Breaking News

Yearly Archives: 2026

ನಡುರಾತ್ರಿ ಚನ್ನಪಟ್ಟಣ ಆಸ್ಪತ್ರೆಗೆ ಯು.ಟಿ ಖಾದರ್‌ ಭೇಟಿ – ಸಿಬ್ಬಂದಿಗೆ ತರಾಟೆ

ರಾಮನಗರ: ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣ  ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ ಖಾದರ್‌  ಭೇಟಿ ನೀಡಿದ್ದರು. ಖಾಸಗಿ ಕಾರ್ಯಕ್ರಮ ನಿಮಿತ್ತ ತಡರಾತ್ರಿ ಚನ್ನಪಟ್ಟಣಕ್ಕೆ ಅವರು ಬಂದಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದರು. ಜನರಲ್ ವಾರ್ಡ್, ಐಸಿಯು, ಶೌಚಾಲಯವನ್ನು ಪರಿಶೀಲಿಸಿದರು. ಸಿಬ್ಬಂದಿ ಹಾಜರಾತಿ ಪರಿಶೀಲಿಸಿ ವೈದ್ಯರಿಂದ ಮಾಹಿತಿ ಸಂಗ್ರಹಿಸಿದರು. ಇದೇ ವೇಳೆ ಔಷಧಿಯನ್ನು ಹೊರಗಡೆ ಮೆಡಿಕಲ್‌ಗಳಿಗೆ ಬರೆದುಕೊಡುವ ವಿಚಾರಕ್ಕೆ ಸಚಿವರು ಗರಂ ಆದರು. ಇಷ್ಟೆಲ್ಲಾ ಸೌಲಭ್ಯ …

Read More »

ಮೈಸೂರು ಅರಮನೆಗೆ ನಟಿ ಕಾಜಲ್ ಅಗರ್ವಾಲ್ ಭೇಟಿ – ಸೆಲ್ಫಿಗೆ ಮುಗಿಬಿದ್ದ ಜನ

ಮೈಸೂರು: ದಸರಾ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮೈಸೂರು ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ನಟಿ ಕಾಜಲ್ ಅಗರ್ವಾಲ್ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ. ಅರಮನೆಗೆ ಆಗಮಿಸಿದ ಕಾಜಲ್ ಅಗರ್ವಾಲ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ವೇಳೆ ಅರಮನೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ಅಧಿಕಾರಿಗಳು ನಟಿಗೆ ವಿವರಿಸಿದರು. ಇದಕ್ಕಾಗಿ ಕಾಜಲ್ ಅಗರ್ವಾಲ್ ಅವರು ಧನ್ಯವಾದ ಅರ್ಪಿಸಿದರು. ಅರಮನೆಯ ವೈಭವಕ್ಕೆ ಕಾಜಲ್ …

Read More »

ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ – ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ, ಜೆಡಿಎಸ್‌ ದೂರು

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ವಿರೋಧ ಪಕ್ಷಗಳ ಕಾರ್ಯಕರ್ತರ ಮೇಲೆ ರಾಜಕೀಯ ದ್ವೇಷ ಸಾಧಿಸುತ್ತಿದೆ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ಮೈತ್ರಿಯ ಎನ್‌ಡಿಎ  ನಿಯೋಗ ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಮುಖಂಡರಾದ ಎಸ್.ಎಲ್. ಭೋಜೇಗೌಡ, ಟಿ.ಎ. …

Read More »

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

ಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು ಯಾರು ಹೊರುತ್ತಿದ್ದರು? ದೇವರ ದಯೆಯಿಂದ ಏನು ಆಗಿಲ್ಲ. ತೊಂದರೆ ಆದಾಗ ಮಾತ್ರ ಕಾಯ್ದೆಗಳನ್ನು ತೋರಿಸುತ್ತಾರೆ. ಅಲ್ಲಿಯವರೆಗೂ ಕಣ್ಮುಚ್ಚಿ ಕುಳಿತು ಕೊಂಡಿರುತ್ತಾರೆ. ಏನಾದ್ರೂ ಅವಘಡ ಆಗಿದ್ದರೆ ಯಾರು ಹೊಣೆ ಎಂದು ಹಾಸನ  ಡಿಸಿ ಲತಾಕುಮಾರಿಯವರು  ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ದೇವಿಗೆರೆಯಲ್ಲಿ ಗಣಪತಿ ವಿಸರ್ಜನೆ ಮಾಡುವವರು …

Read More »

ದೇವರ ಕೋಣೆಯಲ್ಲೇ ಕೆಜಿಗಟ್ಟಲೆ ಗಾಂಜಾ ಸಂಗ್ರಹ; 22 ವರ್ಷದ ಯುವಕ ಅರೆಸ್ಟ್

ಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಬಸವರಾಜ ಹರಣಶಿಕಾರಿ ಬಂಧಿತ ಆರೋಪಿ. ಮನೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ದೇವರ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 2 ಕೆಜಿ 91 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಪ್ತಿ …

Read More »

ನನಗೆ ಮದ ಇದ್ದರೆ ಇಳಿಸಲಿ, ನಾನು ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ: ಡಿಕೆಶಿ

