್ಲೇ ಆಗಿಲ್ಲ: ಆರ್. ಅಶೋಕ್
ಬೆಂಗಳೂರು: “ಆರ್.ಎಸ್ ಎಸ್ ಬ್ಯಾನ್ ಮಾಡಲು ಮೂರು ಬಾರಿ ಪ್ರಯತ್ನ ಮಾಡಿದರು. ಇಂದಿರಾ ಗಾಂಧಿ ಕೈಯಲ್ಲೇ ಆಗಿಲ್ಲ” ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ನಗರದಲ್ಲಿಂದು RSS ಪಥಸಂಚಲನದ ಬಳಿಕ RSS ಬ್ಯಾನ್ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, “ಆರ್.ಎಸ್ ಎಸ್ ಬ್ಯಾನ್ ಮಾಡಲು ಮೂರು ಬಾರಿ ಪ್ರಯತ್ನ ಮಾಡಿದರೂ ಇಂದಿರಾ ಗಾಂಧಿ ಕೈಯಲ್ಲೇ ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ …
Read More »ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಚಿಕ್ಕಬಳ್ಳಾಪುರ ಜೆಡಿಎಸ್ ಕಾರ್ಯಕರ್ತರು ದೇವರಿಗೆ ಪ್ರಾರ್ಥನೆ ಮಾಡಿ, 108 ತೆಂಗಿನಕಾಯಿ ಒಡೆದು ಹರಕೆ ಹೊತ್ತರು. ದೇವೇಗೌಡರ ಹೆಸರಲ್ಲಿ ಅರ್ಚನೆ: ಚಿಕ್ಕಬಳ್ಳಾಪುರ ನಗರ ಹೊರವಲಯದ ಸೋಲಾಲಪ್ಪ ದಿನ್ನೆಯ ವೀರಾಂಜನೇಯ ದೇವಾಲಯದಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ದೇವೇಗೌಡರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿ ಮಾಜಿ ಪ್ರಧಾನಿಗಳ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ …
Read More »ತಂದೆಯ ಅಗಲಿಕೆಯ ನೋವು: ಮನನೊಂದ ಮಗಳು ಆತ್ಮಹತ್ಯೆ
ಚಿಕ್ಕಬಳ್ಳಾಪುರ: ತಂದೆಯ ಅನಿರೀಕ್ಷಿತ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗದ ಪುತ್ರಿ ಪ್ರಾಣ ಬಿಟ್ಟಿದ್ದಾಳೆ. ತಂದೆಯ ಅಗಲಿಕೆಯ ನೋವು ತಳಲಾರದೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯಲ್ಲಿ ಘಟನೆ ನಡೆದಿದೆ. 22 ವರ್ಷದ ಸ್ವರ್ಣ ಆತ್ಮಹತ್ಯೆಗೆ ಶರಣಾಗಿದ ಯುವತಿ. ಈ ಘಟನೆ ಸಂಬಂಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮೃತ …
Read More »ಶರಾವತಿ ಯೋಜನೆ ವಿರೋಧ: ಮಣ್ಣು ಪರೀಕ್ಷೆಗೆ ಬಂದ ಅಧಿಕಾರಿಗಳಿಗೆ ಸ್ಥಳೀಯರಿಂದ ತಡೆ
ಗೇರುಸೊಪ್ಪ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಯೋಜನಾ ಪ್ರದೇಶದಲ್ಲಿ ಮಣ್ಣು ಮತ್ತು ನೀರಿನ ಮಾದರಿ ಸಂಗ್ರಹಕ್ಕೆ ಬಂದಿದ್ದ ಕೇಂದ್ರ ಸರ್ಕಾರದ 13 ಅಧಿಕಾರಿಗಳ ತಂಡವನ್ನು ಸ್ಥಳೀಯರು ಅಡ್ಡಗಟ್ಟಿ ವಿಚಾರಣೆ ನಡೆಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮದ (KPC) ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಗೇರುಸೊಪ್ಪಾ ಡ್ಯಾಂ ಸಮೀಪದ ಬೆಗೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 11.30ರ ಸುಮಾರಿಗೆ ಕೇಂದ್ರ ಕೃಷಿ ಸಂಶೋಧನಾ ಮಂಡಳಿ (ICAR) …
Read More »ಶಾಸಕಿ ಜಿ. ಕರೆಮ್ಮಾ ನಾಯಕ್ ಕಾರು ಅಪಘಾತ
ರಾಯಚೂರು: ದೇವದುರ್ಗ ಶಾಸಕಿ ಜಿ. ಕರೆಮ್ಮಾ ನಾಯಕ್ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಶಾಸಕಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಕ್ರಾಸ್ ಹತ್ತಿರ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಇಂದು ದೇವದುರ್ಗದಿಂದ ಹುಬ್ಬಳ್ಳಿಗೆ ಕುಟುಂಬ ಸಮೇತವಾಗಿ ಶಾಸಕಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಕರೆಮ್ಮಾ ಅವರು ಕುಳಿತಿದ್ದ ಕಾರಿನ ಮುಂದೆ ಹೋಗುತ್ತಿದ್ದ, ಕರೆಮ್ಮಾ ಅವರಿಗೆ ಸೇರಿದ ಮತ್ತೊಂದು …
Read More »ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ
ಬೆಂಗಳೂರು: ಆ್ಯಪ್ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ಆಟೊ ಚಾಲಕನನ್ನ ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ದೂರಿನಲ್ಲಿ ಇರುವುದೇನು?- ಪ್ರಕರಣದ ಬಗ್ಗೆ ಪೊಲೀಸರು ಹೇಳಿದ್ದಿಷ್ಟು : ಈಶಾನ್ಯ ಭಾರತದ ಮೂಲದ ಯುವತಿ ನೀಡಿದ ದೂರಿನ ಮೇರೆಗೆ ಆಟೊ ಚಾಲಕ ಪವನ್ (21) ಎಂಬುವನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನಲ್ಲಿ ಇರುವಂತೆ ಘಟನೆಯ ಹಿನ್ನೆಲೆ: ಕಳೆದ ಎರಡು ವರ್ಷಗಳಿಂದ ನಗರದ ಕ್ಯಾಲಸೇನಹಳ್ಳಿಯ …
Read More »