Breaking News

Yearly Archives: 2025

ಮಂಗಳೂರು ಸೆಂಟ್ರಲ್‌ನಿಂದ ಬೆಂಗಳೂರು ಮಾರ್ಗವಾಗಿ ನವದೆಹಲಿಗೆ ಪ್ರಪ್ರಥಮ ವಿಶೇಷ ರೈಲು: ಅ.5ರಿಂದ ಸೇವೆ ಪ್ರಾರಂಭ

ಸುಬ್ರಹ್ಮಣ್ಯ(ದ.ಕನ್ನಡ): ದಕ್ಷಿಣ ರೈಲ್ವೆ ವಲಯವು ಇದೇ ಅ.5ರಂದು ಮಂಗಳೂರು ಸೆಂಟ್ರಲ್​​ನಿಂದ ಹಾಸನ, ಯಶವಂತಪುರ, ಕಾಚಿಗುಡ ಮಾರ್ಗವಾಗಿ ಪ್ರಪ್ರಥಮವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಘೋಷಿಸಿದೆ. ರೈಲು ಸಂಖ್ಯೆ 06008 ಮಂಗಳೂರು ಸೆಂಟ್ರಲ್ – ಹಜ್ರತ್ ನಿಜಾಮುದ್ದೀನ್ ವಿಶೇಷ ರೈಲು ಅ.5ರಂದು ಮಧ್ಯಾಹ್ನ 2:25ಕ್ಕೆ ಮಂಗಳೂರು ಸೆಂಟ್ರಲಿನಿಂದ ಹೊರಟು ಹಾಸನ ಮಾರ್ಗವಾಗಿ ರಾತ್ರಿ 11:30ಕ್ಕೆ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಅಲ್ಲಿಂದ ರಾತ್ರಿ 11:45ಕ್ಕೆ ಹೊರಡುವ ರೈಲು …

Read More »

ಪೇಸ್‌ಮೇಕರ್‌ ಚಿಕಿತ್ಸೆ ಯಶಸ್ವಿ, ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯಕ್ಕೊಳಗಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್​​ ಮೇಕರ್​ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಗುರುವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​, ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ದೈನಂದಿನ ಕಾರ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದೆ. ಖರ್ಗೆ ಚೇತರಿಕೆ ಕಾಣುತ್ತಿದ್ದಾರೆ. ಅವರಿಗೆ ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಶೀಘ್ರದಲ್ಲೇ ವೈದ್ಯರ ಸಲಹೆಯ ಬಳಿಕ ಅವರು ತಮ್ಮ ಚಟುವಟಿಕೆಗಳಿಗೆ …

Read More »

ಮತ್ತೊಂದು ಹುಲಿ ಹತ್ಯೆ: ತನಿಖೆಗೆ ಅರಣ್ಯ ಸಚಿವ ಖಂಡ್ರೆ ಆದೇಶ

ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆಯಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ ಪಚ್ಚೆದೊಡ್ಡಿ ಗ್ರಾಮದ ಬಳಿ ಗುರುವಾರ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು …

Read More »

ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ”

ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ” ನೆರೆ ಪ್ರದೇಶಗಳ ಪ್ರವಾಸದ ಹಿನ್ನಲೆ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ವಿರೋಧ ಪಕ್ಷದ ನಾಯಕರಾದ ಶ್ರೀ R Ashoka ಜಿ ಅವರೊಂದಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ,ರೈತರಿಗೆ ಧೈರ್ಯ ತುಂಬಲಾಯಿತು. ನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ,ನಿರ್ಲಕ್ಷ್ಯ ತೋರಿದ ರೈತ ಕಾಳಜಿ …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ: ಡಾ. ಜಿ. ಪರಮೇಶ್ವರ್

ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ. ಅಲ್ಲದೇ ಸಿದ್ದರಾಮಯ್ಯ ಅವರೇ ನೀಡಿರುವ ಹೇಳಿಕೆ ಪ್ರಕಾರ ನಮ್ಮಲ್ಲಿ ಹೈಕಮಾಂಡ್ ಇದೆ, ಹೈಕಮಾಂಡ್ ಹೇಳಿದಂತೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕ್ರಾಂತಿ ಇರೋದಿಲ್ಲ, ಬದಲಾಗಿ ಶಾಂತಿಯಾಗಿ ಇರಲಿದೆ. ತುಮಕೂರು ಜಿಲ್ಲೆಯು ಕಲೆ, ಸಾಹಿತ್ಯ ಹಾಗೂ ನಾಟಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇದನ್ನು ನಾವು …

Read More »