ಬೆಂಗಳೂರು: ನನಗೆ ಮದ ಅಂತ ಹೇಳುತ್ತಾರೆ. ಮದ ಇಳಿಸಲಿ ಯಾರು ಬೇಡ ಅಂದರು. ಮದ ನನಗೆ ಇದ್ದರೆ ಇಳಿಸಲಿ ಎಂದು ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಲಿಂಗಾಯತ ಸ್ವಾಮೀಜಿಗಳು ನನ್ನ ಸೇವೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಸಿಎಂ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ನನ್ನ ಹೇಳಿಕೆ ತಿರುಚಲಾಗಿದೆ. ನನ್ನ ಸೇವೆ ಮಾಡಬೇಕು ಅಂತ ನಾನು ಸ್ವಾಮೀಜಿಗಳಿಗೆ ಹೇಳಿಲ್ಲ. ಯಾವ …

Read More »

ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ – ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ಚಿಕ್ಕಮಗಳೂರು: ಕೆರೆಯಲ್ಲಿ  ಈಜಲು  ಹೋಗಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು  ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳೆಲ್ಲ ಒಂದೇ ಊರಿನವರಾಗಿದ್ದು, ಎಲ್ಲಾ12 ವರ್ಷದವರಾಗಿದ್ದಾರೆ. ಇವರೆಲ್ಲ ಬೇರೆ ಬೇರೆ ಶಾಲೆಗಳಲ್ಲಿ 6ನೇ ತರಗತಿ ಓದುತ್ತಿದ್ದರು. ಶಾಲೆಗಳಿಗೆ ದಸರಾ ರಜೆ ಇರುವುದರಿಂದ ಮಕ್ಕಳು ಕೆರೆಯಲ್ಲಿ ಈಜಲು ತೆರಳಿದ್ದರು. ಹಳ್ಳಿಗಳಲ್ಲಿ ಕೆರೆ ಬಳಿ ಮಹಿಳೆಯರು ಬಟ್ಟೆ ಹಾಗೂ ಪಾತ್ರೆ ತೊಳೆಯಲು ನಿರ್ಮಿಸಿರುವ ಕಟ್ಟೆಗಳ ಬಳಿ ಮಕ್ಕಳು ಈಜುವಾಗ …

Read More »

ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗ, SIT ರಚನೆ ಮಾಡಲಿ: ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗವಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ (SIT) ರಚನೆ ಮಾಡಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ. ಜಯನಗರದಲ್ಲಿ ಫಾರ್ಮ್ 7 ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಸೌಮ್ಯಾ ರೆಡ್ಡಿ ದೂರು ನೀಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಈಗಾಗಲೇ FIR ದಾಖಲಾಗಿದೆ ಎಂದು ಹೇಳಿದರು. ಸಿಎಂ ಜೊತೆ ಸೇರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಬಿಜೆಪಿ ಶಾಸಕರ …

Read More »

ಕುಮಾರಸ್ವಾಮಿ ಅವರ ಮನೆಯಲ್ಲಿ ಏನಾಗ್ತಿದೆ ಅಂತ ಮೊದಲು ತಿಳಿದುಕೊಳ್ಳಲಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಅವರ ಮನೆಯಲ್ಲಿ ಮಕ್ಕಳು ಏನು ಮಾಡುತ್ತಿದ್ದಾರೆ ಅಂತ ತಿಳಿದುಕೊಳ್ಳಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ  ಕುಮಾರಸ್ವಾಮಿಗೆ  ತಿರುಗೇಟು ನೀಡಿದ್ದಾರೆ. ಸಿದ್ದಾರ್ಥ ಟ್ರಸ್ಟ್‌ನಿಂದ ಫಾರ್ಮ್ 7 ಪ್ರಿಂಟ್ ಆಗುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದಾರ್ಥ ವಿಹಾರ್ ಟ್ರಸ್ಟ್‌ನಲ್ಲಿ ಏನಾಗುತ್ತಿದೆ ಅಂತ ಕುಮಾರಸ್ವಾಮಿಗೆ ಗೊತ್ತಿಲ್ಲ. ಮೊದಲು ಅವರ ಮನೆ ಮಕ್ಕಳಿಗೆ ನೋಡಿಕೊಳ್ಳೋಕೆ ಹೇಳಿ. ಮನೆಯಲ್ಲಿ ಮಕ್ಕಳು ಏನು ಮಾಡುತ್ತಿದ್ದಾರೆ …

Read More »

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದುರ್ಮರಣ

ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಚಿಕ್ಕಕೆರೆಯಲ್ಲಿ ನಡೆದಿದೆ. 12 ವರ್ಷದ ತರುಣ್, ಭುವನ್ ಹಾಗೂ ಲಿಖಿತ್ ಮೃತ ಮಕ್ಕಳು. ಮೂವರು ಮಕ್ಕಳು 6ನೇ ತರಗತಿಯಲ್ಲಿ ಓದುತ್ತಿದ್ದು, ಒಂದೇ ಗ್ರಾಮದವರಾಗಿದ್ದರೂ ಬೇರೆ ಬೇರೆ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ದಸರಾ ರಜೆ ಇದ್ದ ಕಾರಣ ಮಕ್ಕಳು ಕೆರೆಯಲ್ಲಿ ಈಜಲು ತೆರಳಿದ್ದರು. ಕೆರೆಯಲ್ಲಿರುವ ಮಹಿಳೆಯರು ಬಟ್ಟೆ ಹಾಗೂ ಪಾತ್ರೆ …

Read More »