Breaking News

Yearly Archives: 2025

ಕಾರ್ಗತ್ತಲಲ್ಲಿದ್ದ ಕುಗ್ರಾಮದ ಜನರನ್ನು ಗೋವಾಗೆ ಕರೆದೊಯ್ದು ಸಮೀಕ್ಷೆ

ಕಾರವಾರ(ಉತ್ತರ ಕನ್ನಡ): ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕುಗ್ರಾಮವೊಂದರ ಜನರ ಗೋಳು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆ ಅಧಿಕಾರಿಗಳ ಕಿವಿ ತಲುಪಿದೆ. ಇಂಟರ್​​ನೆಟ್ ಇಲ್ಲದ ಕಾರಣ, ಮೂಲಭೂತ ಸೌಕರ್ಯದಿಂದ ವಂಚಿರಾದ ಗ್ರಾಮಸ್ಥರನ್ನು ಅಧಿಕಾರಿಗಳು ಪಕ್ಕದ ಗೋವಾ ರಾಜ್ಯಕ್ಕೆ ಕೊಂಡೊಯ್ದು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಹೌದು, ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕಾರವಾರ ತಾಲೂಕಿನ ಘೋಟೆಗಾಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮರಗಾಂವ್‌ ಎಂಬ ಕುಗ್ರಾಮದ ಜನರ ಗೋಳು ಇದೀಗ ಅಧಿಕಾರಿಗಳ …

Read More »

ಕಾಂಗ್ರೆಸ್‌ನಲ್ಲಿ ಈ ತಿಂಗಳು ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ: ಆರ್.ಅಶೋಕ್

ಕಾಂಗ್ರೆಸ್‌ನಲ್ಲಿ ಈ ತಿಂಗಳು ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ: ಆರ್.ಅಶೋಕ್ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿದ್ದು, ಆ ನಂತರ ಸಿಎಂ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್‌ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್‌ ಆಗಿಲ್ಲ. ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಅಭಿವೃದ್ಧಿ …

Read More »

ದಕ್ಷಿಣದಿಂದ ಉತ್ತರ ಕರ್ನಾಟಕಕ್ಕೆ ವಿಸ್ತರಿಸಿದ ದಸರಾ ಬೊಂಬೆ ಪ್ರದರ್ಶನ

ಹಾವೇರಿ: ದಸರಾ ಹಬ್ಬದ ವೇಳೆ ಮನೆಗಳಲ್ಲಿ ಬೊಂಬೆ ಕೂರಿಸುವ ಸಂಪ್ರದಾಯ ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಹಿಂದಿನಿಂದಲೂ ಇದೆ. ಉತ್ತರ ಕರ್ನಾಟಕದಲ್ಲಿ ಈ ಪದ್ಧತಿ ಇಲ್ಲ. ಆದರೆ ಶಿಗ್ಗಾಂವಿ ತಾಲೂಕು ಬಂಕಾಪುರದ ಗೃಹಿಣಿಯೊಬ್ಬರು ಮನೆಯಲ್ಲಿ ದಸರಾ ಬೊಂಬೆಗಳನ್ನು ಕೂರಿಸುವ ಮೂಲಕ ದಕ್ಷಿಣ ಕರ್ನಾಟಕದ ಸಂಪ್ರದಾಯವನ್ನು ಉತ್ತರ ಕರ್ನಾಟಕಕ್ಕೆ ಪರಿಚಯಿಸಿದ್ದಾರೆ. ಅಂದಹಾಗೆ ಅವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದಾರೆ. ಅಲ್ಲಿ ಮದುವೆಯಾಗಿ ಗಂಡನ ಮನೆಗೆ ಹೋಗುವ ಮಹಿಳೆಗೆ ತವರು ಮನೆಯಿಂದ ಬೊಂಬೆ ನೀಡುವ ಸಂಪ್ರದಾಯವಿದೆ. …

Read More »

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯ ಜನರಲ್ ವಾರ್ಡ್​ನಲ್ಲಿ ವಿಶ್ರಾಂತಿ …

Read More »

ವರುಣನ ಅಬ್ಬರಕ್ಕೆ ಕೊಚ್ಚಿಹೋದ ಸೇತುವೆ, ಸಂಕಷ್ಟಕ್ಕೆ ಸಿಲುಕಿದ ರೈತರು

ಚಿಕ್ಕೋಡಿ: ನಿರಂತರ ಮಳೆಯ ಹಿನ್ನೆಲೆ ಅಗ್ರಾಣಿ ಹಳ್ಳಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಸಂಬರಗಿ – ಆಜೂರ ಗ್ರಾಮಗಳ ನಡುವಿನ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿಕೊಂಡು ಹೋಗಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಈ ಕಳಪೆ ಗುಣಮಟ್ಟದ ಕಾಮಗಾರಿಗೆ ಯಾರು ಹೊಣೆ ಎಂದು ಸ್ಥಳೀಯರು ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಸಮೀಪ ಅಗ್ರಾಣಿ ಹಳಕ್ಕೆ ಅಡ್ಡಲಾಗಿ ಬ್ರಿಡ್ಜ್ ಕಂ ಬಾಂದಾರ್ …

Read More »

