ಬೀದರ್: ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ವೇಳೆ ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್ಸಿ ಭೀಮರಾವ್ ಪಾಟೀಲ್ ಪರಸ್ಪರ ಕೈಕೈ ಮಿಲಾಯಿಸಿದ ಘಟನೆ ನಡೆಯಿತು. ಈ ಇಬ್ಬರೂ ಜನಪ್ರತಿನಿಧಿಗಳನ್ನು ಸಮಾಧಾನ ಮಾಡಲು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಉಪಸ್ಥಿತರಿದ್ದ ಗಣ್ಯರು ಹರಸಾಹಸಪಟ್ಟರು. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ, ಸಭೆಯ ಆರಂಭದಲ್ಲೇ ಲೇಔಟ್ ವಿಚಾರವಾಗಿ …
Read More »Daily Archives: ಜನವರಿ 5, 2026
ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ನಾಳೆ ಬಂದರೆ, ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿಯುವ ಕೆಲಸ ಆಗಲಿದೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅರಸು ಅವರು ಮೈಸೂರಿನವರು. ನಾನೂ ಮೈಸೂರಿನವನೇ ಆಗಿರುವುದು ಸಂತೋಷದ ಸಂಗತಿ. ತಾಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ …
Read More »ತಮ್ಮ ವಿರುದ್ದ ದಾಖಲಾಗಿರುವ ಎಫ್ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ
ಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ ತಾಲೂಕಿನ ಅಭಿಮಾನಿಗಳು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಅವರೆಲ್ಲರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರು ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾತನಾಡಿದರು. ನಿಮ್ಮ ತಂದೆಯ ವಿರುದ್ಧ ಹಾಗೂ ನಿಮ್ಮ ವಿರುದ್ಧ ಎಫ್ಐಆರ್ ದಾಖಲಾಗಿದೆ …
Read More »ಮರ್ಯಾದಾ ಹತ್ಯೆ ಘಟನೆ ನಡೆದ ಇನಾಂ ವೀರಾಪುರ ಗ್ರಾಮದಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಸಿಸಿಟಿವಿಗಳನ್ನು ಅಳವಡಿಸಲಾಗಿದೆ.
ಮರ್ಯಾದಾ ಹತ್ಯೆ ಘಟನೆ ನಡೆದ ಇನಾಂ ವೀರಾಪುರ ಗ್ರಾಮದಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಹುಬ್ಬಳ್ಳಿ: ಅನ್ಯ ಜಾತಿಯ ಯುವಕನನ್ನು ಮದುವೆಯಾದಳು ಎಂಬ ಕಾರಣಕ್ಕೆ ತಂದೆಯೇ ತನ್ನ ಏಳು ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಲೆ ಮಾಡಿದ್ದ ಘಟನೆಯಿಂದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಡಿ.21ರಂದು ಘಟನೆ ನಡೆದಾಗ ಪುಟ್ಟ ಗ್ರಾಮದ ಜನರು ಭಯದಿಂದ ಮನೆ ಬಿಟ್ಟು ಹೊರ ಬಂದಿರಲಿಲ್ಲ. ಈಗ ಗ್ರಾಮದಲ್ಲಿ ಭಯದ …
Read More »ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ವಾಗ್ವಾದ
ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಉದ್ಘಾಟನೆಗಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹಿಟ್ನಾಳ ಗ್ರಾಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಂಕು ಸ್ಥಾಪನೆ ಮುಗಿಸಿ ಹೊರಡುವಾಗ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸ್ಥಳೀಯ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಸೋಮಣ್ಣ ಅವರನ್ನು ಸುತ್ತುವರಿದು ಆಕ್ರೋಶ …
Read More »ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ: ಗಾಯಾಳು ಯುವತಿ ಮನೆಗೆ ಆರ್.ಅಶೋಕ್ ಭೇಟಿ