ಅಧಿಕಾರ ಹಸ್ತಾಂತರ ಹೇಳಿಕೆ: ರಂಗನಾಥ್, ಎಲ್.ಆರ್. ಶಿವರಾಮೇಗೌಡಗೆ ನೋಟಿಸ್

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಪರೋಕ್ಷ ಹೇಳಿಕೆ ನೀಡಿರುವ ಕುಣಿಗಲ್​ ಕ್ಷೇತ್ರದ ಶಾಸಕ ಡಾ. ರಂಗನಾಥ್ ಮತ್ತು ಎಲ್. ಆರ್. ಶಿವರಾಮೇಗೌಡಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ. ರಾಜ್ಯ ಕಾಂಗ್ರೆಸ್​ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಕಣಿಗಲ್ ಕೈ ಶಾಸಕ ಡಾ. ರಂಗನಾಥ್ ನಿನ್ನೆ ಮಾತನಾಡುತ್ತಾ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸ್ಥಾನಗಳನ್ನು ಪಡೆದಿರುವುದರ ಹಿಂದೆ …

Read More »

ಉದ್ಘಾಟನೆಗೂ ಮುನ್ನವೇ ಕುಸಿದ ಕಾರವಾರ ನೂತನ ಆಸ್ಪತ್ರೆ ರೂಫ್

ಕಾರವಾರ (ಉತ್ತರ ಕನ್ನಡ) : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಹುದಿನದ ಕನಸು ಕಾಣುತ್ತಿದ್ದ ಉತ್ತರಕನ್ನಡದ ಜನರಿಗೆ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸುಮಾರು ₹190 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಕಟ್ಟಡವು ಕೊಂಚಮಟ್ಟಿಗೆ ನಿರಾಳತೆ ನೀಡಿತ್ತು. ಆದರೆ, ಈ ಅತ್ಯಾಧುನಿಕ ಸ್ಪರ್ಶದ ಕಟ್ಟಡದ ಗುಣಮಟ್ಟದ ಬಗ್ಗೆ ಮೊದಲಿನಿಂದಲೂ ಕೇಳಿಬರುತ್ತಿದ್ದ ಕಳಪೆ ಕಾಮಗಾರಿಯ ಆರೋಪಕ್ಕೆ ಇದೀಗ ಸ್ಪಷ್ಟ ಪುಷ್ಟಿ ದೊರೆತಿದೆ. ಆಸ್ಪತ್ರೆ ಕಟ್ಟಡ ಉದ್ಘಾಟನೆಗೂ ಮುನ್ನವೇ ಕಟ್ಟಡದ ಒಂದು …

Read More »

ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ನಮನ

ಬೆಂಗಳೂರು/ಮೈಸೂರು: ಅಕ್ಟೋಬರ್ 2ರಂದು ದೇಶಾದ್ಯಂತ ಮಹಾತ್ಮ ಗಾಂಧಿ ಅವರ ಜಯಂತಿ ಆಚರಿಸಲಾಗುತ್ತದೆ. ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗಾಂಧಿ ಜಯಂತಿ ಅಂಗವಾಗಿ ಇಂದು ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಸಿಎಂ ಗೌರವಾರ್ಪಣೆ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ಇಂದು ಮಾಜಿ ಪ್ರಧಾನ ಮಂತ್ರಿ …

Read More »

ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗುತ್ತಿದೆ 30 ಜಿಲ್ಲೆಗಳ ಸ್ತಬ್ಧಚಿತ್ರ

ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗುವ ರಾಜ್ಯದ ನಾನಾ ಜಿಲ್ಲೆಗಳ ಸ್ತಬ್ಧಚಿತ್ರಗಳು ಅತ್ಯಂತ ಆಕರ್ಷಣೆಯಾಗಿದ್ದು, ಅವುಗಳಲ್ಲಿ ರೈಲ್ವೆ ಇಲಾಖೆ ಸ್ತಬ್ಧಚಿತ್ರವು ಅದ್ಭುತವಾಗಿ ಮೂಡಿ ಬಂದಿದೆ. 30 ಜಿಲ್ಲೆಗಳ ಸ್ತಬ್ಧಚಿತ್ರಗಳು ಸೇರಿದಂತೆ ವಿವಿಧ ನಿಗಮ, ಇಲಾಖೆಗಳ 35ಕ್ಕೂ ಹೆಚ್ಚಿನ ಸ್ತಬ್ಧಚಿತ್ರಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗುತ್ತಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಕ್ತಿ ಯೋಜನೆಯ ಯಶೋಗಾಥೆ, ಹಿಂದುಸ್ಥಾನ್​ ಏರೊನಾಟಿಕ್ಸ್​ ಲಿಮಿಟೆಡ್​ ವಿಜಯದ ರನ್​ವೇ ಭಾರತದ ಆಕಾಶಕ್ಕೆ ಎಚ್ಎಎಲ್​ನ ಶಕ್ತಿ, ಭಾರತೀಯ ರೈಲ್ವೆ ಇಲಾಖೆ …

Read More »

ಬೆಂಬಲ ಬೆಲೆಯಲ್ಲಿ ಸೋಯಾಬಿನ್‌, ಶೇಂಗಾ ಖರೀದಿ; ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಿ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಸೋಯಾಬಿನ್‌ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಸೂಚಿಸಿದ್ದಾರೆ. ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328 ರೂ. ಹಾಗೂ ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೀದರ್‌, ಬೆಳಗಾವಿ, ಧಾರವಾಡ, …

Read More »