ರೌಡಿಶೀಟರ್ ಸೈಫುದ್ದೀನ್ ಕೊಲೆ ಪೂರ್ವ ನಿಯೋಜಿತ ಕೃತ್ಯ: ಉಡುಪಿ ಎಸ್ಪಿ ಹರಿರಾಂ ಶಂಕ‌ರ್

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದ ರೌಡಿಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಬಂಧಿತ ಮೂವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಬಂಧಿತ ಮೂವರು ಆರೋಪಿಗಳಾದ ಮೊಹಮದ್ ಫೈಸಲ್ ಖಾನ್, ಮೊಹಮದ್ ಶರೀಫ್ ಮತ್ತು ಅಬ್ದುಲ್ ಶುಕೂರು ಯಾನೆ ಅದ್ದು ಎಂಬುವನನ್ನು ಪ್ರಕರಣದ ತನಿಖಾಧಿಕಾರಿ, ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲೂ ಇನ್ಮುಂದೆ ಮಾರ್ಷಲ್‌ಗಳು

ಹುಬ್ಬಳ್ಳಿ: ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯ ನಿರ್ವಹಿಸುವುದನ್ನು ನೋಡಿದ್ದೇವೆ‌. ಅದೇ ಮಾದರಿಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲೂ ಇನ್ಮುಂದೆ ಮಾರ್ಷಲ್‌ಗಳು ನಿರ್ವಹಿಸಲಿದ್ದಾರೆ. ರಾಜ್ಯದ 2ನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಖ್ಯಾತಿ ಪಡೆದಿರುವ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಮಾರ್ಷಲ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. 8 ಮಹಿಳೆಯರು ಹಾಗೂ 10 ಪುರುಷ ಮಾರ್ಷಲ್‌ಗಳನ್ನು ಪಾಲಿಕೆ ಕಲಾಪ ನಿರ್ವಹಣೆಗೆ ನೇಮಿಸಿಕೊಳ್ಳಲಾಗಿದೆ.ಸುಗಮ ಕಲಾಪ ನಡೆಸಲು ಮಾರ್ಷಲ್​ಗಳು ಅಗತ್ಯವಾಗಿಬೇಕು. …

Read More »

ಶಕ್ತಿಸೌಧದಲ್ಲಿ ಆಯುಧ ಪೂಜೆ

ಬೆಂಗಳೂರು: ದಸರಾ ಹಬ್ಬದ ಆಯುಧ ಪೂಜೆ ಪ್ರಯುಕ್ತ ವಿಧಾನಸೌಧ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ವಿಧಾನಸೌಧದ ಬಹುತೇಕ ಎಲ್ಲ ಕೊಠಡಿಗಳು ಹೂವಿನ ಅಲಂಕಾರ, ರಂಗೋಲಿಯೊಂದಿಗೆ ಕಳೆಗಟ್ಟಿತು. ನಾಳೆ ಆಯುಧ ಪೂಜೆ ಪ್ರಯುಕ್ತ ಇಂದೇ ವಿಧಾನಸೌಧ, ವಿಕಾಸಸೌಧದಲ್ಲಿ ಪೂಜೆ ನೆರವೇರಿಸಲಾಯಿತು. ನಾಳೆ ಸರ್ಕಾರಿ ರಜಾ ದಿನವಾಗಿರುವುದರಿಂದ ಸಿಬ್ಬಂದಿ ಇಂದು ತಮ್ಮ ಕಚೇರಿ ಕೊಠಡಿಯಲ್ಲಿ ಆಯುಧ ಪೂಜೆ ಕೈಗೊಂಡರು. ಬಹುತೇಕ ಎಲ್ಲ ಕೊಠಡಿ, ಸಚಿವರ ಕೊಠಡಿಯಲ್ಲಿ ಅದ್ದೂರಿಯಾಗಿ ಆಯುಧ ಪೂಜೆ ನೆರವೇರಿಸಲಾಯಿತು.ಕೊಠಡಿಗಳ ಬಾಗಿಲಿಗೆ, ಒಳಗೆ, ಹೊರಗೆ …

Read More »

ವಜ್ರಮುಷ್ಟಿ ಕಾಳಗಕ್ಕೆ ತಾನು ರೆಡಿ ಎನ್ನುತ್ತಿದ್ದಾರೆ ಚಾಮರಾಜನಗರದ ಜಟ್ಟಿ

ಚಾಮರಾಜನಗರ : ವಿಶ್ವವಿಖ್ಯಾತ ಮೈಸೂರು ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದ್ದು, ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಟಿ ಕಾಳಗಕ್ಕೆ ಆಯ್ಕೆಯಾಗಿರುವ ಚಾಮರಾಜನಗರದ ಮಹೇಶ್ ನಾರಾಯಣ ಜಟ್ಟಿ ಅವರು ನಿತ್ಯವೂ ಬೆವರು ಹರಿಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರದ ಮಹೇಶ್ ನಾರಾಯಣ ಜಟ್ಟಿ ಸಜ್ಜುಗೊಂಡಿದ್ದಾರೆ. ಕಳೆದ 20 ದಿನಗಳಿಂದ ಚಾಮರಾಜನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಅವರಿಂದ …

Read More »

5 ನಗರ ಪಾಲಿಕೆಗಳ ಕ್ಷೇತ್ರ ಪುನರ್ವಿಂಗಡನೆ ಕರಡು ಅಧಿಸೂಚನೆ ಪ್ರಕಟ, ಆಕ್ಷೇಪಣೆಗೆ 15 ದಿನ ಕಾಲಾವಕಾಶ

ಬೆಂಗಳೂರು: ಬೆಂಗಳೂರಿನ ಐದು ಹೊಸ ನಗರ ಪಾಲಿಕೆಗಳ ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆ ಪ್ರಕಟಿಸಲಾಗಿದ್ದು, ನಾಗರಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಿದೆ. ಐದು ಪಾಲಿಕೆಗಳಾಗಿ ವಿಂಗಡಣೆ: ಸರ್ಕಾರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸಿದೆ. ಈ ಸಂಬಂಧ ವಾರ್ಡ್‌ಗಳ ಪುನರ್ …

Read More »