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾಕ್ಷೇತ್ರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟ ಘಟನೆಯಲ್ಲಿ ಗಾಯಗೊಂಡಿದ್ದ ಯುವತಿ ಮನೆಗೆ ಇಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್ ಭೇಟಿ ನೀಡಿ ಸಂತೈಸಿದರು. ಜೆ.ಜೆ. ನಗರದ ಪಂಚಮುಖಿ ನಾಗದೇವತಾ ದೇವಸ್ಥಾನ ಬಳಿ ನಿನ್ನೆ ರಾತ್ರಿ ಓಂ ಶಕ್ತಿ ಮಾಲಾಧಾರಿಗಳು ಮೆರವಣಿಗೆ ಹೋಗುವಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಯುವತಿಗೆ ತಲೆಗೆ ಪೆಟ್ಟಾಗಿತ್ತು. ದುರ್ಘಟನೆ ಸಂಬಂಧ ಕೆಲ …
Read More »ಭದ್ರಾ ಅಭಯಾರಣ್ಯದಲ್ಲಿ ಚಿರತೆ ಜೊತೆ ಬ್ಲಾಕ್ ಪ್ಯಾಂಥರ್ ಪ್ರತ್ಯಕ್ಷ: ಪ್ರವಾಸಿಗರು ಖುಷ್
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ವನ್ಯಜೀವಿಗಳ ದರ್ಶನ ಪ್ರವಾಸಿಗರ ಪಾಲಿಗೆ ಹಬ್ಬವಾಗಿ ಪರಿಣಮಿಸಿದೆ. ಕಾಡಿನ ದಟ್ಟ ಹಸಿರಿನ ನಡುವೆ ಬ್ಲಾಕ್ ಪ್ಯಾಂಥರ್ ಹಾಗೂ ಚಿರತೆಯೊಂದು ಒಟ್ಟಾಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿವೆ. ಕಳೆದ ಹತ್ತು ದಿನಗಳಿಂದ ಪದೇಪದೇ ಪ್ರವಾಸಿಗರ ಕಣ್ಣಿಗೆ ದರ್ಶನವನ್ನು ಈ ಎರಡು ಚಿರತೆಗಳು ನೀಡುತ್ತಿವೆ. ಇದರಿಂದ ಕಾಡಿನೊಳಗೆ ಪ್ರವಾಸ ಮಾಡುತ್ತಿರುವ ಪ್ರವಾಸಿಗರು ಸಂತಸಗೊಂಡಿದ್ದಾರೆ. ಸಾಮಾನ್ಯವಾಗಿ ಒಂಟಿಯಾಗಿ ಸಂಚರಿಸುವ ಈ ಪ್ರಾಣಿಗಳು ಇಲ್ಲಿ ಜೊತೆಯಾಗಿ ಸಾಗುತ್ತಿರುವ ದೃಶ್ಯ …
Read More »ಜ.12ರೊಳಗೆ ಸವದಿ ಅವರು ಕ್ಷಮೆ ಕೇಳಿ, ರಾಜೀನಾಮೆ ನೀಡದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ
ಬೆಳಗಾವಿ: ಡಿಸಿಸಿ ಬ್ಯಾಂಕ್ ಯೂನಿಯನ್ ಅಧ್ಯಕ್ಷ ನಿಂಗಪ್ಪ ಕರೆನ್ನವರ ಮೇಲೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಡಿಸಿಸಿ ಬ್ಯಾಂಕ್ ನೌಕರರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ಲಕ್ಷ್ಮಣ ಸವದಿ ಅವರು ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಬ್ಯಾಂಕ್ ಕೆಲಸಕ್ಕೆ ತೊಂದರೆಯಾಗದಂತೆ ಅರ್ಧದಷ್ಟು ಸಿಬ್ಬಂದಿ ಕೆಲಸದಿಂದ ದೂರ ಉಳಿದು ಪ್ರತಿಭಟಿಸಿದರು. ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ, ಜಿಲ್ಲಾಧಿಕಾರಿ ಕಚೇರಿ …
Read More »ನೋಯ್ಡಾದ ಎನ್ಐಎಎಲ್ ಕಂಪನಿಗೆ ರನ್ ವೇ ಕ್ಲೀನಿಂಗ್ ವೆಹಿಕಲ್ ಹಸ್ತಾಂತರಿಸಿದ ಸಚಿವ M B ಪಾಟೀಲ್
ದೊಡ್ಡಬಳ್ಳಾಪುರ (ಬೆಂಗಳೂರು): ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ಗೆ (ಎನ್ಐಎಎಲ್) ಹಸ್ತಾಂತರಿಸಿದರು. ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ಲೆಂಡ್ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ …
Read More »ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ;ಡಿಸಿಎಂ
ಬೆಂಗಳೂರು: ”ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ. ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಆಡಳಿತ ಮಾಡಿದ ದಾಖಲೆ ಬರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ”ಇದು ಬಹಳ ಸಂತೋಷದ ವಿಷಯ. ನಮಗೆ, ನಿಮಗೆ ಎಲ್ಲರಿಗೂ ಸಂತೋಷದ ವಿಚಾರ. ನೀವು ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ. ನಾನು ಅವರಿಗೆ ತುಂಬು ಹೃದಯದಿಂದ ಶುಭ ಹಾರೈಸುತ್ತೇನೆ. …
Read More »
Laxmi News 24×7